Site icon Vistara News

Nitin gadkari | ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಫೆಬ್ರವರಿಯಲ್ಲಿ ಉದ್ಘಾಟನೆ ನಿರೀಕ್ಷೆ: ಗಡ್ಕರಿ

highway

ಬೆಂಗಳೂರು: ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysore National Highway) ಯೋಜನೆಯನ್ನು ಫೆಬ್ರವರಿಯಲ್ಲಿ ಲೋಕಾರ್ಪಣೆ ಮಾಡಲು ಯತ್ನಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಹೇಳಿದ್ದಾರೆ.

ಎಥೆನಾಲ್‌ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕರ್ನಾಟಕದಲ್ಲಿ ಎಥೆನಾಲ್‌ ಬಂಕ್‌ ಅನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ನಿತಿನ್‌ ಗಡ್ಕರಿ (Nitin gadkari) ಸಲಹೆ ನೀಡಿದ್ದಾರೆ. ಶರ್ಮಾ ಟ್ರಾನ್ಸ್‌ಪೋರ್ಟ್‌ನಲ್ಲಿ ವೋಲ್ವೊ 9600 ಬಸ್‌ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ ಸಚಿವರು ಈ ವಿಷಯ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಬೆಂಗಳೂರು-ಚೆನ್ನೂ ಎಕ್ಸ್‌ಪ್ರೆಸ್‌ವೇಯ ವಿವರಗಳನ್ನು ನಿತಿನ್‌ ಗಡ್ಕರಿ ಅವರು ಟ್ವೀಟ್‌ ಮಾಡಿದ್ದಾರೆ. ಬೆಂಗಳೂರು-ಮೈಸೂರು ನ್ಯಾಶನಲ್‌ ಹೇವೇ 8,408 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.

Exit mobile version