ನನ್ನ ಟ್ರಿಪ್‌ ವಿವರವನ್ನು ಟಿವಿ, ಪೇಪರ್‌ನಲ್ಲಿ ನೋಡಿ ಎಂದಿದ್ದ ಆರೋಪಿ ನಾಗೇಶ - Vistara News

ಬೆಂಗಳೂರು

ನನ್ನ ಟ್ರಿಪ್‌ ವಿವರವನ್ನು ಟಿವಿ, ಪೇಪರ್‌ನಲ್ಲಿ ನೋಡಿ ಎಂದಿದ್ದ ಆರೋಪಿ ನಾಗೇಶ

VISTARANEWS.COM


on

nagesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸುಂಕದಕಟ್ಟೆಯಲ್ಲಿ ಯುವತಿಯ ಮೇಲೆ ಆ್ಯಸಿಡ್‌ ದಾಳಿ ನಡೆಸಿ ತಲೆಮರೆಸಿಕೊಂಡಿರುವ ನಾಗೇಶ್‌, ಈ ದುಷ್ಕೃತ್ಯ ಎಸಗಲು ಇಪ್ಪತ್ತು ದಿನಕ್ಕೂ ಮೊದಲೇ ತಯಾರಿ ನಡೆಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಅನೇಕ ದಿನಗಳಿಗೂ ಮುಂಚೆಯೇ, ಸ್ನೇಹಿತರೊಂದಿಗೆ ನಾಗೇಶ ಮಾತನಾಡುವ ವೇಳೆ ಇದರ ಸುಳಿವು ಕೊಟ್ಟಿದ್ದ ಎಂದು ತಿಳಿದು ಬಂದಿದೆ.

ಸಂತ್ರಸ್ತ ಯುವತಿ ಸದ್ಯ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಸಿಡ್‌ ದಾಳಿ ಕೋರನ ಬಗ್ಗೆ ಯುವತಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದು, ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಯುವತಿಯ ಉತ್ತರಗಳನ್ನು ಎಕ್ಸಿಕ್ಯುಟಿವ್ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಪಡೆಯಲಾಗಿದ್ದು, ಆರೋಪಿಯನ್ನು ಕಾನೂನು ಕುಣಿಕೆಗೆ ಸಿಕ್ಕಿಸಲು ಇವು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪೊಲೀಸರು ಹೇಳಿದ್ದಾರೆ.
ಇದೀಗ ಲಭಿಸಿರುವ ಹೊಸ ಮಾಹಿತಿಯ ಪ್ರಕಾರ ಆರೋಪಿ ನಾಗೇಶ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಜತೆಗೆ ಕೆಲಸ ಮಾಡುತ್ತಿದ್ದ ಆಪ್ತ ಸ್ನೇಹಿತರ ಬಳಿ ಹೇಳಿರುವ ಹೇಳಿಕೆ ಭಾರಿ ಚರ್ಚೆಗೆ ಎಡೆ ಮಾಡಿದೆ. ನಾನು ಇಪ್ಪತ್ತು ದಿನ ಇರೋಲ್ಲ ಎಂದು ನಾಗೇಶ ಹೇಳಿದ್ದ. ಎಲ್ಲಿಗೆ ಟ್ರಿಪ್ ಹೋಗ್ತಿದ್ದೀಯಪ್ಪ ಎಂದು ಸ್ನೇಹಿತರು ಕೇಳಿದ್ದರು. ಅದಕ್ಕೆ ಉತ್ತರಿಸಿದ್ದ ನಾಗೇಶ, ಟಿವಿ ಪೇಪರ್‌ನಲ್ಲಿ ಬರುತ್ತೆ ನೋಡಿ ಎಂದಿದ್ದನಂತೆ. ಅಲ್ಲಿಗೆ 20 ದಿನ ಮೊದಲೇ ಆ್ಯಸಿಡ್‌ ಹಾಕಲು ಪ್ಲಾನ್ ಮಾಡ್ಕೊಂಡಿದ್ದ ನಾಗೇಶ ಎಂಬುದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ ಎನ್ನಲಾಗಿದೆ.

ಇದನ್ನೂ ಓದಿ | ಆ್ಯಸಿಡ್‌ ದಾಳಿ | ಕ್ರೌರ್ಯಕ್ಕೆ ತಕ್ಕಂತೆ ಶಿಕ್ಷೆ ಎಂದ ಸಚಿವ ಸುಧಾಕರ್

ಘಟನೆಯ ಹಿನ್ನೆಲೆ : ಗುರುವಾರ ಬೆಳಗ್ಗೆ 8-30ರ ವೇಳೆಯಲ್ಲಿ ಯುವತಿಯನ್ನು ಆಕೆಯ ತಂದೆ, ಸುಂಕದಕಟ್ಟೆಯ ಮುತ್ತೂಟ್ ಮಿನಿ‌ ಫೈನಾನ್ಸ್ ಕಚೇರಿಗೆ ಡ್ರಾಪ್ ಮಾಡಿದರು. ಮೊದಲನೇ ಮಹಡಿಯಲ್ಲಿದ್ದ ಕಚೇರಿಗೆ ಮೆಟ್ಟಿಲು ಹತ್ತಿಕೊಂಡು ಹೋಗಬೇಕಿತ್ತು. ಕಚೇರಿಗೆ ಇನ್ನೂ ಯಾರೂ ಬಾರದೆ ಇದ್ದದ್ದರಿಂದ ಕಚೇರಿ ಬಾಗಿಲ ಹತ್ತಿರ ನಿಂತುಕೊಂಡಿದ್ದರು. ಈ ಸಮಯದಲ್ಲಿ ಆರೋಪಿ ನಾಗೇಶ್‌ ಹತ್ತಿರಕ್ಕೆ ಬಂದಿದ್ದಾನೆ. ಒಂದು ಕೈ ಕವರ್‌ನಲ್ಲಿ ಏನನ್ನೋ ಹಿಡಿದಿರುವುದಾಗಿ ಗಮನಿಸಿದ ಯುವತಿ ಕೆಳಗೆ ಓಡಲು ಪ್ರಯತ್ನಿಸಿದ ಕೂಡಲೆ ನಾಗೇಶ ಹಿಂಬಾಲಿಸಿಕೊಂಡು ಬಂದು ಆಸಿಡ್ ಅನ್ನು ಯುವತಿಯ ಮೈ ಮೇಲೆ ಹಾಕಿ ಓಡಿ ಹೋಗಿದ್ದ.ಎದೆ, ಕೈಗಳು , ಹಾಗು ಬೆನ್ನಿಗೆ ಆ್ಯಸಿಡ್‌ ಬಿದ್ದು ಗಾಯಗಳಾಗಿದ್ದು, ಯುವತಿ ಕೂಡಲೆ ತಂದೆಗೆ ಕರೆ ಮಾಡಿ ಸ್ಥಳಕ್ಕೆ ಬರಲು ತಿಳಿಸಿದ್ದಳು. ನಂತರ ಆ್ಯಂಬುಲೆನ್ಸ್‌ ಮೂಲಕ ಯುವತಿಯನ್ನು ಮೊದಲಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ, ನಂತರ ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು.ನಾಗೇಶ ಸುಮಾರು ಏಳು ವರ್ಷಗಳ ಹಿಂದೆ ಯುವತಿಯ ದೊಡ್ಡಮ್ಮನ ಮನೆಯಲ್ಲಿ ಬಾಡಿಗೆಗೆ ಇದ್ದ. ತನ್ನನ್ನು ಪ್ರೀತಿ ಮಾಡುವಂತೆ ಹಿಂಸೆ ಮಾಡುತ್ತಿದ್ದ. ಪ್ರೀತಿ ಮಾಡುವುದಿಲ್ಲ ಎಂದು ತಿಳಿಸಿದಾಗ ಸುಮ್ಮನಾಗಿದ್ದ. ಆದರೆ ಮತ್ತೆ ಒಂದು ವಾರದಿಂದ ಹಿಂಬಾಲಿಸಿಕೊಂಡು ಬಂದು, ಪ್ರೀತಿ ಮಾಡುವಂತೆ ಬಲವಂತ ಮಾಡುತ್ತಿದ್ದ. ಇದಕ್ಕೂ ಒಪ್ಪದಿದ್ದಾಗ ಆ್ಯಸಿಡ್‌ ದಾಳಿ ಮಾಡಿದ್ದಾನೆ ಎನ್ನಲಾಗಿದೆ.

ಥಿಕ್‌ ಗ್ಲೌಸ್‌ನಲ್ಲಿ ಆ್ಯಸಿಡ್‌ :

ಯುವತಿಯ ಕೆಲಸದ ಜಾಗಕ್ಕೆ ಆಟೋದಲ್ಲಿ ಬಂದಿದ್ದ ದಾಳಿಕೋರ, ಥಿಕ್ ಗ್ಲೌಸ್ ಒಳಗೆ ಆಸಿಡ್ ತುಂಬಿಕೊಂಡು ಅಡಗಿಸಿಟ್ಟುಕೊಂಡಿದ್ದ. ಪಿಂಕ್ ಬಣ್ಣದ ಪೂರ್ಣ ತೋಳಿನ ಶರ್ಟ್ ಹಾಗು ಬ್ಲೂ ಜೀನ್ಸ್ ಧರಿಸಿದ್ದ ಆರೋಪಿ, ಕೃತ್ಯ ಎಸಗಿದ ಬಳಿಕ ಪುನಃ ಆಟೋದಲ್ಲೆ ಪರಾರಿ ಆಗಿದ್ದಾನೆ. ಇದೆಲ್ಲವೂ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | ಹರ್ಷನ ಕೊಲೆಯ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

UPSC Results 2023: ಬೆಂಗಳೂರಿನ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್‌ನ 18 ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

VISTARANEWS.COM


on

Universal Coaching Centre
Koo

ಬೆಂಗಳೂರು: ಮತ್ತೊಮ್ಮೆ ಮಗದೊಮ್ಮೆ ಯುನಿವರ್ಸಲ್ ಕೋಚಿಂಗ್ ಸೆಂಟರ್, ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC Results 2023) ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗೆ ನಂಬರ್ 1 ತರಬೇತು ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್‌ನ (Universal Coaching Centre) 18 ಅಭ್ಯರ್ಥಿಗಳು ಈ ಬಾರಿ ತೇರ್ಗಡೆ ಹೊಂದಿದ್ದಾರೆ.

ಅಯಾನ್ ಜೈನ್ 16ನೇ ರ‍್ಯಾಂಕ್‌, ಅಭಿಮನ್ಯು ಮಲಿಕ್ 60ನೇ ರ‍್ಯಾಂಕ್‌, ಡಾ. ಪ್ರಶಾಂತ್. ಎಸ್ 78ನೇ ರ‍್ಯಾಂಕ್‌, ಶಾಶ್ವತ್ ಅಗರವಾಲ್ 121ನೇ ರ‍್ಯಾಂಕ್‌, ಪೌರವಿ ಗುಪ್ತ 213ನೇ ರ‍್ಯಾಂಕ್‌, ಸಮೀರ್ ಗೋಯೆಲ್-222 ರ‍್ಯಾಂಕ್‌, ಅಂಕುರ್ ಕುಮಾರ್ – 344ನೇ ರ‍್ಯಾಂಕ್‌, ಶಿವಶಕ್ತಿವೇಲ್.ಸಿ 340ನೇ ರ‍್ಯಾಂಕ್‌, ಶುಭಮ್ ರಘುವಂಶಿ 556ನೇ ರ‍್ಯಾಂಕ್‌, ಅಜಿತ್ ಸಿಂಗ್ ಖಡ್ಡ 563 ನೇ ರ‍್ಯಾಂಕ್‌, ಕಾರ್ತಿಕೇಯನ್ ಎ.ಕೆ 579ನೇ ರ‍್ಯಾಂಕ್‌, ಲಕ್ಷ್ಮಣ ಪ್ರತಾಪ್ ಚೌಧರಿ 597 ರ‍್ಯಾಂಕ್‌,
ದಿವ್ಯಾಂಶು ಪಾಲ್ ನಗರ 618 ರ‍್ಯಾಂಕ್‌, ಯಶವಂತ್ ನಾಯಕ್ 627ನೇ ರ‍್ಯಾಂಕ್‌, ಕಮಲೇಶ್ ಕುಮಾವತ್ 653ನೇ ರ‍್ಯಾಂಕ್‌, ಸಿದ್ದಾಂತ್ ಬೇಸ್ರ 800ನೇ ರ‍್ಯಾಂಕ್‌, ಸಂಪ್ರೀತ್ ಸಂತೋಷ್ – 868ನೇ ರ‍್ಯಾಂಕ್‌ ಹಾಗೂ ಕರ್ಮವೀರ್ ನಾರ್ವಾಡಿಯ 954ನೇ ರ‍್ಯಾಂಕ್‌ ಪಡೆದಿದ್ದಾರೆ.

ಇದನ್ನೂ ಓದಿ | UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

ಸಂಸ್ಥೆಯ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ತಮ್ಮ ಅಭ್ಯರ್ಥಿಗಳ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. “ಇಂದು ಯುನಿವರ್ಸಲ್ ಸಂಸ್ಥೆ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿ ಬೆಳೆದು ನಿಲ್ಲಲು, ಈ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಕಾರಣ. ನಮ್ಮ ಸಂಸ್ಥೆಯ ತರಬೇತಿಯ ಶ್ರೇಷ್ಠತೆಗೆ ಇದು ಒಂದು ಉದಾಹರಣೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

UPSC Results 2023: ಯುಪಿಎಸ್‌ಸಿ ಪರೀಕ್ಷೆಯಲ್ಲಿ 100ನೇ ರ‍್ಯಾಂಕ್‌ ಪಡೆಯುವ ಮೂಲಕ ವಿಜಯಪುರದ ಮೂಲದ ವಿಜೇತಾ ಬಿ. ಹೊಸಮನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕನಸು ಕಾಣುವುದು ಮನುಷ್ಯನ ಸಹಜವಾದ ಗುಣ, ಆದರೆ ಆ ಕನಸನ್ನು ನನಸಾಗಿಸಿಕೊಳ್ಳೋದು ಬೆರಳೆಣಿಕೆಯಷ್ಟು ಮಂದಿ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶ (UPSC Results 2023) ಮಂಗಳವಾರ ಪ್ರಕಟವಾಗಿದೆ. ಒಟ್ಟು 1016 ಅಭ್ಯರ್ಥಿಗಳು ತೇರ್ಗಡೆಗೊಂಡಿದ್ದು, ರಾಜ್ಯದ 20ಕ್ಕೂ ಹೆಚ್ಚು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿ ಸಾಧನೆಗೈದಿದ್ದಾರೆ. ಈ ಪೈಕಿ 100ನೇ ರ‍್ಯಾಂಕ್‌ ಪಡೆಯುವ ಮೂಲಕ ವಿಜಯಪುರದ ಮೂಲದ ವಿಜೇತಾ ಬಿ. ಹೊಸಮನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯಪುರ ಮೂಲದ ವಿಜೇತಾ ಭೀಮಸೇನ ಹೊಸಮನಿ ಅವರ ಕುಟುಂಬ ಸದ್ಯ ಹುಬ್ಬಳ್ಳಿಯಲ್ಲಿ ನೆಲೆಸಿದೆ. ವಿಜೇತಾ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಎಲ್‌ಕೆಜಿಯಿಂದ 5ನೇ ಕ್ಲಾಸ್‌ವರೆಗೆ ವಿಜಯಪುರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ವಿಜೇತಾ ವಿದ್ಯಾಭ್ಯಾಸ ಮಾಡಿದ್ದು, 6 ರಿಂದ 10ನೇ ತರಗತಿವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್‌ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಓದಿದರು.

ಪ್ರಥಮ ಪಿಯುಸಿ ವಿಜಯಪುರ ನಗರದ ತುಂಗಳ ಕಾಲೇಜು, ದ್ವಿತೀಯ ಪಿಯುಸಿ ದರಬಾರ್ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಕ್ಲಾಟ್ ಪರೀಕ್ಷೆ ಉತ್ತೀರ್ಣವಾಗಿ ಗುಜರಾತಿನ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ
ಬಿಎ, ಎಲ್‌ಎಲ್‌ಬಿ ಪದವಿ ಪಡೆದಿದ್ದು, ಕ್ರಿಮಿನಲ್ ಲಾ ದಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ.

2020 ರಿಂದ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದು, ಆನ್ ಲೈನ್ ತರಬೇತಿ ಹಾಗೂ ಮನೆಯಲ್ಲೇ ಹೆಚ್ಚಿನ ಅಭ್ಯಾಸ ಮಾಡಿ ಇವರು ಸಾಧನೆ ಮಾಡಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವೀಸ್‌ನಲ್ಲಿ ಸ್ಥಾನ ಸಿಗೋ ಸಾಧ್ಯತೆ ಇದೆ. ಹುಬ್ಬಳ್ಳಿಯ ಸಿಲ್ವರ್ ಟೌನ್‌ನ ನಿವಾಸದಲ್ಲಿ ವಿಜೇತಾಗೆ ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ದಾವಣಗೆರೆಯ ಸೌಭಾಗ್ಯ ರಾಜ್ಯಕ್ಕೆ 2ನೇ ಸ್ಥಾನ

ದಾವಣಗೆರೆ: ಯುಪಿಎಸ್‌ಸಿ ಫಲಿತಾಂಶದಲ್ಲಿ ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ್ ಅವರು 101ನೇ ರ‍್ಯಾಂಕ್‌ ಪಡೆಯುವ ಮೂಲಕ ಕರ್ನಾಟಕದಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ದಾವಣಗೆರೆ ಆಂಜನೇಯ ಬಡಾವಣೆಯ ನಿವಾಸಿ ಸೌಭಾಗ್ಯ (22) ಧಾರವಾಡದಲ್ಲಿ ಕೋಚಿಂಗ್ ಪಡೆದಿದ್ದರು.

ಶರಣಮ್ಮ ಹಾಗೂ ಶರಣಯ್ಯ ಸ್ವಾಮಿ ದಂಪತಿಯ ಪುತ್ರಿ ಸೌಭಾಗ್ಯ ಎಸ್. ಬೀಳಗಿಮಠ್, ಸದ್ಯ ಧಾರವಾಡದಲ್ಲಿ ನೆಲೆಸಿದ್ದಾರ. ಇವರ ತಂದೆ ರೈತರಾಗಿದ್ದು, ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನವರು. ಬಿಎಸ್ಸಿ ಅಗ್ರಿಕಲ್ಚರ್ ಪದವಿ ಪಡೆದಿದ್ದಾರೆ.

ಕೋಲಾರದ ಯುವಕನಿಗೆ 939ನೇ ರ‍್ಯಾಂಕ್‌

ಕೋಲಾರ: ಯುಪಿಎಸ್ಸಿ ಫಲಿತಾಂಶದಲ್ಲಿ ಕೋಲಾರದ ಯುವಕನಿಗೆ 939ನೇ ರ‍್ಯಾಂಕ್‌ ಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೋಪಾಲಪುರ ಗ್ರಾಮದ ಶಿಕ್ಷಕ ದಂಪತಿ ಪುತ್ರ ಗೌತಮ್ 939ನೇ ರ‍್ಯಾಂಕ್‌ ಪಡೆದಿದ್ದಾರೆ. ಈ ರ‍್ಯಾಂಕ್‌ನಲ್ಲಿ ಐಎಎಸ್‌ ಹುದ್ದೆ ಸಿಗುವುದು ಕಷ್ಟ, ಮತ್ತೊಂದು ಬಾರಿ ಪರೀಕ್ಷೆ ಬರೆಯುವುದಾಗಿ ಗೌತಮ್‌ ತಿಳಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡು ಯುಪಿಎಸ್ಸಿಗೆ ಯುವಕ ತಯಾರಿ ನಡೆಸಿದ್ದು, ಪೋಷಕರಿಗೆ ಧನ್ಯವಾದ ತಿಳಿಸಿದ್ದಾರೆ. ತಾಲೂಕಿನ ಶಿಕ್ಷಕರು ಯುವಕನನ್ನು ಸನ್ಮಾನಿಸಿ, ಸಿಹಿ ತಿನಿಸಿದ್ದಾರೆ.

ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರ ಯುವಕನ ಸಾಧನೆ

ವಿಜಯಪುರ: ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾಭ್ಯಾಸ ನಡೆಸಿದ್ದು, 6 ರಿಂದ 8 ತರಗತಿ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆ, 8 ರಿಂದ 10ನೇ ತರಗತಿ ವಿಜಯಪುರ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದರು. ಪಿಯುಸಿ ಹೈದರಾಬಾದಿನ ವಿಚೇತನಾ ಕಾಲೇಜು, ಬೆಂಗಳೂರಿನ ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದಾರೆ. 2019 ನಿಂದ ಯುಪಿಎಸ್ಸಿ ಪ್ರಯತ್ನ ನಡೆಸುತ್ತಿದ್ದು, 2023ರಲ್ಲಿ ಉತ್ತೀರ್ಣರಾಗಿದ್ದಾರೆ. ದೆಹಲಿಯ ವಾದಿರಾಮ್ ಕೋಚಿಂಗ್ ಸೆಂಟರ್‌ನಲ್ಲಿ ಸಂತೋಷ್ ತರಬೇತಿ ಪಡೆದಿದ್ದರು. ಸಂತೋಷ್‌ ಸಾಧನೆಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ 20ಕ್ಕೂ ಹೆಚ್ಚು ಕನ್ನಡಿಗರು ತೇರ್ಗಡೆ

ಈ ಬಾರಿ ಒಟ್ಟು 1,016 ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದು, ಲಖನೌನ ಆದಿತ್ಯ ಶ್ರೀವಾಸ್ತವ ದೇಶಕ್ಕೆ ಅಗ್ರಸ್ಥಾನ ಪಡೆದಿದ್ದು, ಒಡಿಶಾದ ಅನಿಮೇಶ್ ಪ್ರಧಾನ್ ಎರಡನೇ ಸ್ಥಾನ ಪಡೆದಿದ್ದು, ತೆಲಂಗಾಣದ ಅನನ್ಯಾ ರೆಡ್ಡಿ ಮೂರನೇ ಸ್ಥಾನ ಪಡೆದಿದ್ದಾರೆ.

UPSC Results 2023
ಶಾಂತಪ್ಪ ಕುರುಬರ್

ಅದೇ ರೀತಿ ಯುಪಿಎಸ್ಸಿಯಲ್ಲಿ ರಾಜ್ಯದ 20ಕ್ಕೂ ಹೆಚ್ಚು ಕನ್ನಡಿಗರು ತೇರ್ಗಡೆಯಾಗುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇದರಲ್ಲಿ ಆಚಾರ್ಯ ಐ.ಎ.ಎಸ್. ಅಕಾಡೆಮಿಯಿಂದ 3 ವಿದ್ಯಾರ್ಥಿಗಳು ರ್‍ಯಾಂಕ್ ಪಡೆದಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಸತತ ಎರಡು ವರ್ಷಗಳಿಂದ ಐಎಎಸ್ ತರಬೇತಿಯಲ್ಲಿ ವಿಶೇಷ ಸ್ಥಾನ ಪಡೆದು, ಅನೇಕ ಬಡ ವಿದ್ಯಾರ್ಥಿಗಳ ಐಎಎಸ್ ಸಾಧನೆಗೆ ಸಹಕಾರಿಯಾಗಿದೆ.

ಇದನ್ನೂ ಓದಿ | UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಇನ್ನು ಈ ಸಾಧನೆಗೆ ಸತತ ಪ್ರಯತ್ನ, ಶ್ರದ್ಧೆ ಹಾಗೂ ಆತ್ಮ ವಿಶ್ವಾಸವೆ ಕಾರಣ ಎನ್ನುತ್ತಿದ್ದಾರೆ ವಿಜೇತರು. ಜೊತೆಗೆ ಬಳ್ಳಾರಿಯ ಶಾಂತಪ್ಪ ಕುರುಬರ್ 644 ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿ ವಿಜೇತರಾಗಿದ್ದಾರೆ. ಸತತವಾಗಿ ಕಷ್ಟವನ್ನೇ ನೋಡಿಕೊಂಡು ಬಂದ ಇವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್ ಅಗಿದ್ದರು. ತಾಯಿ ಕೂಲಿ ಕೆಲಸ ಮಾಡಿ ಇವರನ್ನು ಸಾಕಿದ್ದಾರೆ. ಇವರು PSI ಹುದ್ದೆಯಲ್ಲಿದ್ದು, ಕೆಲ್ಸದ ಜೊತೆಗೆ ಕನ್ನಡದಲ್ಲೇ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಜೊತೆಗೆ ಕನ್ನಡದಲ್ಲೇ ಪರೀಕ್ಷೆ ಬರೆದು ಪಾಸಾಗಿದ್ದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಇನ್ನು ಇದೆ ಅಕಾಡೆಮಿಯಲ್ಲಿ ಓದಿದ್ದ ಬಾನು ಪ್ರಕಾಶ್ 600 ರ್ಯಾಂಕ್ ಪಡೆದಿದ್ದರೆ. ಮೂಲತಃ ಮೈಸೂರಿನವರಾದ ಇವರು ಕೊನೆ ಬಾರಿ ಕೂಡ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಅಗಿದ್ದರು.

Continue Reading

Lok Sabha Election 2024

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

Modi in Karnataka: ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka on April 20 Massive rallies in Chikkaballapura and Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ )Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಕರ್ನಾಟಕ

DK Shivakumar: ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೊಡುತ್ತೇನೆ: ಡಿ.ಕೆ. ಶಿವಕುಮಾರ್

DK Shivakumar: ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು? ನಾನು ಆ ವಿಚಾರ ಬಿಡುತ್ತೇನೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದಾರೆ.

VISTARANEWS.COM


on

DK Shivakumar attack on HD Kumaraswamy
Koo

ಬೆಂಗಳೂರು: ನಾನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವವನ್ನು ಅವರಿಗೆ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದರು. ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪರಸ್ಪರರ ನಡುವೆ ನಡೆಯುತ್ತಿರುವ ವಾಕ್ಸಮರದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತವಾಗಿ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ ಎಂದು ತಿಳಿಸಿದರು.

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ

ಎನ್‌ಒಸಿ ನೀಡಲು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು? ನಾನು ಆ ವಿಚಾರ ಬಿಡುತ್ತೇನೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ‌ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಡಿಕೆಶಿ ಒಕ್ಕಲಿಗ ನಾಯಕನಲ್ಲ ಎಂಬ ಆರ್. ಅಶೋಕ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ನಾಯಕನೇ ಅಲ್ಲ. ಅವರು ನಾಯಕರು, ದೊಡ್ಡ ನಾಯಕರು. ನಾನು ಸಾಮಾನ್ಯ ಕಾರ್ಯಕರ್ತ ಎಂದು ಹೇಳಿದರು.

ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ರಾಹುಲ್ ಗಾಂಧಿ ಅವರು ನಾಳೆ (ಬುಧವಾರ – ಏಪ್ರಿಲ್‌ 17) ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು, ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Continue Reading
Advertisement
Universal Coaching Centre
ಬೆಂಗಳೂರು45 mins ago

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

Sanju Samson
ಪ್ರಮುಖ ಸುದ್ದಿ50 mins ago

Sanju Samson : ಸಂಜು ಸ್ಯಾಮ್ಸನ್​ಗೆ ರಾಯಲ್ಸ್​ ತಂಡದಲ್ಲಿ ದಶಕದ ಸಾಧನೆ; ಬೆಸ್ಟ್​ ಕ್ಯಾಪ್ಟನ್ ಎಂದ ಅಭಿಮಾನಿಗಳು

UPSC Result 2024
ಶಿಕ್ಷಣ1 hour ago

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

Lok Sabha Election 2024 Rs 18 crore seized from raids for liquor
Lok Sabha Election 20241 hour ago

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Akshya Kumar
ಸಿನಿಮಾ1 hour ago

Akshya Kumar: ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಕ್ಷಯ್ ಕುಮಾರ್!

Drinking water problem Provide water immediately by tanker says DC
ಉತ್ತರ ಕನ್ನಡ1 hour ago

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

MS Dhoni
ಪ್ರಮುಖ ಸುದ್ದಿ1 hour ago

MS Dhoni : ಮೊಣಕಾಲು ನೋವಿನಿಂದ ರೈನಾ ಕೈಹಿಡಿದು ಮೆಟ್ಟಿಲು ಇಳಿದ ಧೋನಿ…

UPSC Results 2023
ಕರ್ನಾಟಕ1 hour ago

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

Modi in Karnataka on April 20 Massive rallies in Chikkaballapura and Bengaluru
Lok Sabha Election 20242 hours ago

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

IPL 2024
ಪ್ರಮುಖ ಸುದ್ದಿ2 hours ago

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ17 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌