Assault Case: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರನ ವಿರುದ್ಧ ಜಾತಿ ನಿಂದನೆ ದೂರು - Vistara News

ಕ್ರೈಂ

Assault Case: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರನ ವಿರುದ್ಧ ಜಾತಿ ನಿಂದನೆ ದೂರು

ಫಾರ್ಚೂನರ್ ಹಾಗೂ ಇನೋವಾ ಕಾರಲ್ಲಿ ಸ್ಥಳಕ್ಕೆ ಬಂದಿರುವ ಕಟ್ಟಾ ಜಗದೀಶ್ ಮತ್ತು ಸ್ನೇಹಿತರು ಭೈರತಿ ಸುರೇಶ್ ಬ್ಯಾನರ್ ಕಟ್ಟುವುದನ್ನು ಪ್ರಶ್ನಿಸಿ ಹಲ್ಲೆ ಮಾಡಿ ಜಾತಿನಿಂದನೆ ಮಾಡಿದ್ದಾರೆ ಎಂದು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

VISTARANEWS.COM


on

Assault Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ ಕಟ್ಟಾ ಜಗದೀಶ್ ಹಾಗೂ ಅವರ ಸ್ನೇಹಿತರ ವಿರುದ್ಧ ಹಲ್ಲೆ ಹಾಗೂ ಜಾತಿನಿಂದನೆಯಡಿ ಕೇಸ್ ದಾಖಲಾಗಿದೆ.

ಸಂತೋಷ್ ಎಂಬಾತ ನೀಡಿರುವ ದೂರಿನನ್ವಯ ಸಂಜಯನಗರ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸಂಜಯನಗರದ ನಾಗಶೆಟ್ಟಿಹಳ್ಳಿಯಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಭಾವಚಿತ್ರದ ಬ್ಯಾನರ್ ಹಾಕ್ತಿದ್ದ ದೂರುದಾರ ಸಂತೋಷ್. ಈ ವೇಳೆ ಫಾರ್ಚೂನರ್ ಹಾಗೂ ಇನೋವಾ ಕಾರಲ್ಲಿ ಸ್ಥಳಕ್ಕೆ ಬಂದಿರುವ ಕಟ್ಟಾ ಜಗದೀಶ್ ಮತ್ತು ಸ್ನೇಹಿತರು ಭೈರತಿ ಸುರೇಶ್ ಬ್ಯಾನರ್ ಕಟ್ಟುವುದನ್ನು ಪ್ರಶ್ನಿಸಿ ಹಲ್ಲೆ ಮಾಡಿ ಜಾತಿನಿಂದನೆ ಮಾಡಿದ್ದಾರೆ ಎಂದು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

B.Ed Exam Scam: ಪರೀಕ್ಷಾ ಅಕ್ರಮಕ್ಕೆ ಅನುಕೂಲ‌ ಮಾಡಿಕೊಟ್ಟಿದ್ದಾರೆಂಬ ಆರೋಪದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವೆ ಸೇರಿ ಐವರ ವಿರುದ್ಧ ಕೇಸ್‌ ದಾಖಲಾಗಿದೆ. ಆದರೆ, ಈ ಮೊದಲೇ ದೂರು ನೀಡಿದ್ದರೂ ಪೊಲೀಸರು ತಮ್ಮ ದೂರನ್ನು ಸ್ವೀಕರಿಸಿಲ್ಲ ಎಂದು ಕುಲಸಚಿವೆ ಆರೋಪಿಸಿದ್ದಾರೆ.

VISTARANEWS.COM


on

B.Ed Exam Scam
Koo

ಕಲಬುರಗಿ: ಬಿ.ಇಡಿ ಪರೀಕ್ಷೆ ಅಕ್ರಮಕ್ಕೆ (B.Ed Exam Scam) ಸಂಬಂಧಿಸಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಸೇರಿ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ನಾಗರಾಜ್ ಎಂಬುವವರು ನೀಡಿದ ದೂರಿನ ಮೇರೆಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷಾ ಅಕ್ರಮಕ್ಕೆ ಅನುಕೂಲ‌ ಮಾಡಿಕೊಟ್ಟಿದ್ದಾರೆಂಬ ಆರೋಪದಲ್ಲಿ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ, ಅಲ್‌ ಬದರ್‌ ಕಾಲೇಜಿನ ಪ್ರಾಂಶುಪಾಲರಾದ ಮಲ್ಲಮ್ಮ ಮಂಠಾಳೆ, ಬಿ.ಇಡಿ ವಿಷಯ ನಿರ್ವಾಹಕ ಸ್ವರೂಪ ಭಟ್ಟರ್ಕಿ, ಪರೀಕ್ಷೆ ಮೇಲ್ವಿಚಾರಕ ಮೌನೇಶ್‌ ಅಕ್ಕಿ, ಇಂದಿರಾ ಗಾಂಧಿ ಬಿ.ಇಡಿ ಕಾಲೇಜಿನ ಅಧ್ಯಕ್ಷ ಮೌಲಾ ಪಟೇಲ್‌ ವಿರುದ್ಧ ಪ್ರಕರಣ ದಾಖಲಾಗಿದೆ.

2024ರ ಜುಲೈನಲ್ಲಿ‌ ನಡೆದ ಬಿ.ಇಡಿ ಪರೀಕ್ಷೆ ವೇಳೆ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಬಿ.ಇಡಿ ಪರೀಕ್ಷೆಗೆ 100 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿತ್ತು. ಆದರೆ, ಪರೀಕ್ಷೆಗೆ ಅರ್ಹರು ಕೇವಲ 22 ವಿದ್ಯಾರ್ಥಿಗಳು ಮಾತ್ರ. ಬಿ.ಇಡಿ ಪ್ರಥಮ‌ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎನ್ನಲಾಗಿತ್ತು. ನಕಲಿ ದಾಖಲೆಗಳು ಸೃಷ್ಟಿಸಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಹಾಲ್‌ ಟಿಕೆಟ್ ನೀಡಿದ ಆರೋಪ ಇಂದಿರಾಗಾಂಧಿ ಬಿ.ಇಡಿ ಕಾಲೇಜು ಹಾಗೂ ಅಲ್ ಬದರ್ ಕಾಲೇಜು ವಿರುದ್ಧ ಕೇಳಿಬಂದಿತ್ತು.

ದೂರು ಕೊಟ್ಟಿದ್ದ ಕುಲಸಚಿವೆ ಮೇಲೆಯೇ ಎಫ್‌ಐಆರ್‌!

ಪರೀಕ್ಷಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂದಿರಾಗಾಂಧಿ ಬಿ.ಇಡಿ ಕಾಲೇಜು ಹಾಗೂ ಅಲ್ ಬದರ್ ಕಾಲೇಜು ವಿರುದ್ಧ ಜುಲೈ 8ರಂದೇ ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಅವರು ಇದೇ ಅಶೋಕನಗರ ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ.

ಮೊದಲಿಗೆ ವಿವಿ ಪೊಲೀಸ್ ಠಾಣೆಯಿಂದ ರಾಘವೇಂದ್ರ ಪೊಲೀಸ್ ಠಾಣೆ, ಅಲ್ಲಿಂದ ಮತ್ತೆ ಅಶೋಕನಗರ ಪೊಲೀಸ್ ಠಾಣೆಗೆ ಕುಲಸಚಿವೆ ಅಲೆದಾಡಿದ್ದಾರೆ. ಆದರೆ, ಮೊದಲು ದೂರು ದಾಖಲಿಸಿದ್ದ ಪ್ರಕರಣದ ತನಿಖೆ ಬಿಟ್ಟು, ನಂತರ ದಾಖಲಿಸಿದ್ದ ಪ್ರಕರಣದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಆರೋಪಿಸಿದ್ದಾರೆ.

ಇದನ್ನೂ ಓದಿ | Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

ಬೇಗ ಎಫ್‌ಐಆರ್‌ ಮಾಡಲು ಅಗೋದಿಲ್ಲಾ ಎಂದಿದ್ದ ಪೊಲೀಸರು, ಈಗ ಏಕಾ ಏಕಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದೇಕೆ? ಎಂದು ಕಲಬುರಗಿ ಸೌತ್ ಎಸಿಪಿ ಭೋತೆಗೌಡ ಅವರ ಮೇಲೆ ಕುಲಸಚಿವೆ ಅನುಮಾನ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

Mangalore Homestay case: ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಪತ್ರಕರ್ತ ನವೀನ್ ಸೂರಿಂಜೆ ಪ್ರಕರಣವನ್ನು ನ್ಯಾಯಾಲಯ ಈ ಹಿಂದೆಯೇ ಕೈಬಿಟ್ಟಿತ್ತು. ಉಳಿದ 40 ಆರೋಪಿಗಳನ್ನು ಕೋರ್ಟ್ ಮಂಗಳವಾರ ದೋಷ ಮುಕ್ತಗೊಳಿಸಿದೆ.

VISTARANEWS.COM


on

Mangalore Homestay case
Koo

ಮಂಗಳೂರು: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ (Mangalore Homestay case) ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಮಹತ್ವದ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷಮುಕ್ತರಾಗಿದ್ದಾರೆ.

ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಪತ್ರಕರ್ತ ನವೀನ್ ಸೂರಿಂಜೆ ಪ್ರಕರಣವನ್ನು ನ್ಯಾಯಾಲಯ ಈ ಹಿಂದೆಯೇ ಕೈಬಿಟ್ಟಿತ್ತು. ಇಂದು ಉಳಿದ 40 ಆರೋಪಿಗಳನ್ನು ಕೋರ್ಟ್ ದೋಷ ಮುಕ್ತಗೊಳಿಸಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿದೆ.

ಏನಿದು ಪ್ರಕರಣ?

2012ರ ಜುಲೈ 28 ರಂದು ಹಿಂದು ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇ ಮೇಲೆ ದಾಳಿ ಮಾಡಿದ್ದರು. ಯುವಕ ಯುವತಿಯರು ಹೋಂ ಸ್ಟೇಯಲ್ಲಿ ತಂಗಿದ್ದು, ಬರ್ತ್ ಡೇ ಪಾರ್ಟಿ ಮಾಡುತ್ತಿದ್ದಾಗ ಅವರ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ತೀವ್ರ ಹಲ್ಲೆ ನಡೆಸಿದ್ದರು. ಈ ಬಗ್ಗೆ ಸಂತ್ರಸ್ತರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂತಿಮವಾಗಿ ಪೊಲೀಸರು 44 ಮಂದಿಯ ಮೇಲೆ ಆರೋಪ ಪಟ್ಟಿ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಘಟನೆ ನಡೆದು ಸುದೀರ್ಘ 12 ವರ್ಷ ವಿಚಾರಣೆ ಬಳಿಕ ಮಂಗಳವಾರ ಅಂತಿಮ ತೀರ್ಪು ಹೊರಬಿದ್ದಿದೆ.

ಇದನ್ನೂ ಓದಿ | Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

Gadag News
Gadag News

ಗದಗ: ಮಕ್ಕಳ ಕೂದಲು ಕಟ್ ಮಾಡಿದ್ದಕ್ಕೆ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಗದಗ (Gadag News) ಬೆಟಗೇರಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಡ್ರಾಮಾವೇ ನಡೆದಿದೆ. ಶಿಕ್ಷಕ ಬೆನೋಯ್ ಎಂಬಾತ ಶಾಲೆಯ ಆರು ಮಕ್ಕಳಿಗೆ ಹೇರ್ ಕಟ್ ಮಾಡಿದ್ದಾರೆ.

ಕೂದಲು ಕಟ್ ಮಾಡುವ ವೇಳೆ ವಿದ್ಯಾರ್ಥಿ ಹಣೆಗೆ ಗಾಯವಾಗಿದೆ. ಏಳನೇ ತರಗತಿ ವಿದ್ಯಾರ್ಥಿಗೆ ಬೆನೋಯ್ ಕತ್ತರಿಯಿಂದ ಗಾಯ ಮಾಡಿದ್ದಾರೆ. ಶಿಕ್ಷಕ ಬೆನೋಯ್ ವರ್ತನೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಬುರಡಿ ಎದುರೇ ಪೋಷಕರು ಧರ್ಮದೇಟು ನೀಡಿದ್ದಾರೆ.

ಇದನ್ನೂ ಓದಿ: Self Harming: ಹೊಸದುರ್ಗದಲ್ಲಿ ಬ್ಯಾಂಕ್‌ ಆಫೀಸರ್‌ ಸೂಸೈಡ್‌; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು

ಬಳಿಕ ಬೆನೋಯ್‌ನ್ನು ವಜಾಗೊಳಿಸುವಂತೆ ಪಾಲಕರು ಆಗ್ರಹಿಸಿದ್ದಾರೆ. ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅಧಿಕಾರಿ ವರದಿ ಪಡೆದಿದ್ದಾರೆ. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಗದಗ ಶಹರ ಬಿಇಒ ಆರ್‌ಎಸ್ ಬುರಡಿ ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

Physical Abuse : ಬೆಂಗಳೂರಿನಲ್ಲಿ ಶಾಲಾ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಯುವಕ

Physical Abuse : ಯುವಕನೊಬ್ಬ ಶಾಲಾ ಬಾಲಕಿಯರನ್ನೇ ಟಾರ್ಗೆಟ್‌ ಮಾಡಿ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಶಾಲಾ ಬಾಲಕಿ 7 ತಿಂಗಳ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ.

VISTARANEWS.COM


on

By

Physical Abuse
ಆರೋಪಿ ಸಾದ್ ಮುಸೈಬ್ನಾ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Physical Abuse) ನಡೆದಿರುವ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವು ಎಂದು ನರಳಾಡುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಹೋದ ಪೋಷಕರಿಗೆ ಆಘಾತವೇ ಎದುರಾಗಿತ್ತು. ಯಾಕೆಂದರೆ ಶಾಲೆಗೆ ಹೋಗುತ್ತಿದ್ದ ಮಗಳು 7 ತಿಂಗಳ ಗರ್ಭಿಣಿಯಾಗಿದ್ದಳು. ವೈದ್ಯರು ಹೇಳಿದ ಸುದ್ದಿ ಕೇಳಿ ತಂದೆ-ತಾಯಿ ಶಾಕ್‌ ಆಗಿದ್ದರು. ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಮಾಡುತ್ತಾ ಅಲ್ಪ-ಸ್ವಲ್ಪ ಫೇಮಸ್‌ ಆಗಿದ್ದ ಸಾದ್ ಮುಸೈಬ್ನಾ ಎಂಬಾತನ ಮೇಲೆ ಬಾಲಕಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. 15 ವರ್ಷದ ಮಗಳನ್ನು ನಂಬಿಸಿ, ಮನವೊಲಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಯನ್ನು ಆರೋಪಿ ಸಾದ್‌ ಮನೆಗೆ ಕರೆದೊಯ್ದು ಆತನ ತಾಯಿ ಹಾಗೂ ಸಹೋದರಿಗೆ ಪರಿಚಯಿಸಿ ನಂಬಿಸಿದ್ದನಂತೆ. ಬಳಿಕ ಪದೆ ಪದೇ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದನಂತೆ. ಈ ಬಗ್ಗೆ ಕೇಳಲು ಆರೋಪಿ ಮನೆಗೆ ಹೋದಾಗ ಬಾಲಕಿಯ ತಂದೆಗೆ ಬೆದರಿಕೆ ಹಾಕಿದ್ದನಂತೆ. ರೌಡಿಗಳ ಪರಿಚಯವಿದೆ, ನಿಮ್ಮ ಮಗಳನ್ನು ಬಿಡುವುದಿಲ್ಲ ಎಂದು ಹಲ್ಲೆ ನಡೆಸಿದ್ದನಂತೆ.

Physical Abuse
Physical Abuse

ಇದನ್ನೂ ಓದಿ: Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ

ಈ ಎಲ್ಲ ಘಟನೆಗಳಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಪೋಷಕರು ಆಕೆಯನ್ನು ರಕ್ಷಿಸಿದ್ದಾರೆ. ಆರೋಪಿ ಸಾದ್ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಾಲೆಗೆ ಬರುವ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಳಸಿಕೊಳ್ಳುತ್ತಿದ್ದಾನೆ. ಎಲ್ಲರ ಪರವಾಗಿ ನಾನೇ ಮುಂದೆ ಬಂದು ದೂರು ನೀಡಿದ್ದಾನೆ ಎಂದಿದ್ದಾರೆ.

ಸದ್ಯ ಬಾಲಕಿ ತಂದೆಯ ದೂರಿನನ್ವಯ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಗಳಿಗೆ ನ್ಯಾಯ ಕೊಡಿಸಲು ತಂದೆ ನಿರಂತರವಾಗಿ ಹೋರಾಡುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತರಿಗೂ ಆರೋಪಿಯ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಮೊದಮೊದಲು ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಇದೀಗ ಕೊನೆಗೂ ಆರೋಪಿಯ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಡ್ರ್ಯಾಗರ್‌ ಹಿಡಿದು ಪೋಸ್‌

ಇನ್ನೊಂದೆಡೆ ಆರೋಪಿ ತಾಯಿ ನನ್ನ ಮಗ ಹೀರೋ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ. ಬರ್ತ್‌ಡೇ ಪಾರ್ಟಿಯೊಂದರಲ್ಲಿ ಡ್ರ್ಯಾಗರ್ ಹಿಡಿದು ಆರೋಪಿ ಪೋಸ್‌ ಕೊಟ್ಟಿದ್ದಾನೆ. ಆತನ ಕುಟುಂಬದಿಂದ ನಮಗೆ ಜೀವ ಬೆದರಿಕೆ ಇದೆ ಅಂತಲೂ ಬಾಲಕಿ ಪೋಷಕರು ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು!

Murder Case: ಪ್ರೀತಿಗೆ ಕುರುಡು ಅಂತಾರೆ. ಪ್ರೀತಿಯಲ್ಲಿ ಬಿದ್ದವರಿಗೆ ಆ ಕ್ಷಣದಲ್ಲಿ ಹೆತ್ತು ಹೊತ್ತು ಸಾಕಿ ಬೆಳೆಸಿದವರಿಗಿಂತ ತಮ್ಮ ಪ್ರಿಯತಮ/ಪ್ರಿಯಕರನೇ ಹೆಚ್ಚಾಗಿರುತ್ತಾರೆ! ಇಲ್ಲೊಂದು ಇಂತಹದ್ದೇ ಘಟನೆ ನಡೆದಿದೆ. ಮಗಳ ಪ್ರೀತಿಯನ್ನು ವಿರೋಧಿಸಿದ್ದಕ್ಕೆ ತಾಯಿ ತನ್ನ ಜೀವವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ತಾಯಿಯು ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದ ಕೋಪಗೊಂಡ ಮಗಳು ಮತ್ತು ಆಕೆಯ ಪ್ರಿಯಕರ ತಮ್ಮ ಸಹಚರನ ಸಹಾಯದಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಕೊಳಕ್ಕೆ ಎಸೆದಿದ್ದಾರೆ.

VISTARANEWS.COM


on

Murder Case
Koo


ಪ್ರೀತಿ ಎನ್ನುವ ಮಾಯೆ ಯಾವ ಮಟ್ಟದಲ್ಲಿ ಇಂದಿನ ಯುವ ಪೀಳಿಗೆಯನ್ನು ಆವರಿಸಿಕೊಂಡಿತೆಂದರೆ ಪ್ರೀತಿಗಾಗಿ ಅವರು ತಮ್ಮವರನ್ನೇ ಕೊಲ್ಲುವ ಮಟ್ಟಕ್ಕೂ ಹೋಗುತ್ತಾರೆ. ಕೆಲವರು ಅವರ ಪ್ರೀತಿಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದರೆ ತಮಗೆ ಯಾರು ಬೇಡವೆಂದು ತಮ್ಮವರನ್ನು ಬಿಟ್ಟು ತಾನು ಪ್ರೀತಿಸಿದವರ ಜೊತೆ ಓಡಿಹೋಗಿ ಬೇರೆ ಕಡೆ ಜೀವನ ಕಟ್ಟಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವರು ತಮ್ಮ ಪ್ರೀತಿಗೆ ವಿರೋಧಿಸಿದ ತಮ್ಮವರನ್ನು ಕೊಲೆ (Murder Case) ಮಾಡಿ ಬಿಡುತ್ತಾರೆ. ಅಂತಹದೊಂದು ಘಟನೆ ಇದೀಗ ಉತ್ತರ ಪ್ರದೇಶದ ಬಾಂದಾದಲ್ಲಿ ನಡೆದಿದೆ.

ತಾಯಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಸೋಮವಾರ ಬಂಧಿಸಿದ್ದಾರೆ. ಕೊಲೆಗೆ ಸಹಾಯ ಮಾಡಿದ ಇನ್ನೊಬ್ಬ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ ಎನ್ನಲಾಗಿದೆ. ಬಲ್ಲನ್ ಗ್ರಾಮದಲ್ಲಿ ವಾಸಿಸುತ್ತಿದ್ದ ರಾಜುಲಿಯಾ (45) ಮಗಳ ಕೈಯಿಂದ ಕೊಲೆಯಾದ ದುರ್ದೈವಿ. ಅವರನ್ನು ಜುಲೈ 29 ರಂದು ಅವರ ಮಗಳಾದ ನೀತು ಮತ್ತು ಆಕೆಯ ಪ್ರಿಯಕರ ಅತುಲ್ ಅರ್ಕ್ ಇವರಿಬ್ಬರು ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದರು ಎಂಬುದಾಗಿ ತಿಳಿದುಬಂದಿದೆ.

ತಾಯಿ ರಾಜುಲಿಯಾ ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಮಗಳು ಮತ್ತು ಆಕೆಯ ಪ್ರಿಯಕರ ತಮ್ಮ ಸಹಚರ ದಾದುವಾ ರಾಯ್ದಾಸ್ ಸಹಾಯದಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಕೊಳಕ್ಕೆ ಎಸೆದಿದ್ದಾರೆ. ನಂತರ ಆಕೆಯ ಶವವನ್ನು ಕೊಳದಲ್ಲಿ ಕಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಜುಲೈ 30 ರಂದು ಪೊಲೀಸರು ರಾಜುಲಿಯಾ ಅವರ ಶವವನ್ನು ಕೊಳದ ಬಳಿ ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಯಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ, ಇದರ ಪರಿಣಾಮವಾಗಿ ಕುತ್ತಿಗೆ ಮೂಳೆ ಮುರಿದಿದೆ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಪತಿ ಬೈದಿದ್ದಕ್ಕೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ; ಬೆಚ್ಚಿ ಬೀಳಿಸುವ ವಿಡಿಯೊ

ಹಾಗಾಗಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಸೋಮವಾರ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಕೊಲೆಯಲ್ಲಿ ಮಾಡಿದ ಮಹಿಳೆಯ ಮಗಳು ನೀತು ಮತ್ತು ಆಕೆಯ ಪ್ರಿಯಕರ ಅತುಲ್ ಅರ್ಕ್ ಅವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ದಾದುವಾ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Paris Olympics
ಕ್ರೀಡೆ14 seconds ago

Paris Olympics: ಇಂದು ಒಲಿಂಪಿಕ್ಸ್​ನಲ್ಲಿ ಭಾರತದ ಕ್ರೀಡಾ ಸ್ಪರ್ಧೆಗಳ ವೇಳಾಪಟ್ಟಿ ಹೀಗಿದೆ

Dina bhavishya
ಭವಿಷ್ಯ14 seconds ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಬೇಡಿ

ಕ್ರೀಡೆ5 hours ago

Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

Shira News
ತುಮಕೂರು5 hours ago

Shira News: ವರ್ಗಾವಣೆಗೊಂಡ ಶಿರಾ ತಾ.ಪಂ ಇಓ ಅನಂತ್‌ರಾಜ್‌ಗೆ ಬೀಳ್ಕೊಡುಗೆ

Rekha Sharma
ದೇಶ5 hours ago

Rekha Sharma: ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಾವಧಿ ಪೂರ್ಣ

Bangladesh unrest
ದೇಶ6 hours ago

Bangladesh Unrest: ಶೇಖ್ ಹಸೀನಾ ಬೆಂಬಲಿಗನ ಫೈವ್‌ ಸ್ಟಾರ್‌ ಹೊಟೇಲ್‌ಗೆ ಬೆಂಕಿ; 24 ಜನ ಸಜೀವ ದಹನ

Paris Olympics
ಕ್ರೀಡೆ6 hours ago

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Bangladesh unrest
ದೇಶ7 hours ago

Bangladesh Unrest: ಶೇಖ್‌ ಹಸೀನಾಗೆ 8 ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ಭಾರತದ ಜ್ಯೋತಿಷಿ; ಆತನ ಭವಿಷ್ಯವಾಣಿ ಏನು?

Pralhad Joshi
ದೇಶ7 hours ago

Pralhad Joshi: 2030ರಲ್ಲೂ ನಾವಿಲ್ಲೇ ಇರುತ್ತೇವೆ, ನೀವಲ್ಲೇ ಇರುತ್ತೀರಿ; ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

Bangladesh Protest
ವಿದೇಶ7 hours ago

Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು11 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ12 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌