Banglore traffic | ಟ್ರಾಫಿಕ್‌ ರೂಲ್ಸ್ ಮುರಿಯುವವರೇ ಹುಷಾರ್‌, ಬಂದಿದೆ ಹದ್ದಿನ ಕಣ್ಣು ! - Vistara News

ಪ್ರಮುಖ ಸುದ್ದಿ

Banglore traffic | ಟ್ರಾಫಿಕ್‌ ರೂಲ್ಸ್ ಮುರಿಯುವವರೇ ಹುಷಾರ್‌, ಬಂದಿದೆ ಹದ್ದಿನ ಕಣ್ಣು !

ಇನ್ನು ಮುಂದೆ ಸಿಲಿಕಾನ್ ಸಿಟಿಯ ಸಿಗ್ನಲ್‌ಗಳಲ್ಲಿ ಟ್ರಾಫಿಕ್‌ ಪೊಲೀಸ್‌ ಇಲ್ಲದಿದ್ದರೂ, ನಿಯಮ ಉಲ್ಲಂಘಿಸುವವರನ್ನು ಹಿಡಿಯಲು ಹೊಸ ವ್ಯವಸ್ಥೆ ಅಳವಡಿಸಲಾಗುತ್ತಿದೆ.

VISTARANEWS.COM


on

traffic signal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇನ್ನು ಮುಂದೆ ಸಿಲಿಕಾನ್ ಸಿಟಿಯ ಸಿಗ್ನಲ್‌ಗಳಲ್ಲಿ ಟ್ರಾಫಿಕ್‌ ಪೊಲೀಸ್‌ ಇಲ್ಲದಿರಬಹುದು, ಆದರೆ ಸವಾರರ ಮೇಲೆ ಟ್ರಾಫಿಕ್ ಪೊಲೀಸರ ಹದ್ದಿನ ಕಣ್ಣು ಸದಾ ಇರುತ್ತದೆ. ಸಿಗ್ನಲಿನಲ್ಲಿ ಪೊಲೀಸರು ಇಲ್ಲವೆಂದು ಜಂಪ್ ಮಾಡಲು ಹೋದರೆ, ತ್ರಿಬಲ್‌ ರೈಡ್‌ ಮಾಡಿದರೆ ಕೇಸು ಬಿದ್ದೇ ಬೀಳಲಿದೆ.

ಅದು ಹೇಗೆ ಅಂತೀರಾ? ಸಂಚಾರಿ ಪೊಲೀಸರೂ ಈಗ ಅಪ್‌ಡೇಟ್‌ ಆಗಿದ್ದಾರೆ. ಸಿಗ್ನಲ್‌ಗಳಲ್ಲಿ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS) ಅಳವಡಿಸಲಾಗುತ್ತಿದೆ. ಏನಿದು ITM ಸಿಸ್ಟಮ್? ಇದು ಸಿಗ್ನಲ್‌ನಲ್ಲಿ ಅಳವಡಿಸಲಾಗುವ ಹೈ ರೆಸಲ್ಯೂಷನ್‌ ಇರುವ ಹೈ ಎಂಡ್ ಕ್ಯಾಮೆರಾ. ಇದರಲ್ಲಿ ನಿಮ್ಮ ಪ್ರತೀ ಚಲನೆಯೂ ರೆಕಾರ್ಡ್ ಆಗುತ್ತದೆ. 24 ಗಂಟೆಯೂ ಚಾಲನೆಯಲ್ಲಿರುತ್ತದೆ. ಈಗಾಗಲೇ 50 ಜಂಕ್ಷನ್‌ಗಳಲ್ಲಿ 250 ITMS ಕ್ಯಾಮರಾ ಅಳವಡಿಸಲಾಗಿದೆ.

ಹೇಗೆ ಕೆಲಸ ಮಾಡುತ್ತದೆ?

  • ತ್ರಿಬಲ್ ರೈಡಿಂಗ್ ಮಾಡಿದ್ರೆ ಬೈಕ್ ಮೇಲಿನ ಮೂವರ ಫೋಟೋ ಕವರ್ ಆಗುತ್ತದೆ.
  • ನಂಬರ್ ಪ್ಲೇಟ್ ಸಮೇತ ಫೋಟೋ ವಿಡಿಯೋ ಮಾಡುತ್ತದೆ.
  • ಸೀಟ್ ಬೆಲ್ಟ್ ಹಾಕದಿರುವ ಕಾರು ಡ್ರೈವರ್‌ಗಳೂ ಇದರಲ್ಲಿ ಕವರ್ ಆಗುತ್ತಾರೆ.
  • ಸಿಗ್ನಲ್ ಬ್ರೇಕ್ ಮಾಡಿದರೆ ದಾಖಲಾಗುತ್ತದೆ.
  • ಓವರ್ ಸ್ಪೀಡ್ ಓಡಿಸಿದರೂ ರೆಕಾರ್ಡ್ ಮಾಡುತ್ತದೆ.
  • ಅವಸರದಲ್ಲಿ ಸ್ಪಾಟ್ ಲೈನ್ ದಾಟಿ ಬಂದು ನಿಂತರೂ ದಾಖಲಿಸುತ್ತದೆ.

ರೂಲ್ಸ್ ಮುರಿದ ತಕ್ಷಣವೇ ಐದು ಸೆಕೆಂಡ್‌ನ ವಿಡಿಯೋ ಜೊತೆ ದಂಡದ ಸಂದೇಶ ಬರುತ್ತದೆ. ಅಲ್ಲೇ ಕ್ಯೂ ಆರ್ ಕೋಡ್ ಮೂಲಕ ದಂಡ ಕಟ್ಟಬೇಕು. ಫೈನ್ ಕಟ್ಟಲಿಲ್ಲ ಅಂದರೆ 24 ಗಂಟೆಗಳಲ್ಲಿ ಮನೆ ಬಾಗಿಲಿಗೆ ನೋಟೀಸ್‌ ಬರುತ್ತದೆ. ನೋಟೀಸ್ ಬಂದರೆ ಕೋರ್ಟಿಗೆ ಹೋಗಿ ಫೈನ್‌ ಕಟ್ಟಬೇಕಾಗುತ್ತದೆ.

ಇದನ್ನೂ ಓದಿ | ಬೆಂಗಳೂರಿಗೆ ಹೊಸದಾಗಿ ಸ್ಪೆಷಲ್ ಟ್ರಾಫಿಕ್ ಕಮಿಷನರ್ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Robert Fico: ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

VISTARANEWS.COM


on

Slovakian PM Robert Fico critical after assassination attempt
Koo

ಹೊಸದಿಲ್ಲಿ: ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Slovakia Prime minister Robert Fico) ಹತ್ಯೆ ಯತ್ನ (Assassination attempt) ಬುಧವಾರ ನಡೆದಿದೆ. ದುಷ್ಕರ್ಮಿಯೊಬ್ಬ ಅವರತ್ತ ಗುಂಡು ಹಾರಿಸಿದ್ದು, ರಾಬರ್ಟ್‌ ಫಿಕೊ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುದ್ದಿ ದೂರದರ್ಶನ ಕೇಂದ್ರ TA3 ಪ್ರಕಾರ, ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

“ಇಂದು ಹ್ಯಾಂಡ್ಲೋವಾದಲ್ಲಿ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಹತ್ಯೆ ಪ್ರಯತ್ನ ನಡೆದಿದೆ. ಗಾಯಗೊಂಡ ಅವರನ್ನು ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ” ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೊವಾಕಿಯಾ ಸಂಸತ್ತಿನ ಉಪ ಸ್ಪೀಕರ್ ಲುಬೊಸ್ ಬ್ಲಾಹಾ ಅವರು ಸಂಸತ್ತಿನ ಅಧಿವೇಶನದಲ್ಲಿ ರಾಬರ್ಟ್ ಫಿಕೊ ಮೇಲಿನ ದಾಳಿಯನ್ನು ದೃಢಪಡಿಸಿದರು. ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಕ್ಯಾಪುಟೋವಾ ಈ ದಾಳಿಯನ್ನು ಖಂಡಿಸಿದ್ದು, ಇದು ಪ್ರಧಾನ ಮಂತ್ರಿಯವರ ಮೇಲಿನ “ಕ್ರೂರ ಮತ್ತು ನಿರ್ದಯ” ದಾಳಿ ಎಂದು ಕರೆದರು. “ನಾನು ಆಘಾತಕ್ಕೊಳಗಾಗಿದ್ದೇನೆ. ಈ ನಿರ್ಣಾಯಕ ಕ್ಷಣದಲ್ಲಿ ರಾಬರ್ಟ್ ಫಿಕೊಗೆ ಹೆಚ್ಚಿನ ಶಕ್ತಿ ಮತ್ತು ಚೇತರಿಕೆ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು.

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿರುವ ರಾಬರ್ಟ್ ಫಿಕೊ ಮತ್ತು ಅವರ ಎಡಪಂಥೀಯ ಸ್ಮರ್ (ದಿಕ್ಕು) ಪಕ್ಷವು ಸ್ಲೋವಾಕಿಯಾದಲ್ಲಿ ಸೆಪ್ಟೆಂಬರ್ 30ರಂದು ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿತು. ಈ ಗೆಲುವು ಫಿಕೊ ಅವರ ರಾಜಕೀಯ ಪುನರಾಗಮನಕ್ಕೆ ದಾರಿಯಾಗಿದೆ. ಅವರು ರಷ್ಯಾದ ಪರ ಮತ್ತು ಅಮೇರಿಕನ್ ವಿರೋಧಿ ನಿಲುವನ್ನು ಹೊಂದಿದ್ದಾರೆ. ಫಿಕೊ ನೀತಿಗಳನ್ನು ಪ್ರತಿಭಟಿಸಲು ಸಾವಿರಾರು ಜನರು ರಾಜಧಾನಿಯಲ್ಲಿ ಮತ್ತು ಸ್ಲೋವಾಕಿಯಾದಾದ್ಯಂತ ಪದೇ ಪದೆ ರ್ಯಾಲಿ, ಪ್ರತಿಭಟನೆ ಮಾಡಿದ್ದಾರೆ.

ರಾಬರ್ಟ್ ಫಿಕೊ ಹತ್ಯೆಯ ಯತ್ನದ ಬಗ್ಗೆ ವಿಶ್ವದಾದ್ಯಂತ ಹಲವಾರು ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. Xನಲ್ಲಿನ ಪೋಸ್ಟ್‌ನಲ್ಲಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼ ಎಂದು ಹೇಳಿದರು.

ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Continue Reading

ಕರ್ನಾಟಕ

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather: ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

VISTARANEWS.COM


on

Koo

ಬೆಂಗಳೂರು: ಮೇ 16 ರಂದು ರಾಜ್ಯದ ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (50-60 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಭವಿಷ್ಯ

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 16 2024
Koo

ಚಂದ್ರನು ಕನ್ಯಾರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 06:22 ವಾರ: ಗುರುವಾರ
ನಕ್ಷತ್ರ: ಮಘಾ 18:12 ಯೋಗ: ಧ್ರುವ 08:21
ಕರಣ: ಧ್ರುವ 08:21 ಅಮೃತ ಕಾಲ: ಮಧ್ಯಾಹ್ನ 03:33ರಿಂದ ಸಂಜೆ 05:20

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಕ್ಷೇತ್ರ ದರ್ಶನಕ್ಕೆ ತೆರಳಬಹುದಾಗಿದೆ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಉಂಟಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಕಾಣುವಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ ಇದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಈ ದಿನವು ನಿಮಗೆ ಸಂತೋಷವನ್ನುಂಟು ಮಾಡಲಿದೆ. ಇದು ಇತರರಿಗೆ ಸಂತಸ ಕೊಡಲಿದ್ದು, ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವಾಗಾವುದು ಬೇಡ, ಈ ಬಗ್ಗೆ ತುಸು ಎಚ್ಚರ ವಹಿಸುವುದು ಒಳಿತು. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ. ಇದರಿಂದ ಇತರರಿಗೆ ನೋವಾಗುತ್ತದೆ. ಇದು ನಿಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು. ಆಧ್ಯಾತ್ಮದ ಹಾದಿ ಬಗ್ಗೆ ಗಮನಿಸಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಪ್ರಾಪ್ತಿಯಾಗಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೂರದ ಕಡೆಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಉಂಟಾಗುವ ಸಾಧ್ಯತೆ ಇದೆ. ಕೆಲವು ವಿಷಯದಲ್ಲಿ ನಿಮಗೆ ಸ್ನೇಹಿತರ ಸಲಹೆ – ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯ ಮಾಡಿದಲ್ಲಿ ನಿಮ್ಮ ಕೆಲಸಕ್ಕೇ ತೊಂದರೆಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗಬಹುದು. ಹೀಗಾಗಿ ಈ ಬಗ್ಗೆ ಗಮನಹರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ಮಮತಾ ಬ್ಯಾನರ್ಜಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗ (Election Commission Of India) ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಅಭ್ಯರ್ಥಿಗಳೂ ಇದೇ ಲೆಕ್ಕಾಚಾರದಲ್ಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರದ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದೇ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಶಾಕ್‌ ನೀಡಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ನಮ್ಮದೇನಿದ್ದರೂ ಬಾಹ್ಯ ಬೆಂಬಲ” ಎಂದಿದ್ದಾರೆ.

“ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಟಿಎಂಸಿಯು ನಾಯಕತ್ವದ ಸಹಕಾರ ನೀಡುತ್ತದೆ. ಬಾಹ್ಯವಾಗಿಯೇ ಇಂಡಿಯಾ ಒಕ್ಕೂಟಕ್ಕೆ ಟಿಎಂಸಿಯು ಬೆಂಬಲ ನೀಡಲಿದೆ. ಪ್ರತಿಯೊಂದು ವಿಚಾರದಲ್ಲಿಯೂ ಇಂಡಿಯಾ ಒಕ್ಕೂಟಕ್ಕೆ ನಾವು ಸಹಕಾರ ನೀಡುತ್ತೇವೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳದ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದರಲ್ಲೂ, 100 ದಿನಗಳ ಉದ್ಯೋಗ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗಂತೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕೂ ಮಮತಾ ಬ್ಯಾನರ್ಜಿ ಅವರು ವ್ಯಾಖ್ಯಾನ ನೀಡಿದರು. “ಯಾವುದು ಇಂಡಿಯಾ ಒಕ್ಕೂಟ, ಎಲ್ಲಿ ಮೈತ್ರಿ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಥವಾ ಸಿಪಿಎಂ ಬಗ್ಗೆ ಯೋಚನೆ ಮಾಡದಿರಿ. ಈ ಪಕ್ಷಗಳ ಲೆಕ್ಕಾಚಾರ ತೆಗೆದುಕೊಳ್ಳದಿರಿ. ಈ ಎರಡೂ ಪಕ್ಷಗಳು ಬಿಜೆಪಿ ಜತೆಗಿವೆ. ನಾನು ಮಾತನಾಡುತ್ತಿರುವುದು ದೆಹಲಿ ಮೈತ್ರಿಯ ಬಗ್ಗೆ ಮಾತ್ರ” ಎಂದು ಹೇಳಿದರು. ಆ ಮೂಲಕ ಚುನಾವಣೆ ಫಲಿತಾಂಶದ ಬಳಿಕದ ಮೈತ್ರಿಯ ಬಗ್ಗೆ ಸೂಚನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದವನ್ನು ಅಧಿಕಾರದಿಂದ ಕೆಳಗಿಳಿಸುವ ಏಕಮಾತ್ರ ಉದ್ದೇಶದಿಂದ ಹಲವು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ನಮ್ಮದೇನಿದ್ದರೂ ಬಾಹ್ಯ ಬೆಂಬಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ಶಾಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading
Advertisement
Kangana Ranaut
Lok Sabha Election 202435 mins ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ41 mins ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್46 mins ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ1 hour ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ1 hour ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕರ್ನಾಟಕ2 hours ago

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

stay awake till late night what is the problem For health
ಆರೋಗ್ಯ2 hours ago

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

dina bhavishya read your daily horoscope predictions for May 16 2024
ಭವಿಷ್ಯ3 hours ago

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Mamata Banerjee
ಪ್ರಮುಖ ಸುದ್ದಿ9 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ9 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌