Site icon Vistara News

BBMP | ವಾರ್ಡ್‌ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟ

BBMP Office Bengaluru

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವಾರ್ಡ್‌ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಗೊಂಡಿದೆ.

2021ರ ಜನಗಣತಿಯ ಆಧಾರದ ಮೇರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್‌ವಾರು ಮೀಸಲಾತಿಯನ್ನು ಪ್ರಕಟಿಸಲಾಗಿದೆ.

ಮೀಸಲಾತಿ ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈ ಕೋರ್ಟ್ ಆಗಸ್ಟ್‌ ೧೦ ರಂದು ಆಗಸ್ಟ್ 16 ರವರೆಗೆ ಅಂತಿಮ ಪಟ್ಟಿ ಪ್ರಕಟಿಸದಂತೆ ಮೌಖಿಕವಾಗಿ ಸೂಚಿಸಿತ್ತು. ಆದರೆ ಇಂದು (ಆ.೧೬) ಇದನ್ನು ತೆರವುಗೊಳಿಸಿದ್ದರಿಂದ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ.

ಇದರ ಕರಡು ಅಧಿಸೂಚನೆಯನ್ನು ಆಗಸ್ಟ್‌ ೩ ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಸುಮಾರು 2000ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಸಿಕೆಯಾಗಿತ್ತು ಎಂದು ಹೇಳಲಾಗಿದೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿಯು ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ್ದು, ನೂತನ ಪಟ್ಟಿ ರಚಿಸಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಸರ್ಕಾರ ಈ ಶಿಫಾರಸನ್ನು ಒಪ್ಪಿ ಅಂತಿಮ ಅಧಿಸೂಚನೆ ಪ್ರಕಟಿಸಿದೆ.

ಹೆಚ್ಚಿನ ಪ್ರಮಾಣದಲ್ಲಿ ಆಕ್ಷೇಪಣೆ ಸಲ್ಲಿಕೆಯಾಗಿದ್ದರೂ ಕರಡು ಅಧಿಸೂಚನೆಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂದು ಹೇಳಲಾಗುತ್ತಿದೆ.

ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿತ್ತು. ಇದನ್ನು ಪಾಲಿಸದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಒಂದು ವಾರದ ಒಳಗೆ ಮೀಸಲಾತಿ ಪ್ರಕಟಿಸುವಂತೆ ಸೂಚಿಸಿತ್ತು. ಹೀಗಾಗಿ ಆಗಸ್ಟ್‌ ೩ರ ಬುಧವಾರ ಸಂಜೆ ಈ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಈಗ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿರುವುದರಿಂದ ಚುನಾವಣಾ ಆಯೋಗಕ್ಕೆ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಇದ್ದ ಎಲ್ಲ ಅಡ್ಡಿಗಳು ಒಂದೊಂದಾಗಿಯೇ ನಿವಾರಣೆಯಾದಂತಾಗಿದೆ.

ಮೀಸಲಾತಿಯ ವಿವರ ಇಲ್ಲಿದೆ:

ಇದನ್ನೂ ಓದಿ | BBMP Election |ವಾರದೊಳಗೆ ಬಿಬಿಎಂಪಿ ಮೀಸಲಾತಿ ಪ್ರಕಟಿಸಿ: ಸುಪ್ರೀಂ ಮಹತ್ವದ ಆದೇಶ

Exit mobile version