ಬೆಂಗಳೂರು
Bengaluru : ‘ಬಿಎಂಟಿಸಿ ಫ್ರೀ ಅಂತಾ ಗೊತ್ತೇ ಇರಲಿಲ್ಲ ಸಾರ್’!
ಕರ್ನಾಟಕ
Murder Case: ಕಾವೇರಿಪಟ್ಟಣಂ ಬಳಿ ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನ ಕೊಲೆ
Murder Case: ತಮಿಳುನಾಡಿನ ಕಾವೇರಿಪಟ್ಟಣಂ ಬಳಿ ನಡು ರಸ್ತೆಯಲ್ಲಿ ದುಷ್ಕರ್ಮಿಗಳ ತಂಡ ಯುವಕನನ್ನು ಅಟ್ಟಾಡಿಸಿ ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಿದೆ.
ಬೆಂಗಳೂರು ಗ್ರಾಮಾಂತರ: ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಾವೇರಿಪಟ್ಟಣಂ ಬಳಿಯ ಕೃಷ್ಣಗಿರಿ ಡ್ಯಾಂ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ದುಷ್ಕರ್ಮಿಗಳ ತಂಡ ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಕೊಲೆ (Murder Case) ಮಾಡಿದೆ.
ಪ್ರೇಮ ಪ್ರಕರಣದಲ್ಲಿ ಯುವಕನ್ನು ಮೂವರು ಯುವಕರ ತಂಡ ಕೊಲೆ ಮಾಡಿದೆ. ಇತ್ತೀಚೆಗೆ ಯುವತಿಯನ್ನು ಪ್ರೀತಿಸಿ ಮೃತ ಯುವಕ ಮದುವೆಯಾಗಿದ್ದ. ಹೀಗಾಗಿ ಯುವತಿ ಕಡೆಯವರಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೃಷ್ಣಗಿರಿ ಡ್ಯಾಂ ಸರ್ವಿಸ್ ರಸ್ತೆಯಲ್ಲಿ ಯುವಕ ಹೋಗುತ್ತಿದ್ದಾಗ ಅಡ್ಡಗಟ್ಟಿರುವ ಆರೋಪಿಗಳು, ತಲ್ವಾರ್‌ನಿಂದ ಹಲ್ಲೆ ನಡೆಸಿದ್ದರಿಂದ ತಲೆ ಹಾಗೂ ಎದೆಯ ಭಾಗದಲ್ಲಿ ಗಂಭೀರ ಗಾಯಗಳಾಗಿ ಯುವಕ ಮೃತಪಟ್ಟಿದ್ದಾನೆ. ಕೊಲೆಯ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ
ಬೆಂಗಳೂರು: ಕಳೆದ ಜನವರಿ 10 ರಂದು ನಾಗವಾರ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.
ಲೋಹಿತ್ ಎಂಬುವವರು ತಮ್ಮ ಬೈಕ್‌ನಲ್ಲಿ ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್ ಜತೆ ಬೈಕ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನಾಗವಾರ ಬಳಿ ಮೆಟ್ರೊ ಪಿಲ್ಲರ್ ಬೈಕ್ ಮೇಲೆ ಬಿದ್ದು ತಾಯಿ ತೇಜಸ್ವಿನಿ ಹಾಗೂ ಮಗ ವಿಹಾನ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಮೃತ ತೇಜಸ್ವಿನಿ ಪತಿ ಲೋಹಿತ್ ಗೋವಿಂದಪುರ ಠಾಣೆಗೆ ದೂರು ನೀಡಿದ್ದರು.
ಇದನ್ನೂ ಓದಿ | Road accident : ಬೈಕ್- ಲಾರಿ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು
ಲೋಹಿತ್ ನೀಡಿದ ದೂರಿನನ್ವಯ ಸೈಟ್ ಎಂಜಿನಿಯರ್, ಮೆಟ್ರೊ ಕಂಟ್ರಾಕ್ಟರ್, ಸೈಟ್ ಇಂಚಾರ್ಜ್, ಬಿಎಂಆರ್‌ಸಿಎಲ್ ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಗೋವಿಂದಪುರ ಪೊಲೀಸರು ಪೂರ್ಣಗೊಳಿಸಿದ್ದಾರೆ. ಕೇಸ್ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಗೋವಿಂದಪುರ ಪೊಲೀಸರ ವರದಿಯನ್ನು ಖುದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಮುಖ ಅಂಶಗಳನ್ನು ಪರಿಶೀಲನೆ ಮಾಡಲಿದ್ದಾರೆ. ಪೊಲೀಸರು ಪ್ರಮುಖವಾಗಿ ಎರಡು ಅಂಶಗಳ ಮೇಲೆ ಒತ್ತು ಕೊಟ್ಟು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ | Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು
ಮೆಟ್ರೋ ಪಿಲ್ಲರ್ ದುರಂತದಲ್ಲಿ ಮೊದಲಿಗೆ ಮೆಟ್ರೋ ಪಿಲ್ಲರ್‌ನ ಪ್ಲಾನ್ ಹಾಗೂ ಎಕ್ಸಿಕ್ಯೂಟಿಂಗ್. ಪಿಲ್ಲರ್ ಬಳಿ ಕೈಗೊಂಡಿದ್ದ ಸುರಕ್ಷತಾ ಕ್ರಮಗಳು. ಸುರಕ್ಷತೆ ಕೈಗೊಳ್ಳಲು ನಿರ್ಲಕ್ಷ್ಯ ಕೈಗೊಂಡಿರುವುದು ಬೆಳಕಿಗೆ ಬಂದಿದೆ. ಸುರಕ್ಷತಾ ಕ್ರಮ ಕೈಗೊಳ್ಳುವ ಅಧಿಕಾರ ಪ್ರಾಜೆಕ್ಟ್ ಮ್ಯಾನೇಜರ್‌ಗೆ ಇದ್ದು ಪ್ರಾಜೆಕ್ಟ್ ಹೆಡ್‌ಗೆ ಎಲ್ಲರನ್ನೂ ನಿರ್ಧರಿಸುವ ಅಧಿಕಾರವಿದೆ. ಆದರೆ, ಸುರಕ್ಷತಾ ಮುತುವರ್ಜಿ ವಹಿಸದೇ ದುರ್ಘಟನೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತಿದೆ. ಹೀಗೆ ಸುಮಾರು 9 ಮಂದಿ ಅಧಿಕಾರಿಗಳನ್ನು ಹೊಣೆಯಾಗಿಸಿ ತನಿಖೆ ನಡೆಸಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.
ಕರ್ನಾಟಕ
Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!
ಸಿಎಂ ಬೊಮ್ಮಾಯಿ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ರೂಪಿಸಿರುವ ಪ್ಲ್ಯಾನ್ ತಿರುಗುಬಾಣವಾಗುವ ಅಪಾಯವಿದೆ. ಅಜ್ಜಂಪೀರ್ ಖಾದ್ರಿ ಅವರೇ ಇಲ್ಲೀಗ ನಿರ್ಣಾಯಕ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಮತ ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗಳಿಂದ ಗೆಲ್ಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರಿಗೆ ಚಮಕ್ ನೀಡಲು ಮುಂದಾಗಿರುವ ಪ್ಲ್ಯಾನ್ ಈಗ ಕಾಂಗ್ರೆಸ್‌ಗೇ ತಿರುಗುಬಾಣವಾಗುವ ಪರಿಸ್ಥಿತಿ ಎದುರಾಗಿದೆ.
ಶಿಗ್ಗಾಂವಿಯಲ್ಲಿ ಖಡಾಖಡಿ ಹೋರಾಟವನ್ನು ನೀಡುವ ಮೂಲಕ ಬೊಮ್ಮಾಯಿ ಅವರನ್ನು ಅವರ ಕ್ಷೇತ್ರದಿಂದ ಹೊರಬರದಂತೆ ಕಟ್ಟಿಹಾಕುವ ಪ್ರಯತ್ನವನ್ನು ಬಿಜೆಪಿ ನಡೆಸಿದೆ. ಬೊಮ್ಮಾಯಿಗೆ ಕಠಿಣ ಸ್ಪರ್ಧೆ ನೀಡಲು ಮಾಜಿ ಸಚಿವ ವಿನಯ ಕುಲಕರ್ಣಿ ಅವರೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿರುವ ನಾಯಕರು ಅವರನ್ನು ಹೇಗೋ ಮನವೊಲಿಸಿ ಒಪ್ಪಿಸಿದ್ದಾರೆ. ಆದರೆ, ಈಗ ಶಿಗ್ಗಾಂವಿಯಲ್ಲಿ ಇದುವರೆಗೂ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ತಿರುಗಿಬಿದ್ದಿದ್ದಾರೆ. ತನಗೆ ಟಿಕೆಟ್ ನೀಡದೆ ಹೋದರೆ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಖಾದ್ರಿ ಹೇಳಿರುವುದು ಕಾಂಗ್ರೆಸ್‌ಗೆ ಬಿಸಿ ತುಪ್ಪವಾದಂತಾಗಿದೆ.
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೇಸ್ ಟಿಕೆಟ್ ಬಯಸಿ 14 ಜನರು ಅರ್ಜಿ ಸಲ್ಲಿಕೆ ಮಾಡಿದ್ದರು. ಅಲ್ಪಸಂಖ್ಯಾತ ಕೋಟಾದಡಿ ಸತತ ಮೂರು ಸಲ ಟಿಕೆಟ್ ಪಡೆದು ಬೊಮ್ಮಾಯಿ ವಿರುದ್ಧ ಸೋತಿದ್ದ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಈ ಸಲವೂ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದಾರೆ.
ಆದರೆ, ಈ ಬಾರಿ ಅಲ್ಪಸಂಖ್ಯಾತ ಅಸ್ತ್ರದ ಬದಲು ಪಂಚಮಸಾಲಿ ಅಸ್ತ್ರ ಪ್ರಯೋಗಕ್ಕೆ ಕಾಂಗ್ರೆಸ್ ಮುಂದಾಗಿದೆ. ಅಲ್ಪಸಂಖ್ಯಾತರು ಹೇಗಿದ್ದರೂ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ. ಅವರ ಜತೆ ಪಂಚಮಸಾಲಿಗಳ ಮತವೂ ಸೇರಿದರೆ ಬೊಮ್ಮಾಯಿ ಅವರನ್ನು ಸೋಲಿಸಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕ ವಿನಯ ಕುಲಕರ್ಣಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಲು ಮನವಿ ಒಲಿಸಿದೆ. ಕೆಲವು ದಿನಗಲ ಹಿಂದೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯ ವಿನಯ ಕುಲಕರ್ನಿ ಜೊತೆ ಕೈ ನಾಯಕರು ಮಾತುಕತೆ ನಡೆಸಿದ್ದರು.
ವಿನಯ ಕುಲಕರ್ಣಿ ಅವರ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಕೈ ನಾಯಕರಿಗೆ ಶಾಕ್ ನೀಡಿದ್ದಾರೆ. ಶಿಗ್ಗಾಂವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.
ಈ ನಡುವೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ತಡರಾತ್ರಿಯವರೆಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿ ಮನ ಒಲಿಸಲು ಕಸರತ್ತು ನಡೆಸಿದರಾದರೂ ಅದರಲ್ಲಿ ಸಫಲರಾಗಿಲ್ಲ. ಖಾದ್ರಿ ಅವರು ಸಿದ್ದರಾಮಯ್ಯ ಬೆಂಬಲಿಗರಾಗಿರುವುದರಿಂದ ಜಮೀರ್ ಅಹ್ಮದ್ ಅವರಿಗೆ ಮನವೊಲಿಕೆ ಜವಾಬ್ದಾರಿಯನ್ನು ನೀಡಲಾಗಿದೆ.
ಖಾದ್ರಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಬೊಮ್ಮಾಯಿ ವಿರುದ್ಧ ಸೋಲು ಕಾಣುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ ಗೆದ್ದಿದ್ದು 1994ರಲ್ಲಿ. ಮಂಜುನಾಥ ಕೊನ್ನೂರು ಅವರು ಆಗ ಶಾಸಕರಾಗಿದ್ದರು.
ಖಾದ್ರಿ ಅವರು 1998ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. 2004ರಲ್ಲಿ ಸಿಂಧೂರ ರಾಜಶೇಖರ್ ಇಲ್ಲಿಗೆ ಪಕ್ಷೇತರರಾಗಿ ಗೆಲುವು ಪಡೆದಿದ್ದರು. ಬಳಿಕ ಗೆದ್ದಿದ್ದೆಲ್ಲ ಬೊಮ್ಮಾಯಿ ಅವರೇ.
ಇಲ್ಲಿನ ಒಟ್ಟಾರೆ ಲೆಕ್ಕಾಚಾರ ಗಮನಿಸಿದರೆ ಕಾಂಗ್ರೆಸ್ ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡರೆ ಗೆಲ್ಲುವುದು ಕಷ್ಟ. ಹಾಗಾಗಿ ಅದು ಬೇರೆ ಲೆಕ್ಕಾಚಾರಕ್ಕೆ ಮುಂದಾಗಿದ್ದಾರೆ. ಆದರೆ, ಮುಸ್ಲಿಂ ಮತಗಳನ್ನು ಬಿಟ್ಟರೂ ಗೆಲುವು ಸುಲಭವಲ್ಲ. ಹೀಗಾಗಿ ಖಾದ್ರಿ ಅವರು ಪಕ್ಷೇತರರಾಗಿ ನಿಂತರೆ ಮುಸ್ಲಿಂ ಮತಗಳು ಒಡೆಯುವುದು ನಿಶ್ಚಿತ. ಹೀಗಾಗಿ ಅತ್ಯಂತ ಜಾಗರೂಕತೆಯಿಂದ ಪರಿಸ್ಥಿತಿ ನಿಭಾಯಿಸಬೇಕಾದ ಅಗತ್ಯ ಕಾಂಗ್ರೆಸ್‌ಗಿದೆ. ಖಾದ್ರಿ ಅವರು ಕಾಂಗ್ರೆಸ್ ಮನವೊಲಿಕೆಗೆ ಒಲಿಯುತ್ತಾರಾ ಎಂದು ಕಾದು ನೋಡಬೇಕು.
ಇದನ್ನೂ ಓದಿ : Basavaraj Bommai: ಎರಡು ತಿಂಗಳಲ್ಲಿ 13 ಬಾರಿ ತವರು ಕ್ಷೇತ್ರಕ್ಕೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ: ಶಿಗ್ಗಾಂವಿಯಲ್ಲಿ ಪ್ರಬಲ ಸ್ಪರ್ಧೆ
ಕರ್ನಾಟಕ
Congress Guarantee: ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಜಾರ್ಜ್ ಸೊರೊಸ್ ಹಣ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ
ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು (Congress Guarantee) ಕರ್ನಾಟಕದ ಬಜೆಟ್‌ನಲ್ಲಿ ಅನುಷ್ಠಾನ ಮಾಡಲು ಸಾಧ್ಯವೇ ಇಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ (Congress Guarantee) ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಆರೋಪಿಸಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿ ಮಾತ್ರ ಯೋಜನೆ ಕೊಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನ ಸುಳ್ಳು ಭರವಸೆ ನಂಬಲು ಕರ್ನಾಟಕದ ಜನರು ಮೂರ್ಖರಲ್ಲ. ಕರ್ನಾಟಕದ ಜನರು ವಿದ್ಯಾವಂತರು, ಪ್ರಜ್ಞಾವಂತರು, ಬುದ್ಧಿವಂತರು. ಅವರೆಲ್ಲರೂ ಮಾಧ್ಯಮ ನೋಡುತ್ತಾರೆ; ಸೋಷಿಯಲ್ ಮೀಡಿಯಾ ಗಮನಿಸುತ್ತಾರೆ; ಯಾವ ರಾಜ್ಯದಲ್ಲಿ ನೀವು ಮೋಸ ಮಾಡಿದ್ದೀರೆಂಬ ಅರಿವು ಅವರಿಗೆ ಇದೆ. 2001ರ ಗ್ಯಾರಂಟಿ ಕಾರ್ಡ್, 2013ರ ಗ್ಯಾರಂಟಿ ಕಾರ್ಡ್ ಏನಾಗಿದೆ ಎಂದು ಕಾಂಗ್ರೆಸ್‍ನ್ನು ಜನತೆ ಪ್ರಶ್ನಿಸಬೇಕು ಎಂದು ಮನವಿ ಮಾಡಿದರು.
ಮಹಿಳೆಯರಿಗೆ 2 ಸಾವಿರ ರೂ., 200 ಯೂನಿಟ್ ಉಚಿತ ವಿದ್ಯುತ್, ಯುವಕರಿಗೆ 3000 -1500 ರೂ. ಯಾವ ಹಣದಿಂದ ಕೊಡುತ್ತೀರಿ? ಯಾರಾದರೂ ಜಾರ್ಜ್ ಸೊರೊಸ್ ಅಂಥವರು ನಿಮಗೆ ಹಣ ಕೊಡ್ತಾರಾ? ಎಂದು ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರು. ಕರ್ನಾಟಕದ ಬಜೆಟ್‍ನಲ್ಲಿ ಇದನ್ನು ಕೊಡಲು ಸಾಧ್ಯವೇ ಇಲ್ಲ. ಈ ವರ್ಷ ನಮ್ಮ ಸರಕಾರ 3 ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡಿಸಿದೆ. ಸುಮಾರು 2.5 ಲಕ್ಷ ಕೋಟಿ ರೂಪಾಯಿ ಸಂಗ್ರಹ ಆಗುವ ಮಾಹಿತಿ ಇದೆ. ಅಥವಾ 3 ಲಕ್ಷ ಕೋಟಿಯೇ ಸಂಗ್ರಹ ಆಗಲಿ; ಈಗ ಕಾಂಗ್ರೆಸ್‍ನವರು ಕೊಟ್ಟ ಭರವಸೆಗಳನ್ನು ಈಡೇರಿಸಲು 70-75 ಸಾವಿರ ಕೋಟಿ ಬೇಕು. ಸನ್ಮಾನ್ಯ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಘೋಷಣೆಯಂತೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಅಜ್ಜ, ಅಜ್ಜಿಗೆ ತಲಾ 1200 ಸೇರಿ 2400 ರೂ. ನಾವು ಕೊಡುತ್ತಿದ್ದೇವೆ. ನಿಮ್ಮದು ಭರವಸೆ ಮಾತ್ರ. ನಾವು ನಿಜವಾಗಲೂ ಕೊಡುತ್ತಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ಸಿಗರು ಇದೇರೀತಿ ರಾಜಸ್ಥಾನದಲ್ಲೂ ಗ್ಯಾರಂಟಿ ಕಾರ್ಡ್ ಹಂಚಿದ್ದರು. 2018ರ ಚುನಾವಣೆಗೆ ಮೊದಲು ನಿರುದ್ಯೋಗಿ ಯುವಕರಿಗೆ 3,500 ರೂಪಾಯಿ ಭತ್ಯೆ ಕೊಡುವುದಾಗಿ ಗ್ಯಾರಂಟಿ ಕಾರ್ಡ್ ಕೊಟ್ಟು ತಿಳಿಸಿದ್ದಿರಿ. ಆದರೆ, ಇವತ್ತಿನ ತನಕ ಅದನ್ನು ಈಡೇರಿಸಿಲ್ಲ. ಛತ್ತೀಸ್‍ಗಡದಲ್ಲೂ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದೀರಿ. ನಿಮ್ಮ ಅಧಿಕಾರ ಇದ್ದರೂ ಅದನ್ನು ಈಡೇರಿಸಿಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಕುರಿತು ಉತ್ತರಿಸಲಿ ಎಂದು ಆಗ್ರಹಿಸಿದರು.
ಯಡಿಯೂರಪ್ಪನವರು 2008ರಲ್ಲಿ ಮುಖ್ಯಮಂತ್ರಿ ಆದಾಗ ಭರವಸೆ, ಗ್ಯಾರಂಟಿ ಕಾರ್ಡ್ ಕೊಡಲಿಲ್ಲ. ಬಿಜಾಪುರದಲ್ಲಿ ಅಜ್ಜಿ ಒಬ್ಬರು ಕಾಲಿಗೆ ಬಿದ್ದು, ‘ನನಗೆ ಗಂಡ ಇದ್ದಾರೆ, ಮಕ್ಕಳಿದ್ದಾರೆ, ಊಟ ಮಾಡಲು ಹಣ ಇಲ್ಲ’ ಎಂದಾಗ ‘ತಾಯಿ ನಿನಗೂ ಏನಾದ್ರೂ ಮಾಡುತ್ತೇನೆ’ ಎಂದು ತಿಳಿಸಿ ವಾಪಸ್ ಬಂದರು. ನಂತರದ ಕ್ಯಾಬಿನೆಟ್ ಸಭೆಯಲ್ಲಿ ಸಂಧ್ಯಾ ಸುರಕ್ಷಾ ಜಾರಿಗೊಳಿಸಿ ಅಜ್ಜ- ಅಜ್ಜಿಗೆ ಒಂದು ಮನೆಗೆ 2400 ರೂ. ಸಿಗುವಂತೆ ಮಾಡಿದವರು ಯಡಿಯೂರಪ್ಪನವರು ಎಂದು ವಿವರಿಸಿದರು.
ರಾಮಕೃಷ್ಣ ಹೆಗಡೆಯವರ ಕಾಲದಿಂದ ವಿಧವಾ ವೇತನ 75 ರೂಪಾಯಿಯಿಂದ ಆರಂಭವಾಗಿತ್ತು. ನೀವು ಹಲವು ವರ್ಷಗಳ ಆಡಳಿತ ನಡೆಸಿದ ಬಳಿಕ ಅದು 200 ರೂಪಾಯಿಗೆ ಬಂದು ನಿಂತಿತ್ತು. ವಿಧವಾ ವೇತನ ಹೆಚ್ಚಿಸಿ 1 ಸಾವಿರ ನೀಡುತ್ತಿರುವುದು ನಮ್ಮ ಸರಕಾರ ಎಂದ ಅವರು, ಕಾಂಗ್ರೆಸ್‍ನವರು ಯಾವ ಹೆಣ್ಮಕ್ಕಳಿಗೆ 2 ಸಾವಿರ ಕೊಡುತ್ತಾರೆ? ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಕೊಡುತ್ತಾರಾ? ಎಲ್ಲರಿಗೂ ಕೊಡುತ್ತಾರಾ? ಅಥವಾ ವಿಧವೆಯರಿಗೆ ಮಾತ್ರ ಕೊಡಲಿದ್ದಾರಾ ಎಂದು ಪ್ರಶ್ನಿಸಿದರು.
2000- 2001ರಲ್ಲಿ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವುದಾಗಿ ಕಾಂಗ್ರೆಸ್ ಭರವಸೆ ಕೊಡಲಾಗಿತ್ತು. ಅದಕ್ಕಾಗಿ ನಾವು ಹೋರಾಟವನ್ನೂ ಮಾಡಿದ್ದೆವು. ಆದರೆ, ಅದು ಈಡೇರಲಿಲ್ಲ. ಸುಳ್ಳು ಹೇಳುವುದಕ್ಕೂ, ಮೋಸ ಮಾಡುವುದಕ್ಕೂ ಒಂದು ಮಿತಿ ಇರಲಿ ಎಂದರು.
ಇದನ್ನೂ ಓದಿ: Congress Guarantee: ಯುವಕರಿಗೆ ಕಾಂಗ್ರೆಸ್‌ನ 4 ನೇ ಗ್ಯಾರಂಟಿ: ಪದವೀಧರರಿಗೆ ʼಯುವ ನಿಧಿʼ; ಮಾಸಿಕ 3 ಸಾವಿರ ರೂ.
ಕರ್ನಾಟಕ
Halal Ban: ಯುಗಾದಿಗೆ ಹಲಾಲ್ ಕಟ್ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು
ಯುಗಾದಿಯ ಹೊಸತೊಡಕಿಗೆ ಹಲಾಲ್ ಮಾಂಸ ಬಹಿಷ್ಕರಿಸಿ, ಜಟ್ಕಾ ಮಾಂಸವನ್ನು ಖರೀದಿಸಿ ಎಂದು ಹಿಂದುಪರ ಕಾರ್ಯಕರ್ತರು ಅಭಿಯಾನವನ್ನು ಶುರು ಮಾಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹಲಾಲ್ ಬಾಯ್ಕಾಟ್ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಬೆಂಗಳೂರು: ಯುಗಾದಿ ಹಬ್ಬದ (Ugadi 2023) ಮಾರನೇ ದಿನ ಮಾಂಸಾಹಾರಿಗಳು ಹೊಸತೊಡಕು ಆಚರಣೆ ಮಾಡುತ್ತಾರೆ. ಈ ವೇಳೆ ಹಲಾಲ್ ಮಾಂಸವನ್ನು ಬಹಿಷ್ಕರಿಸಿ ಮತ್ತು ಜಟ್ಕಾ ಮಾಂಸವನ್ನು ಖರೀದಿಸಬೇಕೆಂದು ಹಿಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹಲಾಲ್ ಬಾಯ್ಕಾಟ್ (Halal Ban) ಅಭಿಯಾನಕ್ಕೆ ಮಂಗಳವಾರ (ಮಾ.21) ಚಾಲನೆ ನೀಡಿದರು.
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇರುವ ಆಂಜನೇಯ ದೇಗುಲದಲ್ಲಿ ಭಿತ್ತಿಪತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಹಲಾಲ್ ಬಾಯ್ಕಟ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿ ಮೂಲಕ ಹಲಾಲ್ ಸರ್ಟಿಫಿಕೇಟ್ ಬ್ಯಾನ್ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.
ಬಾಯ್ಕಾಟ್ ಹಲಾಲ್ ಅಭಿಯಾನಕ್ಕೆ ಚಾಲನೆ ಕೊಟ್ಟ ವಿಡಿಯೊ ಇಲ್ಲಿದೆ
ಹಿಂದು ಜನ ಜಾಗೃತಿ ವೇದಿಕೆಯ ಮೋಹನ್ ಗೌಡ, ಹಿಂದುಪರ ಹೋರಾಟಗಾರ ಪ್ರಶಾಂತ್ ಸಂಬರ್ಗಿ, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ. ಈ ಜಾಗೃತಿ ಅಭಿಯಾನದಲ್ಲಿ ಶ್ರೀ ರಾಮಸೇನೆ, ಹಿಂದು ದಲಿತ ಸೇನೆ, ಹಿಂದು ಜನಜಾಗೃತಿ, ರಾಷ್ಟ್ರ ರಕ್ಷಣಾ ಪಡೆ ಸೇರಿದಂತೆ ಬಜರಂಗದಳದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಹಿಂದು ಜನಜಾಗೃತಿ ಸಮಿತಿಯ ಸದಸ್ಯ ಮೋಹನ್ ಗೌಡ ಪ್ರತಿಕ್ರಿಯಿಸಿದ್ದು, ಹಲಾಲ್ ಮುಕ್ತ ಯುಗಾದಿ ಅಭಿಯಾನ ಮಾಡುತ್ತಿದ್ದೇವೆ. ದಕ್ಷಿಣ ಭಾರತದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಕರಪತ್ರ ಹಂಚುವ ಮೂಲಕ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರಕ್ಕೂ ಪತ್ರ ನೀಡುವ ಮೂಲಕ ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದೇವೆ ಎಂದಿದ್ದಾರೆ.
ಹಲಾಲ್ ಬ್ಯಾನ್ ಬಗ್ಗೆ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ
ಅಭಿಯಾನ ಸಂಬಂಧ ಮಾತನಾಡಿರುವ ಪ್ರಶಾಂತ್ ಸಂಬರ್ಗಿ, ಹಲಾಲ್ ಕಟ್ ಬ್ಯಾನ್ ಮಾಡಲು ಅಭಿಯಾನ ಶುರು ಮಾಡಲಾಗುತ್ತಿದೆ. ರಾಜ್ಯದಲ್ಲಿ ಹಲಾಲ್ ಉತ್ಪನ್ನಗಳು ಬ್ಯಾನ್ ಆಗಬೇಕು. ಹಲಾಲ್ ಮುಕ್ತ ಯುಗಾದಿ ಬಗ್ಗೆ ಕರಪತ್ರ ಹಂಚಲಿದ್ದೇವೆ. ಜನರಿಗೆ ಜಟ್ಕಾ ಕಟ್ ಮಾಂಸ ಬಳಸಲು ಸೂಚಿಸಿದ್ದೇವೆ ಎಂದಿದ್ದಾರೆ.
ಹಿಂದು ಸಂಘಟನೆಗಳು ಹೇಳುವುದು ಏನು?
ಯುಗಾದಿಯ ಸಮಯದಲ್ಲಿ ಹಲಾಲ್ ಮಾಂಸದ ಬದಲು ಜಟ್ಕಾ ಮಾಂಸವನ್ನು ಬಳಸಬೇಕು. ಹಲಾಲ್ ಮಾಂಸದ ಪ್ರಕ್ರಿಯೆಯಲ್ಲಿ ಪ್ರಾಣಿಗಳನ್ನು ಮೆಕ್ಕಾ ದಿಕ್ಕಿಗೆ ಮುಖ ಮಾಡಿ ಕುರಾನ್ ಕಲ್ಮಾಗಳನ್ನು ಹೇಳಲಾಗುತ್ತದೆ. ಅಲ್ಲಾಹ್‌ಗೆ ಅರ್ಪಣೆ ಮಾಡಿದ ನಂತರ, ರಕ್ತಸ್ರಾವವಾಗುವ ಹಾಗೆ ಪ್ರಾಣಿಗಳ ರಕ್ತನಾಳವನ್ನು ಕತ್ತರಿಸಿ, ಕ್ರೂರ ರೀತಿಯಲ್ಲಿ ಪ್ರಾಣಿಗಳ ಹತ್ಯೆ ಮಾಡುವ ಪದ್ಧತಿಯೇ ಹಲಾಲ್ ಆಗಿದೆ. ಇಂತಹ ಎಂಜಲು ಮಾಡಿದ ಮಾಂಸವನ್ನು ಪುನಃ ಹಿಂದು ದೇವರಿಗೆ ಅರ್ಪಿಸುವುದು ಹಿಂದು ಧರ್ಮಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Assault Case: ಫೋನ್ ಕಾಲ್ ರಿಸೀವ್ ಮಾಡಿಲ್ಲವೆಂದು ಚಾಲಕನಿಗೆ ಥಳಿಸಿದ ಕಾರು ಮಾಲೀಕ
ಹಾಗಾಗಿ ಸರ್ಕಾರವು ಹಿಂದುಗಳ ಧಾರ್ಮಿಕ ಹಕ್ಕನ್ನು ಗಮನದಲ್ಲಿರಿಸಿ ರಾಜ್ಯದ ಎಲ್ಲ ಕಡೆ ಜಟ್ಕಾ ಮಾಂಸ ಸಿಗುವ ಹಾಗೆ ವ್ಯವಸ್ಥೆಯನ್ನು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಯುಗಾದಿಯ ಸಮಯದಲ್ಲಿ ಜಟ್ಕಾ ಮಾಂಸವನ್ನೇ ಖರೀದಿ ಮಾಡಬೇಕೆಂದು ಅಭಿಯಾನವನ್ನು ಶುರು ಮಾಡಿದ್ದಾರೆ.
ರಾಜ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ21 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಆಟೋಮೊಬೈಲ್22 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್6 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ10 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ9 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ10 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ
-
ಕರ್ನಾಟಕ11 hours ago
Drugs Mafia : ಸಾಗರದಲ್ಲಿ ಡ್ರಗ್ಸ್ ಮಾರಾಟ ಯತ್ನ: ಲಾಂಗ್ ಸಹಿತ ಇಬ್ಬರ ಅರೆಸ್ಟ್, ಕೊಲೆ ಸಂಚೂ ಬಯಲು