ಬೆಂಗಳೂರು : ಆ್ಯಸಿಡ್ ದಾಳಿಯಿಂದ ಗಾಯಗೊಂಡಿದ್ದ ಯುವತಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಬರ್ನಿಂಗ್ ವಾರ್ಡ್‌ನಿಂದ ಸ್ಪೆಷಲ್ ವಾರ್ಡ್‌ಗೆ ಯುವತಿಯನ್ನು ಶಿಫ್ಟ್ ಮಾಡಿದ್ದಾರೆ. ಬರೊಬ್ಬರಿ 22 ದಿನಗಳಿಂದ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಿಗಾವಹಿಸಿದ್ದ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿದ್ದು, ಚೇತರಿಕೆಯಿಂದ ತುಸು ನೆಮ್ಮದಿ ಕಾಣುತ್ತಿದ್ದಾರೆ ಯುವತಿಯ ಕುಟುಂಬ.
ಸುಂಕದಕಟ್ಟೆ ಕಾಮಾಕ್ಷಿ ಪಾಳ್ಯದಲ್ಲಿ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆದು ಕಾಮಾಕ್ಷಿಪಾಳ್ಯ ಪಾಳ್ಯ ಪೊಲೀಸರಿಗೆ ಆ್ಯಸಿಡ್ ನಾಗೇಶ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಏಪ್ರಿಲ್ 28ರಂದು ಯುವತಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಆ ಗಾಯಗಳನ್ನೆ ತೋರಿಸಿ ನ್ಯಾಯಾಲಯದ ಬಳಿ ವಕೀಲರನ್ನು ಭೇಟಿಯಾಗಿದ್ದ. ಯಾರೂ ಕೇಸ್ ತೆಗೆದುಕೊಳ್ಳದೇ ನಿರಾಕರಿಸಿದ್ದರಿಂದ ಅಲ್ಲಿಂದ ಪರಾರಿಯಾಗಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳುವ ಜತೆಗೆ ಮಾಡಿದ ಪಾಪವನ್ನು ತೊಳೆದುಕೊಳ್ಳಲು ತಮಿಳುನಾಡಿನ ತಿರುವಣ್ಣಾಮಲೈಯಲ್ಲಿರುವ ರಮಣಶ್ರೀ ಆಶ್ರಮದಲ್ಲಿ ಸನ್ಯಾಸಿಯಂತೆ ನಟಿಸುತ್ತಿದ್ದ ನಾಗೇಶನನ್ನು ಪೊಲೀಸರು ಶುಕ್ರವಾರ ಸಂಜೆ ಸೆರೆ ಹಿಡಿದಿದ್ದರು.
ಇದನ್ನೂ ಓದಿ | ಆ್ಯಸಿಡ್ ದಾಳಿಗೆ ಕಠಿಣ ಶಿಕ್ಷೆ ವಿಧಿಸಲು BJP ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಮನವಿ
ಯುವತಿಯ ಮೇಲೆ ಆ್ಯಸಿಡ್ ಎರಚಿದಾಗ ಅವನ ಬಲಗೈ ಮೇಲೆಯೂ ಆ್ಯಸಿಡ್ ಬಿದ್ದು ಗಾಯವಾಗಿತ್ತು. ತಿರುವಣ್ಣಾಮಲೈಯಲ್ಲಿ ಮಳ್ಳಿಯಂತೆ ಸದಾ ಧ್ಯಾನದಲ್ಲಿರುತ್ತಿದ್ದ ನಾಗನ ಮೇಲೆ ಯಾರಿಗೂ ಅನುಮಾನವೇ ಬಂದಿರಲಿಲ್ಲ. ಪೊಲೀಸರು ಹತ್ತಿರ ಹೋಗುತ್ತಿದ್ದಂತೆಯೇ ಭೀತಿಯಿಂದ ಅಲ್ಲಿಂದ ಪರಾರಿಯಾಗಲು ಯತ್ನಿಸಿದವನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ | Acid Attack | ಬೆಂಗ್ಳೂರ್ To ತಿರುವಣ್ಣಾಮಲೈ: ಆ್ಯಸಿಡ್ ನಾಗನ Travel History