ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್ ರಸ್ತೆಯಲ್ಲಿ ಮೂವರು ಪುಂಡರು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ (Assault Case) ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಸಮೀಪದ ಸಾದಹಳ್ಳಿ ಟೋಲ್ ಪ್ಲಾಜಾ ಬಳಿ ಕಿರಿಕ್ ನಡೆದಿದೆ. ಕಳೆದ ರಾತ್ರಿ 11:30ರ ವೇಳೆಗೆ ಟೋಲ್ ಹಣ ಪಾವತಿಸದೆ ಕಿರಿಕ್ ತೆಗೆದು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ
ಆನೇಕಲ್: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗೇಟ್ ಓಪನ್ ಮಾಡುವ ವಿಚಾರಕ್ಕೆ ಆನೇಕಲ್ ತಾಲೂಕಿನ ಚೂಡಹಳ್ಳಿಯಲ್ಲಿ ಘಟನೆ ನಡೆದಿದೆ. ತಿಮ್ಮರಾಯಪ್ಪ ಹಲ್ಲೆಗೊಳಗಾದ ಅರಣ್ಯ ಸಿಬ್ಬಂದಿ.
ಚೂಡಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ಮಧ್ಯೆಯ ರಸ್ತೆಯಲ್ಲಿ ಕಾಡು ಪ್ರಾಣಿಗಳು ಮತ್ತು ಜನರ ಸುರಕ್ಷತೆಯಿಂದ ರಾತ್ರಿಯಾಗುತ್ತಿದ್ದಂತೆ ರಸ್ತೆಯ ಗೇಟ್ ಕ್ಲೋಸ್ ಮಾಡಲಾಗುತ್ತದೆ. ಕತ್ತಲಾಗುತ್ತಿದ್ದಂತೆ ರಸ್ತೆಯಲ್ಲಿ ಸಂಚರಿಸಲು ಯಾವ ವಾಹನಕ್ಕೂ ಅನುಮತಿ ಇಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ನಾಲ್ಕು ಚಕ್ರದ ವಾಹನಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಇದನ್ನೂ ಓದಿ: MLA Muniratna: ನಿನ್ನ ನೋಡಿದ್ರೆ ಮೈಜುಮ್ ಎನಿಸುತ್ತೆ ಎಂದು ಶಾಸಕ ಮುನಿರತ್ನ ನನ್ನ ತಬ್ಬಿಕೊಂಡರು! ವಿಡಿಯೊ ಮಾಡಿ ಬೆದರಿಕೆ
ಕಳೆದ ಹದಿನೈದು ವರ್ಷದಿಂದ ಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ತಿಮ್ಮರಾಯಪ್ಪ ಕೆಲಸ ಮಾಡುತ್ತಿದ್ದಾರೆ. ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಬಂದ ಇಬ್ಬರು ಅಸಾಮಿಗಳು ರಸ್ತೆಯ ಗೇಟ್ ತೆಗೆಯುವಂತೆ ಅರಣ್ಯ ಸಿಬ್ಬಂದಿ ತಿಮ್ಮರಾಯಪ್ಪ ಜತೆ ಗಲಾಟೆ ನಡೆಸಿದ್ದಾರೆ. ಗೇಟ್ ತೆರಯದೆ ಇದ್ದಾಗ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಲೆ ಹಾಗೂ ಕಿವಿ ಭಾಗಕ್ಕೆ ಹಲ್ಲೆ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಡ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ