Bengaluru bandh : ಬಂದ್‌ ಹೆಸರಲ್ಲಿ ಗೂಂಡಾಗಿರಿ; ಟೆಕ್ಕಿಗಳು, ಜನರ ಆಕ್ರೋಶ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ - Vistara News

ಕರ್ನಾಟಕ

Bengaluru bandh : ಬಂದ್‌ ಹೆಸರಲ್ಲಿ ಗೂಂಡಾಗಿರಿ; ಟೆಕ್ಕಿಗಳು, ಜನರ ಆಕ್ರೋಶ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Bengaluru bandh: ಖಾಸಗಿ ವಾಹನಗಳ ಬಂದ್‌ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿರುವುದರ ವಿರುದ್ಧ ಸಾಫ್ಟ್‌ ವೇರ್‌ ಕಂಪನಿಗಳ ಒಕ್ಕೂಟ ಧ್ವನಿ ಎತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

VISTARANEWS.COM


on

Bengaluru bandh
ಹೆಬ್ಬಾಳದಲ್ಲಿ ಮೂವರು ವ್ಯಕ್ತಿಗಳು ಗೂಂಡಾಗಿರಿ ನಡೆಸಿದ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಖಾಸಗಿ ವಾಹನಗಳ ಒಕ್ಕೂಟ ನೀಡಿದ ಬಂದ್‌ ಕರೆ (Bengaluru bandh) ಬಹುತೇಕ ಯಶಸ್ವಿಯಾಗಿದೆ. ಈ ನಡುವೆ ವಾಹನಗಳನ್ನು ತಡೆಯುವ ಹೆಸರಿನಲ್ಲಿ ನಡೆಯುತ್ತಿರುವ ಗೂಂಡಾಗಿರಿ (Goodaism) ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುವ, ಚಾಲಕರನ್ನು ಬೆದರಿಸುವವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು (People oppose Goondaism) ಒತ್ತಾಯಿಸಲಾಗುತ್ತಿದೆ. ಎಕ್ಸ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media post) ಜನರು ತಮ್ಮ ಆಕ್ರೋಶವನ್ನು ತೋಡಿಕೊಳ್ಳುತ್ತಿವೆ.

ಅದರಲ್ಲೂ ಮುಖ್ಯವಾಗಿ ನಿತ್ಯ ವಾಹನಗಳಲ್ಲಿ ತಮ್ಮ ಕಚೇರಿಗೆ ಹೋಗುವ ಐಟಿ ಕಂಪನಿಗಳ ಸಿಬ್ಬಂದಿ ಈ ಗೂಂಡಾಗಿರಿ ವಿರುದ್ಧ ಸಿಡಿದೆದ್ದಿದ್ದಾರೆ. ಔಟರ್‌ ರಿಂಗ್‌ ರೋಡ್‌ ಕಂಪನಿಗಳ ಒಕ್ಕೂಟ ಈ ನಿಟ್ಟಿನಲ್ಲಿ ಒಂದು ವಿಡಿಯೊವನ್ನು ಹಂಚಿಕೊಂಡು ಈ ರೀತಿಯ ಗೂಂಡಾಗಿರಿಯನ್ನು ಮಟ್ಟಹಾಕಬೇಕು ಎಂದು ಕೋರಿಕೆ ಮಂಡಿಸಿದೆ. ಬೆಂಗಳೂರು ಪೊಲೀಸರಿಗೆ ಟ್ಯಾಗ್‌ ಮಾಡಿರುವ ಈ ಟ್ವೀಟ್‌ನಲ್ಲಿ ಆಸ್ತಿಪಾಸ್ತಿಗಳಿಗೆ, ವಾಹನಗಳಿಗೆ ಹಾನಿ ಮಾಡುವ ಇಂಥ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ಹಾಕಬೇಕು. ಒಂದೊಮ್ಮೆ ಇಂಥ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳದೆ ಹೋದರೆ ಇಂಥಹುದೇ ವರ್ತನೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.

ಔಟರ್‌ ರಿಂಗ್‌ ರೋಡ್‌ ಕಂಪನಿಗಳ ಒಕ್ಕೂಟ ಎನ್ನುವುದು ಐಟಿ ಕಂಪನಿಗಳ ಒಕ್ಕೂಟವಾಗಿದೆ. ಇದು ದೇಶ ಮಾತ್ರವಲ್ಲ ವಿದೇಶದ ಕಂಪನಿಗಳನ್ನು ಒಳಗೊಂಡ ಒಕ್ಕೂಟವಾಗಿದೆ. ಇದು ಈ ರೀತಿ ಟ್ಟೀಟ್‌ ಮಾಡಿರುವುದು ಬೆಂಗಳೂರಿನ ಹೆಸರಿಗೆ ಕಳಂಕ ಉಂಟು ಮಾಡುವ ಅಪಾಯವಿರುವುದರಿಂದ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಶಕ್ತಿ ಯೋಜನೆಯಿಂದ ತಮಗೆ ತೊಂದರೆಯಾಗಿದೆ ಎಂದು ಆಪಾದಿಸಿರುವ ಖಾಸಗಿ ವಾಹನಗಳ ಒಕ್ಕೂಟ ಸರ್ಕಾರ ತಮಗೂ ಪರಿಹಾರ ಕೊಡಬೇಕು ಎಂದು ಆಗ್ರಹಿಸುತ್ತಿದೆ. ಇದಕ್ಕಾಗಿ ಬಂದ್‌ ಮೂಲಕ ಎಚ್ಚರಿಕೆ ನೀಡಿದೆ.

ಆದರೆ, ಬೆಳಗ್ಗಿನಿಂದಲೇ ಹಲವು ಕಡೆಗಳಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ, ತುರ್ತು ಕೆಲಸಗಳಿಗಾಗಿ ಹೋಗುತ್ತಿರುವ ವ್ಯಕ್ತಿಗಳ ಮೇಲೆಯೂ ಹಲ್ಲೆ ನಡೆಸುವುದು, ಅಪಮಾನ ಮಾಡುವುದೇ ಮೊದಲಾದ ಘಟನೆಗಳು ನಡೆದಿವೆ.ʼ

ಇದನ್ನೂ ಓದಿ: Bengaluru Bandh : ಬಾಡಿಗೆ ಮಾಡುತ್ತಿದ್ದ ಚಾಲಕನ ತಡೆದು ಸನ್ಮಾನಿಸಿ ಬೇಕಾಬಿಟ್ಟಿ ಹಲ್ಲೆ, ಕಾರಿಗೆ ಮೊಟ್ಟೆ ಎಸೆತ

ಇಂಥ ಗೂಂಡಾಗಿರಿಯನ್ನು ಯಾರು ನಿಯಂತ್ರಿಸಬೇಕು?

ವಿಮಾನ ನಿಲ್ದಾಣದಿಂದ ಮೊದಲೇ ವಾಹನ ಬುಕ್‌ ಮಾಡಿದವರು ಆಕ್ರೋಶಿತರಾಗಿದ್ದು, ತಮ್ಮನ್ನು ಕರೆದುಕೊಂಡು ಹೋಗಲು ಬರುವವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ. ಸೋಮವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರೊಬ್ಬರನ್ನು ಬಿಟ್ಟು ಬರಲು ಹೋದ ಕಾರಿನ ಚಾಲಕನನ್ನು ಇಳಿಸಿ ಆತನಿಗೆ ಪೇಟ ಇಟ್ಟು ಶಾಲು ಹಾಕಿ ಸನ್ಮಾನ ಮಾಡುವ ನೆಪದಲ್ಲಿ ಹಲ್ಲೆ ಮಾಡಲಾಗಿದೆ. ವಾಹನಗಳ ಗಾಜು ಒಡೆಯುವುದು, ಹಲ್ಲೆ ಮಾಡುವುದು, ಮೊಟ್ಟೆ ಎಸೆಯುವ ಕೆಲಸಗಳು ಹಲವು ಕಡೆ ನಡೆದಿವೆ.

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರು ಆದೇಶ ನೀಡಿದ್ದಾರಾದರೂ ಅಲ್ಲಲ್ಲಿ ಇಂಥ ಘಟನೆಗಳು ನಡೆಯುತ್ತಿವೆ. ಈಗ ಅಲ್ಲಿನ ಸಿಸಿಟಿವಿ ಫೂಟೇಜ್‌ಗಳ ಆಧಾರದಲ್ಲಷ್ಟೇ ಕ್ರಮ ಕೈಗೊಳ್ಳಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಜತೆಗೆ ವ್ಯಾಪಕ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮೇಘ ಸ್ಫೋಟ

ಪಶ್ಚಿಮ ಘಟ್ಟದ ತಪ್ಪಲು ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟಗೊಂಡಿದೆ. ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಭಾರೀ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದಿದೆ.

ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್‌ಗಳು ಭಾರೀ ನೆರೆಯಿಂದ ಕೊಚ್ಚಿ ಹೋಗಿದೆ. ಮೊದಲು ಕೇರಳ ಮೂಲದ ವ್ಯಕ್ತಿಗೆ ಸೇರಿದ್ದ ರಬ್ಬರ್ ತೋಟ ಜಲಾವೃತಗೊಂಡಿದೆ. ಬಳಿಕ ಮನೆಗೆ ನುಗ್ಗಿ ಅಂಗಳದಲ್ಲಿ ನಿಲ್ಲಿಸಿದ್ದ ಆಕ್ಟೋ ಕಾರು ಹಾಗೂ ಎರಡು ಬೈಕ್ ನೀರು ಪಾಲಾಗಿದೆ. ಹೊಸಕಂಬೃ ಕೃಷ್ಣ ಪೂಜಾರಿ ಎಂಬವರ ಮನೆಯಲ್ಲಿ ನಿಲ್ಲಿಸಿದ್ದ ಓಮ್ಮಿ ಕಾರು ನೀರುಪಾಲಾಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿ. ಹಗರಿಬೊಮ್ಮನಹಳ್ಳಿ ತಹಸೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌; ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಕಾರು ಪತ್ತೆ

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌ ಆಗಿತ್ತು. ಕೂಳೂರು ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ.

VISTARANEWS.COM


on

By

Missing case
Koo

ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ (52) ಎಂಬುವವರು ಮಂಗಳೂರು ಹೊರವಲಯದ ಕೂಳೂರು ಬ್ರಿಡ್ಜ್‌ನಲ್ಲಿ ಕಾರು ನಿಲ್ಲಿಸಿ ನಾಪತ್ತೆ ಆಗಿದ್ದಾರೆ. ಮನೆಯವರಿಗೆ ಸಾಯುತ್ತೇನೆ ಅಂತಾ ಹೇಳಿ ಮುಮ್ತಾಜ್ ಅಲಿ ಹೋಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್,ಅಗ್ನಿಶಾಮಕದಳದಿಂದ ಹುಡುಕಾಟ ನಡೆಸುತ್ತಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಆಲಿ, ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಮೇಲೆ ಡ್ಯಾಮೇಜ್‌ ಆದ ಸ್ಥಿತಿಯಲ್ಲಿ ಬಿಎಂಡಬ್ಲ್ಯೂ ಕಾರು ಪತ್ತೆಯಾಗಿದೆ. ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಮಮ್ತಾಜ್ ಆಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯಿಂದ ಬ್ಲ್ಯಾಕ್‌ಮೇಲ್‌?

ಮುಮ್ತಾಜ್ ಆಲಿ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುವೆ ಆಗುವಂತೆ ಮಹಿಳೆಯಿಂದ ನಿರಂತರ ಬ್ಲ್ಯಾಕ್‌ ಮೇಲ್ ಬಂದಿತ್ತು ಎನ್ನಲಾಗಿದೆ. ಅದಕ್ಕೆ ಸುರತ್ಕಲ್‌ನ ನಾಲ್ವರು ಸಹಕಾರ ನೀಡಿದ್ದರು. ಮಸೀದಿ ಕಮಿಟಿ ವಿಚಾರದಲ್ಲಿ ಆ ನಾಲ್ವರಿಗೂ ಮುಮ್ತಾಜ್ ಅಲಿಗೂ ಜಟಾಪಟಿ ಇತ್ತು. ಇದರಿಂದ ಆ ಮಹಿಳೆಯ ಹಿಂದೆ ನಿಂತ ಆ ನಾಲ್ವರು, ಮುಮ್ತಾಜ್ ಅಲಿಯ ವಿಡಿಯೋ ಇಟ್ಟುಕೊಂಡು ಮಹಿಳೆ ಮತ್ತು ಆ ನಾಲ್ವರಿಂದ‌ ಬ್ಲ್ಯಾಕ್‌ ಮೇಲ್ ನಡೆದಿದೆ ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಮುಂದಾದರಾ ಎಂಬ ಅನುಮಾನ ಮೂಡಿದೆ.

Continue Reading

ಬೆಂಗಳೂರು

Drugs Mafia : ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ 626 ಮಾದಕ ವಸ್ತುಗಳ ಪಾರ್ಸಲ್‌ಗಳು ಪತ್ತೆ!

Drugs mafia : ಮಾದಕ ವಸ್ತುಗಳಿರುವ 626 ಪಾರ್ಸಲ್‌ಗಳು ಪತ್ತೆಯಾಗಿದ್ದು, ಪೋಸ್ಟ್‌ ಆಫೀಸ್‌ ಸಿಬ್ಬಂದಿ ಈ ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರಾ ಎಂಬ ಶಂಕೆ ಮೂಡಿದೆ.

VISTARANEWS.COM


on

By

Drugs mafia
Koo

ಬೆಂಗಳೂರು: ಡ್ರಗ್ ಮಾಫಿಯಾ (Drugs Mafia) ಪೋಸ್ಟ್ ಆಫೀಸಿಗೂ ತಟ್ಟಿದ್ದು ಇತ್ತೀಚೆಗಲ್ಲ. ಈ ಹಿಂದೆ ಕೂಡ ಫಾರೀನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ ಸಂಧರ್ಭದಲ್ಲಿ ಡ್ರಗ್ಸ್‌ಗಳು ಸಿಕ್ಕಿದ್ದವು. ಈಗ ಮತ್ತೊಮ್ಮೆ ದಾಳಿ ವೇಳೆ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ.

ಚಾಮರಾಜಪೇಟೆ ಫಾರೀನ್ ಪೋಸ್ಟ್ ಆಫೀಸ್‌ನಲ್ಲಿ ಡ್ರಗ್ಸ್‌ ಮಾಫಿಯಾ ನಡೆದಿದೆ. ವಿದೇಶದಿಂದ ಬರುವ ಪಾರ್ಸಲ್‌ಗಳಲ್ಲಿ ಡ್ರಗ್ಸ್‌ಗಳು ಬರುತ್ತಿದೆ. ದುಬಾರಿ ಬೆಲೆಯ ಎಂಡಿಎಂಎ, ಬ್ರೌನ್ ಶುಗರ್, ಕೊಕೇನ್ ಸೇರಿದಂತೆ ಹಲವು ಮಾದರಿಯ ಡ್ರಗ್ ಪತ್ತೆಯಾಗಿವೆ.

ಬೇರೆಯದೆ ವಸ್ತುಗಳ ಹೆಸರಿನಲ್ಲಿ ವಿದೇಶದಿಂದ ಬರುತ್ತಿರುವ ಪಾರ್ಸಲ್ ಇದಾಗಿದೆ. ಅಪರಿಚಿತ ವಿಳಾಸವಿರುವ ಈ ಮಾದಕ ವಸ್ತುಗಳನ್ನು ಪಡೆದು , ಸಂಬಂಧಪಟ್ಟಂತಹ ಡ್ರಗ್ ಪೆಡ್ಲರ್‌ಗಳಿಗೆ ರವಾನೆ ಮಾಡಲಾಗುತ್ತದೆ. ಇಂತಹ ಪ್ಯೂರ್ ಡ್ರಗ್ಸ್‌ಗಳಿಗೆ ಬ್ಲಾಕ್ ಮಾರ್ಕೆಟ್‌ನಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ವಿದೇಶದಿಂದ ಬರುವ ಪ್ಯೂರ್ ಡ್ರಗ್ಸ್‌ಗಳನ್ನು ಪಡೆದು ಅದರಿಂದ ಮತ್ತಷ್ಟು ಡ್ರಗ್‌ಗಳನ್ನು ಮಾಡಬಹುದಾಗಿದೆ.

ಇದನ್ನೂ ಓದಿ: Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

ಅಂದರೆ ಒಂದು ಗ್ರಾಂ ಪ್ಯೂರ್ ಡ್ರಗ್‌ನಿಂದ ಹತ್ತು ಗ್ರಾಂನಷ್ಟು ಡ್ರಗ್‌ಗಳನ್ನು ತಯಾರಿಸಬಹುದು. ಹೀಗಾಗಿ ಇಂತಹ ಪ್ಯೂರ್ ಸಿಂಥಟಿಕ್ ಡ್ರಗ್‌ಗಳನ್ನು ವಿದೇಶದಲ್ಲಿ ಸಿಗುವ ಹಿನ್ನೆಲೆಯಲ್ಲಿ ಅದನ್ನು ತರಿಸಿಕೊಳ್ಳಲು ಫಾರಿನ್ ಪೋಸ್ಟ್ ಆಫೀಸ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇನ್ನು ಈ ಹಿಂದೆ ಕೂಡ ಡ್ರಗ್ ವಿಚಾರವಾಗಿ ದಾಳಿ ನಡೆಸಿದಾಗಲು ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿದ್ದವು. ಸದ್ಯ ಈ ಸಲವು ಕೂಡ ಅಪಾರ ಪ್ರಮಾಣದಲ್ಲಿ ಡ್ರಗ್ ಪತ್ತೆಯಾಗಿದೆ.

ಇದರ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅಕ್ಟೋಬರ್ ಒಂದನೇ ತಾರೀಖು ಫಾರಿನ್ ಪೋಸ್ಟ್ ಆಫೀಸ್‌ಗೆ ದಾಳಿ ನಡೆಸಿದಾಗ, ಸುಮಾರು 626 ಸಿಂಥಟಿಕ್ ಡ್ರಗ್ ಪಾರ್ಸಲ್‌ಗಳು ಸಿಕ್ಕಿದೆ. 2018ರಂದು ದಾಳಿ ನಡೆಸಿದಾಗ ಡ್ರಗ್ ಸಿಕ್ಕಿತ್ತು. ಹೀಗಾಗಿ ಅಂದಿನಿಂದ ಇಂದಿನವರೆಗೆ ಪೊಲೀಸರು ತಮ್ಮ ಮೇಲೆ ಕಣ್ಣೀಟ್ಟಿರುತ್ತಾರೆಂಬ ಕಾರಣಕ್ಕೆ ಪಾರ್ಸಲ್‌ಗಳನ್ನು ಪಡೆಯಲು ಯಾರು ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ಅನೇಕ ಪಾರ್ಸಲ್‌ಗಳು ಪೋಸ್ಟ್ ಆಫೀಸ್‌ನಲ್ಲೆ ಬಿದ್ದಿದೆ.

ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ನಗರ ಪೊಲೀಸರು , ಮಾಹಿತಿ ಬಂದ ಕಡೆ ದಾಳಿ ನಡೆಸುತ್ತಲೆ ಇದ್ದಾರೆ. ಅದೇ ರೀತಿ ಫಾರೀನ್ ಪೋಸ್ಟ್ ಮೇಲೆ ಕೂಡ ದಾಳಿ ನಡೆಸಲಾಗಿದೆ. ಸದ್ಯ ಯಾವ ಹೆಸರಿಗೆ ಪಾರ್ಸಲ್‌ಗಳು ಬಂದಿದೆ ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Karnataka Rain : ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

Karnataka Rain : ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಟಿಟಿ ಡ್ರೈವರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

VISTARANEWS.COM


on

By

karnataka rain
ಸಾಂದರ್ಭಿಕ ಚಿತ್ರ
Koo

ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿ. ಹಗರಿಬೊಮ್ಮನಹಳ್ಳಿ ತಹಸೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಟಿಟಿ ಡ್ರೈವರ್‌ ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರಿನಲ್ಲಿ ಟಿಟಿ ಡ್ರೈವರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಟಿಟಿ ಡ್ರೈವರ್ ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆತಂದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವಿನಾಶ್ (25) ಮೃತ ದುರ್ದೈವಿ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್ ಮೂರು ವರ್ಷದ ಹಿಂದೆ ಮದುವೆಯಾಗಿದ್ದು, 2 ವರ್ಷದ ಮಗು ಇದೆ. ಪ್ರವಾಸಿಗರನ್ನು ಹೋಂ ಸ್ಟೇ ಬಳಿ ಬಿಟ್ಟು ಬಂದ ಬಳಿಕ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಂತಾದ ಕ್ರೀಡಾಂಗಣ

ರಾತ್ರಿ ಸುರಿದ ಮಳೆಗೆ ಕ್ರೀಡಾಂಗಣ ಜಲಾವೃತವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿನ ತಾಲೂಕು ಮಟ್ಟದ ಕ್ರೀಡಾಂಗಣವು ಕೆರೆಯಂತೆ ಭಾಸವಾಗುತ್ತಿದೆ. ಪ್ರತಿಬಾರಿ ಮಳೆ ಬಂದಾಗ ಕ್ರೀಡಾಂಗಣ ಜಲಾವೃತಗೊಳ್ಳುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣವು ಕ್ರೀಡಾ ಇಲಾಖೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆ ಆಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣ ಹಾಳಾಗಿದೆ.

ಕೆಸರು ಗದ್ದೆಯಾದ ರಸ್ತೆ

ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯು ಕೆಸರು ಗದ್ದೆಯಾಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಆನೇಕಲ್‌ನ ಚಂದಾಪುರ ಪುರಸಭೆ ವಾರ್ಡ್ ನಂಬರ್ 20ರಲ್ಲಿ ಘಟನೆ ನಡೆದಿದೆ. ಹೆಡ್ ಮಾಸ್ಟರ್ ಲೇಔಟ್‌ಗೆ ಸಂಪರ್ಕ್ ಕಲ್ಪಿಸುವ ರಸ್ತೆ ಇದಾಗಿದೆ. ಮಳೆ ಬಂದಾಗ ರಸ್ತೆ ಜಲಾವೃತಗೊಂಡು ಸಂಪೂರ್ಣ ಕೆಸರುಮಯವಾಗಿದೆ. ನಿತ್ಯ ಓಡಾಡುವ ಜನರಿಗೆ ಈ ರಸ್ತೆಯಲ್ಲಿ ಸಂಚರಿಸುವುದೆ ನರಕಯಾತನೆ ಆಗಿದೆ. ಮಳೆ ಬಂದಾಗ ಕೆಸರು ಗದ್ದೆ, ಬಿಸಿಲಿನ ಸಮಯದಲ್ಲಿ ಧೂಳಿನ ಸಮಸ್ಯೆ ಎದುರಾಗಿದೆ. ರಸ್ತೆಯಲ್ಲಿ ಹಳ್ಳಗುಂಡಿಗಳು ಕಾಣದೆ ಬಿದ್ದು ನಿವಾಸಿಗಳು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಚಂದಾಪುರ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka weather Forecast
ಮಳೆ1 ಗಂಟೆ ago

Karnataka Weather : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ

Missing case
ದಕ್ಷಿಣ ಕನ್ನಡ12 ಗಂಟೆಗಳು ago

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌; ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಕಾರು ಪತ್ತೆ

Drugs mafia
ಬೆಂಗಳೂರು14 ಗಂಟೆಗಳು ago

Drugs Mafia : ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ 626 ಮಾದಕ ವಸ್ತುಗಳ ಪಾರ್ಸಲ್‌ಗಳು ಪತ್ತೆ!

karnataka rain
ವಿಜಯನಗರ15 ಗಂಟೆಗಳು ago

Karnataka Rain : ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

Murder case
ಮೈಸೂರು16 ಗಂಟೆಗಳು ago

Murder Case : ಮೈಸೂರಿನಲ್ಲಿ ಬಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿದ ದುರುಳ!

Drowned in water
ಉತ್ತರ ಕನ್ನಡ16 ಗಂಟೆಗಳು ago

Drowned in Water : ಸಮುದ್ರದ ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ತಮಿಳುನಾಡು ಮೂಲದ ವಿದ್ಯಾರ್ಥಿ ಬಲಿ

karnataka rain
ಮಳೆ17 ಗಂಟೆಗಳು ago

Karnataka Rain : ಸತತ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧ ಸಾವು

murder case
ಚಿಕ್ಕೋಡಿ18 ಗಂಟೆಗಳು ago

Murder Case : ವಿಕೋಪಕ್ಕೆ ತಿರುಗಿದ ಅಣ್ಣ-ತಮ್ಮಂದಿರ ಗಲಾಟೆ; ಓರ್ವನ ಕೊಲೆಯಲ್ಲಿ ಅಂತ್ಯ

Lovers Death
ಕೋಲಾರ18 ಗಂಟೆಗಳು ago

Lovers Death : ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಅಪ್ರಾಪ್ತೆ ಸಾವು, ಹುಡುಗ ಗಂಭೀರ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌