ಬೆಂಗಳೂರು: ನಗರದ ಮುಖ್ಯ ರಸ್ತೆ ಮತ್ತು ಆರ್ಟಿರಿಯಲ್ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಬಿಬಿಎಂಪಿ ಮುಂದಾಗಿದೆ. ಪ್ರಮುಖ ರಸ್ತೆಗಳ ಫುಟ್‌ಪಾತ್ ಮೇಲೆ ತಳ್ಳು ಗಾಡಿಯಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಜನರ ಸರಾಗ ಸಂಚಾರಕ್ಕೆ ತೊಂದರೆ ಆಗುತ್ತಿದೆ ಎಂಬ ಕಾರಣ ನೀಡಿ ಪಾಲಿಕೆ ಅಧಿಕಾರಿಗಳು ಈ ಕಾರ್ಯಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ | Demolish | ಒತ್ತುವರಿ ಮಾಡಿ ಮಸೀದಿ ನಿರ್ಮಾಣ: ಡೆಮಾಲಿಷ್‌ಗೆ ನೋಟಿಸ್ ನೀಡಿದ ಬಿಬಿಎಂಪಿ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಕುರಿತು ಮಾತನಾಡಿ ʻʻನಗರ ಪೊಲೀಸ್ ಇಲಾಖೆಯ ಜತೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಯಾವ ಕಡೆ ಜನಸಾಂದ್ರತೆ ಕಡಿಮೆ ಇರುತ್ತದೆಯೋ ಅಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಗುವುದು. ಟ್ರಾಫಿಕ್ ಪೊಲೀಸರ ಸಲಹೆ ಹಾಗೂ ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿದ್ದೇವೆʼʼ ಎಂದು ಹೇಳಿದರು.
ಈ ನಡುವೆ, ಫುಟ್‌ಪಾತ್ ವ್ಯಾಪಾರವನ್ನೇ ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಜನರ ಸರಾಗ ಸಂಚಾರಕ್ಕೆ ಅವಕಾಶ ಮಾಡಿಕೊಡುವುದು ಸರಿ. ಆದರೆ ಫುಟ್‌ಪಾತ್ ವ್ಯಾಪಾರಿಗಳನ್ನು ಮನಸೋಇಚ್ಛೆ ಎತ್ತಂಗಡಿ ಮಾಡುವುದು ಸರಿಯಲ್ಲ. ಟ್ರಾಫಿಕ್ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳ ವಸೂಲಿ ದಂಧೆಗೆ ಈ ನಿರ್ಧಾರ ಎಡೆ ಮಾಡಿಕೊಡಬಾರದು ಎಂಬ ಅಭಿಪ್ರಾಯವೂ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಇದನ್ನೂ ಓದಿ | ಆಪರೇಷನ್ Single use plastic; 2 ವಾರದಲ್ಲಿ 8 ಲಕ್ಷ ದಂಡ ವಿಧಿಸಿದ ಬಿಬಿಎಂಪಿ!