ಬೆಂಗಳೂರು: ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ನ ಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೀಸಲಾತಿಯ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಒಂದು ವಾರಗಳ ಅವಕಾಶ ನೀಡಲಾಗಿದೆ. ಮೀಸಲಾತಿ ಪಟ್ಟಿ ಅಂತಿಮಗೊಳ್ಳುತ್ತಿದ್ದಂತೆಯೇ ಚುನಾವಣಾ ಪ್ರಕ್ರಿಯೆ (BBMP Election) ಆರಂಭಿಸಬಹುದಾಗಿದೆ.
2021ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಸಕ್ತರು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಸೂಕ್ತ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಬಹುದಾಗಿರುತ್ತದೆ. ಬೆಂಗಳೂರಿರನ ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿರುವ 436ನೇ ಕೊಠಡಿಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಮ್ಮ ಆಕ್ಷೇಪಣೆಯನ್ನು ಏಳು ದಿನಗಳ ಒಳಗೆ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕಳೆದ ಗುರುವಾರ ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಅದು ಯಾಕೆ ಸಾಧ್ಯವಾಗಲಿಲ್ಲವೆಂದು ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ಒಂದು ವಾರದ ಒಳಗೆ ಮೀಸಲಾತಿ ಪ್ರಕಟಿಸುವಂತೆ ಸೂಚಿಸಿತ್ತು. ಹೀಗಾಗಿ ಬುಧವಾರ ಸಂಜೆ ಈ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈಗ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿರುವುದರಿಂದ ಚುನಾವಣಾ ಆಯೋಗಕ್ಕೆ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಇದ್ದ ಎಲ್ಲ ಅಡ್ಡಿಗಳು ಒಂದೊಂದಾಗಿಯೇ ನಿವಾರಣೆಯಾದಂತಾಗಿದೆ.
ಮೀಸಲಾತಿಯ ವಿವರ ಇಲ್ಲಿದೆ:
ಇದನ್ನೂ ಓದಿ | BBMP Election |ವಾರದೊಳಗೆ ಬಿಬಿಎಂಪಿ ಮೀಸಲಾತಿ ಪ್ರಕಟಿಸಿ: ಸುಪ್ರೀಂ ಮಹತ್ವದ ಆದೇಶ