ದಿ.ಅನಂತಕುಮಾರ್‌ ಜನ್ಮದಿನಾಚರಣೆ; ಅನಂತಯಾನ ಕೃತಿ ಲೋಕಾರ್ಪಣೆ - Vistara News

ಬೆಂಗಳೂರು

ದಿ.ಅನಂತಕುಮಾರ್‌ ಜನ್ಮದಿನಾಚರಣೆ; ಅನಂತಯಾನ ಕೃತಿ ಲೋಕಾರ್ಪಣೆ

ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್‌ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಮುಲಕನಾಡು ಮಹಾಸಂಘ ಮತ್ತು ಅದಮ್ಯ ಚೇತನ ಹಾಗೂ ಅನಂತಕುಮಾರ್‌ ಪ್ರತಿಷ್ಠಾನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

VISTARANEWS.COM


on

ananth kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಲಕನಾಡು ಮಹಾಸಂಘ ಮತ್ತು ಅದಮ್ಯ ಚೇತನ ಹಾಗೂ ಅನಂತಕುಮಾರ್‌ ಪ್ರತಿಷ್ಠಾನ ಸಂಯುಕ್ತವಾಗಿ ಪುಸ್ತಕ ಲೋಕಾರ್ಪಣೆ, ಎಂಜಿನಿಯರ್‌ ದಿನಾಚರಣೆ, ದಿ. ಅನಂತಕುಮಾರ್‌ ಜನ್ಮದಿನಾಚರಣೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೆಪ್ಟೆಂಬರ್‌ 21ರಂದು ಏರ್ಪಡಿಸಿವೆ.

ಬೆಂಗಳೂರಿನ ಕೆ.ಆರ್‌. ರಸ್ತೆಯಲ್ಲಿರುವ ಕರ್ನಾಟಕ ಜೈನ ಭವನದಲ್ಲಿ ಬುಧವಾರ ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷ ಪಿ.ವಿ. ಕೃಷ್ಣ ಭಟ್‌ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿಯ ನಿವೃತ್ತ ಮುಖ್ಯ ಎಂಜಿನಿಯರ್‌ ಎಸ್‌.ಆರ್‌. ಸತ್ಯನಾರಾಯಣ ಅವರಿಗೆ “ಸರ್‌ ಎಂ.ವಿ.ʼʼ ಪ್ರಶಸ್ತಿ ಹಾಗೂ ಬೆಂಗಳೂರಿನ ಐಐಎಂನ ಮಾಜಿ ನಿರ್ದೇಶಕ ಡಾ. ಕೆ.ಆರ್.ಎಸ್‌. ಮೂರ್ತಿ ಅವರಿಗೆ “ಅನಂತಕುಮಾರ್‌ ಪ್ರಶಸ್ತಿʼʼ ನೀಡಿ ಗೌರವಿಸಲಾಗುತ್ತದೆ.

ಈ ಸಂದರ್ಭದಲ್ಲಿ ಟಿ.ಎಸ್‌. ಗೋಪಾಲ್‌ ಬರೆದಿರುವ ಅನಂತಕುಮಾರ್‌ರವರ ಜೀವನಗಾಥೆ “ಅನಂತಯಾನʼʼವನ್ನು ಬಿಡುಗಡೆ ಮಾಡಲಾಗುತ್ತದೆ. ಈ ಪುಸ್ತಕವು ಮಾಜಿ ಕೇಂದ್ರ ಸಚಿವ ಅನಂತಕುಮಾರ್‌ ಅವರ 1959 ರಿಂದ1987ರ ವರೆಗಿನ ಅವರ ಜೀವನದ ಮಾಹಿತಿಯನ್ನು ಹೊಂದಿದ್ದು, ಇದು ಅವರ ಜೀವನಗಾಥೆಯ ಮೊದಲ ಭಾಗವಾಗಿದೆ. ನಂತರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳೂ ನಡೆಯಲಿವೆ.

ಆಸಕ್ತರೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅದಮ್ಯ ಚೇತನದ ಅಧ್ಯಕ್ಷೆ ಡಾ. ತೇಜಸ್ವಿನಿ ಅನಂತಕುಮಾರ್‌ ಮತ್ತು ಮುಲಕನಾಡು ಮಹಾಸಂಘದ ಅಧ್ಯಕ್ಷ ಡಾ. ಟಿ. ವಿ. ರವಿಶಂಕರ್‌ ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ | ಸೆ.22ಕ್ಕೆ ದಿ.ಅನಂತಕುಮಾರ್‌ 63ನೇ ಜನ್ಮದಿನ; ಪ್ರೇರಣಾದಾಯಿ ಕಾರ್ಯಕ್ರಮಗಳ ಆಯೋಜನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

R Ashok: ಎನ್‌ಡಿಎನಲ್ಲಿ ಯಾವುದೇ ಒಡಕಿಲ್ಲ. ಇಂಡಿಯಾ ಒಕ್ಕೂಟದಿಂದ ಕೆಲವರು ಎನ್‌ಡಿಎಗೆ ಬರುವ ಸಾಧ್ಯತೆಯಿದೆ. ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸಹೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

BJP celebration about lok sabha election results
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ. ಈ ಚುನಾವಣೆಯಲ್ಲಿ ಎಲ್ಲ ಮಹಿಳೆಯರಿಗೆ ಗ್ಯಾರಂಟಿ ನೀಡಿ, ಅವರ ಗಂಡಂದಿರಿಗೆ ಟ್ಯಾಕ್ಸ್‌ ಹಾಕಿದ್ದಾರೆ. ಕಾಂಗ್ರೆಸ್‌ಗೆ ಮಾನ ಮರ್ಯಾದೆ ಹೋಗಿದೆ. ಮುಸ್ಲಿಂ ತುಷ್ಟೀಕರಣ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸಿದ್ದರಿಂದ ಕಾಂಗ್ರೆಸ್‌ಗೆ ಹೀಗಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಮತಗಳ ಅಂತರದ ಗೆಲುವು ಸಾಧಿಸಿದ ತೇಜಸ್ವಿ ಸೂರ್ಯ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಿಹಿ ತಿನ್ನಿಸಿ, ಅಭಿನಂದಿಸಿದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಸೇರಿ ಎನ್‌ಡಿಎಗೆ 51.66% ಮತ ಬಂದಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ಗೆ 45.43% ಬಂದಿದೆ. ಅಂದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಎರಡಂಕಿ ದಾಟುತ್ತೇವೆ ಎಂದು ಅವರು ಹೇಳುತ್ತಲೇ ಇದ್ದರು. ಆದರೆ ಅವರು ವಿಫಲರಾಗಿದ್ದಾರೆ ಎಂದರು.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಕಾಂಗ್ರೆಸ್‌ ಈ ಬಾರಿ ದೇಶದಲ್ಲಿ 21.56% ಮತ ಪಡೆದಿದೆ. ಬಿಜೆಪಿಗೆ ಕಳೆದ ಬಾರಿ 35% ಇದ್ದು, ಈ ಬಾರಿ 36.8% ಮತ ಗಳಿಕೆಯಾಗಿದೆ. ಕಾಂಗ್ರೆಸ್‌ ಮೂರಂಕಿಗೆ ಹೋಗಲೇ ಇಲ್ಲ. 18-20 ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ, ಡಿಸಿಎಂ ಹೇಳಿದ್ದು, ಆ ಹೇಳಿಕೆ ತಲೆ ಕೆಳಗಾಗಿದೆ. ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ 1.39 ಲಕ್ಷ ಅಂತರ ಬಂದಿದ್ದು, ಮುಖ್ಯಮಂತ್ರಿ ಫೇಲ್‌ ಆಗಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರ ಸಹೋದರ ಹೀನಾಯವಾಗಿ ಸೋತಿದ್ದಾರೆ. ರಾಜಕೀಯಕ್ಕೆ ಮೊದಲ ಬಾರಿಗೆ ಬಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ 2.69 ಲಕ್ಷ ಅಂತರ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 206 ಸ್ಥಾನಗಳನ್ನು ಗಳಿಸಿತ್ತು. ಅದು ಕೂಡ ಸರಳ ಬಹುಮತ ಅಲ್ಲ. ಅಷ್ಟೇ ಅಲ್ಲ ಈಗ ಬಿಜೆಪಿ ಗಳಿಸಿದ್ದಷ್ಟೂ ಅಲ್ಲ. 2014 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 44 ಸ್ಥಾನ ಗಳಿಸಿತ್ತು. ಕೇವಲ ಐದು ವರ್ಷದ ದುರಾಡಳಿತದಿಂದಾಗಿ 160 ಸ್ಥಾನಗಳನ್ನು ಕಳೆದುಕೊಂಡಿತ್ತು. 2019 ರಲ್ಲಿ ಬಿಜೆಪಿ 303 ಸ್ಥಾನ ಪಡೆದಿದ್ದು, 2024 ರಲ್ಲಿ 239 ಸ್ಥಾನ ಪಡೆದು, 64 ಸ್ಥಾನ ಮಾತ್ರ ಮೈನಸ್ ಆಗಿದೆ.

2019 ರಲ್ಲಿ ಕಾಂಗ್ರೆಸ್ 52 ಸ್ಥಾನ ಪಡೆದಿದ್ದು, 2024 ರಲ್ಲಿ 99 ಸ್ಥಾನ ಪಡೆದು, 47 ಸ್ಥಾನ ಹೆಚ್ಚಿಸಿಕೊಂಡಿದೆ. ಈಗ ಇಂಡಿಯಾ ಕೂಟದಿಂದಾಗಿ ಕಾಂಗ್ರೆಸ್‌ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಕಾಂಗ್ರೆಸ್‌ಗೆ ಸಿಕ್ಕಿರುವುದು 99 ಸ್ಥಾನ ಮಾತ್ರ. ಇಂಡಿಯಾ ಒಕ್ಕೂಟಕ್ಕೆ ಸಿಕ್ಕಿರುವುದು 232 ಸ್ಥಾನಗಳು. ಬಿಜೆಪಿಗೆ 239 ಸ್ಥಾನಗಳಿವೆ. ಅಂದರೆ ಒಟ್ಟು ಇಂಡಿಯಾ ಕೂಟ ಪಡೆದ ಸ್ಥಾನಗಳು ಬಿಜೆಪಿಗಿಂತಲೂ ಕಡಿಮೆ ಇದೆ ಎಂದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 80 ಸೀಟು ಪಡೆದಿತ್ತು. ಬಿಜೆಪಿ 104 ಪಡೆದು ದೊಡ್ಡ ಪಕ್ಷವಾಗಿತ್ತು. ಆದರೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದಾಗ ಸಿದ್ದರಾಮಯ್ಯ ಕೈ ಕಟ್ಟಿಕೊಂಡು ಕೂತಿದ್ದರು. ಆಗ ನೈತಿಕತೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

ಕಾಂಗ್ರೆಸ್‌ ಸಚಿವರ ಮಕ್ಕಳು ಸೋತಿರುವುದು ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಜನರು ತೋರಿರುವ ವಿರೋಧ ಎಂದ ಅವರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Continue Reading

ಕರ್ನಾಟಕ

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

TA Sharavana: ರಾಜ್ಯ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.

VISTARANEWS.COM


on

MLC TA Sharavana latest statement about lok sabha election results 2024
Koo

ಬೆಂಗಳೂರು: ಈ ಚುನಾವಣೆಯ ಫಲಿತಾಂಶವು ಜೆಡಿಎಸ್ (JDS) ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ (TA Sharavana) ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ 2024 ರ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

ಜೆಡಿಎಸ್‌ ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ. ಅಧಿಕೃತವಾಗಿ ಜೆಡಿಎಸ್‌ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಸುಮಾರು 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Train services: ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Karnataka Election Results 2024: ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮೂರನೇ ಬಾರಿ ಸರ್ಕಾರ ರಚನೆಯಾಗುತ್ತೆ. ನಾಳೆ ಎನ್‌ಡಿಎ ಮೈತ್ರಿ ಪಕ್ಷಗಳ ಸಭೆ ಕರೆದಿದ್ದಾರೆ. ನಾನು ಕೂಡ ದೆಹಲಿಗೆ ಹೋಗುವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

Karnataka Election Results 2024
Koo

ಬೆಂಗಳೂರು: ಇವತ್ತಿನ ಫಲಿತಾಂಶದ (Karnataka Election Results 2024) ಆಧಾರದ ಮೇಲೆ ಸ್ವಾರ್ಥದ ರಾಜಕಾರಣ ಮಾಡಬಾರದು ಎಂಬುವುದು ತಿಳಿಯುತ್ತದೆ. ಹಾಸನದಲ್ಲಿ ಗೆದ್ದಿರುವುದು ಕಾಂಗ್ರೆಸ್‌ನ ಗೆಲುವಲ್ಲ. ಹಾಸನದಲ್ಲಿ ದೇವೇಗೌಡರ ಫ್ಯಾಮಿಲಿ ಯಾವತ್ತೂ ದಬ್ಬಾಳಿಕೆ ಮಾಡಿಲ್ಲ. ಕೆಲವು ವ್ಯಕ್ತಿಗಳ ನಡವಳಿಕೆಯಿಂದ ಸೋಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ದರೆ ಕಾಂಗ್ರೆಸ್‌ ಅಧಿಕಾರಕ್ಕೇ ಬರುತ್ತಿರಲಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ಮೋದಿಯವರ ನೇತೃತ್ವದಲ್ಲಿ ಮೂರನೇ ಬಾರಿ ಸರ್ಕಾರ ರಚನೆಯಾಗುತ್ತೆ. ನಾಳೆ ಎನ್‌ಡಿಎ ಮೈತ್ರಿ ಪಕ್ಷಗಳ ಸಭೆ ಕರೆದಿದ್ದಾರೆ. ನಾನು ಹೋಗುತ್ತೇನೆ. ನನ್ನ ನಿರೀಕ್ಷೆ ಇದ್ದಿದ್ದು ಎನ್‌ಡಿಎಗೆ 25 ಸ್ಥಾನ. ಕಾಂಗ್ರೆಸ್‌ಗೆ 4-5 ಸ್ಥಾನ ಬರುತ್ತೆ ಅಂದುಕೊಂಡಿದ್ದೆ. ನಮ್ಮ ಕೆಲವು ಸಮಸ್ಯೆಗಳಿಂದ ಅವರು ಗೆದ್ದಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ರೀತಿ ಆಡಳಿತ ನಡೆಸುತ್ತಾರೋ ಕಾದು ನೋಡೋಣ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳನ್ನು ಜನ ಒಪ್ಪಿಲ್ಲ. ಒಂದು ವರ್ಷ ಇದೇ ರೀತಿ ಆಡಳಿತ ಮುಂದುವರಿಸಿದರೆ ಕಾಂಗ್ರೆಸ್ ಧೂಳಿಪಟವಾಗುತ್ತದೆ. ಜನರ ಮನಸ್ಸಿನಿಂದ ಕಾಂಗ್ರೆಸ್ ದೂರ ಆಗುತ್ತೆ. ಚನ್ನಪಟ್ಟಣ ಬೈ ಎಲೆಕ್ಷನ್‌ಗೆ ಎನ್‌ಡಿಎ ಮೈತ್ರಿ ಅಭ್ಯರ್ಥಿಯೇ ಇರುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ | Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

ಸಿಎಂ ಸಿದ್ದರಾಮಯ್ಯರ ರಿಪಬ್ಲಿಕ್ ಆಫ್ ಹಾಸನ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ರಿಪಬ್ಲಿಕ್ ಆಫ್ ಗ್ರಾಮಾಂತರ ರಿಸಲ್ಟ್ ನೋಡಲಿ. ಕಾಂಗ್ರೆಸ್‌ನವರು ತಂತ್ರ-ಕುತಂತ್ರ ಅನ್ನೋಕೆ ಆಗಲ್ಲ. ಗ್ರಾಮಾಂತರದಲ್ಲಿ ಮಂಜುನಾಥ್ ಅವರು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Continue Reading

ಕರ್ನಾಟಕ

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

NEET UG result 2024: ಜೂನ್‌ 4ರಂದು ನೀಟ್‌ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌ ಆಗಿದ್ದಾರೆ.

VISTARANEWS.COM


on

By

NEET UG Result 2024
Koo

ಬೆಂಗಳೂರು/ನವದೆಹಲಿ: ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನದಲ್ಲಿದ್ದಾರೆ.

NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Anna Lezhneva
ರಾಜಕೀಯ36 mins ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ39 mins ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ40 mins ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ41 mins ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ50 mins ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ1 hour ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ2 hours ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ2 hours ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ2 hours ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20242 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ16 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌