Site icon Vistara News

Auto Strike: ಬೈಕ್‌ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯ: ಇಂದು ಆಟೋ ಚಾಲಕರ ಬೃಹತ್‌ ಮುಷ್ಕರ

auto strike

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಳಿಕ ಇದೀಗ ಆಟೋ ಚಾಲಕರ ಮುಷ್ಕರದ ಸರದಿ. ನಗರದಲ್ಲಿ ಬೈಕ್‌ ಟ್ಯಾಕ್ಸಿಗಳ ಸಂಚಾರ ವಿರೋಧಿಸಿ ರಿಕ್ಷಾ ಚಾಲಕರು ಇಂದು ಮುಷ್ಕರ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ರಿಕ್ಷಾ ಚಾಲಕರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಬೈಕ್ ಟ್ಯಾಕ್ಸಿ ವಿಚಾರ ಮುಂದಿಟ್ಟುಕೊಂಡು ಹಲವು ಬಾರಿ ಆಟೋ ಚಾಲಕರು ಸರ್ಕಾರದ ಗಮನ ಸೆಳೆದಿದ್ದಾರೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ಈ ಬಾರಿ ನಿರ್ಣಾಯಕ ಹೋರಾಟಕ್ಕೆ ಅವರು ಮುಂದಾಗಿದ್ದಾರೆ. ದೆಹಲಿ, ಮಹಾರಾಷ್ಟ್ರ, ತೆಲಂಗಾಣ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಬೇಕು, ಚುನಾವಣೆಗೂ ಮುನ್ನವೇ ಈ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಬೆಂಗಳೂರು ಆಟೋ ರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಬೆಳಗ್ಗೆ 11.30ಕ್ಕೆ ಕೆಎಸ್​ಆರ್​ ರೈಲ್ವೇ ನಿಲ್ದಾಣದಿಂದ ಮೆರವಣಿಗೆಯಲ್ಲಿ ಹೊರಟು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್‌ ತನಕ ಬೃಹತ್ ಮೆರವಣಿಗೆ ನಡೆಸಿ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್​ ಕೋರ್ಸ್​​ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಆಟೋ ಚಾಲಕರ ಬೃಹತ್​ ಪ್ರತಿಭಟನೆಗೆ 21 ಆಟೋ ಚಾಲಕರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ನಗರಾದ್ಯಂತ 2 ಲಕ್ಷಕ್ಕೂ ಅಧಿಕ ಆಟೋ ಚಾಲಕರು ಪ್ರತಿಭಟನೆಯಲ್ಲಿ ಭಾಗಿ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ: Auto Strike In Bangalore | ಬಾಡಿಗೆ ಬೈಕ್‌ ಸೇವೆಗೆ ವಿರೋಧ; ರಾಜಧಾನಿಯಲ್ಲಿ ಬೀದಿಗಿಳಿದ ಆಟೋ ಚಾಲಕರು

Exit mobile version