ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣದ ನೆನಪು ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ವರದಿಯಾಗಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಕೃತ್ಯ ಎಸಗಿದ್ದಾನೆ. ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ | Acid Attack | ಬೆಂಗ್ಳೂರ್ To ತಿರುವಣ್ಣಾಮಲೈ: ಆ್ಯಸಿಡ್ ನಾಗನ Travel History
ಗಾಯಾಳು ಮಂತು ಸಾಂತ್ರಾ ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳ ಶುರುವಾಯಿತು. ಈ ವೇಳೆ ಡೈಲ್ಯೂಟೇಡ್ ಸೆಲ್ಫ್ಯೂರಿಕ್ ಆ್ಯಸಿಡ್ ಅನ್ನು ಆರೋಪಿ ಎರಚಿದ್ದಾನೆ. ಮಂತು ಸಾಂತ್ರಾನ ಮುಖ ಮತ್ತು ಎದೆ ಸುಟ್ಟು ಹೋಗಿದೆ. ಶೇಕಡಾ 30% ಗಾಯಗಳೊಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಡಿಸಿಪಿ ಡಾ. ಶರಣಪ್ಪ ತಿಳಿಸಿದ್ದಾರೆ.
ಆರೋಪಿ ಜನತಾ ಅದಕ್ನನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಆ್ಯಸಿಡ್ ದಾಳಿಗೆ ಕಠಿಣ ಶಿಕ್ಷೆ ವಿಧಿಸಲು BJP ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಮನವಿ