ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಕಳೆದ ಎರಡು ಮೂರು ದಿನಗಳಿಂದ ಸತತ ಮಳೆ(Rain News) ಸುರಿಯುತ್ತಿದೆ. ಹಾಗೆಯೇ ಭೀಕರ ಮಳೆಯಿಂದ ರಾಜ್ಯ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಆಗಸ್ಟ್ 30ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಕೆರೆಯಂತಾಗಿವೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ವಾಹನ ಸವಾರರು ರಸ್ತೆಗಳಲ್ಲಿ ಓಡಾಡಲು ಪರದಾಡುವಂತಾಗಿದೆ. ಹೀಗಾಗಿ ಮಂಗಳವಾರ ಜಿಲ್ಲಾಡಳಿತದ ಆದೇಶದ ಮೇರೆಗೆ ಬೆಂಗಳೂರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ | Town Hall | ಗಣೇಶ ಹಬ್ಬದ ಆಫರ್; ಪುಟ್ಟಣ್ಣ ಚೆಟ್ಟಿ ಪುರಭವನ ಬಾಡಿಗೆ ಇಳಿಕೆ