ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಜೈಲುಪಾಲಾಗಿದ್ದಾರೆ. ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್‌ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರು ವಾದ ಮಾಡಲು ಸಮಯ ಕೇಳಿದ ಹಿನ್ನೆಲೆಯಲ್ಲಿ ದರ್ಶನ್‌ರ ಜಾಮೀನು ಅರ್ಜಿ ಮುಂದೂಡಿಕೆ ಮಾಡಲಾಗಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಇನ್ನು ಎಸ್‌ಪಿಪಿ ಕೋರ್ಟ್ ಹಾಲ್‌ನಲ್ಲಿ ನಡೆದ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್ ಅವರನ್ನು ಕರೆಸುವಂತೆ ನ್ಯಾಯಾಧೀಶರು ಸೂಚನೆ ನೀಡಿದರು. ರವಿಶಂಕರ್ ಅರ್ಜಿ ವಿಚಾರಣೆಗೂ ಎಸ್‌ಎಸ್‌ಪಿ ಅಗತ್ಯ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ ಅವರ ಹಾಜರಾತಿಗೆ ನ್ಯಾಯಾಲಯ ಸೂಚಿಸಿತು. ಇದಕ್ಕಾಗಿ ಕೆಲಕಾಲ ವಿಚಾರಣೆ ಮುಂದೂಡಲಾಯಿತು.
ಬಳಿಕ ಶುರುವಾದ ಪವಿತ್ರಗೌಡ ಗೌಡ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್‌ಪಿಪಿ ಪರ ವಕೀಲರು 15 ದಿನಗಳ ಸಮಯಾವಕಾಶ ಕೇಳಿದರು. ಸಮಯಾವಕಾಶ ನೀಡಲು ಆಗಲ್ಲ, ಇವತ್ತೇ ನಿಮ್ಮ ಸಿನಿಯರ್ ವಕೀಲರನ್ನು ಕರೆಸಿ ಎಂದು ನ್ಯಾಯಾಧೀಶರು ಸೂಚಿಸಿ, ಜಾಮೀನು ಅರ್ಜಿಯನ್ನು ಕೆಲ ಕಾಲ ಮುಂದೂಡಿದರು. ಬಳಿಕ ಅಕ್ಟೋಬರ್ 4ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಈಗಾಗಲೆ ದರ್ಶನ್, ಲಕ್ಷ್ಮಣ್ ಜಾಮೀನು ಅರ್ಜಿಯನ್ನು ಅ .4ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಸದ್ಯ ಪವಿತ್ರಾ ಗೌಡ ಅರ್ಜಿ ವಿಚಾರಣೆ ಕೂಡ ಮುಂದೂಡಿಕೆ ಮಾಡಿ ನ್ಯಾಯಾಧೀಶ ಶ್ರೀ ಜೈಶಂಕರ್ ಆದೇಶ ಹೊರಡಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ