Site icon Vistara News

Anganawadi workers: ಕನಿಷ್ಠ ವೇತನಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

Anganwadi workers protest for implementation of minimum wages

ಬೆಂಗಳೂರು: ಪುಟ್ಟ ಪುಟ್ಟ ಮಕ್ಕಳ ಜತೆಗೆ ಅಂಗನವಾಡಿ ಕಾರ್ಯಕರ್ತೆಯರು (Anganawadi workers) ಬೀದಿಗಿಳಿದಿದ್ದಾರೆ. ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋಗೆ ಕರೆ ನೀಡಿದ್ದು, ಅಹೋರಾತ್ರಿ ಧರಣಿಗೆ ನಡೆಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಆಗಮಿಸುತ್ತಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿದ್ದಾರೆ. ರಾಜ್ಯದಲ್ಲಿ 1,32,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇದ್ದಾರೆ.

ಕೊರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದೇವೆ. ಈ ಸಮಯದಲ್ಲಿ ಹಲವು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮರಣ ಹೊಂದಿದ್ದಾರೆ. ಇದರಿಂದ ಅನೇಕ‌ ಕುಟುಂಬಗಳು ಬೀದಿ ಪಾಲಾಗಿವೆ. ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಜತೆಗೆ ಕನಿಷ್ಠ ವೇತನವು ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Vijayapura News : ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ಬಾಲಕ ದಾರುಣ ಸಾವು

ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನವನ್ನು ₹15 ಸಾವಿರ, ಸಹಾಯಕಿಯರಿಗೆ ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಭರವಸೆ ಕೊಟ್ಟಿತ್ತು. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಬೆಳಗಾವಿಯ ಖಾನಪುರದಲ್ಲಿ ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ‌‌ ಮಾಡಲು ಒತ್ತಾಯಿಸಿದ್ದಾರೆ.

ಬೇಡಿಕೆಗಳು ಏನೇನು?

1) ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಕನಿಷ್ಠ 21,000 ವೇತನ ನೀಡಬೇಕು.
2) ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು.
3) ಎಲ್ಲಾ‌ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ವರ್ಜೆಗೆ ಏರಿಸಬೇಕು
4) ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತಯರಿಗೆ ಮತ್ತು ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version