Site icon Vistara News

BBMP | ಪ್ಲಾಸ್ಟಿಕ್ ನಿಷೇಧ ಕಾರ್ಯಾಚರಣೆಗೆ ತೊಂದರೆ ಕೊಟ್ಟರೆ ಕಾನೂನು ಕ್ರಮ!

BBMP Office Bengaluru

ಬೆಂಗಳೂರು: ಪ್ಲಾಸ್ಟಿಕ್ ಬಳಕೆ ವಿರುದ್ಧ ಕಾರ್ಯಾಚರಣೆ ವೇಳೆ ಸಿಬ್ಬಂದಿ ಕರ್ತವ್ಯಕ್ಕೆ ತೊಂದರೆ ಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ (BBMP) ಘನ ತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್‌ ಕುಮಾರ್‌ ಆದೇಶ ನೀಡಿದ್ದಾರೆ.‌ ಈ ಮೂಲಕ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

ಕಾರ್ಯಾಚರಣೆ ವೇಳೆ ಸಿಬ್ಬಂದಿಗೆ ಬೆದರಿಕೆ ಮತ್ತು ಕರ್ತವ್ಯಕ್ಕೆ ಅಡ್ಡಿಯಾಗುತ್ತಿರುವ ಪ್ರಕರಣಗಳು ಆಗಾಗ ವರದಿಯಾಗುತ್ತಲಿವೆ. ಈ ಹಿನ್ನೆಲೆಯಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮಕ್ಕೆ ಪಾಲಿಕೆ ಆದೇಶ ಹೊರಡಿಸಿದೆ. ಆದೇಶದಲ್ಲಿ ಹಲವಾರು ನಿಯಮಗಳನ್ನು ಪಾಲಿಕೆ ಹೊರಡಿಸಿದೆ.

ಏಕ ಬಳಕೆ ಪ್ಲಾಸ್ಟಿಕ್ ಮತ್ತು ಅವುಗಳ ಉತ್ಪನ್ನಗಳ ಉಪಯೋಗವನ್ನು ನಿಲ್ಲಿಸುವ ಸಂಬಂಧ ಪಾಲಿಕೆ ಬೆಂಗಳೂರಿನ ವಿವಿಧ ಕಡೆ ಕಾರ್ಯಾಚರಣೆಯನ್ನು ಕೈಗೊಂಡಿದೆ. ಈ ಸಮಯದಲ್ಲಿ ಯಾರಾದರೂ ಅಧಿಕಾರಿಗಳಿಗೆ ಅಥವಾ ಸಿಬ್ಬಂದಿಗೆ ಬೆದರಿಕೆ ಇಲ್ಲವೇ ಯಾವುದೇ ರೀತಿಯಲ್ಲಿ ತಡೆಯೊಡ್ಡಿದರೆ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಅಂಥವರ ವಿರುದ್ಧ ಗಂಭೀರ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ. ಸಾರ್ವಜನಿಕರು ಯಾವುದೇ ಪ್ರಶ್ನೆ, ದೂರುಗಳಿದ್ದಲ್ಲಿ ಮಾಹಿತಿಗಾಗಿ ಅಧಿಕಾರಿಗಳಿಗೆ ತಿಳಿಸಲು ಹತ್ತಿರದ ವಲಯ ಕಚೇರಿಯನ್ನು ಸಂಪರ್ಕಿಸಬೇಕು.

ಇದನ್ನೂ ಓದಿ | ಆಪರೇಷನ್‌ Single use plastic; 2 ವಾರದಲ್ಲಿ 8 ಲಕ್ಷ ದಂಡ ವಿಧಿಸಿದ ಬಿಬಿಎಂಪಿ!

Exit mobile version