ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ (Basavanagudi News) ಭಕ್ತಾದಿಗಳು ಹಾಗೂ ಮಳಿಗೆ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಯಲ್ಲಿ ಪೂಜಾ ಸಾಮಗ್ರಿಗಳು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಕಳೆದ ಕೆಲವು ತಿಂಗಳಿಂದ ಪೂಜಾ ಸಾಮಗ್ರಿಗಳ ಬೆಲೆ ಕೇಳಿ ಭಕ್ತಾದಿಗಳು ಶಾಕ್ ಆಗಿದ್ದರು. ಮನಸೋ ಇಚ್ಛೆ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೂಡ ಕೇಳಿಬಂದಿತ್ತು. ಹೂವು, ಹಣ್ಣು, ಕಡ್ಡಿ, ಕರ್ಪೂರ ಸೇರಿದ 70-80 ರೂಪಾಯಿಯ ಒಂದು ಸಣ್ಣ ಕಿಟ್ ಅನ್ನು ಬರೋಬ್ಬರಿ 150 ರೂಪಾಯಿಗೆ ಸೇಲ್ ಮಾಡಲಾಗುತ್ತಿದೆ. ಇದೊಂಥರಾ ಹಗಲು ದರೋಡೆ ಅಂದರೆ ತಪ್ಪಾಗಲ್ಲ.
ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳು ಇದನ್ನೂ ಪ್ರಶ್ನಸಿದ್ದಾರೆ. ಈ ವೇಳೆ ಭಕ್ತರು ಹಾಗೂ ಮಳಿಗೆ ವ್ಯಾಪಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದಿದೆ. ಟೆಂಟರ್‌ಗೆ ಹೆಚ್ಚು ಹಣವನ್ನು ಕೊಟ್ಟಿದ್ದೀವಿ, ಹೀಗಾಗಿ ಹೆಚ್ಚುವರಿ ಹಣ ತೆಗೆದುಕೊಳ್ಳುತ್ತಿವಿ. ಮಾರುಕಟ್ಟೆಯಲ್ಲಿ ಹೂ-ತೆಂಗಿನಕಾಯಿ ದಿನಕ್ಕೊಂದು ದರ ಇರುತ್ತದೆ, ನಾವೇನು ಮಾಡೋಣ ಎಂದು ಮಳಿಗೆ ವ್ಯಾಪಾರಿಗಳು ವಾದವಾಗಿದೆ.
ಇತ್ತ 2 ಬಾಳೆಹಣ್ಣು, ತೆಂಗಿನಕಾಯಿ, ಅಗರಬತ್ತಿ, ಹೂವಿ ಇರುವು ಪೂಜಾ ಸಾಮಗ್ರಿಗೆ ಬರೋಬ್ಬರಿ 150-300 ರೂ. ವ್ಯಾಪಾರಿಗಳು ಭಕ್ತರಿಂದ ಪಡೆಯುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಭಕ್ತರು, ವ್ಯಾಪಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದನ್ನು ಕೇಳಬೇಕಿದ್ದ ಮುಜರಾಯಿ ಕಣ್ಮುಚ್ಚಿ ಕುಳಿತಿದೆ. ಇದರ ಪರಿಣಾಮ ಭಕ್ತರ ಜೇಬು ಖಾಲಿ ಆಗುತ್ತಿದ್ದು, ವಿಧಿಯಿಲ್ಲದೆ ದುಬಾರಿ ಹಣ ತೆರಬೇಕಾಗುತ್ತಿದೆ.
ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್
Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ
ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.
ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!
ಬೆಂಗಳೂರು: ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಖರ್ತನಾಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಝ್ ಬಂಧಿತ ಆರೋಪಿಗಳು.
ಬೆಳಗಿನಿಂದ ಸಂಜೆ ತನಕ ಕೋಳಿ ಅಂಗಡಿಯಲ್ಲಿ ಕೋಳಿ ಕುಯ್ಯುವ ಕೆಲಸ ಮಾಡಿದರೆ, ರಾತ್ರಿಯಾದರೆ ಸಾಕು ಸುಲಿಗೆಗೆ ಇಳಿಯುತ್ತಿದ್ದರು. ಇತ್ತೀಚಿಗೆ ಸ್ಕೂಟರ್‌ನಲ್ಲಿ ಬಂದಿದ್ದ ಇವರಿಬ್ಬರು, ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಸಂಬಂಧ ಅಮ್ಮೇಜಾನ್ ಅವರು ದೂರು ದಾಖಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಬಾಣಸವಾಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ