Air Travel: ವಿಮಾನದಲ್ಲಿ ಸಿಗರೇಟ್‌ ಸೇದಿ ಅರೆಸ್ಟ್‌ ಆದ ಪ್ರಯಾಣಿಕ - Vistara News

ಬೆಂಗಳೂರು

Air Travel: ವಿಮಾನದಲ್ಲಿ ಸಿಗರೇಟ್‌ ಸೇದಿ ಅರೆಸ್ಟ್‌ ಆದ ಪ್ರಯಾಣಿಕ

ರಾಜಸ್ಥಾನ ಮೂಲದ ಪ್ರವೀಣ್ ಕುಮಾರ್ (56) ಬಂಧಿತ ಆರೋಪಿ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಶ್ QP- 1326 ವಿಮಾನದಲ್ಲಿ ವಿಮಾನಯಾನ ಕಾನೂನು ಉಲ್ಲಂಘಿಸಿ ಸಿಗರೇಟ್ ಸೇವನೆ ಮಾಡಿದ ಆರೋಪ ಈತನ ಮೇಲಿದೆ.

VISTARANEWS.COM


on

air travel smoking
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ವಿಮಾನದಲ್ಲಿ ಸಿಗರೇಟ್ ಸೇದಿ ಸುರಕ್ಷತೆಗೆ ಅಡ್ಡಿಯಾದ ಆರೋಪದಲ್ಲಿ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ.

ರಾಜಸ್ಥಾನ ಮೂಲದ ಪ್ರವೀಣ್ ಕುಮಾರ್ (56) ಬಂಧಿತ ಆರೋಪಿ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಶ್ QP- 1326 ವಿಮಾನದಲ್ಲಿ ವಿಮಾನಯಾನ ಕಾನೂನು ಉಲ್ಲಂಘಿಸಿ ಸಿಗರೇಟ್ ಸೇವನೆ ಮಾಡಿದ ಆರೋಪ ಈತನ ಮೇಲಿದೆ.

ಕೆಂಪೇಗೌಡ ವಿಮಾನ ನಿಲ್ದಾಣದ ಡ್ಯೂಟಿ ಮ್ಯಾನೇಜರ್ ವಿಜಯ್ ತಲ್ಲೂರು ಅವರಿಂದ ದೂರು ದಾಖಲಾಗಿದ್ದು, ದೂರು‌ ದಾಖಲಿಸಿಕೊಂಡ ಕೆಐಎ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ‌ವಿಮಾನ‌ ನಿಲ್ದಾಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನದಲ್ಲಿ ಮದ್ಯ ಸೇವಿಸಿ ಅನುಚಿತವಾಗಿ ವರ್ತಿಸಿ ಮಹಿಳೆ

ಕೋಲ್ಕತ್ತ: ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕರು ಮದ್ಯಪಾನ ಮಾಡಿ ಅವಾಂತರ ಸೃಷ್ಟಿಸಿದ ಹಲವು ಘಟನೆಗಳ ಬಗ್ಗೆ ಓದಿದ್ದೇವೆ. ಅಂಥದ್ದೇ ಮತ್ತೊಂದು ಘಟನೆ ಈಗ ದೆಹಲಿ-ಕೋಲ್ಕತ್ತ ಇಂಡಿಗೋ ವಿಮಾನ (IndiGo Flight)ದಲ್ಲಿ ನಡೆದಿದೆ. ಈ ಸಲ ಎಡವಟ್ಟು ಮಾಡಿದ್ದು ಒಬ್ಬಳು ಮಹಿಳಾ ಪ್ರಯಾಣಿಕಳು. ವಿಮಾನದಲ್ಲಿ ಮದ್ಯಪಾನ ಮಾಡಿದ ಮಹಿಳೆ ಉಳಿದ ಪ್ರಯಾಣಿಕರು, ವಿಮಾನ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ. ಬಳಿಕ ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ (ಸಿಐಎಸ್​ಎಫ್​) ಬಂಧಿಸಿದ್ದಾರೆ.

ಬಂಧಿತ ಮಹಿಳೆ ಹೆಸರು ಪರಮ್​ಜಿತ್ ಕೌರ್​. ಈಕೆ ದೆಹಲಿಯಿಂದ ಕೋಲ್ಕತ್ತಕ್ಕೆ ಪ್ರಯಾಣ ಮಾಡುತ್ತಿದ್ದಳು. ಮದ್ಯ ಪಾನ ಮಾಡಿ ಅಮಲು ಏರಿಸಿಕೊಂಡ ಸ್ಥಿತಿಯಲ್ಲಿ ಕುಳಿತಿದ್ದಳು. ಅದನ್ನು ವಿಮಾನ ಪರಿಚಾರಕರು/ಗಗನಸಖಿಯರು ಗಮನಿಸಿದ್ದಾರೆ. ಆದರೆ ಕೆಲವೇ ಹೊತ್ತಲ್ಲಿ ಆಕೆ ತನ್ನ ಅಕ್ಕ-ಪಕ್ಕ ಕುಳಿತ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ಶುರು ಮಾಡಿದ್ದಳು. ಈ ಫ್ಲೈಟ್ ರಾತ್ರಿ ಸಂಚಾರ ಮಾಡುತ್ತಿದ್ದರಿಂದ ಉಳಿದ ಪ್ರಯಾಣಿಕರು ನಿದ್ದೆ ಮಾಡುವ ಮೂಡ್​​ನಲ್ಲಿದ್ದರೂ, ಮಹಿಳೆ ಅಸಭ್ಯವಾಗಿ ವರ್ತನೆ ಮುಂದುವರಿಸಿದ್ದಳು. ಇದೆಲ್ಲ ನಡೆದಿದ್ದು ತಡರಾತ್ರಿ 1.10ರ ಹೊತ್ತಿಗೆ. ವಿಮಾನದಲ್ಲಿ ಇದ್ದಾಗಲೇ ಏರ್​ಲೈನ್​ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅವರು ಸಿಐಎಸ್​ಎಫ್​ ಸಿಬ್ಬಂದಿಗೆ ತಿಳಿಸಿದ್ದರು. ಹೀಗಾಗಿ ಕೋಲ್ಕತ್ತದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಮಹಿಳೆಯ ಬಂಧನವಾಗಿದೆ. ಬುಧವಾರ ತಡರಾತ್ರಿ ಆಕೆಯನ್ನು ವಶಕ್ಕೆ ಪಡೆದ ಸಿಐಎಸ್​ಎಫ್ ಸಿಬ್ಬಂದಿ ಗುರುವಾರ ಮುಂಜಾನೆ 7 ಗಂಟೆವರೆಗೂ ಆಕೆಯನ್ನು ಬಂಧನದಲ್ಲಿಯೇ ಇಟ್ಟುಕೊಂಡಿದ್ದರು. ನಂತರ ಅವಳನ್ನು ಏರ್​ಪೋರ್ಟ್​ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Viral Video: ಒಂದೇ ವಿಮಾನದಲ್ಲಿ ತಾಯಿ-ಮಗಳು ಗಗನಸಖಿಯರು; ತಾಯಂದಿರ ದಿನದಂದು ಪ್ರಯಾಣಿಕರೂ ಭಾವುಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case: ರಾಜ್ಯ ಮಹಿಳಾ ಆಯೋಗದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿವೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ರಾಜ್ಯ ಮಹಿಳಾ ಆಯೋಗದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿರ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading

ಕ್ರೀಡೆ

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

TCS World 10K: ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

VISTARANEWS.COM


on

TCS World 10K
Koo

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು (TCS World 10K) ಟೂರ್ನಿಯ 16ನೇ ಆವೃತ್ತಿಯಲ್ಲಿ ಕೀನ್ಯಾದ ಪೀಟರ್ ಮ್ವಾನಿಕಿ ಪುರುಷರ ಪ್ರಶಸ್ತಿ ಗೆದ್ದರೆ, ಲಿಲಿಯನ್ ಕಸಾಯಿತ್ ಮಹಿಳಾ ಪ್ರಶಸ್ತಿ ಗೆದ್ದಿದ್ದಾರೆ. ಭಾರತದ ಎಲೈಟ್ ಅಥ್ಲೀಟ್​ಗಳ ನಡುವಿನ ಸ್ಪರ್ಧೆಯಲ್ಲಿ ಕಿರಣ್ ಮಾತ್ರೆ ಅವರು 29:32 ನಿಮಿಷದೊಂದಿಗೆ ಮೊದಲ ಸ್ಥಾನ ಗೆದ್ದು ಈವೆಂಟ್ ದಾಖಲೆಯನ್ನು ಮುರಿದರು.

ಪ್ರತಿಷ್ಠಿತ ಮ್ಯಾರಾಥಾನ್​ ನಲ್ಲಿ ಅಥ್ಲೀಟ್​​ಗಳು 1.75 ಕೋಟಿ ರೂಪಾಯಿ (210,000 ಯುಎಸ್​​ ಡಾಲರ್​) ಬಹುಮಾನ ಪಡೆದುಕೊಂಡಿದ್ದಾರೆ. ಪೀಟರ್ ಮ್ವಾನಿಕಿ ಮತ್ತು ಲಿಲಿಯನ್ ಕಸಾಯಿತ್ ತಲಾ 21,68,476 ಲಕ್ಷ ರೂಪಾಯಿ (26,000 ಯುಎಸ್​ ಡಾಲರ್​​) ಸಮಾನ ಬಹುಮಾನದ ಚೆಕ್ ಪಡೆದರು. ಭಾರತೀಯ ಎಲೈಟ್ ವಿಭಾಗದಲ್ಲಿ ಕಿರಣ್ ಮಾತ್ರೆ ಮತ್ತು ಸಂಜೀವನಿ ಜಾಧವ್ ತಲಾ 2,75,000 ರೂ. ಇದಲ್ಲದೆ, ಈವೆಂಟ್ ದಾಖಲೆಯನ್ನು ಮುರಿದಿದ್ದಕ್ಕಾಗಿ ಕಿರಣ್ ಮಾತ್ರೆ 1,00,000 ರೂ.ಗಳ ಬೋನಸ್ ಪಡೆದರು.

ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

TCS World 10 K

ತನ್ನ ವಿಜಯದ ಬಗ್ಗೆ ಮಾತನಾಡಿದ ಲಿಲಿಯನ್ ಕಸಾಯಿತ್, “ಇದು ತುಂಬಾ ಆಕ್ರಮಣಕಾರಿ ಓಟವಾಗಿತ್ತು, ನಾವು ಆರಂಭದಿಂದಲೂ ವೇಗವಾಗಿದ್ದೆ ಎಂದು ಹೇಳಿದ್ದಾರೆ. ಆದಾಗ್ಯೂ ದಾಖಲೆ ಮುರಿಯಲು ಸಾಧ್ಯವಾಗದಿರುವುದಕ್ಕೆ ವಿಷಾದಿಸಿದರು. ನಾನು ಇಂದು ಕೋರ್ಸ್ ದಾಖಲೆ ಮುರಿಯಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಓಟದ ಕೊನೆಯಲ್ಲಿ ನನ್ನಲ್ಲಿ ಇನ್ನೂ ಸಾಕಷ್ಟು ಶಕ್ತಿ ಇದೆ ಎಂದು ನಾನು ಭಾವಿಸಿದೆ ಎಂದು ಹೇಳಿದ್ದಾರೆ.

ಭಾರತೀಯ ಎಲೈಟ್​​ ಪುರುಷರ ರೇಸ್ ನಲ್ಲಿ ಮೊದಲ ನಾಲ್ಕು ಸ್ಥಾನಗಳು ಹಿಂದಿನ ಕೋರ್ಸ್ ದಾಖಲೆಗಿಂತ ಮುಂದಿವೆ. ಸಮಬಲದ ಹೋರಾಟದಲ್ಲಿ ಕಿರಣ್ ಮಾತ್ರೆ 29:32 ಸೆಕೆಂಡುಗಳಲ್ಲಿ ಗುರಿ ತಲುಪಿ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದರು. ರಂಜೀತ್ ಕುಮಾರ್ ಪಟೇಲ್ (29:35) ಮತ್ತು ಧರ್ಮೇಂದ್ರ (29:45) ಗುರಿ ತಲುಪಿದರು.
ಕಿರಣ್ ಮಾತ್ರೆ, ರಂಜೀತ್ ಕುಮಾರ್ ಪಟೇಲ್ ಮತ್ತು ಧರ್ಮೇಂದ್ರ ಅವರನ್ನೊಳಗೊಂಡ ತಂಡ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರಿನ ಹಿಂದಿನ ಆವೃತ್ತಿಯಿಂದ ಕ್ರಮವಾಗಿ 12, 9 ಮತ್ತು 10ನೇ ಸ್ಥಾನ ಗಳಿಸಿತ್ತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಗೆಲುವಿನ ನಂತರ ಮಾತನಾಡಿದ ಕಿರಣ್ ಮಾತ್ರೆ, “4 ಮತ್ತು 8 ನೇ ಕಿಲೋಮೀಟರ್ ನಡುವೆ, ಓಟವು ನನಗೆ ಸಾಕಷ್ಟು ಸವಾಲಿನದ್ದಾಗಿತ್ತು, ಆದ್ದರಿಂದ ಫಲಿತಾಂಶದಿಂದ ನನಗೆ ತುಂಬಾ ಸಂತೋಷವಾಗಿದೆ. ಕಳೆದ ವರ್ಷ ನಾನು 12 ನೇ ಸ್ಥಾನವನ್ನು ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಸಂಜೀವಿನಿಗೆ ಮೂರನೇ ಗೆಲುವು

ಸಂಜೀವನಿ ಟಿಸಿಎಸ್ ವರ್ಲ್ಡ್ 10 ಕೆ ಬೆಂಗಳೂರಿನಲ್ಲಿ ನಡೆದ ಮಹಿಳಾ ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿ ಮೂರನೇ ಗೆಲುವು ಸಾಧಿಸಿದರು. ಅಂತರರಾಷ್ಟ್ರೀಯ ಮಹಿಳಾ ಸ್ಪರ್ಧೆಯಂತೆಯೇ, ಭಾರತೀಯ ಮಹಿಳಾ ಓಟದಲ್ಲಿ ಸೋನಮ್ (36:27) ಆರಂಭಿಕ ಮುನ್ನಡೆ ಸಾಧಿಸಿದರು. ಸಂಜೀವನಿ 34:03 ಸೆಕೆಂಡುಗಳಲ್ಲಿ ಗುರಿ ತಲುಪಿ ಮತ್ತೊಂದು ದಾಖಲೆ ನಿರ್ಮಿಸಿದರು. ಲಿಲ್ಲಿ ದಾಸ್ (34:13) ಎರಡನೇ ಸ್ಥಾನ ಪಡೆದರೆ, ಪ್ರೀತಿ ಯಾದವ್ (34:24) ಮೂರನೇ ಸ್ಥಾನ ಪಡೆದರು.

Continue Reading

Lok Sabha Election 2024

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

PM Narendra Modi: ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

PM Narendra Modi Cm Siddaramaiah many questions to PM Modi Challenge for answer
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯ ಪ್ರವಾಸದಲ್ಲಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್‌ ಹಾಗೂ ಕರ್ನಾಟಕ ಸರ್ಕಾರದ (Karnataka Congress Government) ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು ಏನು?

ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ.

‘’ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ.

ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. 2019ರ ಬಜೆಟ್‌ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ?

ಸಂಪತ್ತಿನ ಸಮಾನ ಹಂಚಿಕೆ ಎಂಬುದು ಉದಾತ್ತ ಚಿಂತನೆ

ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಎಚ್.ಡಿ. ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ನರೇಂದ್ರ ಮೋದಿಯವರೇ ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದೀರಾ?

ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ?

ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆ ಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ?

ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ

ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ?

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರೇ, ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿತು. ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಅನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು.

ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಯಾರಿಗೆ?

ಪ್ರಧಾನಿ ಮೋದಿಯವರೇ ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಅದಾನಿ – ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

Continue Reading

Lok Sabha Election 2024

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

Prajwal Revanna Pen Drive: ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

VISTARANEWS.COM


on

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಪೆನ್‌ಡ್ರೈವ್‌ ಬಹಿರಂಗಗೊಂಡ (Prajwal Revanna Pen Drive) ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಶನಿವಾರ (ಏಪ್ರಿಲ್‌ 27) ಘೋಷಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರದಿಂದ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಕೇಸ್ ಅನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಕೆಲವೇ ಸಮಯದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗುವುದು. ಎಡಿಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.

ಎಸ್‌ಐಟಿಗೆ ಪರಮಾಧಿಕಾರ

ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ವಿದೇಶದಿಂದ ಕರೆ ತರಲಾಗುತ್ತದೆಯೇ?

ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಇನ್ನು ವಿದೇಶದಲ್ಲಿರುವ ಅವರನ್ನು ಕರೆತರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ಮಾಡಬೇಕು. ಪ್ರಕರಣದಲ್ಲಿ ಸತ್ಯ ಕಂಡುಬಂದರೆ ಅವರ ರೀತಿಯಲ್ಲಿ ಅವರು ಕ್ರಮ ವಹಿಸುತ್ತಾರೆ. ಇದರಲ್ಲಿ ಸರ್ಕಾರದಿಂದ ಯಾವುದೇ ನಿರ್ದೇಶನ ಇರುವುದಿಲ್ಲ. ಹೀಗೇ ತನಿಖೆ ನಡೆಸಬೇಕು ಎಂದು ನಾವು ಹೇಳುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಎಸ್‌ಐಟಿ ತನಿಖೆ ಬಗ್ಗೆ ಘೋಷಿಸಿದ್ದ ಸಿಎಂ

ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಮಾಧ್ಯಮ ಪ್ರಕಟಣೆ ಮೂಲಕ ಘೋಷಣೆ ಮಾಡಿದ್ದರು. ಭಾನುವಾರ ಈ ಸಂಬಂಧ ಅಧಿಕೃತ ಆದೇಶ ಹೊರಬರಬೇಕಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ಈ ಸಂಬಂಧ ಮಹಿಳಾ ಆಯೋಗ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು, ತನಿಖೆ ನಡೆಸುವಂತೆ ಕೋರಿತ್ತು.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೊಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading
Advertisement
Hassan Pen Drive Case
ಕರ್ನಾಟಕ4 mins ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20249 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ದೇಶ24 mins ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್30 mins ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್35 mins ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Amit Shah
ದೇಶ37 mins ago

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Samantha Ruth Prabhu announces new film Bangaram
ಟಾಲಿವುಡ್55 mins ago

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Aamir Khan talks about power of namaste
ಬಾಲಿವುಡ್59 mins ago

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

IPL 2024
ಕ್ರೀಡೆ1 hour ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ1 hour ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20249 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ8 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌