Assault Case: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಹಲ್ಲೆ, ಚಿನ್ನಾಭರಣ ಸುಲಿಗೆ - Vistara News

ಕ್ರೈಂ

Assault Case: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಹಲ್ಲೆ, ಚಿನ್ನಾಭರಣ ಸುಲಿಗೆ

ಬಾಗಿಲು ತೆರೆದ ಮಹಿಳೆ ಕಣ್ಣಿಗೆ ಖಾರದ ಪುಡಿ ಎರಚಿ ಕಿರಾತಕ ಮನೆಯೊಳಗೆ ನುಗ್ಗಿದ್ದ. ಚಾಕುವಿನಿಂದ ಹಲ್ಲೆ ಮಾಡಿ ಅಲ್ಮೇರಾದಲ್ಲಿದ್ದ ಚಿನ್ನಾಭರಣ ಸುಲಿಗೆ ಮಾಡಿ ಎಸ್ಕೇಪ್ ಆಗಿದ್ದ.

VISTARANEWS.COM


on

gold loot culprit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ (Assault Case) ಚಿನ್ನಾಭರಣ ಸುಲಿಗೆ ಮಾಡಿದ ಘಟನೆ (crime news) ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ನ 5ನೇ ಸೆಕ್ಟರ್ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ. ಮಗುವನ್ನು ಶಾಲೆಗೆ ಬಿಟ್ಟು ಬರುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯಿಂದ ಕೃತ್ಯ ನಡೆದಿದೆ. ಗಾಡ್ ಗಿಫ್ಟ್ ಎಂಬ ಅಪಾರ್ಟ್ಮೆಂಟ್‌ನಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದ ಮಹಿಳೆ ಮೂರು ದಿನಗಳ ಹಿಂದೆ ಮಗುವನ್ನು ಶಾಲೆಗೆ ಬಿಟ್ಟು ವಾಪಸ್ಸಾಗುತ್ತಿದ್ದರು. ಆ ವೇಳೆ ಆಕೆಯ ಕೈಯಲ್ಲಿದ್ದ ಬೀಗದ ಕೀಯನ್ನು ದುಷ್ಕರ್ಮಿ ಜೋಶ್ವಾ ಎಂಬಾತ ಅಬ್ಸರ್ವ್ ಮಾಡಿದ್ದ. ಕೈಯಲ್ಲಿ ಕೀ ಇರುವುದನ್ನು ನೋಡಿ‌ ಆಕೆಯ ಮನೆಯಲ್ಲಿ ಬೇರೆ ಯಾರೂ ಇಲ್ಲ ಎಂದು ಕನ್ಫರ್ಮ್ ಮಾಡಿಕೊಂಡಿದ್ದ.

ಬಳಿಕ ಆಕೆಯನ್ನ ಹಿಂಬಾಲಿಸಿಕೊಂಡು ಬಂದು ಯಾವ ಫ್ಲೋರ್‌ನಲ್ಲಿ ವಾಸವಿದ್ದಾಳೆಂದು ತಿಳಿದುಕೊಂಡಿದ್ದ. ಬಳಿಕ ಮಧ್ಯಾಹ್ನದ ವೇಳೆ ಅಪಾರ್ಟ್‌ಮೆಂಟ್‌ಗೆ ಬಂದು ಬಾಗಿಲು ಬಡಿದಿದ್ದ. ಕೊರಿಯರ್ ಬಾಯ್ ಇರಬೇಕೆಂದು ಮಹಿಳೆ ಬಾಗಿಲು ತೆಗೆದಿದ್ದರು. ಆ ವೇಳೆ ಏಕಾಏಕಿ ಕಣ್ಣಿಗೆ ಖಾರದ ಪುಡಿ ಎರಚಿ ಕಿರಾತಕ ಮನೆಯೊಳಗೆ ನುಗ್ಗಿದ್ದ. ಬಳಿಕ ಚಾಕುವಿನಿಂದ ಹಲ್ಲೆ ಮಾಡಿ ಅಲ್ಮೇರಾದಲ್ಲಿದ್ದ ಚಿನ್ನಾಭರಣ ಸುಲಿಗೆ ಮಾಡಿ ಎಸ್ಕೇಪ್ ಆಗಿದ್ದ.

ಘಟನೆ ಬಳಿಕ ಮಹಿಳೆ ಕಿರುಚಾಡಿದ್ದು, ನೆರೆಹೊರೆಯ ನಿವಾಸಿಗಳು ಸಹಾಯಕ್ಕೆ ಧಾವಿಸಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಎಸ್ಆರ್ ಲೇಔಟ್ ಪೊಲೀಸರಿಂದ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡು ಸಿಸಿಟಿವಿ ಹಾಗೂ ಆತನ ಗೂಗಲ್‌ ಪೇ ನಂಬರ್ ಆಧಾರದ ಮೇಲೆ ಆರೋಪಿಯನ್ನು ‌ಸೆರೆಹಿಡಿಯಲಾಗಿದೆ. ಸುದ್ದಗುಂಟೇಪಾಳ್ಯದ ಜೋಶ್ವಾ ಬಂಧಿತ ಆರೋಪಿ.

ಮೊದಲು ಪ್ರತಿಷ್ಠಿತ ಕಂಪನಿಯಲ್ಲಿ ಹೆಚ್ಆರ್ ಆಗಿ ಕೆಲಸ ಮಾಡ್ತಿದ್ದ ಜೋಶ್ವಾ, ಲ್ಯಾಬ್ ಒಂದರಲ್ಲಿ ಥೆರಫಿಸ್ಟ್ ಆಗಿಯೂ ಕೆಲಸ ಮಾಡುತ್ತಿದ್ದ. ಬಳಿಕ ಆ ಕೆಲಸವನ್ನು ಬಿಟ್ಟು ಸ್ವಂತ ಕಂಪನಿ ಸ್ಟಾರ್ಟ್ ಮಾಡೋಕೆ ನಿರ್ಧರಿಸಿದ್ದ. 40 ಸಾವಿರ ಕೊಟ್ಟು ‘ಗ್ರೇಟ್ ಜಾಬ್’ ಹೆಸರಿನಲ್ಲಿ ಅಗ್ರಿಮೆಂಟ್ ಮಾಡಿಕೊಂಡಿದ್ದ. ಉಳಿದ ಹಣ ಸಂಗ್ರಹ ಮಾಡಲು ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಂಡು ಸುಲಿಗೆ ಮಾಡೋದಕ್ಕೆ‌ ಇಳಿದಿದ್ದ.

ಕದ್ದ ಮಾಲುಗಳನ್ನು ಈತ ರೌಡಿಶೀಟರ್‌ಗಳಿಗೆ ನೀಡುತ್ತಿದ್ದ. ಸುದ್ದಗುಂಟೆ ಪಾಳ್ಯ ರೌಡಿಶೀಟರ್ ರವೀಂದ್ರನ್ ಹಾಗೂ ಅಕ್ಷಯ್ ಎಂಬವರಿಗೆ ನೀಡುತ್ತಿದ್ದ. ಇವರಿಬ್ಬರೂ ಚಿನ್ನಾಭರಣ ಡಿಸ್ಟ್ರಿಬ್ಯೂಟ್ ಮಾಡುವ ಕೆಲಸ ಮಾಡುತ್ತಿದ್ದರು. ರವೀಂದ್ರನ್ ಮೇಲೆ ಎಸ್‌ಜಿ ಪಾಳ್ಯ ಠಾಣೆಯಲ್ಲಿ ಐದು ಕೇಸ್‌ಗಳಿವೆ. ಅಕ್ಷಯ ಮೇಲೆ ಇದೇ ಠಾಣೆಯಲ್ಲಿ ಒಂದು ಕೇಸ್ ಇದೆ. ಜೋಶ್ವಾ ಕೃತ್ಯ ಎಸಗಿ ಓಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Fraud Case : ಹುಡುಗಿ ಹೆಸರಲ್ಲಿ ಚಾಟಿಂಗ್‌; ಸಲಿಗೆ ಬೆಳೆಸಿ ಸುಲಿಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

ಉಗ್ರಗಾಮಿಗಳ ದಾಳಿಯಿಂದಾಗಿ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ನಡೆದಿದೆ. ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ದಾಳಿ (Terror Attack) ನಡೆದಿದೆ. ದಾಳಿ ವೇಳೆ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.

VISTARANEWS.COM


on

By

Terror Attack
Koo

ರಿಯಾಸಿ(ಕಾಶ್ಮೀರ): ಯಾತ್ರಾರ್ಥಿಗಳಿದ್ದ (pilgrims) ಬಸ್ (bus) ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು (Terror Attack) ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (jammu and kashmir) ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ಉಗ್ರರ ದಾಳಿ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿಯ ಕಾರಣ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.


ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೊದಲು ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಬಸ್ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಏಳು ಮಂದಿ ಮೃತ ಪಟ್ಟಿದ್ದು, ಒಟ್ಟು ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿತು ಎಂದು ಪೋನಿ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಬಸ್ಸಿನ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿ ಹಲವಾರು ಖಾಲಿ ಗುಂಡುಗಳು ಕೂಡ ಪತ್ತೆಯಾಗಿವೆ.


ಇದನ್ನೂ ಓದಿ: Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

ಈ ಹಿಂದೆ 22 ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು

ಉತ್ತರಪ್ರದೇಶದ ಹತ್ರಾಸ್‌ನಿಂದ ಬಂದ ಬಸ್ ಅಖ್ನೂರ್‌ನ ಆಳವಾದ ಕಮರಿಗೆ ಬಿದ್ದ ಪರಿಣಾಮ ಒಂಬತ್ತು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 22 ಯಾತ್ರಾರ್ಥಿಗಳು ಪ್ರಾಣ ಕಳೆದುಕೊಂಡು 57 ಮಂದಿ ಗಾಯಗೊಂಡ ಕೆಲವು ದಿನಗಳ ಅನಂತರ ಈ ಘಟನೆ ನಡೆದಿದೆ.

ಅಖ್ನೂರ್‌ನಲ್ಲಿ ಬಸ್ ಅಪಘಾತದಿಂದ ಪ್ರಾಣಹಾನಿಯಿಂದ ದುಃಖವಾಗಿದೆ. ನನ್ನ ಬೆಂಬಲ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಬಸ್ ಅಪಘಾತದಿಂದಾಗಿ ಗಾಯಗೊಂಡವರಿಗೆ 50,000 ರೂ. ನೆರವನ್ನು ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Continue Reading

ಕ್ರೈಂ

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಪಂಕಜ್ ಮುಂಡೆ ಸೋತರೆ ಇನ್ನಿಲ್ಲ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕಿದ್ದ ವ್ಯಕ್ತಿಯೊಬ್ಬ ಬಸ್ ಅಪಘಾತದಲ್ಲಿ (Bus Accident) ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

By

Bus Accident
Koo

ಲಾತೂರ್: ಲೋಕಸಭಾ ಚುನಾವಣೆಯಲ್ಲಿ (lok sabha election) ಮಹಾರಾಷ್ಟ್ರದ (maharastra) ಬೀಡ್ ನಿಂದ ಕಣಕ್ಕೆ ಇಳಿದಿದ್ದ ಬಿಜೆಪಿ (bjp) ನಾಯಕಿ ಪಂಕಜಾ ಮುಂಡೆ (Pankaja Munde) ಅವರು ಸೋತರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋ (video) ಅಪ್‌ಲೋಡ್ ಮಾಡಿದ್ದ ವ್ಯಕ್ತಿಯೊಬ್ಬರು ಬಸ್‌ನಡಿ (Bus Accident) ಸಿಲುಕಿ ಮೃತಪಟ್ಟಿದ್ದಾರೆ.

ವಿಡಿಯೋ ಮಾಡಿದ 38 ವರ್ಷದ ಟ್ರಕ್ ಚಾಲಕ ಶುಕ್ರವಾರ ರಾತ್ರಿ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಇದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೋರ್ಗಾಂವ್ ಪಾಟಿ ಬಳಿಯ ಅಹ್ಮದ್‌ಪುರ- ಅಂಧೋರಿ ರಸ್ತೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಲಿಯಾದವರನ್ನು ಟ್ರಕ್ ಚಾಲಕ ಲಾತೂರ್‌ನ ಅಹ್ಮದ್‌ಪುರದ ಯೆಸ್ಟರ್‌ನ ನಿವಾಸಿ ಸಚಿನ್ ಕೊಂಡಿಬಾ ಮುಂಡೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ಘಟನೆಗೆ ಸಂಬಂಧಿಸಿ ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಯಲ್ದರವಾಡಿ ರಾತ್ರಿ ಬಸ್ ನಿಲುಗಡೆ ಮಾಡುತ್ತಿದ್ದಾಗ ಬಸ್ ನ ಹಿಂದೆ ನಿಂತಿದ್ದ ಸಚಿನ್ ಅವರು ಬಸ್ ನ ಚಕ್ರದಡಿ ಬಿದ್ದು ನಜ್ಜುಗುಜ್ಜಾಗಿದ್ದಾರೆ ಎಂದು ಆತನ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಕಿಂಗಾವ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪತ್ನಿಯನ್ನು ಕೊಂದಿದ್ದ ವ್ಯಕ್ತಿಯ ಬಂಧನ

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ ಪತಿಯೊಬ್ಬನನ್ನು ಬಂಧಿಸಲಾಗಿದೆ. ಗಂಗಿರೆಡ್ಡಿ ಬಂಧಿತ ಆರೋಪಿ.
ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಜಗಳ ನಡೆದು ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಗಂಗಿರೆಡ್ಡಿ ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Continue Reading

ದಾವಣಗೆರೆ

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Farmer Death : ಸಾಲದ ಹೊರೆಗೆ ಮನನೊಂದ ರೈತನೊಬ್ಬ ತನ್ನ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Farmer Death
Koo

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಇದನ್ನೂ ಓದಿ: Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

ಸಿಬಿಐ ಅಧಿಕಾರಿಗಳು (Fake CBI Gang) ಎಂದು ಹೇಳಿ ನಿವೃತ್ತ ಅಧಿಕಾರಿಗೆ 85 ಲಕ್ಷ ರೂ. ವಂಚಿಸಿರುವ ಗ್ಯಾಂಗ್ ವಿರುದ್ಧ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ದೆಹಲಿಯಲ್ಲಿ ಪ್ರಕರಣ ದಾಖಲಾಗಿದೆ. ‘ರಾಣಾ ಗಾರ್ಮೆಂಟ್ಸ್’ ಹೆಸರಿನ ಕಂಪೆನಿಗೆ ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಹಣ ವರ್ಗಾವಣೆ ಆಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

VISTARANEWS.COM


on

By

Fake CBI Gang
Koo

ನವದೆಹಲಿ: ಸಿಬಿಐ, ಕಸ್ಟಮ್ಸ್, ಮಾದಕ ದ್ರವ್ಯ ಮತ್ತು ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸುತ್ತಿದ್ದ ಗ್ಯಾಂಗ್ ವೊಂದು (Fake CBI Gang) ಬಹುರಾಷ್ಟ್ರೀಯ ಕಂಪನಿಯ ನಿವೃತ್ತ ಹಿರಿಯ ಅಧಿಕಾರಿಯೊಬ್ಬರಿಗೆ (retired officer) 85 ಲಕ್ಷ ರೂ. ವಂಚಿಸಿರುವ ಕುರಿತು ಆಂಧ್ರಪ್ರದೇಶದ (andrapradesh) ವಿಶಾಖಪಟ್ಟಣಂ (Visakhapatnam) ಮತ್ತು ದೆಹಲಿಯಲ್ಲಿ (delhi) ಪ್ರಕರಣ ದಾಖಲಿಸಲಾಗಿದೆ.

ಹಣವನ್ನು ಚೆಕ್ ಮೂಲಕ ಪಡೆದ ಗ್ಯಾಂಗ್ ದೆಹಲಿಯ ಉತ್ತಮ್ ನಗರದಲ್ಲಿ ಹೆಚ್‌ಡಿಎಫ್‌ಸಿ ಖಾತೆಯನ್ನು ನಿರ್ವಹಿಸುತ್ತಿದ್ದ ‘ರಾಣಾ ಗಾರ್ಮೆಂಟ್ಸ್’ ಎಂಬ ಕಂಪನಿಗೆ ವರ್ಗಾಯಿಸಿದೆ. ವಿಶಾಖಪಟ್ಟಣಂನಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಗ್ಯಾಂಗ್ ‘ರಾಣಾ ಗಾರ್ಮೆಂಟ್ಸ್’ ನಡೆಸುತ್ತಿದ್ದ ಎಚ್‌ಡಿಎಫ್‌ಸಿ ಖಾತೆಯಿಂದ ಭಾರತದಾದ್ಯಂತ 105 ಖಾತೆಗಳಿಗೆ ಈ ಹಣವನ್ನು ವರ್ಗಾಯಿಸಿದೆ. ಈ ಕುರಿತು ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಉತ್ತಮ್ ನಗರ ಶಾಖೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭಾರತದಾದ್ಯಂತ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿರುವ ಜರ್ಮನಿಯ ಪ್ರಧಾನ ಕಚೇರಿಯ ಫಾರ್ಮಾ ಸಂಸ್ಥೆಯೊಂದರ 57 ವರ್ಷದ ನಿವೃತ್ತ ಅಸೋಸಿಯೇಟ್ ಜನರಲ್ ಮ್ಯಾನೇಜರ್ ವಂಚನೆಯ ಕುರಿತು ಪ್ರತಿಕ್ರಿಯಿಸಿದ್ದು, ನನಗೆ ಮೂರು ವರ್ಷಗಳ ಸೇವೆ ಉಳಿದಿತ್ತು. ಆದರೆ ಮಗನನ್ನು ಕಾಲೇಜಿಗೆ ಕಳುಹಿಸಲು ಸಮಯ ಬೇಕಾಗಿದ್ದರಿಂದ ಸ್ವಯಂ ನಿವೃತ್ತಿ ತೆಗೆದುಕೊಂಡೆ. ಮೇ 2ರಂದು ನಿವೃತ್ತಿ ಪರಿಹಾರ ಸಿಕ್ಕಿದೆ. ಮಗನ ವೀಸಾ ನೇಮಕಾತಿ ಮೇ 17ರಂದು ಆಗಿತ್ತು. ಆದರೆ ಮೇ 14ರಂದು, ನನ್ನ ದಾಖಲೆಗಳನ್ನು ಪರಿಶೀಲಿಸಿದ ಅನಂತರ ಹಿಂದಿರುಗಿಸುವುದಾಗಿ ಹೇಳಿ 85 ಲಕ್ಷ ರೂ.ವನ್ನು ಕಳುಹಿಸುವಂತೆ ಗ್ಯಾಂಗ್ ನನ್ನನ್ನು ವಂಚಿಸಿರುವುದಾಗಿ ಹೇಳಿದ್ದಾರೆ.

ವಿಶಾಖಪಟ್ಟಣಂ ಕ್ರೈಂ ಬ್ರಾಂಚ್ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಶಾಖಪಟ್ಟಣಂನಲ್ಲಿರುವ ಬ್ಯಾಂಕ್‌ನಲ್ಲಿ ಕೆಲವರು ಇದರಲ್ಲಿ ಭಾಗಿಯಾಗಿರಬಹುದು. ಯಾಕೆಂದರೆ ಗ್ಯಾಂಗ್‌ಗೆ ನಿವೃತ್ತಿಯ ಅನಂತರ ಅವರು ಪಡೆದ ನಿಖರವಾದ ಮೊತ್ತ ಸೇರಿದಂತೆ ಅವರ ಖಾತೆಯ ಬಗ್ಗೆ ಎಲ್ಲವೂ ತಿಳಿದಿತ್ತು. ಹತ್ತಿರದ ಹೆಚ್‌ಡಿಎಫ್‌ಸಿ ಬ್ಯಾಂಕ್‌ಗೆ ಹೋಗಿ ಚೆಕ್ ಡ್ರಾಪ್ ಮಾಡಲು ಗ್ಯಾಂಗ್ ಹೇಳಿತು ಎಂದು ನಿವೃತ್ತ ಅಧಿಕಾರಿ ದೂರಿದ್ದಾರೆ.

ಕ್ರೈಂ ಬ್ರಾಂಚ್ ವಿಶಾಖಪಟ್ಟಣಂನಲ್ಲಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಿಂದ ಹಲವಾರು ದಾಖಲೆಗಳನ್ನು ತೆಗೆದುಕೊಂಡಿದೆ. ಅವರು ಬ್ಯಾಂಕ್ ಅಧಿಕಾರಿಗಳನ್ನು ಭೇಟಿಯಾದಾಗ ಪ್ರಕರಣ ಕುರಿತು ಪ್ರತಿಕ್ರಿಯಿಸಲು ಬ್ಯಾಂಕ್ ನಿರಾಕರಿಸಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಉತ್ತಮ್ ನಗರ ಶಾಖೆಯ ಪೊಲೀಸರು ರಾಣಾ ಗಾರ್ಮೆಂಟ್ಸ್‌ ಗೆ ಭೇಟಿ ನೀಡಿದ್ದಾರೆ. ರಾಣಾ ಗಾರ್ಮೆಂಟ್ಸ್ ಮಾಲೀಕರು ಈ ಸ್ಥಳವನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ನಿವೃತ್ತ ಅಧಿಕಾರಿ ಹೇಳಿದರು.

ನಿವೃತ್ತಿ ಅಧಿಕಾರಿಯ ಬ್ಯಾಂಕ್ ಖಾತೆಗೆ ಹಣ ಜಮೆಯಾದ ಬಳಿಕ ಡಿಸಿಪಿ ಸೈಬರ್ ಕ್ರೈಮ್ ಬಾಲ್ಸಿಂಗ್ ರಜಪೂತ್ ಎಂದು ಹೇಳಿ ಒಬ್ಬ ವ್ಯಕ್ತಿ ಕರೆ ಮಾಡಿದ್ದೂ, ಹಲವಾರು ಮಾದಕ ದ್ರವ್ಯ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ತಮ್ಮ ಹೆಸರು ಬಂದಿದೆ ಮತ್ತು ಈ ಎಲ್ಲಾ ಪ್ರಕರಣಗಳಿಗೆ ಅವರ ಆಧಾರ್ ಲಿಂಕ್ ಮಾಡಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

ಎಫ್ ಐ ಆರ್ ನಲ್ಲಿ ಏನಿದೆ?

ಇನ್ನೊಬ್ಬ ಕರೆ ಮಾಡಿ ನಿಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಬೇಕಿದೆ. ಕೂಡಲೇ ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನಕಲಿ ಡಿಸಿಪಿ ಸ್ವಲ್ಪ ಹೊತ್ತು ಮಾತನಾಡಿ, ನೀವು ನಿರಪರಾಧಿಯಂತೆ ಕಾಣುತ್ತೀರಿ. ಹೀಗಾಗಿ 85 ಲಕ್ಷ ರೂ. ವನ್ನು ತನಿಖೆಗಾಗಿ ತೆಗೆದುಕೊಂಡು ಏನೂ ತಪ್ಪಿಲ್ಲ ಎಂದು ಕಂಡುಬಂದರೆ ಮರಳಿ ಕೊಡುವುದಾಗಿ ಹೇಳಿದ್ದರು. ಸ್ಕೈಪ್‌ನಲ್ಲಿ ಎರಡು ದಿನಗಳ ವಿಚಾರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮನೆಯಿಂದ ಹೊರಹೋಗಲು ಅಥವಾ ಯಾರಿಗೂ ಕರೆ ಮಾಡಲು ಅವರು ಬಿಡಲಿಲ್ಲ ಎಂದು ನಿವೃತ್ತ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ವಂಚನೆ ಬಗ್ಗೆ ಎಚ್ಚರವಿರಲಿ

ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಪತ್ತೆಯಾದ ಮಾಹಿತಿಗಳ ಬಗ್ಗೆ ವಿವರಣೆ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಪರಿಚಿತ ಸಂಖ್ಯೆಗಳಿಂದ ವಾಟ್ಸಾಪ್ ವಿಡಿಯೋ ಕರೆಗಳಿಗೆ ಉತ್ತರಿಸದಂತೆ ನಿವೃತ್ತ ಅಧಿಕಾರಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ವಿಶಾಖಪಟ್ಟಣ ಸೈಬರ್ ಪೊಲೀಸರಿಗೆ 300 ಕೋಟಿ ರೂ. ವಂಚನೆ ಮೊತ್ತದ ಕುರಿತು ದೂರುಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Modi 3.0 Cabinet
ದೇಶ9 mins ago

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet
ದೇಶ20 mins ago

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

V Somanna profile
ಪ್ರಮುಖ ಸುದ್ದಿ1 hour ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ1 hour ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Ind vs pak
ಪ್ರಮುಖ ಸುದ್ದಿ2 hours ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ2 hours ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ2 hours ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ2 hours ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ3 hours ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ3 hours ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌