Site icon Vistara News

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

BJP State Vice President Malavika Avinash latest statement

ಬೆಂಗಳೂರು: ಕರ್ನಾಟಕವು (Karnataka) ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಕಳವಳ (Bengaluru News) ವ್ಯಕ್ತಪಡಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಯ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಟೀಕಿಸಿದರು.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಮತ್ತು ಆ ಸ್ಫೋಟದ ಕುರಿತು ಎನ್‍ಐಎ ತನಿಖೆ ನಡೆಯುತ್ತಿದೆ. ಮೊದಲಿಗೆ ಪೊಲೀಸ್ ತನಿಖೆ ನಡೆಯುತ್ತಿತ್ತು. ಇದೀಗ ಸಿಸಿಬಿ ಮತ್ತು ಎನ್‍ಐಎ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಎನ್‍ಐಎ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ನಿನ್ನೆ ದಾಳಿ ನಡೆಸಿದೆ. ಶಿವಮೊಗ್ಗದವರಾದ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ತಿಳಿಸಿದರೂ, ಮುಖ್ಯಮಂತ್ರಿಯವರು ಅದನ್ನು ಅಲ್ಲಗಳೆದಿದ್ದಾರೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೆ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ತಿಳಿಸಿದರು.

ತರಬೇತಿ ಪಡೆದದವರೇ ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ್ದಾರೆ. ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರವು ತುಷ್ಟೀಕರಣದ ರಾಜಕಾರಣ ಮಾಡುತ್ತಿರುವಂತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ ಮತ್ತು ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಶೇಟ್ ಉಪಸ್ಥಿತರಿದ್ದರು.

Exit mobile version