ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bangalore- Mysore Expressway) ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಮಿತಿ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ.
ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಇತ್ತೀಚಿಗೆ ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳುವ ಅಗತ್ಯವನ್ನು ಟ್ರಾಫಿಕ್ ಪೊಲೀಸರು ಕಂಡುಕೊಂಡಿದ್ದಾರೆ.
ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ 100 ಕಿ.ಮೀ ವೇಗ, ಕೆಲವೆಡೆ 80 ಕಿ.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ. ಆದರೆ ಗಂಟೆಗೆ 120 ಕಿ.ಮೀಗೂ ಹೆಚ್ಚು ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಇದರಿಂದಾಗಿ ಎಂಟ್ರಿ ಹಾಗೂ ಎಕ್ಸಿಟ್ ತಾಣಗಳಲ್ಲಿ ಅಪಘಾತಗಳು ಆಗುತ್ತಿವೆ.
ಅಪಘಾತಗಳನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗ ಮಿತಿಯನ್ನು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ. 100 ಕಿ.ಮೀಗಿಂತಲೂ ಅಧಿಕ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಪ್ರಕರಣ ಬುಕ್ ಮಾಡಲಾಗುತ್ತಿದೆ.
ಇದನ್ನೂ ಓದಿ: Bangalore- Mysore Expressway: ದಶಪಥದಲ್ಲಿ ಇಂದಿನಿಂದ ಎರಡನೇ ಟೋಲ್ ವಸೂಲಿ; ಚಡ್ಡಿ ಚಳವಳಿಗೆ ಸಿದ್ಧತೆ