ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದೇ ತಡ ಒಂದರ ಹಿಂದೆ ಒಂದರಂತೆ ಚಟುವಟಿಕೆಗಳು ಗರಿಗೆದರಿವೆ. ಇದೀಗ ಬಿಬಿಎಂಪಿ ಚುನಾವಣೆ ವಿಚಾರವಾಗಿ ಮೀಸಲಾತಿ ಮಿತಿ ಮೀರದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕೆ ಸೀಮಿತಗೊಳಿಸಲಾಗಿದೆ.
ಬಿಬಿಎಂಪಿ 2020ರ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಸಂಬಂಧ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಸರ್ಕಾರದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿ ಜಿ. ಶ್ರೀಧರ್ ಆದೇಶಿಸಿದ್ದಾರೆ.
ಇದನ್ನೂ ಓದಿ | BBMP ELECTION | ರಾಜ್ಯ ಸರ್ಕಾರಕ್ಕೆ ವಾರ್ಡ್ ಮರುವಿಂಗಡಣೆ ಪಟ್ಟಿ ಸಲ್ಲಿಸಿದ ಬಿಬಿಎಂಪಿ
ಈ ಹಿಂದಿನ ತಿದ್ದಪಡಿಯಲ್ಲಿ ಪಾಲಿಕೆಯ ನೇರ ಚುನಾವಣೆಯ ಮೂಲಕ ತುಂಬಬೇಕಾದ ಒಟ್ಟು ಸ್ಥಾನಗಳ ಸಂಖ್ಯೆಯ ಮೂರನೇ ಒಂದರಷ್ಟು ಸ್ಥಾನಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ಮೀಸಲಿರಿಸಲಾಗಿತ್ತು.
ಇದೀಗ ಪರಿಶಿಷ್ಟ ಜಾತಿ, ಪಂಗಡ ವರ್ಗದವರಿಗೆ ಹಾಗೂ ಹಿಂದುಳಿದ ವರ್ಗದವರಿಗಾಗಿ ಮೀಸಲಿರಿಸಿದ ಒಟ್ಟು ಸ್ಥಾನಗಳ ಸಂಖ್ಯೆಯು ಪಾಲಿಕೆಯಲ್ಲಿನ ಒಟ್ಟು ಸ್ಥಾನಗಳ ಸಂಖ್ಯೆಯ ಮೂರನೇ ಒಂದರಷ್ಟು ಮೀರದಂತೆ ಎಂಬುದರ ಬದಲಿಗೆ ಒಟ್ಟು ಸ್ಥಾನಗಳ ಸಂಖ್ಯೆಯು ಪಾಲಿಕೆಯಲ್ಲಿನ ಒಟ್ಟು ಸ್ಥಾನಗಳ ಶೇಕಡವಾರು 50ರಷ್ಟು ಮೀರುವಂತಿಲ್ಲ ಎಂಬ ಸುಗ್ರೀವಾಜ್ಞೆ ಜಾರಿ ಮಾಡಿದೆ.
ಚುನಾವಣೆಯಲ್ಲಿ ಒಟ್ಟು ಮೀಸಲಾತಿ ಪ್ರಮಾಣವೂ ಶೇ.50ರಷ್ಟು ಮೀರಬಾರದು ಎಂಬ ಕೋರ್ಟ್ ಆದೇಶದ ಅನ್ವಯ ಈ ಕ್ರಮಕೈಗೊಳ್ಳಲಾಗಿದೆ.
ಇದನ್ನೂ ಓದಿ | ಈದ್ಗಾ ಮೈದಾನ ವಿವಾದ: ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೋರಿ ಬಿಬಿಎಂಪಿಗೆ ಪತ್ರ