Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ! - Vistara News

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

Bengaluru Karaga 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest17 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest19 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest21 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest23 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌