ಬಿಎಂಟಿಸಿ ಬಸ್‌ ಸಂಖ್ಯೆ ಹೆಚ್ಚಿಸಿ, ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ ಒದಗಿಸಿ: ಸಿಎಂಗೆ ಮನವಿ - Vistara News

ಬೆಂಗಳೂರು

ಬಿಎಂಟಿಸಿ ಬಸ್‌ ಸಂಖ್ಯೆ ಹೆಚ್ಚಿಸಿ, ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ ಒದಗಿಸಿ: ಸಿಎಂಗೆ ಮನವಿ

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸಲು ಮತ್ತು ಬೆಂಗಳೂರಿನ ರಸ್ತೆಗಳನ್ನು ಸಂಚಾರ ದಟ್ಟಣೆಯಿಂದ ಮುಕ್ತಗೊಳಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸ್ಲಂ ನಿವಾಸಿಗಳ ಒಕ್ಕೂಟ ಮತ್ತು ಗ್ರೀನ್‌ಪೀಸ್ ಇಂಡಿಯಾ ಮನವಿ ಮಾಡಿವೆ.

VISTARANEWS.COM


on

BMTC bus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಎಂಟಿಸಿ ಬಸ್‌ಗಳ (BMTC Bus) ಸಂಖ್ಯೆಯನ್ನು (ಫ್ಲೀಟ್ ಗಾತ್ರ) ಹೆಚ್ಚಿಸಲು ಮತ್ತು ಮುಂಬರುವ ರಾಜ್ಯ ಬಜೆಟ್‌ನಲ್ಲಿ ನಿರ್ದಿಷ್ಟವಾಗಿ ಸಾರಿಗೆ ಸೌಕರ್ಯದ ಅಭಿವೃದ್ಧಿಗೆಂದೇ ಪ್ರತ್ಯೇಕ ಸಾರ್ವಜನಿಕ ಸಾರಿಗೆ ನಿಧಿಯನ್ನು ಕಾಯ್ದಿರಿಸಲು ರಾಜ್ಯ ಸರ್ಕಾರವನ್ನು ಸ್ಲಂ ನಿವಾಸಿಗಳ ಒಕ್ಕೂಟ (ಸ್ಲಮ್‌ ಡ್ವೆಲ್ಲರ್ಸ್‌ ಫೆಡರೇಶನ್‌) ಮತ್ತು ಗ್ರೀನ್‌ಪೀಸ್ ಇಂಡಿಯಾ ಆಗ್ರಹಿಸಿವೆ.

ರಾಜ್ಯ ಸರ್ಕಾರವು 2024-25ನೇ ಸಾಲಿನ ಕರ್ನಾಟಕ ಬಜೆಟ್‌ ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸುವ ಮತ್ತು ನಗರದ ರಸ್ತೆಗಳನ್ನು ಸಂಚಾರ ದಟ್ಟಣೆಯಿಂದು ಮುಕ್ತಗೊಳಿಸಲು ಸರ್ಕಾರವು ಕಾರ್ಯ ತತ್ಪರವಾಗಬೇಕು ಎಂಬ ಆಶಯದೊಂದಿಗೆ ಈ ಎರಡೂ ಸಂಸ್ಥೆಗಳು ಸರ್ಕಾರಕ್ಕೆ ಪತ್ರ ಬರೆದಿವೆ. ಇದರಲ್ಲಿ ಸಾರ್ವಜನಿಕ ಸಾರಿಗೆ ಕುರಿತ ವಿವಿಧ ಅಂಶಗಳ ಕುರಿತಾಗಿ ಸರ್ಕಾರದ ಗಮನ ಸೆಳೆದಿವೆ.

ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಕ್ಕಾಗಿ ಮುಖ್ಯಮಂತ್ರಿಯವರನ್ನು ಅಭಿನಂದಿಸಿದ ಸ್ಲಮ್‌ ಡ್ವೆಲ್ಲರ್ಸ್‌ ಫೆಡರೇಶನ್‌ ಮತ್ತು ಗ್ರೀನ್‌ಪೀಸ್ ಇಂಡಿಯಾದ ಪ್ರತಿನಿಧಿಗಳು, ಪ್ರಸ್ತುತ ನಗರದಲ್ಲಿ ಸಾರಿಗೆ ಸೌಲಭ್ಯ ಒದಗಿಸುತ್ತಿರುವ 6200 ಬಿಎಂಟಿಸಿ ಬಸ್ಸುಗಳು ದಿನವೊಂದಕ್ಕೆ ಮಹಾನಗರದಲ್ಲಿ ಪ್ರಯಾಣಿಸುತ್ತಿರುವ 27 ರಿಂದ 30 ಲಕ್ಷ ಪ್ರಯಾಣಿಕರ ಸಾರಿಗೆ ಬೇಡಿಕೆಗಳನ್ನು ಪೂರೈಸಲು ಹೇಗೆ ಅಸಮರ್ಥವಾಗಿವೆ ಎಂಬುದನ್ನು ಸಿಎಂಗೆ ವಿವರಿಸಿವೆ.

ಇದನ್ನೂ ಓದಿ | Karnataka Budget Session 2024 : ರಾಜ್ಯಪಾಲರ ಮೂಲಕವೇ ಕೇಂದ್ರಕ್ಕೆ ಕೌಂಟರ್‌ ಕೊಟ್ಟ ಕಾಂಗ್ರೆಸ್‌!

ʻʻಶಕ್ತಿ ಯೋಜನೆ ಸರ್ಕಾರದ ಅತ್ಯುತ್ತಮ ಯೋಜನೆಗಳಲ್ಲಿ ಒಂದು. ಈ ಯೋಜನೆಯನ್ನು ತೃತೀಯ ಲಿಂಗಿಗಳಿಗೂ ವಿಸ್ತರಿಸುವ ಅಗತ್ಯವಿದೆ. ಸಾರ್ವಜನಿಕ ಸಾರಿಗೆಯಲ್ಲಿ ಹೂಡಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡುವ ಮೂಲಕ ಬೆಂಗಳೂರು ನಗರದ ಟ್ರಾಫಿಕ್‌ ಸಮಸ್ಯೆಯನ್ನು ಪರಿಹರಿಸಬಹುದು ಮತ್ತು ವಾತಾವರಣದಲ್ಲಿ ಇಂಗಾಲದ ಪ್ರಮಾಣವನ್ನು ಕಡಿಮೆಗೊಳಿಸಬಹುದು. ಈ ಮೂಲಕ ಎಲ್ಲರ ಅಗತ್ಯಗಳನ್ನು ಪೂರೈಸಬಲ್ಲ ಸುಸ್ಥಿರ ನಗರದ ನಿರ್ಮಾಣ ಸಾಧ್ಯʼʼ ಎನ್ನುತ್ತಾರೆ ಗ್ರೀನ್‌ಪೀಸ್‌ ಇಂಡಿಯಾದ ಪ್ರಚಾರಕ ಎಂ. ಎಸ್‌. ಶರತ್‌.

ಹೀಗಾಗಿ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಬಸ್‌ಗಳ ಸಂಖ್ಯೆಗೆ ಹೊಸದಾಗಿ 4000 ಹೊಸ ಬಸ್‌ಗಳನ್ನು ಸೇರಿಸುವ ಮೂಲಕ ಬಿಎಂಟಿಸಿ ಬಸ್‌ಗಳ ಸಂಖ್ಯೆಯನ್ನು 10,000ಕ್ಕೆ ಹೆಚ್ಚಿಸುವಂತೆ ಸ್ಲಮ್‌ ಡ್ವೆಲ್ಲರ್ಸ್‌ ಫೆಡರೇಶನ್‌ ಮತ್ತು ಗ್ರೀನ್‌ಪೀಸ್ ಇಂಡಿಯಾ ಪ್ರತಿನಿಧಿಗಳು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಇದರೊಂದಿಗೆ ಈ ಸಂಘಟನೆಗಳು ಮುಂಬರುವ 2024-25 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬಸ್ ನಿಲ್ದಾಣಗಳು, ಬಸ್ ಡಿಪೋಗಳು ಮತ್ತು ಬಸ್‌ ಆದ್ಯತಾ ಪಥಗಳು(ಬಸ್ ಲೇನ್‌) ಸೇರಿದಂತೆ ನಗರದಲ್ಲಿನ ಸಾರ್ವಜನಿಕ ಸಾರಿಗೆ ಮೂಲಸೌಕರ್ಯಗಳನ್ನು ಸುಧಾರಿಸಲು ಸಾರ್ವಜನಿಕ ಸಾರಿಗೆ ನಿಧಿಯನ್ನು ಮೀಸಲಿಡುವಂತೆ ಸಿದ್ದರಾಮಯ್ಯನವರನ್ನು ಆಗ್ರಹಿಸಿದವು.

ಸಂಘಟನೆಗಳು ತಮ್ಮ ಬಹು ದಿನದ ಬೇಡಿಕೆಯಾದ ನಗರದಲ್ಲಿ ಪ್ರತ್ಯೇಕ ಬಸ್‌ ಆದ್ಯತಾ ಪಥ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ಇನ್ನೊಮ್ಮೆ ನೆನಪಿಸಿ, ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಪ್ರಸ್ತಾಪಿಸಿದ 10 ಬಸ್ ಲೇನ್‌ಗಳನ್ನು ಜಾರಿಗೆ ತರಲು ಮತ್ತು ಕೋವಿಡ್‌ ಸಮಯದಲ್ಲಿ ಸ್ಥಗಿತಗೊಳಿಸಲಾಗಿದ್ದ ಹೊರವರ್ತುಲ ರಸ್ತೆಯಲ್ಲಿರುವ ಪ್ರತ್ಯೇಕ ಬಸ್ಸು ಆದ್ಯತಾ ಪಥವನ್ನು ಪುನರಾರಂಭಿಸಲು ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿದರು.

ಇದನ್ನೂ ಓದಿ | Karnataka Budget Session 2024: ಗೃಹಲಕ್ಷ್ಮಿಗೆ 17500 ಕೋಟಿ ರೂ. ನಿಗದಿ; ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮ: ಲಕ್ಷ್ಮಿ ಹೆಬ್ಬಾಳ್ಕರ್

ಇದೇ ಸಂದರ್ಭದಲ್ಲಿ ಮಾತನಾಡಿದ ಸ್ಲಂ ನಿವಾಸಿಗಳ ಒಕ್ಕೂಟದ ಅಧ್ಯಕ್ಷ ಜಾನ್ ಸ್ಯಾಮ್ಯುಯೆಲ್ ಅವರು, ʻನಮ್ಮ ಬಸ್‌ ನಮ್ಮ ಹಕ್ಕುʼ. ಸರ್ಕಾರವು ಬಸ್‌ ಪ್ರಯಾಣಿಕರ ದೈನಂದಿನ ಪ್ರಮುಖ ಸವಾಲುಗಳಾದ ಬಸ್‌ ಅಲಭ್ಯತೆ, ನಿಗದಿಪಡಿಸಿದ ಸಂಚಾರದಲ್ಲಿ ಕಡಿತ, ಬಸ್‌ಗಳಲ್ಲಿ ಹೆಚ್ಚಿದ ಜನಸಂದಣಿ, ಬಸ್‌ ನಿಯಮಿತವಾಗಿ ಬಾರದಿರುವುದು, ಬಸ್‌ನಲ್ಲಿ ಮಹಿಳೆಯರು ಮತ್ತು ತೃತೀಯ ಲಿಂಗಿಗಳ ಸುರಕ್ಷತೆ, ಗುಣಮಟ್ಟದ ಬಸ್‌ ನಿಲ್ದಾಣಗಳು ಮತ್ತು ಬಸ್ ಶೆಲ್ಟರ್‌ಗಳ ಕೊರತೆ ಮುಂತಾದ ಸಮಸ್ಯೆಗಳ ಕುರಿತಾಗಿ ಗಮನಹರಿಸಿ ಆದ್ಯತೆಯ ಮೇರೆಗೆ ಅವುಗಳನ್ನು ಪರಿಹರಿಸಿ ಸಾರ್ವಜನಿಕರಿಗೆ ಅನೂಕೂಲ ಕಲ್ಪಿಸಬೇಕು ಎಂದರು.

ಪತ್ರದಲ್ಲಿನ ಇತರೆ ಪ್ರಮುಖ ಅಂಶಗಳು

  • ಸ್ಲಂ ನಿವಾಸಿಗಳ ಒಕ್ಕೂಟ ಮತ್ತು ಗ್ರೀನ್‌ಪೀಸ್ ಇಂಡಿಯಾ ಸಾರಿಗೆ ಇಲಾಖೆಗೆ ಸಲ್ಲಿಸಿದ ಪತ್ರದಲ್ಲಿ, ಬೆಂಗಳೂರು ನಗರದಲ್ಲಿ ಒಳಗೊಳ್ಳುವಿಕೆ, ಎಲ್ಲರ ಕೈಗೆಟಕುವ ದರ, ಸುರಕ್ಷಿತ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ಸಾರಿಗೆ ಸೌಲಭ್ಯವನ್ನು ಒದಗಿಸಲು ಈ ಕೆಳಗಿನ ಅಂಶಗಳನ್ನು ಉಲ್ಲೇಖಿಸಿದೆ ಮತ್ತು ಮುಂಬರುವ 2024-25 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಈ ಕೆಳಗಿನ ಶಿಫಾರಸುಗಳನ್ನು ಪರಿಗಣಿಸಲು ವಿನಂತಿಸಿದೆ.
  • ಉಚಿತ ಬಸ್ ಪ್ರಯಾಣ: ಕರ್ನಾಟಕ ಸರ್ಕಾರವು ಪ್ರತಿ ಮಕ್ಕಳು, ಅಂಗವಿಕಲರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಮತ್ತು ಎಲ್ಲಾ ಬಸ್ ಬಳಕೆದಾರರಿಗೆ ಕನಿಷ್ಠ ವಾರದಲ್ಲಿ ಗೊತ್ತುಪಡಿಸಿದ ಒಂದು ದಿನ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು.
  • ಲೈಂಗಿಕ ಅಲ್ಪಸಂಖ್ಯಾತರಿಗೆ ಉಚಿತ ಸಾರಿಗೆ ಸೌಕರ್ಯವನ್ನು ಒದಗಿಸಿ.
  • ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕವಾಗಿ ವಿಶೇಷ ಫೀಡರ್ ಬಸ್‌ಗಳನ್ನು ಪ್ರಾರಂಭಿಸಿ.
  • ಸುಸ್ಥಿರ ಸಾರಿಗೆ ನಿಧಿ : ಕರ್ನಾಟಕ ಸರ್ಕಾರವು ಬಸ್ ಸಾರಿಗೆ, ಸೈಕ್ಲಿಂಗ್ ಮತ್ತು ಮೋಟಾರು ರಹಿತ ಸಾರಿಗೆ (ನಾನ್ ಮೋಟಾರೈಸ್ಡ್ ಸಾರಿಗೆ) ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ವಾಹನ ದಟ್ಟಣೆಯನ್ನು ನಿವಾರಿಸಲು ಬೆಂಗಳೂರು ನಗರಕ್ಕೆ ಸುಸ್ಥಿರ ಸಾರಿಗೆಗಾಗಿ ಮೀಸಲಾದ ನಿಧಿಯನ್ನು ರಚಿಸಬೇಕು. ಈ ನಿಧಿಯು ಜನರಿಗೆ ಆದ್ಯತೆ ನೀಡುವ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವತ್ತ ಗಮನ ಹರಿಸಬೇಕು.
  • ಬಸ್ ನಿಲ್ದಾಣದಲ್ಲಿ ಒದಗಿಸಬೇಕಾಗಿರುವ ಅಗತ್ಯ ಸೌಲಭ್ಯಗಳು : ಶೌಚಾಲಯಗಳು, ಕುಡಿಯುವ ನೀರು, ಎಲ್‌ಇಡಿ ಸ್ಕ್ರೀನುಗಳಲ್ಲಿ ಬಸ್ಸುಗಳ ವೇಳಾಪಟ್ಟಿ ಕುರಿತ ಮಾಹಿತಿ ಪ್ರದರ್ಶನ ವ್ಯವಸ್ಥೆ ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ಸೌಕರ್ಯಗಳನ್ನು ಒದಗಿಸಲು ಬಜೆಟ್‌ನಲ್ಲಿ ಅನುದಾನ ನೀಡಬೇಕು. ಹೆಚ್ಚು ಮಹಿಳಾ ಸ್ನೇಹಿ ಬಸ್ ತಂಗುದಾಣಗಳನ್ನು ಸ್ಥಾಪಿಸುವ ಅಗತ್ಯವಿದ್ದು ಇದರಲ್ಲಿ ತಾಯಂದಿರಿಗೆ ಶಿಶುಗಳ ಆರೈಕೆಯ ಸೌಲಭ್ಯಗಳನ್ನು ಒದಗಿಸಬೇಕು ಮತ್ತು ಅಂಗವಿಕಲರಿಗೆ ಪ್ರವೇಶ ಒದಗಿಸಲು ನಿಲ್ದಾಣಗಳು ಹೆಚ್ಚು ಅಂಗವಿಕಲ ಸ್ನೇಹಿ ಶೆಲ್ಟರ್‌ಗಳನ್ನು ಹೊಂದಿರಬೇಕು.
  • ಮಹಿಳೆಯರಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ತುರ್ತು ಎಚ್ಚರಿಕೆ ಕರೆಗಂಟೆ, ಮಹಿಳಾ ಸಹಾಯವಾಣಿ ಸಂಖ್ಯೆಗಳು, ಬಸ್ ನಿಲ್ದಾಣಗಳಲ್ಲಿ ಎಲ್‌ಇಡಿ ಲೈಟಿಂಗ್ ಮುಂತಾದ ಸುರಕ್ಷತಾ ಕ್ರಮಗಳನ್ನು ಪರಿಚಯಿಸಬೇಕು.
  • ನೌಕರರ ಕಲ್ಯಾಣ ಕಾರ್ಯಕ್ರಮ: ಜನಸ್ನೇಹಿ ಸಾರಿಗೆ ವ್ಯವಸ್ಥೇಯನ್ನು ರೂಪಿಸುವಲ್ಲಿ ಸಾರಿಗೆ ನೌಕರರ ಪಾತ್ರ ಹಿರಿದಾದುದು. ಹೀಗಾಗಿ ಸಾರಿಗೆ ಇಲಾಖೆಯಲ್ಲಿ ಗುತ್ತಿಗೆ ನೌಕರರಿಗೆ ಖಾಯಂ ಉದ್ಯೋಗ ನೀಡಬೇಕು. ಹೆಚ್ಚು ಹೆಚ್ಚು ಮಹಿಳಾ ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳನ್ನು ನೇಮಕಾತಿಗೊಳಿಸುವುದರೊಂದಿಗೆ ಅವರಿಗೆ ಪ್ರತಿ ಬಸ್ ಡಿಪೋ ಮತ್ತು ವಿವಿಧ ಬಸ್ ನಿಲ್ದಾಣಗಳಲ್ಲಿ ವಿಶ್ರಾಂತಿ ಕೊಠಡಿಗಳು, ಶೌಚಾಲಯಗಳಂತಹ ಮೂಲಸೌಕರ್ಯಗಳನ್ನು ಒದಗಿಸಬೇಕು.
  • ತೆರಿಗೆ: ʻಮಾಲಿನ್ಯಕಾರಕರಿಗೆ ದಂಡʼ ನಿಯಮವನ್ನು ಅನುಸರಿಸಿ ಮತ್ತು ಇಂಧನದ ಮೇಲೆ ಹೆಚ್ಚುವರಿ ಮಾರಾಟ ತೆರಿಗೆ/ಸೆಸ್ ವಿಧಿಸಿ, ಚತುಷ್ಚಕ್ರ ವಾಹನಗಳ ಮೇಲೆ ಹೆಚ್ಚುವರಿ ನೋಂದಣಿ ಶುಲ್ಕ, ಸಂಚಾರ ದಟ್ಟಣೆ ಅವಧಿಯಲ್ಲಿ ನಿರ್ದಿಷ್ಟ ಪ್ರದೇಶವನ್ನು ಪ್ರವೇಶಿಸುವ ಖಾಸಗಿ ವಾಹನಗಳಿಗೆ ತೆರಿಗೆ ವಿಧಿಸುವುದು, ಹಸಿರು ತೆರಿಗೆ, ಇತ್ಯಾದಿಗಳನ್ನು ಅನುಸರಿಸಬೇಕು.
  • 3 ಕ್ಕಿಂತ ಕಡಿಮೆ ಪ್ರಯಾಣಿಕರನ್ನು ಹೊಂದಿರುವ ದೊಡ್ಡ ಕಾರುಗಳಿಗೆ (SUV ಗಳು) ರಸ್ತೆ ಶುಲ್ಕಗಳನ್ನು ವಿಧಿಸಬೇಕು.
  • ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಒದಗಿಸುತ್ತಿರುವ ವಾಹನಗಳಿಗೆ ತೆರಿಗೆ ವಿನಾಯಿತಿಗಳನ್ನು ನೀಡಿ.
  • ಕಡಿಮೆ ಹೊರಸೂಸುವಿಕೆ ವಲಯಗಳು : ಎಲ್ಲಾ ಟ್ರಾನ್ಸಿಟ್ ಓರಿಯೆಂಟೆಡ್ ಡೆವಲಪ್‌ಮೆಂಟ್/ ಸಾರಿಗೆ ಆಧಾರಿತ ಅಭಿವೃದ್ಧಿ (TOD) ವಲಯಗಳು (DULT ನಿಂದ ರಚಿಸಲಾದ ಸಾರಿಗೆ ಆಧಾರಿತ ಅಭಿವೃದ್ಧಿ ನೀತಿಯ ಪ್ರಕಾರ) ಮತ್ತು ಪ್ರಮುಖ ನಗರ ಕೇಂದ್ರಗಳನ್ನು ಕಡಿಮೆ ಹೊರಸೂಸುವಿಕೆ ವಲಯಗಳಾಗಿ (LEZ) ಘೋಷಿಸಬೇಕು. ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಇದು ಅಗತ್ಯ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

By

Hc grants interim bail to actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years
Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

VISTARANEWS.COM


on

By

Koo

ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್‌ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.

Continue Reading

ಬೆಂಗಳೂರು

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

Assault case: ಕರ್ನಾಟಕದ ಲಾರಿ ಡ್ರೈವರ್‌ ಮೇಲೆ ತಮಿಳುನಾಡು ಟ್ರಾಫಿಕ್‌ ಪೊಲೀಸ್‌ ಮನಸೋ ಇಚ್ಛೆ ಹಲ್ಲೆ ಮಾಡಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

By

assault case
Koo

ಬೆಂಗಳೂರು: ಕರ್ನಾಟಕದ ಲಾರಿ ಡ್ರೈವರ್ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆ ಮನಸೋ ಇಚ್ಛೆ ಹಲ್ಲೆ (Assault case) ಮಾಡಿದ್ದಾರೆ. ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ರ‍್ಯಾಶ್‌ ಡ್ರೈವಿಂಗ್‌ ಮಾಡುತ್ತಿದ್ದೀಯಾ ಎಂದು ಆರೋಪಿಸಿ ಲಾರಿ ಚಾಲಕನ ಅಡ್ಡಗಟ್ಟಿ ಕಪಾಳ, ಮುಖ ಅಂತ ನೋಡದೆ ಹಲ್ಲೆ ನಡೆಸಿದ್ದಾರೆ. ಬಿಟ್ಬಿಡಿ ಸರ್ ಎಂದು ಚಾಲಕ ಅಂಗಲಾಚಿದರೂ ಬಿಡದೆ ಟ್ರಾಫಿಕ್‌ ಪೊಲೀಸ್‌ ಪೇದೆ ಹಲ್ಲೆ ನಡೆಸಿದ್ದಾರೆ. ಹೊಸೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಾರು ಚಾಲಕನೊರ್ವ ಹಲ್ಲೆ ಮಾಡುತ್ತಿರುವ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಬಳಿಕ ಕಾರು ಚಾಲಕನಿಗೂ ಅವಾಜ್ ಹಾಕಿ ತಮಿಳುನಾಡು ಪೊಲೀಸ್ ವಿಡಿಯೊ ಡಿಲೀಟ್ ಮಾಡಿಸಿದ್ದಾರೆ.

Car Fire Accident
Car Fire Accident

ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಸ್ವಿಪ್ಟ್ ಡಿಸೈರ್ ಕಾರಿನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದಿದೆ. ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕಾರು ಚಲಿಸುತ್ತಿದ್ದಾಗ ಬಾನೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾನೆಟ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಪ್ರಯಾಣಿಕರು ಕಾರಿನಿಂದು ಇಳಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯಪ್ರಜ್ಙೆಯಿಂದ ಕೂದಲೆಳೆ ಅಂತರದಲ್ಲಿ ಎಲ್ಲರೂ ಪಾರಾಗಿದ್ದಾರೆ.

ಕರೆಂಟ್‌ ಶಾಕ್‌ನಿಂದ ನಾಲ್ವರು ಕಾರ್ಮಿಕರಿಗೆ ಗಾಯ

ಶಾರ್ಟ್ ಸರ್ಕ್ಯುಟ್‌ನಿಂದಾಗಿ ಕರೆಂಟ್‌ ಶಾಕ್‌ ಹೊಡೆದು ನಾಲ್ವರು ಕಾರ್ಮಿಕರಿಗೆ ಗಾಯವಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೇ ಕಟ್ಟಡದ ಬಳಿ ವಾಸ ಮಾಡಲು ಚಿಕ್ಕ ರೂಂ ನಿರ್ಮಿಸಿಕೊಂಡಿದ್ದರು. ರಾತ್ರಿ ರೂಂ ಗೆ ಪಡೆದಿದ್ದ ಕರೆಂಟ್‌ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮಲಗಿದ್ದ ನಾಲ್ವರಿಗೆ ಗಾಯವಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ

ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಳಿಸಿ, ವ್ಯಕ್ತಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಘಟನೆ ನಡೆದಿದೆ. ಶಿವಗಂಗೇಗೌಡ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ರಾತ್ರಿ ಶಿವಗಂಗೆಗೌಡರ ಮನೆ ಸಮೀಪ ಗ್ಯಾಂಗ್‌ವೊಂದು ಮದ್ಯ ಸೇವಿಸುತ್ತಿತ್ತು. ಇದನ್ನು ಪ್ರಶ್ನೆ ಮಾಡಿ ಎದ್ದು ಹೋಗುವಂತೆ ಶಿವಗಂಗೆಗೌಡ ಗದರಿದ್ದರು. ಇದಕ್ಕೆ ಸಿಟ್ಟಾದ ಕಿಡಿಗೇಡಿಗಳು ಶಿವಗಂಗೆಗೌಡ ಅವರಿಗೆ ಸೇರಿದ ಇನ್ನೋವಾ ಕಾರು ಸಿಮೆಂಟ್ ಇಟ್ಟಿಗೆಯಿಂದ ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳನ್ನು ಓಡಿಸಲು ಪ್ರಯತ್ನಿಸಿದಾಗ ಅಟ್ಯಾಕ್ ಮಾಡಿದ್ದಾರೆ. ಗಾಯಾಳು ಶಿವಗಂಗೆಗೌಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ17 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ2 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು3 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು3 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು3 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ4 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ4 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು4 ದಿನಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌