Attempt To Murder : ಸಾಲ ವಾಪಸ್‌ ಕೊಡುವುದಾಗಿ ಹೇಳಿ ಕಾರು ಚಾಲಕನ ತಲೆ ಸೀಳಿದ ಸ್ನೇಹಿತರು - Vistara News

ಬೆಂಗಳೂರು

Attempt To Murder : ಸಾಲ ವಾಪಸ್‌ ಕೊಡುವುದಾಗಿ ಹೇಳಿ ಕಾರು ಚಾಲಕನ ತಲೆ ಸೀಳಿದ ಸ್ನೇಹಿತರು

Assault Case : ಕೊಟ್ಟ ಸಾಲವನ್ನು ವಾಪಸ್‌ ಕೊಡುವುದಾಗಿ ಕರೆಸಿಕೊಂಡ ಸ್ನೇಹಿತರು ಕಾರು ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ (Attempt To Murder) ನಡೆಸಿದ್ದಾರೆ.

VISTARANEWS.COM


on

Car driver brutally assaulted
ತೀವ್ರ ಹಲ್ಲೆಗೊಳಗಾದ ಮಾರುತಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಣದ ವಿಷಯ ಬಂದರೆ ಸ್ನೇಹಿತರು, ಪರಿಚಿತರು, ಸಂಬಂಧಿಕರೇ ದುಷ್ಟನ್ ಆಗುವ ಕಾಲವಿದು. ಸದ್ಯ ಹಣಕಾಸಿನ ವಿಚಾರಕ್ಕೆ ಬೆಂಗಳೂರಲ್ಲಿ ಯುವಕನ ಮೇಲೆ ಆತನ ಪರಿಚಿತರೇ ಮಾರಣಾಂತಿಕ ಹಲ್ಲೆ (Attempt To Murder) ನಡೆಸಿದ್ದಾರೆ. ಮಾರುತಿ ಎಂಬ ಕಾರು ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಚ್ಚು, ಲಾಂಗ್‌ನಿಂದ ದಾಳಿ ಮಾಡಿ ತಲೆ ಸೀಳುವಂತೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಕೆಂಚ ಎಂಬಾತ ಮಾರುತಿ ಬಳಿ 25 ಸಾವಿರ ರೂ. ಹಣವನ್ನು ಪಡೆದಿದ್ದ. ದಿನ ಕಳೆದರೂ ಸಾಲದ ಹಣವನ್ನು ಕೆಂಚ ವಾಪಸ್‌ ಮಾಡಿರಲಿಲ್ಲ. ಮಾರುತಿ ಸಾಲವನ್ನು ವಾಪಸ್ ಕೇಳಿದ್ದಕ್ಕೆ, ಹಣ ನೀಡುವುದಾಗಿ ಹೇಳಿ ಕೆಂಚ ಹೆಬ್ಬೂರಿಗೆ ಕರೆಸಿಕೊಂಡಿದ್ದ. ಹೆಬ್ಬೂರಿಗೆ ಬಂದ ಮಾರುತಿಗೆ ಹಣ ವಾಪಸ್ ಕೊಡದೇ ಕೆಂಚ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದರು.

ಅವರಿಂದ ಹೇಗೋ ತಪ್ಪಿಸಿಕೊಂಡ ಮಾರುತಿ ಕಾರಿನಲ್ಲಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದ. ಇಷ್ಟಕ್ಕೆ ಸುಮ್ಮನಾಗದ ಕೆಂಚನ ಸ್ನೇಹಿತ ತೇಜು ಎಂಬಾತ ತನ್ನ ಗ್ಯಾಂಗ್‌ ಜತೆಗೆ ಸೇರಿ ಮಾರುತಿ ಕಾರನ್ನು ಹಿಂಬಾಲಿಸಿದ್ದರು. ನಂದಿನಿ ಲೇಔಟ್‌ನ ಲಗ್ಗೆರೆ ಬಳಿ ಬಂದಾಗ ಕಾರು ಅಡ್ಡಗಟ್ಟಿ ಲಾಂಗು, ಮಚ್ಚಿನಿಂದ ಏಕಾಏಕಿ ದಾಳಿ ಮಾಡಿ, ಅಲ್ಲಿಂದ ಕಾಲ್ಕಿತ್ತಿದ್ದರು.

ತುಮಕೂರಿನ ಹೆಬ್ಬೂರಿನಿಂದ ಲಗ್ಗೆರೆವರೆಗೂ ಸುಮಾರು 100 ಕಿ.ಮೀ ವರೆಗೆ ಕಾರನ್ನು ಹಿಂಬಾಲಿಸಿಕೊಂಡು ಮಾರುತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೇಜು, ನವೀನ್, ವೆಂಕಟೇಶ್, ಕೆಂಚ, ಮಯೂರ್, ಕೆಂಪ ಎಂಬುವವರು ಹಲ್ಲೆಕೋರರಾಗಿದ್ದಾರೆ. ಅಲ್ಲಿದ್ದ ಸ್ಥಳೀಯರು ಗಾಯಾಳು ಮಾರುತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:Durga Mandir : ದುರ್ಗಾ ಪೂಜೆ ವೇಳೆ ಮಂಟಪ ಕುಸಿದು ಮಹಿಳೆ ಸಾವು; 17 ಮಂದಿಗೆ ಗಾಯ

ದೊಡ್ಡಮ್ಮ ನೀಡಿದ ರೇಷನ್‌ ದುಡ್ಡಲ್ಲಿ ಗೆಳೆಯರಿಗೆ ಪಾರ್ಟಿ ಕೊಟ್ಟವನನ್ನೇ ಕೊಂದ ದುಷ್ಟರು; ಐವರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಪಾರ್ಟಿ ಕೊಡಿಸಿದ ಗೆಳೆಯನನ್ನೇ ಐವರು ಸೇರಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಜನವರಿ 24ರಂದು ಬೆಳಗಿನ ಜಾವ 2.30ರ ಸುಮಾರಿಗೆ ದರ್ಶನ್‌ (Darshan) ಎಂಬಾತನನ್ನು ಆತನ ಸ್ನೇಹಿತರೇ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ದೊಡ್ಡಮ್ಮ ಕೊಟ್ಟ ದುಡ್ಡಲ್ಲಿ ಪಾರ್ಟಿ

ಮನೆಯ ರೇಷನ್‌ ಸೇರಿ ಹಲವು ದಿನಬಳಕೆ ವಸ್ತುಗಳನ್ನು ಖರೀದಿಸು ಎಂದು ದರ್ಶನ್‌ಗೆ ಆತನ ದೊಡ್ಡಮ್ಮ 3 ಸಾವಿರ ರೂ. ಕೊಟ್ಟಿದ್ದರು. ಇದೇ ದುಡ್ಡಲ್ಲಿ ಗೆಳೆಯರ ಜತೆ ಪಾರ್ಟಿ ಮಾಡಲು ದರ್ಶನ್‌ ಹೋಗಿದ್ದ. ಬಾರ್‌ನಲ್ಲಿ ಗೆಳೆಯರ ಜತೆ ದರ್ಶನ್‌ ಪಾರ್ಟಿ ಮಾಡಿದ್ದ. ಇದಾದ ಕೆಲ ಹೊತ್ತಲ್ಲೇ ಮೊಬೈಲ್‌ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಮಧ್ಯೆಯೇ ಗಲಾಟೆ ನಡೆದಿದೆ. ಇವರ ಸಹವಾಸವೇ ಬೇಡ ಎಂದು ರಮೇಶ್‌ ಎಂಬಾತನ ಮನೆಯಲ್ಲಿ ದರ್ಶನ್‌, ನಿತಿನ್‌ ಹಾಗೂ ರಮೇಶ್‌ ಪಾರ್ಟಿ ಮಾಡುತ್ತಿದ್ದರು.

ಬಂಧಿತ ಆರೋಪಿಗಳು

ಇದನ್ನೂ ಓದಿ: Murder Case : ಬೆಂಗಳೂರಿನಲ್ಲಿ ರೌಡಿ ಶೀಟರ್‌ ಕೊಲೆ; ಮನೆ ಹೊರಗಡೆ ಮಲಗಿದಲ್ಲೇ ಮರ್ಡರ್‌

ಬಾರ್‌ನಲ್ಲಿ ನಡೆದ ಗಲಾಟೆಯನ್ನು ಮರೆತು ಮನೆಗೆ ಹೋಗದ ಚಂದ್ರಶೇಖರ್‌, ಪ್ರೀತಂ, ಯಶವಂತ್‌, ಪ್ರಶಾಂತ್‌, ಲಂಕೇಶ್‌ ಹಾಗೂ ಮತ್ತೊಬ್ಬ ದರ್ಶನ್‌ ಎಂಬುವರು ರಮೇಶ್‌ ಮನೆಗೆ ಬಂದಿದ್ದಾರೆ. ಅಲ್ಲಿ ಪ್ರೀತಂ ಹಾಗೂ ನಿತಿನ್‌ ಮಧ್ಯೆ ಭಾರಿ ಗಲಾಟೆ ನಡೆದಿದೆ. ಇದೇ ವೇಳೆ, ಹೋಗ್ಲಿ ಬಿಡ್ರೋ ಎಂದು ದರ್ಶನ್‌ ಜಗಳ ಬಿಡಿಸಲು ಮುಂದಾಗಿದ್ದಾನೆ. “ನಿನ್ನಿಂದಲೇ ಎಲ್ಲ ಆಗಿದ್ದು” ಎಂದು ಪ್ರೀತಂ ಹಾಗೂ ಆತನ ಗೆಳೆಯರು ದರ್ಶನ್‌ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ದರ್ಶನ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸುಬ್ರಹ್ಮಣ್ಯಪುರ ಪೊಲೀಸರು ಪ್ರೀತಂ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Valmiki Corporation Scam: 88 ಕೋಟಿ ರೂ. ದುರುಪಯೋಗ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು, ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Continue Reading

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading

ಪ್ರಮುಖ ಸುದ್ದಿ

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Bitcoin Scam: ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿ ಶ್ರೀಕಿಯನ್ನು ಅಕ್ರಮವಾಗಿ ಬಂಧಿಸಿ ಕ್ರಿಪ್ಟೊ ವ್ಯಾಲೆಟ್‌ನಿಂದ ಹಣ ಕಬಳಿಸಿದ ಆರೋಪದಲ್ಲಿ ಇನ್‌ಸ್ಪೆಕ್ಟರ್‌ ಬಂಧನವಾಗಿದೆ.

VISTARANEWS.COM


on

bitcoin scam
Koo

ಬೆಂಗಳೂರರು: ಬಿಟ್ ಕಾಯಿನ್ ಹಗರಣದಲ್ಲಿ (Bitcoin Scam) ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಎಸ್ಐಟಿ ಬಂಧಿಸಿದೆ. ಆರೋಪಿ ಶ್ರೀಕಿಯನ್ನು ಅಕ್ರಮವಾಗಿ ಬಂಧಿಸಿ ಕ್ರಿಪ್ಟೊ ವ್ಯಾಲೆಟ್‌ನಿಂದ ಹಣ ಕಬಳಿಸಿದ ಆರೋಪದಲ್ಲಿ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಪೆಕ್ಟರ್‌ ಬಂಧನವಾಗಿದೆ.

ಚಂದ್ರಾಧರ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ ಹಾಗೂ ಸೈಬರ್ ಎಕ್ಸಪರ್ಟ್ ಸಂತೋಷ್ ಎಂಬುವವನ್ನು ಈ ಹಿಂದೆ ಬಂಧಿಸಲಾಗಿದೆ. ಇನ್ನು ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್‌ಪಿ ಶ್ರೀಧರ್ ಕೆ. ಪೂಜಾರ್‌ ಅವರ ವಿರುದ್ಧ ಘೋಷಿತ ಆರೋಪಿ ಆದೇಶವನ್ನು ಮೇ 2ರಂದು ಹೈಕೋರ್ಟ್ ರದ್ದುಪಡಿಸಿತ್ತು.

ಇದನ್ನೂ ಓದಿ | Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

ಬಿಟ್‌ ಕಾಯಿನ್‌ ಹಗರಣ ನಡೆದು ಬಂದ ಹಾದಿ

  1. 2020ರಲ್ಲಿ ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿ ಸುಜಯ್ ಎಂಬಾತನನ್ನು ಬಂಧಿಸಿದ್ದರು.
  2. ಈತ ಡಾರ್ಕ್ ನೆಟ್ ನಲ್ಲಿ ಬಿಟ್ ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಮಾಡಿದ್ದ ಮಾಹಿತಿ ಪಡೆದು ಜಾಲಾಡಿದಾಗ ಬಿಟ್‌ ಕಾಯಿನ್‌ ರೂವಾರಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ ಸಿಕ್ಕಿಬಿದ್ದಿದ್ದ.
  3. ಶ್ರೀಕಿ ಆ್ಯಂಡ್ ಗ್ಯಾಂಗ್‌ ಸರ್ಕಾರಿ ವೆಬ್ ಸೈಟ್ ಸೇರಿದಂತೆ ಆನ್ ಲೈನ್ ಗೇಮಿಂಗ್ ಆ್ಯಪ್ ಗಳನ್ನು ಹ್ಯಾಕ್‌ ಮಾಡಿ ಕೋಟ್ಯಂತರ ರೂಪಾಯಿ ದೋಚಿದ್ದ.
  4. ಅಕ್ರಮ ಸಂಪಾದನೆ ಮಾಡಿರುವ ಬಗ್ಗೆ ಹೊರಬಂದ ಬೆನ್ನಲೇ‌ ಪ್ರಕರಣವನ್ನ ಸಿಸಿಬಿಗೆ ಹಸ್ತಾಂತರಿಸಲಾಗಿತ್ತು. ಸಿಸಿಬಿ ತನಿಖೆ ವೇಳೆ ದೊಡ್ಡ ಪ್ರಮಾಣದಲ್ಲಿ ವಂಚಿಸಿರುವುದಾಗಿ ತಿಳಿದುಬಂದಿತ್ತು.
  5. ಪ್ರಕರಣದ ಹಿಂದೆ ಹಿಂದಿನ ಸರ್ಕಾರದ ಕೆಲ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಆರೋಪಿಸಿತ್ತು.
  6. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಟ್ ಕಾಯಿನ್ ಪ್ರಕರಣವನ್ನ ಮರುತನಿಖೆ ನಡೆಸಲು ಕಳೆದ ವರ್ಷ ಜುಲೈನಲ್ಲಿ ಎಸ್ಐಟಿ ರಚಿಸಿತ್ತು.
  7. ಹಿರಿಯ ಐಪಿಎಸ್ ಮನೀಶ್‌ ಕರ್ಬೀಕರ್ ನೇತೃತ್ವದ ತಂಡ ಶ್ರೀಕಿ ಸೇರಿದಂತೆ‌ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಿತ್ತು ಹಾಗೂ ಆಗ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರನ್ನ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿತ್ತು.
  8. ಉದ್ದೇಶಪೂರ್ವಕವಾಗಿ ಸಾಕ್ಷ್ಯ ನಾಶಪಡಿಸಿರುವ ಬಗ್ಗೆ ಮಾಹಿತಿ ಇದ್ದು, ವಶಕ್ಕೆ ಪಡೆದ ಐವರು ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
  9. ಡಿವೈಎಸ್‌ಪಿ ಶ್ರೀಧರ್ ಕೆ. ಪೂಜಾರ್‌ ಅವರ ವಿರುದ್ಧ ಘೋಷಿತ ಆರೋಪಿ ಆದೇಶವನ್ನು ಮೇ 2ರಂದು ಹೈಕೋರ್ಟ್ ರದ್ದುಪಡಿಸಿತ್ತು.
Continue Reading
Advertisement
Gold Smuggling
ದೇಶ8 mins ago

Gold Smuggling: ಶಶಿ ತರೂರ್‌ ಪಿಎ ಅರೆಸ್ಟ್‌- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ನಾಯಕನಿಗೆ ತೀವ್ರ ಮುಜುಗರ

Firecracker Explosion
ದೇಶ10 mins ago

Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Raitha Siri Yojana
ಪ್ರಮುಖ ಸುದ್ದಿ36 mins ago

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

Nosebleeds In Summer
ಆರೋಗ್ಯ1 hour ago

Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

Karnataka Weather
ಕರ್ನಾಟಕ2 hours ago

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Hair Growth Tips
ಆರೋಗ್ಯ2 hours ago

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

Dina Bhavishya
ಭವಿಷ್ಯ3 hours ago

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Girlfriend
ದೇಶ8 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ9 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ10 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌