Site icon Vistara News

Bengaluru News: ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿಗೆ ಏರ್ ಇಂಡಿಯಾದೊಂದಿಗೆ ಬಿಐಎಎಲ್‌ ಒಪ್ಪಂದ

BIAL tie up with Air India to develop Bangalore as a Premier aviation hub

ಬೆಂಗಳೂರು: ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್‌ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು (Bengaluru News) ಅಭಿವೃದ್ಧಿಪಡಿಸಲು ಮಹತ್ವದ ಒಪ್ಪಂದ ಮಾಡಿಕೊಂಡಿವೆ.

ಈ ಮೂಲಕ ಭಾರತದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ವಿಮಾನಯಾನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಈ ಒಪ್ಪಂದವು ಭಾರತೀಯ ವಾಯುಯಾನ ಉದ್ಯಮದಲ್ಲಿ ಮಹತ್ವದ ಮೈಲುಗಲ್ಲಾಗಿದೆ.‌

ಏರ್ ಇಂಡಿಯಾ (ಇತರ ಟಾಟಾ ಗ್ರೂಪ್ ಏರ್‌ಲೈನ್ಸ್ – AIX ಮತ್ತು ವಿಸ್ತಾರಾ ಜತೆಗೆ) ಮತ್ತು ಬಿಐಎಲ್‌ (BIAL) ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ.

ಇದನ್ನೂ ಓದಿ: Job Alert: ಗಮನಿಸಿ, 364 ಭೂ ಮಾಪಕರ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇನ್ನು ಎರಡೇ ದಿನ ಅವಕಾಶ

ಇದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್‌ವರ್ಕ್ ಮೂಲಕ ಟಾಟಾ ಗ್ರೂಪ್ ಏರ್‌ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾ ಪ್ರೀಮಿಯಂ ಹಾಗೂ ಪ್ರಯಾಣಿಕರಿಗೆ ಮೀಸಲಾದ ದೇಶೀಯ ವಿಶ್ರಾಂತಿ ಕೋಣೆ ನಿರ್ಮಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.

ಈ ಒಪ್ಪಂದದ ಭಾಗವಾಗಿ, ಬಿಎಲ್‌ಆರ್‌ (BLR) ವಿಮಾನ ನಿಲ್ದಾಣದಲ್ಲಿ ಸಮಗ್ರ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿ ಹೇಳುತ್ತದೆ.

ಅಷ್ಟೆ ಅಲ್ಲದೇ, ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘ-ಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆ ಗುರುತನ್ನು ವಿಸ್ತರಿಸುತ್ತಿದೆ. ಈ ಪಾಲುದಾರಿಕೆಯು MRO ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಜತೆಗೆ ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ.

ಇದನ್ನೂ ಓದಿ: Water Crisis: ತುಂಗಭದ್ರಾ ಜಲಾಶಯ ಖಾಲಿ ಖಾಲಿ! ಮುಂದಿನೆರಡು ತಿಂಗಳಿಗೆ ಕೇವಲ 1 ಟಿಎಂಸಿ ಲಭ್ಯ

ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಮಾತನಾಡಿ, “ಬೆಂಗಳೂರು ವಾಯು ಸಂಪರ್ಕ ಕೇಂದ್ರದ ಹಬ್‌ ಆಗಿದ್ದು, ವಿಮಾನಯಾನ ಹಾಗೂ ವಿಮಾನ ನಿಲ್ದಾಣದಲ್ಲಿನ ದಕ್ಷ ಕಾರ್ಯಾಚರಣೆಯಿಂದ ಗ್ರಾಹಕರು ಉತ್ತಮ ಅನುಭವ ಪಡೆಯುತ್ತಿದ್ದಾರೆ, ವಿಮಾನ ನಿಲ್ದಾಣದ ಅನುಭೂತಿಯನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ವಾಯು ಸಂಪರ್ಕವನ್ನು ವಿಸ್ತರಿಸಲು ಮುಂದಾಗಿದ್ದೇವೆ. ಇದಕ್ಕಾಗಿ. ಪ್ರಮುಖ ಎಂಆರ್‌ಒ (MRO) ಕೇಂದ್ರವನ್ನು ನಿರ್ಮಿಸುವ ದೃಷ್ಟಿಯಿಂದ ಬಿಐಎಎಲ್‌ (BIAL) ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಪಾಲುದಾರಿಕೆಯು ಏರ್ ಇಂಡಿಯಾ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಮಾತನಾಡಿ, “ದಕ್ಷಿಣ ಭಾರತದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ, ಬಿಎಲ್‌ಆರ್‌ (BLR) ವಿಮಾನ ನಿಲ್ದಾಣವು, ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಪ್ರಾಥಮಿಕ ಅಂತಾರಾಷ್ಟ್ರೀಯ ಗೇಟ್‌ವೇ ಆಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಸಹಯೋಗದ ಮೂಲಕ ಭಾರತೀಯ ವಾಯುಮಾರ್ಗಗಳ ಹಬ್‌ ಆಗಿ ಅಭಿವೃದ್ಧಿ ಪಡಿಸುವ ನಾಗರಿಕ ವಿಮಾನಯಾನ ಸಚಿವಾಲಯದ ದೃಷ್ಟಿಕೋನದಲ್ಲಿ ಹೊಂದಿಕೆಯಾಗಲಿದೆ.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

ಇದರಿಂದ ನಮ್ಮ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಇನ್ನಷ್ಟು ಹೆಚ್ಚಿಸುವ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಿಂದ ಹೊರ ಹೋಗುವ ಅರ್ಧದಷ್ಟು ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ನಮ್ಮ ಕ್ಯಾಚ್‌ಮೆಂಟ್ ಹೆಡ್‌ ಟು ಯುರೋಪ್, ಉತ್ತರ ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಪೂರ್ವಕ್ಕೆ ಹೋಗಬಹುದು, ಏರ್ ಇಂಡಿಯಾದೊಂದಿಗಿನ ನಮ್ಮ ಮೈತ್ರಿಯು ಈ ಗುರಿಯತ್ತ ಗಣನೀಯ ಏರಿಕೆಯನ್ನು ಸಾಧಿಸಲಿದೆ. ಮುಂದಿನ ಐದು ವರ್ಷಗಳಲ್ಲಿ ಬಿಎಲ್‌ಆರ್‌ (BLR) ವಿಮಾನ ನಿಲ್ದಾಣದಿಂದ ದೀರ್ಘ-ಪ್ರಯಾಣದ ಮಾರ್ಗಗಳ ಗಮನಾರ್ಹ ಪಾಲನ್ನು ಹೊಂದುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

Exit mobile version