ರಸ್ತೆ ಗುಂಡಿ ಅವಾಂತರಕ್ಕೆ ಅಪಘಾತ, ಮಹಿಳೆ ಗಂಭೀರ; ಅವ್ಯವಸ್ಥೆ ವಿರೋಧಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ - Vistara News

ಬೆಂಗಳೂರು

ರಸ್ತೆ ಗುಂಡಿ ಅವಾಂತರಕ್ಕೆ ಅಪಘಾತ, ಮಹಿಳೆ ಗಂಭೀರ; ಅವ್ಯವಸ್ಥೆ ವಿರೋಧಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಬೆಂಗಳೂರಿನಲ್ಲಿ ಹಾಳಾದ ರಸ್ತೆಗಳಿಂದ ನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿವೆ, ಅಪಘಾತ ನಡೆದು ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

VISTARANEWS.COM


on

ರಸ್ತೆ ಗುಂಡಿಗೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಓಕಳಿಪುರಂ ಸಮೀಪದ ಸುಜಾತ ಟಾಕೀಸ್​ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದಿದ್ದರಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಸೋಮವಾರ ಬೆಳಗ್ಗೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದ್ದು, ನಗರದ ರಸ್ತೆಗಳ ಅವ್ಯವಸ್ಥೆ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ದುರ್ಘಟನೆಗೆ ರಸ್ತೆಯಲ್ಲಿನ ‘ಯಮ’ ಗುಂಡಿಗಳೇ ಕಾರಣ ಎಂದು ಸುಜಾತ ಟಾಕೀಸ್​ ಬಳಿ ಆಮ್‌ ಆದ್ಮಿ ಪಾರ್ಟಿ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.‌

ನಗರದಲ್ಲಿ ಹಾಳಾದ ರಸ್ತೆಗಳಿಂದ ನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿವೆ. ಅಪಘಾತ ನಡೆದು ಗಂಭೀರವಾಗಿ ಗಾಯಗೊಂಡರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇನ್ನು ನಗರದಲ್ಲಿ ರಸ್ತೆಗಳ ನಿರ್ವಹಣೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ. ದೇಶದಲ್ಲೇ ಅತಿ ಹೆಚ್ಚು ರಸ್ತೆ ತೆರಿಗೆ ಪಾವತಿಸುವ ನಗರಗಳಲ್ಲಿ ಬೆಂಗಳೂರು ನಗರವೂ ಒಂದಾಗಿದೆ. ಆದಾಗ್ಯೂ ರಸ್ತೆಗಳನ್ನು ಸಮರ್ಪಕವಾಗಿ ದುರಸ್ತಿ ಮಾಡದ ಬಿಬಿಎಂಪಿ, ರಾಜ್ಯ ಸರ್ಕಾರ ಹಾಗೂ ರಸ್ತೆ ಗುತ್ತಿಗೆದಾರರಿಗೆ ನಾಚಿಕೆಯಾಗಬೇಕು. ಅಧಿಕಾರಿಗಳು, ಜನಪ್ರತಿನಿಧಿಗಳು ಭ್ರಷ್ಟಾಚಾರ ಕಡಿಮೆ ಮಾಡಿ, ರಸ್ತೆಗಳ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಳೆ ಬಿಡುವು ಕೊಟ್ಟರೆ ರಸ್ತೆಗಳ ದುರಸ್ತಿ: ಸಚಿವ ಆರ್‌.ಅಶೋಕ್
ಬೆಂಗಳೂರಿನಲ್ಲಿ ಮಹಿಳೆಗೆ ಅಪಘಾತವಾಗಿರುವ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್‌ ಪ್ರತಿಕ್ರಿಯಿಸಿ, ಸಮಸ್ಯೆ ನಮಗೂ ಅರ್ಥವಾಗಿದೆ. ಕೂಡಲೇ ಬಿಬಿಎಂಪಿ ಆಯುಕ್ತರ ಜತೆ ಚರ್ಚೆ ಮಾಡುತ್ತೇವೆ. ನಗರಕ್ಕೆ ಸಿಎಂ 6 ಸಾವಿರ ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹಾಕಿದ ಟಾರ್ ಕಿತ್ತುಹೋಗುತ್ತಿದೆ. ಮಳೆ ಬಿಡುವು ಕೊಟ್ಟರೆ ರಸ್ತೆಗಳ ದುರಸ್ತಿ ಕಾರ್ಯ ಪೂರ್ತಿ‌ಗೊಳಿಸುತ್ತೇವೆ. ಜತೆಗೆ ರಾಜಕಾಲುವೆಗಳ ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ | Road tragedy | ರಾಜಧಾನಿಯ ರಸ್ತೆ ಗುಂಡಿಗೆ ಮಹಿಳೆ ಬಲಿ, ಗುಂಡಿ ತಪ್ಪಿಸಲು ಹೋದಾಗ ಹಿಂದಿನಿಂದ ಗುದ್ದಿದ ಬಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Karnataka Rain : ಭಾನುವಾರ ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ವಿಜಯನಗರ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ತಲಾ 1 ಎಮ್ಮೆ ಮೃತಪಟ್ಟಿವೆ. ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಗುರುಮಠಕಲ್‌ (karnataka weather Forecast) ಕೆರೆಯಂತಾಗಿದೆ.

VISTARANEWS.COM


on

By

Karnataka Rain
Koo

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: Basavanagudi News : ಪೂಜಾ ಸಾಮಾಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Basavanagudi News : ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಗಳಲ್ಲಿ ಪೂಜಾ ಸಾಮಗ್ರಿಗಳನ್ನು ಒನ್‌ ಟು ಡಬಲ್‌ ರೇಟ್‌ಗೆ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಭಕ್ತಾಧಿಗಳು ಹಾಗೂ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

VISTARANEWS.COM


on

By

Basavanagudi News
Koo

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ (Basavanagudi News) ಭಕ್ತಾದಿಗಳು ಹಾಗೂ ಮಳಿಗೆ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಯಲ್ಲಿ ಪೂಜಾ ಸಾಮಗ್ರಿಗಳು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಕೆಲವು ತಿಂಗಳಿಂದ ಪೂಜಾ ಸಾಮಗ್ರಿಗಳ ಬೆಲೆ ಕೇಳಿ ಭಕ್ತಾದಿಗಳು ಶಾಕ್ ಆಗಿದ್ದರು. ಮನಸೋ ಇಚ್ಛೆ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೂಡ ಕೇಳಿಬಂದಿತ್ತು. ಹೂವು, ಹಣ್ಣು, ಕಡ್ಡಿ, ಕರ್ಪೂರ ಸೇರಿದ 70-80 ರೂಪಾಯಿಯ ಒಂದು ಸಣ್ಣ ಕಿಟ್ ಅನ್ನು ಬರೋಬ್ಬರಿ 150 ರೂಪಾಯಿಗೆ ಸೇಲ್ ಮಾಡಲಾಗುತ್ತಿದೆ. ಇದೊಂಥರಾ ಹಗಲು ದರೋಡೆ ಅಂದರೆ ತಪ್ಪಾಗಲ್ಲ.

ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳು ಇದನ್ನೂ ಪ್ರಶ್ನಸಿದ್ದಾರೆ. ಈ ವೇಳೆ ಭಕ್ತರು ಹಾಗೂ ಮಳಿಗೆ ವ್ಯಾಪಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದಿದೆ. ಟೆಂಟರ್‌ಗೆ ಹೆಚ್ಚು ಹಣವನ್ನು ಕೊಟ್ಟಿದ್ದೀವಿ, ಹೀಗಾಗಿ ಹೆಚ್ಚುವರಿ ಹಣ ತೆಗೆದುಕೊಳ್ಳುತ್ತಿವಿ. ಮಾರುಕಟ್ಟೆಯಲ್ಲಿ ಹೂ-ತೆಂಗಿನಕಾಯಿ ದಿನಕ್ಕೊಂದು ದರ ಇರುತ್ತದೆ, ನಾವೇನು ಮಾಡೋಣ ಎಂದು ಮಳಿಗೆ ವ್ಯಾಪಾರಿಗಳು ವಾದವಾಗಿದೆ.

ಇತ್ತ 2 ಬಾಳೆಹಣ್ಣು, ತೆಂಗಿನಕಾಯಿ, ಅಗರಬತ್ತಿ, ಹೂವಿ ಇರುವು ಪೂಜಾ ಸಾಮಗ್ರಿಗೆ ಬರೋಬ್ಬರಿ 150-300 ರೂ. ವ್ಯಾಪಾರಿಗಳು ಭಕ್ತರಿಂದ ಪಡೆಯುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಭಕ್ತರು, ವ್ಯಾಪಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದನ್ನು ಕೇಳಬೇಕಿದ್ದ ಮುಜರಾಯಿ ಕಣ್ಮುಚ್ಚಿ ಕುಳಿತಿದೆ. ಇದರ ಪರಿಣಾಮ ಭಕ್ತರ ಜೇಬು ಖಾಲಿ ಆಗುತ್ತಿದ್ದು, ವಿಧಿಯಿಲ್ಲದೆ ದುಬಾರಿ ಹಣ ತೆರಬೇಕಾಗುತ್ತಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ಬೆಂಗಳೂರು: ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಖರ್ತನಾಕ್‌ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಝ್ ಬಂಧಿತ ಆರೋಪಿಗಳು.

ಬೆಳಗಿನಿಂದ ಸಂಜೆ ತನಕ ಕೋಳಿ ಅಂಗಡಿಯಲ್ಲಿ ಕೋಳಿ ಕುಯ್ಯುವ ಕೆಲಸ ಮಾಡಿದರೆ, ರಾತ್ರಿಯಾದರೆ ಸಾಕು ಸುಲಿಗೆಗೆ ಇಳಿಯುತ್ತಿದ್ದರು. ಇತ್ತೀಚಿಗೆ ಸ್ಕೂಟರ್‌ನಲ್ಲಿ ಬಂದಿದ್ದ ಇವರಿಬ್ಬರು, ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಅಮ್ಮೇಜಾನ್‌ ಅವರು ದೂರು ದಾಖಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಬಾಣಸವಾಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

Liquor ban: ಬೆಂಗಳೂರಿನಲ್ಲಿ ಜೂನ್‌ ಮೊದಲ ವಾರ ಎಣ್ಣೆ (ಮದ್ಯ) ಬೇಕು ಸಿಗುವುದಿಲ್ಲ. ಯಾಕೆಂದರೆ ಜೂ. 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಐದು ದಿನ ಮೊದಲೇ ಎಣ್ಣೆ ಪ್ರಿಯರು ಮದ್ಯ ಖರೀದಿಸಿ ಸ್ಟಾಕ್‌ ಮಾಡಲು (Dry day order) ಮುಂದಾಗಿದ್ದಾರೆ.

VISTARANEWS.COM


on

By

Liquor ban Dry day
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೊನ್ನೆ ಬೆಂಗಳೂರು ಜಿಲ್ಲಾಡಳಿತದ ಅದೊಂದು ಆದೇಶಕ್ಕೆ ಮದ್ಯ ಪ್ರಿಯರು ಮದ್ಯದಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್‌‌ (Liquor ban) ಆಗುವ ಕಹಿ ಸುದ್ದಿಯನ್ನು ಕೇಳಿದ್ದೆ ತಡ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳಲು ಮುಂದಾಗುತ್ತಿದ್ದಾರೆ.

ಅಂದಹಾಗೇ ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿ ಬೆಂಗಳೂರಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ (Liquor Bandh) ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು (Dry day) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3 ರವರೆಗೆ ಬಾರ್ ಬಂದ್ ಬಂದ್‌ ಆಗಲಿದೆ. ಅದೇ ರೀತಿ, ಜೂನ್ 4 ರಂದು ದೇಶದಾದ್ಯಂತ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಇದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಆ ದಿನವು ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MLC Election: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿದ್ರೆ ಐತಿಹಾಸಿಕ ಫಲಿತಾಂಶ: ಎಚ್‌ಡಿಕೆ

MLC Election: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಹಣದ ಹೊಳೆ ಹರಿಸುತ್ತಿದ್ದಾರೆ. ಅವರಂತೆ ನಮ್ಮ ಅಭ್ಯರ್ಥಿಗಳು ಖರ್ಚು ಮಾಡಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಒಗ್ಗಾಟ್ಟಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆಯಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

MLC Election
Koo

ಬೆಂಗಳೂರು: ನಗರದ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಭಾನುವಾರ ನಡೆಯಿತು. ವಿಧಾನ ಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ, ಮೈತ್ರಿ ಸಹಕಾರ ಹಾಗೂ ಪ್ರಸಕ್ತ ರಾಜಕೀಯ ವಿಚಾರಗಳ ಕುರಿತು ದೋಸ್ತಿ ನಾಯಕರು ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು, ಈಗಾಗಲೇ ನಮ್ಮ ನಾಯಕರು ಹಲವಾರು ವಿಚಾರ ಮಾತನಾಡಿದ್ದಾರೆ. ಹಾಗಾಗಿ ಅದೇ ವಿಚಾರಗಳನ್ನು ನಾನು ಮಾತನಾಡಲ್ಲ. ಅ.ದೇವೇಗೌಡರು ನಮ್ಮ ಜನತಾದಳಲ್ಲೇ ಬೆಳೆದವರು. 1996ರಲ್ಲಿ ನನ್ನ ಚುನಾವಣೆಗೂ ಅ.ದೇವೇಗೌಡರು ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನವರು ಈಗಾಗಲೇ ಹಣದ ಹೊಳೆ ಹರಿಸುತ್ತಿದ್ದಾರೆ. ಅವರಂತೆ ನಮ್ಮ ಅಭ್ಯರ್ಥಿ ದೇವೇಗೌಡ ಹಣ ಖರ್ಚು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇಲ್ಲಿ ಬಿಜೆಪಿ ಶಾಸಕ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ನಮ್ಮ ಮತಗಳು ಸೇರಿ ಸುಮಾರು 72 ಸಾವಿರ ಮತ ಇದೆ. ಅಶೋಕ್ ಹೇಳಿದಂತೆ ನಿಮ್ಮ ಜತೆಗೆ ಒಂದಷ್ಟು ಜನರನ್ನು ಕರೆದುಕೊಂಡು ಬಂದು ಹಾಕಿಸಿ. ಮನೆ ಮನೆಗೆ ತೆರಳಿ ಎರಡು ಪಕ್ಷದ ಕಾರ್ಯಕರ್ತರ ವಿಶ್ವಾಸ ಗಳಿಸಬೇಕು. ಕಾಂಗ್ರೆಸ್‌ನವರು ಏನಾದರೂ ಆಮಿಷ ತೋರಿಸಲಿ. ಅವರು ಹಣವನ್ನು ಹೆಚ್ಚಾಗಿ ಖರ್ಚು ಮಾಡುತ್ತಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿದ್ದಿರಂದ ಐತಿಹಾಸಿಕ ಫಲಿತಾಂಶ ಬರುವ ನಿರೀಕ್ಷೆ ಇದೆ. ಲೋಕಸಭಾ ಚುನಾವಣೆಯಲ್ಲಿ ಡಾ.ಸಿ.ಎನ್‌. ಮಂಜುನಾಥ್ ಗೆಲ್ಲುತ್ತಾರೆ ಎಂಬ ಭರವಸೆ ಇದೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ | Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು

ಯಾವ ಬ್ರ್ಯಾಂಡ್ ಬೆಂಗಳೂರು ಮಾಡಿರೋದು ಇವರು? ಅದು ಬ್ರ್ಯಾಂಡ್ ಬೆಂಗಳೂರು ಅಲ್ಲ, ಲೂಟಿ ಬೆಂಗಳೂರು. ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ ಎಂದು ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬೆಂಗಳೂರಿಗೆ ಇವರ ಕೊಡುಗೆ ಏನು? ಈ ಸರ್ಕಾರ ಬಂದ ನಂತರ ಬೆಂಗಳೂರಿನಲ್ಲಿ, ರಾಜ್ಯದಲ್ಲಿ ಒಂದೂ ಹೊಸ ಅಭಿವೃದ್ಧಿ ಆಗಿಲ್ಲ. ಅಕ್ಕಿ ಕೊಡೋ ಯೋಗ್ಯತೆ ಇಲ್ಲ. ಐದು ಕೆ.ಜಿ. ಅಕ್ಕಿ ಬದಲಿಗೆ 170 ರೂ. ಮೂರು ತಿಂಗಳಿಂದ ಕೊಟ್ಟಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ. ಬಿತ್ತನೆ ಬೀಜದ ಬೆಲೆ 70% ಏರಿಕೆ ಮಾಡಿದ್ದಾರೆ, ಗೊಬ್ಬರ ಸಿಕ್ತಿಲ್ಲ. ರೈತರು ಹಲವು ಸಮಸ್ಯೆ ಎದುರಿಸತ್ತಿದ್ದಾರೆ. ಒಪಿಎಸ್ ಮರು ಜಾರಿ ಬಗ್ಗೆ ಸದ್ದು ಗದ್ದಲ ಇಲ್ಲ, ಈಗ ಸಮಿತಿ ಮಾಡಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಎಲ್ಲ ಅಭಿವೃದ್ಧಿ ಸ್ಥಗಿತ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರದ ನಡವಳಿಕೆ ಬಗ್ಗೆ ಜನರು ಗಮನಿಸಬೇಕು. ರಾಜ್ಯದ ಅಭಿವೃದ್ಧಿಗೆ ಇವರು ನಯಾ ಪೈಸೆ ಕೊಟ್ಟಿಲ್ಲ. ರಾಜ್ಯದಲ್ಲಿ 2,75,000 ಹುದ್ದೆಗಳು ಖಾಲಿ ಇವೆ. ಏನು ಕ್ರಮ ಕೈಗೊಂಡಿದ್ದಾರೆ ಎಂದ ಅವರು, ಮುಂದೆ ಒಳ್ಳೆಯ ದಿನಗಳ ಪ್ರಾರಂಭಬಾಗಲು ಪರಿಷತ್‌ ಚುನಾವಣೆ ಗೆಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ | Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

ಸಭೆಯಲ್ಲಿ ವಿಪಕ್ಷ ನಾಯಕ ‌ಆರ್. ಅಶೋಕ್ ‌ಮಾಜಿ ಸಚಿವರಾದ ಅಶ್ವತ್ಥ್ ನಾರಾಯಣ್‌, ಮುನಿರತ್ನ, ಗೋಪಾಲಯ್ಯ, ಎಂಎಲ್‌ಸಿ ತಿಪ್ಪೇಸ್ವಾಮಿ, ಟಿ.ಎ. ಶರವಣ, ಬೆಂಗಳೂರು ‌ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಅ.ದೇವೇಗೌಡ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ್ ಮೂರ್ತಿ , ಜೆಡಿಎಸ್ ಮಹಿಳಾ ಅಧ್ಯಕ್ಷ ರಶ್ಮಿ ರಮೇಗೌಡ ಸೇರಿದಂತೆ ಉಭಯ ಪಕ್ಷದ ಪ್ರಮುಖ ನಾಯಕರು ಭಾಗಿಯಾಗಿದ್ದರು.

Continue Reading
Advertisement
Shivamogga News
ಕರ್ನಾಟಕ20 mins ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ36 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

FIR Filed
ದೇಶ36 mins ago

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

Yashasvi Jaiswal
ಪ್ರಮುಖ ಸುದ್ದಿ41 mins ago

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ1 hour ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ1 hour ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ1 hour ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ2 hours ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ2 hours ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

fraud case
ಕರ್ನಾಟಕ2 hours ago

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌