ಬೆಂಗಳೂರು: ಆಟೋ ಚಾಲಕರು ಇಂದು ಸಾರಿಗೆ ಇಲಾಖೆಯ ವಿರುದ್ಧ ವಿಧಾನಸೌಧ ಚಲೋ ಹೋರಾಟ ನಡೆಸಲು ಮುಂದಾಗಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಲು ಹಾಗೂ ಬೌನ್ಸ್ ಎಲೆಕ್ಟ್ರಿಕ್ ಬೈಕ್‌ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರ ಮುಷ್ಕರ ನಡೆಯಲಿದೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿರುವ ಆಟೋ ಚಾಲಕರು ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಪ್ಲಾನ್ ಮಾಡಿದ್ದಾರೆ. ಆಟೋ ಮುಷ್ಕರಕ್ಕೆ 21 ಆಟೋ ಸಂಘಟನೆಗಳು ಬೆಂಬಲ ಸೂಚಿಸಿವೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವಿವಿಧ ಯೂನಿಯನ್‌ಗಳಿಂದ 10 ಸಾವಿರ ಜನ ಭಾಗಿಯಾಗುವ ನಿರೀಕ್ಷೆಯಿದ್ದು, ಕಾಲ್ನಡಿಗೆ ಮೂಲಕ ವಿಧಾನಸೌಧದತ್ತ ತೆರಳಲಿದ್ದಾರೆ. 11 ಗಂಟೆ ಬಳಿಕ ವಿಧಾನಸೌಧಕ್ಕೆ ರ‍್ಯಾಲಿ ಆರಂಭವಾಗಲಿದೆ. ಸದ್ಯ ಫ್ರೀಡಂ ಪಾರ್ಕ್ ಬಳಿ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳುವ ಹಾಗಾಗಿದೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ನಿಷೇಧಿಸಬೇಕು ಹಾಗೂ ಬೌನ್ಸ್ ಎಲೆಕ್ಟ್ರಿಕ್ ಬೈಕ್‌ಗೆ ನೀಡಿರುವ ಅನುಮತಿ ವಾಪಸ್ ಪಡೆಯಬೇಕು ಎಂಬುದು ಆಟೋ ಚಾಲಕರ ಬೇಡಿಕೆಗಳಾಗಿವೆ.
ಇದನ್ನೂ ಓದಿ | Ola, uber tariff | ಆ್ಯಪ್ ಆಧರಿತ ಆಟೋರಿಕ್ಷಾ ಸೇವೆಗಳ ದರದ ಬಗ್ಗೆ ನವೆಂಬರ್ 25ರೊಳಗೆ ಅಂತಿಮ ನಿರ್ಧಾರ