ಬೆಂಗಳೂರು: ಭೀಕರ ಮಳೆ ಹಿನ್ನೆಲೆಯಲ್ಲಿ(Rain News) ನಗರದಲ್ಲಿ ಸೆ.7ರಂದು ಮಹಾದೇವಪುರ, ಬೊಮ್ಮನಹಳ್ಳಿ, ಕೆ.ಆರ್ ಪುರಂ ಭಾಗದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸತತ ಮಳೆಯಿಂದ ರಸ್ತೆಗಳು ಜಲಾವೃತವಾಗಿರುವುದರಿಂದ ವಾಹನಗಳ ಓಡಾಟಕ್ಕೆ ತೊಂದರೆಯಾಗಿರುವ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರಂ ದಕ್ಷಿಣ ವಲಯ-4 ವ್ಯಾಪ್ತಿಯ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ಘೋಷಿಸಿದ್ದಾರೆ.
ಇದನ್ನೂ ಓದಿ | Bangalore Rain | ಜನರ ಸಂಕಷ್ಟದ ಹೊಳೆಯಲ್ಲಿ ಟ್ಯೂಬ್ನಲ್ಲಿ ಕುಳಿತು ಪ್ರತಿಭಟಿಸಿದ ಕಾಂಗ್ರೆಸ್ ಯುವ ನಾಯಕ