ಬೆಂಗಳೂರು: ನಗರದಲ್ಲಿ ಟ್ರಾಫಿಕ್ ದಟ್ಟಣೆ (Bangalore Traffic) ಉಂಟಾಗುವ ಪ್ರಮುಖ ನಾಲ್ಕು ಸ್ಥಳಗಳಿಗೆ ಪೊಲೀಸ್ ಅಧಿಕಾರಿಗಳು ಮಂಗಳವಾರ (ಜೂನ್ 28) ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಚಾರ ದಟ್ಟಣೆ ಕಡಿಮೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಸಮ್ಮಖದಲ್ಲಿ ಸಭೆ ನಡೆಸಲಾಯಿತು ಎಂದು ಸಂಚಾರ ಪೊಲೀಸ್ ಆಯುಕ್ತ ರವಿಕಾಂತೇ ಗೌಡ ಅವರು ಮಾಹಿತಿ ನೀಡಿದ್ದಾರೆ.
ಈ ಸಭೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ದೀರ್ಘವಾದ ಚರ್ಚೆ ನಡೆಸಲಾಗಿದೆ. ಸಂಚಾರ ನಿಯಮಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಅನಕ ಸ್ಥಳಗಳಲ್ಲಿ ರಸ್ತೆ ಹಾಳಾಗಿರುವುದು ವರದಿಯಾಗಿದೆ. ಹೀಗಾಗಿ ಎಲ್ಲೆಲ್ಲಿ ರಸ್ತೆ ಸರಿಯಾಗಬೇಕು ಎನ್ನುವುದನ್ನೂ ಬಿಬಿಎಂಪಿಗೆ ಮಾಹಿತಿ ನೀಡಲಾಗಿದೆ ಎಂದು ರವಿಕಾಂತೇ ಗೌಡ ತಿಳಿಸಿದ್ದಾರೆ.
50 ಮುಖ್ಯ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿಪಡಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಪುಟ್‌ಪಾತ್ ಬಳಸಿ ಪಾರ್ಕಿಂಗ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರವಿಕಾಂತೇ ಗೌಡರು ಹೇಳಿದರು.
ಬೆಂಗಳೂರಿನಲ್ಲಿ ಅತ್ಯಂತ ಹೆಚ್ಚು ಟ್ರಾಫಿಕ್ ದಟ್ಟಣೆ ಉಂಟಾಗುವ 10 ಪ್ರಮುಖ ಪ್ರದೇಶಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನಾಲ್ಕು ಪ್ರಮುಖ ಜಂಕ್ಷನ್‌ಗಳಾದ ಗೊರಗುಂಟೆಪಾಳ್ಯ, ಹೆಬ್ಬಾಳ, ಕೆ.ಆರ್.ಪುರ ಹಾಗೂ ಸಿಲ್ಕ್ ಬೋರ್ಡ್ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಈ ಪ್ರದೇಶಗಳಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವ ಕುರಿತು ಚರ್ಚೆ ನಡೆಸಲಿದ್ದೇವೆ ಎಂದು ರವಿಕಾಂತೇ ಗೌಡರು ತಿಳಿಸಿದರು.
ಇದನ್ನೂ ಓದಿ: Bangalore Traffic | ಪೊಲೀಸರು ಎಲ್ಲೆಂದರಲ್ಲಿ ವಾಹನ ಅಡ್ಡಹಾಕುವಂತಿಲ್ಲ: ಡಿಜಿ ಪ್ರವೀಣ್ ಸೂದ್ ಟ್ವೀಟ್