Site icon Vistara News

Bengaluru Karaga 2024: ಏ.23 ಬೆಂಗಳೂರು ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

Bengaluru Karaga 2024

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕರಗ ಶಕ್ತ್ಯೋತ್ಸವ ಏ.23ರ ಚೈತ್ರ ಪೂರ್ಣಿಮಾ (Chaitra Purnima) ದಿನವಾದ ಮಂಗಳವಾರ ರಾತ್ರಿ ನಡೆಯಲಿದೆ. ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಅನಾರೋಗ್ಯ ಹಿನ್ನೆಲೆ; ಮಧ್ಯಪ್ರದೇಶ, ಜಾರ್ಖಂಡ್‌ ರ‍್ಯಾಲಿಗೆ ರಾಹುಲ್‌ ಗಾಂಧಿ ಗೈರು

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version