Site icon Vistara News

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

chemicals in food

ಬೆಂಗಳೂರು: ರಾಜಧಾನಿಯ (Bangalore) ಹೋಟೆಲ್ (Hotels) ಹಾಗೂ ಮಾಲ್‌ಗಳಲ್ಲಿ (Mall) ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ (Added colour) ಹಾಗೂ ಕೆಮಿಕಲ್ (Chemicals in Food) ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು (Health minister) ಎಚ್ಚರಿಕೆ ನೀಡಿದ್ದಾರೆ.

ಮಾಲ್‌ಗಳು ಹಾಗೂ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಈ ಕುರಿತು ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿ ಆಹಾರದಲ್ಲೂ ಕಲರ್ ಬಳಕೆ, ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ಮಾಡಿದಾಗ ಮಾಲ್‌ಗಳಲ್ಲಿನ ಫುಡ್ ಕಳಪೆ ಎಂದು ಪತ್ತೆಯಾಗಿದೆ. ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲರೂ ಆಹಾರದಲ್ಲಿ ಶುಚಿತ್ವ ಕಾಪಾಡುವಂತೆ ಹಾಗೂ ಕಲರ್ ಮುಕ್ತ ಆಹಾರ ನೀಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಇದರ ಜೊತೆಗೆ ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು. ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು. ತರಕಾರಿ- ಹಣ್ಣು ಮಾರುವಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಸಾವಯವ ತರಕಾರಿ ಮಾರುತ್ತೇವೆ ಎಂದು ಹೆಚ್ಚಿನ ದರದಲ್ಲಿ ಕಳಪೆ ತರಕಾರಿ ಹಣ್ಣುಗಳನ್ನು ಮಾರುತ್ತಿರುವುದು ಕಂಡುಬರುತ್ತಿದೆ. ಇದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

UGCET 2024: ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ ಸಾಧ್ಯತೆ

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 7) ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಸಾಧ್ಯತೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Exit mobile version