Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ? Vistara News

ಕರ್ನಾಟಕ

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

Bangalore Bandh: ಕಾವೇರಿ ನೀರು ಬಿಡುಗಡೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರು ಮತ್ತು ನಾಯಕರನ್ನು ಬಂಧಿಸಿದ್ದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ ಎಂದು ಕೇಳಿದ್ದಾರೆ.

VISTARANEWS.COM


on

HD Kumaraswamy Bandh
ಹೋರಾಟಗಾರರನ್ನು ಬಂಧಿಸಿದ್ದಕ್ಕೆ ಕುಮಾರಸ್ವಾಮಿ ಆಕ್ರೋಶ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರುದ್ಧ (Cauvery Water Dispute) ಬೆಂಗಳೂರು ಬಂದ್‌ಗೆ (Bangalore Bandh) ಕರೆ ನೀಡಿದವರು ಮತ್ತು ಬೆಂಬಲ ನೀಡಿದ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸುತ್ತಿರುವ (Protesters and Leaders deatained) ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕೆಂಡಾಮಂಡಲರಾಗಿದ್ದಾರೆ.

ಮೇಕೆದಾಟು ಪಾದಯಾತ್ರೆ ಮಾಡಿದವರು ಈಗ ಕಾವೇರಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಇದು ಕನ್ನಡಿಗರ ಸರ್ಕಾರವೋ, ಸ್ಟಾಲಿನ್‌ನ ಬಾಡಿಗೆ ಸರ್ಕಾರವೋ? ಕಾಂಗ್ರೆಸ್‌ ಡಿಎಂಕೆಯ ಬಿ ಟೀಮಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು_ಬಂದ್‌ ಕಾವೇರಿ_ನಮ್ಮದು ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಒಂದು ನ್ಯಾಯವೇ

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?- ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ಮಾಡಬಾರದೇ?

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?

ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್‌ ಬಂದ್‌ ಬಿಸಿ, ಬೇಕಿತ್ತಾ ಎರಡೆರಡು ಬಂದ್‌?

ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಿ ಎಂದ ಎಚ್‌ಡಿಕೆ

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

ರಾತ್ರೋರಾತ್ರಿ 150ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಹಿಂದೆ ಬಂದ್‌ ವೇಳೆ ಗಲಾಟೆಗೆ ಕಾರಣರಾಗಿದ್ದ ಕೆಲವು ನಾಯಕರು ಮತ್ತು ರೌಡಿ ಶೀಟರ್‌ಗಳನ್ನು ಪೊಲೀಸರು ಬಂಧಿಸಿದ್ದರು.

ʻʻಹಳೆ ಪ್ರಕರಣಗಳಲ್ಲಿ ಇನ್ವಾಲ್ ಆಗಿದ್ದ ರೌಡಿಶೀಟರ್‌ಗಳನ್ನು ಕಸ್ಟಡಿಗೆ ತಗೊಂಡಿದ್ದೇವೆ. ನಿನ್ನೆ ರಾತ್ರಿನೇ ಹಳೆ ಕೇಸ್ ಗಳಲ್ಲಿ ಭಾಗಿಯಾಗಿದ್ದ 150 ಜನರನ್ನ ವಶಕ್ಕೆ ಪಡೆದಿದ್ದೇವೆ. ಅದು ಇವತ್ತು ತುಂಬಾನೇ ಹೆಲ್ಪ್ ಆಗಿದೆ. ಬೆಳಗ್ಗೆ 4 ಘಂಟೆಯಿಂದಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಒಂದಷ್ಟು ಲೀಡರ್‌ಗಳನ್ನು ವಶಕ್ಕೆ ಪಡೆದಿದ್ದೇವೆ. ಎಲ್ಲಾ ರೀತಿಯ ಭದ್ರತೆ ವಹಿಸಿದ್ದೇವೆʼʼ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಜಲಸಂರಕ್ಷಣಾ ಸಮಿತಿಯ ಕುರುಬೂರು ಶಾಂತ ಕುಮಾರ್‌ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಎಲ್ಲ ನಾಯಕರನ್ನು ಫ್ರೀಡಂ ಪಾರ್ಕ್‌ಗೆ ತಂದು ಬಿಡಲಾಗುತ್ತಿದ್ದು, ಅಲ್ಲಿಂದ ಹೊರಗೆ ಹೋಗಲು ಬಿಡುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಮರಾಠ ಮಹಾಮೇಳಾವ್‌ ನಡೆಸುವಂತಿಲ್ಲ; ಎಂಇಎಸ್‌ಗೆ ಟಕ್ಕರ್‌ ಕೊಟ್ಟ ಜಿಲ್ಲಾಡಳಿತ

Assembly Session : ಬೆಳಗಾವಿ ಜಿಲ್ಲಾಡಳಿತದ ನಿಷೇಧಾಜ್ಞೆ ಮಧ್ಯೆಯೂ ಎಂಇಎಸ್‌ (MES) ಕಾರ್ಯಕರ್ತರು ಮಹಾಮೇಳಾವ್ ಸಿದ್ಧತೆಗೆ ಮುಂದಾಗಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

VISTARANEWS.COM


on

By

Maratha Mahamela cannot be held Belagavi district administration denies permission for MES
Koo

ಬೆಳಗಾವಿ: ಬೆಳಗಾವಿ ವಿಧಾನ ಮಂಡಲ ಅಧಿವೇಶನವು (Assembly Session) ಡಿಸೆಂಬರ್‌ 4ರಂದು ಪ್ರಾರಂಭವಾಗುತ್ತಿದೆ. ಅಧಿವೇಶನಕ್ಕೆ ಪ್ರತಿಯಾಗಿ ಮರಾಠ ಮಹಾಮೇಳಾವ್ ಸಿದ್ಧತೆಯಲ್ಲಿ ತೊಡಗಿದ್ದ ಎಂಇಎಸ್ (ಬೆಳಗಾವಿ ಮಹಾರಾಷ್ಟ್ರ ಏಕೀಕರಣ ಸಮಿತಿ) ಗೆ ಜಿಲ್ಲಾಡಳಿತ ಬಿಗ್ ಶಾಕ್ ನೀಡಿದೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮರಾಠ ಮಹಾಮೇಳಾವ್‌ ಆಯೋಜನೆಗೆ ಅನುಮತಿಯನ್ನು ಜಿಲ್ಲಾಡಳಿತ ನಿರಾಕರಿಸಿದೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಬೆಳಗಾವಿಯ ನಾಲ್ಕು ಕಡೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: Assembly Session : ಈ ಅಧಿವೇಶನದಲ್ಲಿ 2 ಭಾಷೆಗೆ ಪ್ರಾತಿನಿಧ್ಯ; ಭಾಷಾ ಪಟ್ಟಿಗೆ ತುಳು, ಬಂಜಾರ ಸೇರ್ಪಡೆ?

ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲೇಲೇ ಮೈದಾನ, ಕ್ಯಾಂಪ್ ಪೊಲೀಸ್ ಠಾಣೆಯ ಧರ್ಮವೀರ ಸಂಭಾಜಿ ಸರ್ಕಲ್, ಮಾರ್ಕೆಟ್‌ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾಜಿ ಉದ್ಯಾನವನದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಡಿಸೆಂಬರ್‌ 4ರ ಬೆಳಗ್ಗೆ 6 ಗಂಟೆಯಿಂದ ಡಿ. 5ರ ಬೆಳಗ್ಗೆ 6ರವೆರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದ್ದಾರೆ.

ನಿಷೇದಾಜ್ಞೆ ಸಮಯದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಅಥವಾ ಸಭೆ ಸಮಾರಂಭಕ್ಕೆ ನಿಷೇಧ ಹೇರಲಾಗಿದೆ. ಮಹಾಮೇಳಾವ ಆಯೋಜನೆಗೆ ಅನುಮತಿಯನ್ನು ನಿರಾಕರಿಸಲಾಗಿದೆ. ಆದರೆ ಈಗಾಗಲೇ ಪೂರ್ವಾನುಮತಿ ಪಡೆದಿರುವ ಬೇರೆ ಸಂಘಟನೆಗಳಿಗೆ ಮಾತ್ರ ಈ ಆದೇಶ ಅನ್ವಯಿಸುವುದಿಲ್ಲ.

ನಿರ್ಬಂಧದ ನಡುವೆಯು ಮಹಾಮೇಳಾವ್ ಸಿದ್ಧತೆಗೆ ಬೆಳಗಾವಿ ಟಿಳಕವಾಡಿಯ ವ್ಯಾಕ್ಸಿನ ಡಿಪೋಗೆ ಎಂಇಎಸ್‌ ಕಾರ್ಯಕರ್ತರು ಆಗಮಿಸಿದ್ದಾರೆ. ಎಂಇಎಸ್ ಕಾರ್ಯಕರ್ತರ ಆಗಮನ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಎಸಿಪಿಗಳಿಂದ ಭದ್ರತೆ ನೀಡಲಾಗಿದೆ. ಎಸಿಪಿ ಅರುಣಕುಮಾರ ಕೋಳೂರ, ನಾರಾಯಣ ಭರಮನಿ, ರಾಮನಗೌಡಹಟ್ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Tulu Language : ತುಳುಗೆ ಸಿಗಲಿದೆಯೇ ಭಾಷಾ ಪ್ರಾತನಿಧ್ಯ? ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ!

Tulu Language : ಒಂದು ಭಾಷೆಯನ್ನು ಭಾಷಾ ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆಯಾ? ಇಲ್ಲದಿದ್ದರೆ ರಾಜ್ಯ ಸರ್ಕಾರ ಏನು ಮಾಡಬಹುದು ಎಂಬ ಪ್ರಶ್ನೆಗಳು ಮೂಡಬಹುದು. ಆ ಎಲ್ಲದಕ್ಕೂ ಇಲ್ಲಿ ವಿವರಣೆ ನೀಡಲಾಗಿದೆ.

VISTARANEWS.COM


on

Tulu Language
Koo

ಬೆಂಗಳೂರು: ಇದೇ ಡಿಸೆಂಬರ್‌ 4ರಂದು ವಿಧಾನ ಮಂಡಲ ಅಧಿವೇಶನ (Assembly Session) ನಡೆಯುತ್ತಲಿದ್ದು, ಹಲವು ಪ್ರಮುಖ ಯೋಜನೆಗಳು ಚರ್ಚೆಗೆ ಬರಲಿವೆ. ಈ ವೇಳೆ ಭಾಷಾ ಪ್ರಾತಿನಿಧ್ಯ (Language Representation) ವಿಚಾರವು ಮಹತ್ವವನ್ನು ಪಡೆದುಕೊಂಡಿದೆ. ಎರಡು ಭಾಷೆಗಳಿಗೆ ಪ್ರಾತಿನಿಧ್ಯ ಕೊಡುವ ನಿಟ್ಟಿನಲ್ಲಿ ಸರ್ಕಾರದ ಒಳಗೆ ಚರ್ಚೆಗಳು ನಡೆದಿವೆ ಎಂದು ತಿಳಿದು ಬಂದಿದೆ. ಅಂದರೆ, ತುಳು (Tulu Language) ಹಾಗೂ ಬಂಜಾರ ಭಾಷೆಗಳನ್ನು (Banjara language) ಈ ಪಟ್ಟಿಗೆ ಸೇರಿಸುವಂತೆ ಈ ಭಾಷಾ ಹಿನ್ನೆಲೆಯುಳ್ಳ ಶಾಸಕರು ಅಧಿವೇಶನದಲ್ಲಿ ಪ್ರಸ್ತಾಪಿಸಲಿದ್ದಾರೆ.

ಇನ್ನು ಸರ್ಕಾರ ಸಹ ಈ ನಿಟ್ಟಿನಲ್ಲಿ ಉತ್ಸುಕವಾಗಿದೆ. ಆದರೆ, ಯಾವುದೇ ಒಂದು ಭಾಷೆಯನ್ನು ಭಾಷಾ ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆಯಾ? ಇಲ್ಲದಿದ್ದರೆ ರಾಜ್ಯ ಸರ್ಕಾರ ಏನು ಮಾಡಬಹುದು ಎಂಬ ಪ್ರಶ್ನೆಗಳು ಮೂಡಬಹುದು. ಆ ಎಲ್ಲದಕ್ಕೂ ಇಲ್ಲಿ ವಿವರಣೆ ನೀಡಲಾಗಿದೆ.

ತುಳು ಮತ್ತು ಬಂಜಾರ ಭಾಷೆಗಳನ್ನು (Tulu and Banjara language) ಭಾಷಾ ಪಟ್ಟಿಗೆ ಸೇರಿಸುವಂತೆ ಒತ್ತಾಯಗಳು ಕೇಳಿಬಂದಿವೆ. ತುಳು ನಾಡಿನ ಜನರು ಮತ್ತು ಜನ ಪ್ರತಿನಿಧಿಗಳಿಂದ ಒತ್ತಡಗಳು ಹೆಚ್ಚಾಗಿವೆ. ಅಲ್ಲದೆ, ಈಗಾಗಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ಸಾಹ ತೋರಿದ್ದಾರೆ. ಹೀಗಾಗಿ ಈ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಏನೆಲ್ಲ ಆಗಬೇಕು?

ತುಳು ಮತ್ತು ಬಂಜಾರ ಸಹಿತ ಯಾವುದೇ ಭಾಷೆಯನ್ನು ಭಾಷಾ ಪಟ್ಟಿಗೆ ಸೇರಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕೆಂದರೆ ಮೊದಲು ಆ ಭಾಷೆಯ ಬಗ್ಗೆ ಸರ್ಕಾರದ ಮಟ್ಟದಲ್ಲಿ ಒಂದು ವರದಿ ಇರಬೇಕು. ಆ ಭಾಷೆ ಬೆಳೆದು ಬಂದ ಹಾದಿ, ಇತಿಹಾಸ, ಮಾತನಾಡುವವರ ಜನಸಂಖ್ಯೆ ಹಾಗೂ ಯಾವ ಪ್ರದೇಶದಲ್ಲಿ ಈ ಭಾಷೆ ಮಾತನಾಡುತ್ತಾರೆ ಎಂಬ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾಹಿತಿ ಇರಬೇಕು.

ತುಳು ಭಾಷೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಮಾಹಿತಿ ಇದೆ. ಕಳೆದ ಸರ್ಕಾರದಲ್ಲಿ ಮೋಹನ್ ಆಳ್ವಾ ಕಮಿಟಿ ನೀಡಿರುವ ರಿಪೋರ್ಟ್ (Mohan Alva Committee Report) ಇದೆ. ಸದನದಲ್ಲಿ ಚರ್ಚೆ ಮಾಡಿ ಇದನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಮಾಡುವಂತೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಬಳಿಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಧಾರಕ್ಕೆ ಸದನದಲ್ಲಿ ಬರಲಾಗುವುದು.

ಕೇಂದ್ರ ಸರ್ಕಾರ ಏನು ಮಾಡುತ್ತದೆ?

ಭಾಷಾ ಕಾಯಿದೆ ಪ್ರಕಾರ ಒಂದು ಕಮಿಟಿ ರಚನೆ ಮಾಡಬಹುದು. ಇಲ್ಲವೇ ರಾಜ್ಯ ಸರ್ಕಾರ ಕಳುಹಿಸಿ ಕೊಟ್ಟ ಮಾಹಿತಿಯನ್ನು ಅಧ್ಯಯನ ಮಾಡಿ ಬಳಿಕ ಹೆಚ್ಚುವರಿ ಮಾಹಿತಿ ಬೇಕಿದ್ದರೆ ಸಂಗ್ರಹ ಮಾಡಲು ಕಮಿಟಿ ರಚನೆ ಮಾಡಬಹುದು. ಬಳಿಕ ಇದನ್ನು ಭಾಷಾ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಮಾನದಂಡಗಳನ್ನು ನೋಡಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬಹುದು.

ಏನೆಲ್ಲ ಪರಿಶೀಲನೆ ಮಾಡುತ್ತಾರೆ?

ಕನಿಷ್ಠ ಐದು ಲಕ್ಷಕ್ಕಿಂತಲೂ ಹೆಚ್ಚು ಜನ ಆ ಭಾಷೆಯನ್ನು ಬಳಕೆ ಮಾಡುತ್ತಿರಬೇಕು. ಅಂದರೆ ಮಾತನಾಡುತ್ತಿರಬೇಕು. ಇನ್ನು ಆ ಭಾಷೆಯು ಕೇವಲ ಒಂದು ಪ್ರದೇಶಕ್ಕಷ್ಟೇ ಸೀಮಿತವಾಗಿದೆಯೇ? ಎಲ್ಲೆಲ್ಲಿ ಬಳಕೆಯಾಗುತ್ತಿದೆ? ಇದರ ಇತಿಹಾಸ ಏನು? ಎಷ್ಟು ತಲೆಮಾರುಗಳಿಂದ ಆ ಭಾಷೆಯನ್ನು ಮಾತನಾಡುತ್ತಿದ್ದಾರೆ? ಎಂಬ ಬಗ್ಗೆ ಮಾಹಿತಿ ಪಡೆದು ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. ಇನ್ನು ರಾಜ್ಯದ ಅಧಿಕೃತ ಭಾಷೆ ಇವರಿಗೆ ಬರುವುದಿಲ್ಲವೇ ಎಂಬುದನ್ನು ಸಹ ಈ ವೇಳೆ ಗಮನಹರಿಸಲಾಗುತ್ತಿದೆ.

ಇದನ್ನೂ ಓದಿ : Panic button : ಇಂದಿನಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ; ಅಳವಡಿಸಲು ಆಗುವ ಖರ್ಚೆಷ್ಟು?

ಕೇಂದ್ರದಿಂದ ರಚನೆಯಾದ ಕಮಿಟಿಯು ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಆ ಶಿಫಾರಸಿನ ಮೇಲೆ ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಚರ್ಚೆ ಮಾಡುತ್ತದೆ. ಅಲ್ಲಿ ಅದರ ಮಹತ್ವದ ಬಗ್ಗೆ ಒಪ್ಪಿಗೆಯಾದಲ್ಲಿ ಭಾಷಾ ಪಟ್ಟಿಯಲ್ಲಿ ಸೇರಿಸಲು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

Continue Reading

ಕರ್ನಾಟಕ

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Ration Card : ಆರು ತಿಂಗಳಿನಿಂದ ಪಡಿತರವನ್ನು ಪಡೆಯದೇ ಇರುವವರ ಕಾರ್ಡ್‌ ರದ್ದತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿತ್ತು. ಈಗ ಪಡಿತರ ಕಾರ್ಡ್‌ ರದ್ದಾಗುವ ಭೀತಿಯನ್ನು ಎದುರಿಸುತ್ತಿರುವವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಂಥವರ ಕಾರ್ಡ್‌ ರದ್ದಾಗುವುದಿಲ್ಲ, ಬದಲಾಗಿ ಅಮಾನತು ಸ್ಥಿತಿಯಲ್ಲಿರುತ್ತದೆ.

VISTARANEWS.COM


on

Ration card not cancelled and Vidhanasoudha
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಯನ್ನು (Congress Guarantee Scheme) ಜಾರಿ ಮಾಡಿದೆ. ಅಲ್ಲದೆ, ಇವುಗಳಲ್ಲಿ ಎರಡು ಯೋಜನೆಯಾದ ಗೃಹ ಲಕ್ಷ್ಮಿ (Gruha Lakshmi scheme) ಹಾಗೂ ಅನ್ನಭಾಗ್ಯಕ್ಕೆ (Annabhagya scheme) ಪಡಿತರ ಚೀಟಿ (ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ – APL Card and BPL Card) ನೇರ ಸಂಬಂಧವನ್ನು ಹೊಂದಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿ ಕೆಜಿ ಅಕ್ಕಿಗೆ ತಲಾ 30 ರೂಪಾಯಿಯಂತೆ ಒಬ್ಬರಿಗೆ 170 ರೂಪಾಯಿಯನ್ನು ರಾಜ್ಯ ಸರ್ಕಾರ ಜಮೆ ಮಾಡುತ್ತಾ ಬಂದಿದೆ. ಇವರಲ್ಲಿ ಬಹಳಷ್ಟು ಮಂದಿ ರೇಷನ್‌ ಕಾರ್ಡ್‌ನಲ್ಲಿ (Ration Card) ಸಮಸ್ಯೆ ಇದ್ದರಿಂದ ಹಣ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ತಿದ್ದುಪಡಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ. ಇದರಿಂದ ಸರ್ಕಾರಕ್ಕೆ ಹೊರೆ ಮತ್ತಷ್ಟು ಹೆಚ್ಚಳವಾಗಲಿದೆ. ಹೀಗಾಗಿ ಆರು ತಿಂಗಳಿನಿಂದ ಪಡಿತರವನ್ನು ಪಡೆಯದೇ ಇರುವವರ ಕಾರ್ಡ್‌ ರದ್ದತಿ ಪ್ರಕ್ರಿಯೆಗೂ ಮುಂದಾಗಿತ್ತು. ಈಗ ಪಡಿತರ ಕಾರ್ಡ್‌ ರದ್ದಾಗುವ ಭೀತಿಯನ್ನು ಎದುರಿಸುತ್ತಿರುವವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಂಥವರ ಕಾರ್ಡ್‌ ರದ್ದಾಗುವುದಿಲ್ಲ, ಬದಲಾಗಿ ಅಮಾನತು ಸ್ಥಿತಿಯಲ್ಲಿರುತ್ತದೆ.

ಹೌದು. ಅಮಾನತು ಸ್ಥಿತಿಯಲ್ಲಿದ್ದರೆ ಆಹಾರ ಇಲಾಖೆಗೆ ಯಾವಾಗ ಬೇಕಾದರೂ ಹೋಗಿ ಸೂಕ್ತ ಕಾರಣ ನೀಡಿ ಕಾರ್ಡ್‌ ಅನ್ನು ಚಾಲ್ತಿಯಲ್ಲಿಟ್ಟುಕೊಳ್ಳಬಹುದಾಗಿದೆ. ಈಗಾಗಲೇ 2023ರ ಸೆ. 29 ರನ್ವಯ 2.96 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ ಆದೇಶ ಮಾಡಲಾಗಿದೆ. ಹಾಗಾಗಿ ಈ ಆದೇಶದನ್ವಯ ಮಾರ್ಚ್ 2023ರ ವರೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಿದ್ದ ಅರ್ಜಿಗಳಲ್ಲಿ ಅರ್ಹ ಅರ್ಜಿಗಳಿಗೆ ಪಡಿತರ ಚೀಟಿ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜತೆ ಜತೆಯಲ್ಲಿ 6 ತಿಂಗಳಿನಿಂದ ಪಡಿತರ ಧಾನ್ಯ ಪಡೆಯದಂತ ಕಾರ್ಡ್ ದಾರರನ್ನು ಪತ್ತೆ ಮಾಡಲು ಮುಂದಾಗಲಾಗಿದೆ.

ಅಮಾನತಿನಲ್ಲಿಡಲು ಸೂಚನೆ

ಏಕ ಸದಸ್ಯ ಪಡಿತರ ಚೀಟಿಗಳನ್ನು ಹೊರತು ಪಡಿಸಿ 6 ತಿಂಗಳಿನಿಂದ ನಿರಂತರವಾಗಿ ಪಡಿತರ ಪಡೆಯದೇ ಇರುವ ಪಡಿತರ ಚೀಟಿದಾರರನ್ನು ಗುರುತಿಸಿ ಅವರ ಮನೆಯ ಸ್ಥಳ ತನಿಖೆ ಮಾಡಿ, ಸ್ಥಳ ತನಿಖಾ ಸಮಯದಲ್ಲಿ 6 ತಿಂಗಳಿನಿಂದ ನಿರಂತರವಾಗಿ ಪಡಿತರ ಪಡೆಯದೇ ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಅಂತಹ ಪಡಿತರ ಚೀಟಿಗಳನ್ನು ಅಮಾನತಿನಲ್ಲಿಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: FDA SDA Recruitment : ಎಫ್‌ಡಿಎ, ಎಸ್‌ಡಿಎ ನೇಮಕಾತಿಗೆ ಅರ್ಜಿ ಯಾವಾಗ? ಕಾಯುತ್ತಿರುವ ಲಕ್ಷಾಂತರ ಆಕಾಂಕ್ಷಿಗಳು!

ಮತ್ತೆ ಆ್ಯಕ್ಟಿವ್‌ ಮಾಡಲು ಹೀಗೆ ಮಾಡಿ

ಒಂದು ವೇಳೆ ನೀವು 6 ತಿಂಗಳವರೆಗೆ ರೇಷನ್ ಪಡೆಯದೇ ಇದ್ದರೆ ನಿಮ್ಮ ರೇಷ್‌ ಕಾರ್ಡ್‌ ಅಮಾನತು ಸ್ಥಿತಿಯಲ್ಲಿರುತ್ತದೆ. ಇ ವೇಳೆ ಆಹಾರ ಇಲಾಖೆ ಸಿಬ್ಬಂದಿ ಸರ್ವೇಗೆಂದು ನಿಮ್ಮ ಮನೆಗೆ ಬಂದರೆ ಅಲ್ಲಿ ಯಾಕಾಗಿ ಇಷ್ಟು ದಿನ ಪಡಿತರವನ್ನು ಪಡೆದಿಲ್ಲ ಎಂಬ ಸಕಾರಣ ನೀಡಿ, ಮುಂದೆ ಪಡಿತರ ಪಡೆಯುವುದಾಗಿ ಮನವರಿಕೆ ಮಾಡಬಹುದು. ಇಲ್ಲವೇ ರೇಷನ್‌ ಕಾರ್ಡ್‌ ಮಳಿಗೆಗಳಿಗೆ ತೆರಳಿ ನಿಮ್ಮ ಬಯೋಮೆಟ್ರಿಕ್‌ ನೀಡಿ ಆಹಾರವನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Continue Reading

ಕರ್ನಾಟಕ

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

Bengaluru News : ಬೆಂಗಳೂರಲ್ಲಿ ವ್ಯಕ್ತಿಯೊಬ್ಬನ ಬರ್ಬರ (Murder case) ಹತ್ಯೆಯಾಗಿದೆ. ಹತ್ಯೆಗೈದು ಮೃತದೇಹವನ್ನು ಮೋರಿಯಲ್ಲಿ ಬೀಸಾಡಿ ಹೋಗಿದ್ದಾರೆ.

VISTARANEWS.COM


on

By

Crime Sense Murder Case
Koo

ಬೆಂಗಳೂರು: ವ್ಯಕ್ತಿಯನ್ನು ಕೊಲೆಗೈದು ಶವವನ್ನು ಮೋರಿಗೆ ಬಿಸಾಡಿ ಹಂತಕರು (Murder Case) ಪರಾರಿ ಆಗಿದ್ದಾರೆ. ಬೆಂಗಳೂರಿನ ಜಾಲಹಳ್ಳಿಯ ಹೆಚ್ಎಂಟಿ ರೋಡ್‌ನ ಮೋರಿಯಲ್ಲಿ ಶವ ಪತ್ತೆಯಾಗಿದೆ.

ವ್ಯಕ್ತಿಯ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆಯಲಾಗಿದೆ. ಪರಿಣಾಮ ತಲೆ ಹಿಂಭಾಗ ಕಿತ್ತು ಬಂದಿದೆ. ಹತ್ಯೆ ಬಳಿಕ ಶವವನ್ನು ಮೋರಿಗೆ ಎಸೆದು ಹಂತಕರು ಕಾಲ್ಕಿತ್ತಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯಾದವನ ಗುರುತು ಪತ್ತೆಯಾಗಿಲ್ಲ. ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತನ ಮಾಹಿತಿ ಪತ್ತೆ ಹಚ್ಚಲು ಮುಂದಾಗಿದ್ದು, ಹಂತಕರಿಗೆ ಹುಡುಕಾಟ ನಡೆಸಿದ್ದಾರೆ. ಇನ್ನೂ ಮೋರಿಯಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು

ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುವಾಗ ಯುವಕರ ನಡುವೆ ಜಗಳ ನಡೆದು, ಯುವಕನ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಬೀದರ್‌ನ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ನಿವಾಸಿ ಬಸವರಾಜ ಜಮಾದಾರ (30) ಹತ್ಯೆಯಾದವ.

ಕಿಟ್ಟಾ ಗ್ರಾಮದಲ್ಲಿ ಗೆಳೆಯನ ಮದುವೆ ಸಮಾರಂಭ ಇತ್ತು. ಈ ಮದುವೆಗೆ ಬಸವರಾಜ ಹೋಗಿದ್ದ. ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡಲೆಂದು ಈತ ಕಿಟ್ಟಾ ಗ್ರಾಮಕ್ಕೆ ತೆರಳಿದ್ದ. ಮೆರವಣಿಗೆಯಲ್ಲಿ ನೃತ್ಯ ಮಾಡುವಾಗ ಕಿಟ್ಟಾ ಗ್ರಾಮದ ಕೆಲ ಯುವಕರೊಂದಿಗೆ ಜಗಳ ನಡೆದಿದೆ. ಈ ನಡುವೆ ಸ್ಥಳೀಯರು ಮಧ್ಯ ಪ್ರವೇಶಿಸಿ ಎರಡು ಕಡೆಯವರನ್ನು ಸಮಾಧಾನಪಡಿಸಿ ಕಳಿಸಿದ್ದಾರೆ.

Youth killed in Bidar Vijayapura

ಇದನ್ನೂ ಓದಿ: Road Accident : ಪ್ರತ್ಯೇಕ ಕಡೆಗಳಲ್ಲಿ ಬಸ್‌ ಅಪಘಾತ; ನರಳಾಡಿದ ಪ್ರಯಾಣಿಕರು

ಆದರೆ ಅಷ್ಟಕ್ಕೆ ಸುಮ್ಮನಾಗದ ಕಿಟ್ಟಾ ಗ್ರಾಮದ ಯುವಕರು, ಬಸವರಾಜನನ್ನು ಮೆರವಣಿಗೆಯಿಂದ ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆ ಸಿಪಿಐ ಕೃಷ್ಣಕುಮಾರ ಪಾಟೀಲ, ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ಪೊಲೀಸ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲೆ ಮಾಡಿ ಪರಾರಿಯಾದ ಯುವಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ ನಗರದ ಕೆಎಚ್‌‌ಬಿ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ದಂಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಲನಗರ ಪಿಎಸ್‌ಐ ಮತ್ತು ಡಿವೈಎಸ್‌ಪಿ ಯಲಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಹೋಂ ಗಾರ್ಡ್ ಬಟ್ಟೆಯಲ್ಲಿ ತುಂಡಾಗಿ ಬಿದ್ದಿರುವ ಶವ ಪತ್ತೆಯಾಗಿದೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Maratha Mahamela cannot be held Belagavi district administration denies permission for MES
ಕರ್ನಾಟಕ4 mins ago

Assembly Session: ಮರಾಠ ಮಹಾಮೇಳಾವ್‌ ನಡೆಸುವಂತಿಲ್ಲ; ಎಂಇಎಸ್‌ಗೆ ಟಕ್ಕರ್‌ ಕೊಟ್ಟ ಜಿಲ್ಲಾಡಳಿತ

Tulu Language
ಕರ್ನಾಟಕ6 mins ago

Tulu Language : ತುಳುಗೆ ಸಿಗಲಿದೆಯೇ ಭಾಷಾ ಪ್ರಾತನಿಧ್ಯ? ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ!

Rajastan Elections: 10 reasons for BJP Win
ದೇಶ21 mins ago

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ

raman singh bhupesh baghel
ದೇಶ22 mins ago

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

Ration card not cancelled and Vidhanasoudha
ಕರ್ನಾಟಕ33 mins ago

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Sachin Tendulkar says he is super impressed by Vicky Kaushal
ಕ್ರಿಕೆಟ್42 mins ago

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Crime Sense Murder Case
ಕರ್ನಾಟಕ1 hour ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ1 hour ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ1 hour ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ8 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ20 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌