Site icon Vistara News

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Action will be taken to ensure that the Anganwadi workers do not suffer in any way says Minister Lakshmi Hebbalkar

ಬೆಂಗಳೂರು: ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ (Lakshmi Hebbalkar) ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್‌ಕೆಜಿ, ಯುಕೆಜಿ‌ ಆರಂಭಿಸುವ ಕುರಿತ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ- ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಗುರುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ: Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಈ ವೇಳೆ ಸಚಿವರು, ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

ಈ ವೇಳೆ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ನಿರ್ದೇಶಕ ಎನ್.ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ, ಕಾರ್ಮಿಕ ಸಂಘಟನೆಗಳ ಮುಖಂಡರಾಧ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.

Exit mobile version