Site icon Vistara News

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

assault case in Bengaluru

ಬೆಂಗಳೂರು: ವಿವಾಹಿತ ಮಹಿಳೆಯ (Assault Case) ಹಿಂದೆ ಬಿದ್ದ ಪಾಗಲ್‌ ಪ್ರೇಮಿಯೊಬ್ಬ, ಮದುವೆ ಆಗುವಂತೆ ಪೀಡಿಸುತ್ತಿದ್ದ. ಮದುವೆಗೆ ಮಹಿಳೆ ನಿರಾಕರಿಸಿದ್ದಕ್ಕೆ ಆಕೆ ಮನೆಗೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಘಟನೆ ನಡೆದಿದೆ.

ಅರ್ಬಾಜ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಮಹಿಳೆಗೆ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಇತ್ತೀಚೆಗೆ ತನ್ನ ವಾರಸೆ ಬದಲಾಯಿಸಿಕೊಂಡಿದ್ದ. ಮಹಿಳೆಗೆ ಮದುವೆ ಆಗಿದ್ದರೂ, ತನ್ನನ್ನು ಮದುವೆ ಆಗು ಎಂದು ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮನೆಯವರಿಗೆ ವಿಚಾರ ತಿಳಿಸಿದ್ದಳು. ಹೀಗಾಗಿ 2 ಕುಟುಂಬದ ಹಿರಿಯರು ಅರ್ಬಾಜ್‌ಗೆ ಬುದ್ಧಿವಾದ ಹೇಳಿದ್ದರು.

ಆದರೂ ಮಹಿಳೆಗೆ ಆಗಾಗ ಫೋನ್‌ ಮಾಡಿ ಗಲಾಟೆ ಮಾಡುತ್ತಿದ್ದ. ಹೀಗಿರುವಾಗ ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆ ಬಳಿ ಬಂದವನೇ ಬೆಂಕಿ ಇಟ್ಟಿದ್ದಾನೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಬೆಂಕಿ ಬಿದ್ದಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ಬೆಂಕಿಗಾಹುತಿ ಆಗಿವೆ.

ಸದ್ಯ ಈ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರ್ಬಾಜ್‌ನನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿ: ಜಾತಿ ನಿಂದನೆ ಕೇಸ್ (Case of casteist slurs) ದಾಖಲಿಸಿದಕ್ಕೆ ಹೆದರಿದ ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ (Kalaburagi News) ಕಮಲಾಪುರ ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವರು.

ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಕ್ಷುಲ್ಲಕ‌ ವಿಚಾರಕ್ಕೆ ಎರಡು ಸಮುದಾಯದ ಯುವಕರ ನಡುವೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ಇನ್ನೊಂದು ಸಮುದಾಯ ಯುವಕರು ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು.

ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್‌ ಲಾಡಮುಗಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.

ಇನ್ನೂ ಯುವಕನ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಕಲಬುರಗಿಗೆ ಶವ ತರಲು ಮುಂದಾದರು. ಮಿಲಿಟರಿಯವರು ನಡುರಸ್ತೆಯಲ್ಲಿ ತಡೆದ ಹಿನ್ನೆಲೆಯಲ್ಲಿ ಲಾಡ ಮುಗಳಿ ಗ್ರಾಮದ ಹೊರವಲಯದಿಂದ ಮೃತದೇಹವನ್ನು ಹೊತ್ತಿಕೊಂಡು ಬರುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version