Site icon Vistara News

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

Former DCM Govinda Karajola pressmeet

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಭಿವೃದ್ಧಿ ಎಂಬುದು ಕೇವಲ ಭಾಷಣಕ್ಕೆ ಸೀಮಿತ ಆಗಲಿಲ್ಲ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಕಾರಣಕರ್ತರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ (Bengaluru News) ತಿಳಿಸಿದರು.

ನಗರದ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದೆ. ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ತಿಳಿಸಿದರು.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ನನ್ನ ಜೀವನದಲ್ಲಿ ಇದೊಂದು ಸುವರ್ಣಾವಕಾಶ ಎಂದು ಭಾವಿಸುವೆ. ನರೇಂದ್ರ ಮೋದಿ ಅವರು ಕಳೆದ 23 ವರ್ಷಗಳಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಗುಜರಾತ್ ಮುಖ್ಯಮಂತ್ರಿಗಳಾಗಿ, ದೇಶದ ಪ್ರಧಾನಮಂತ್ರಿಗಳಾಗಿ ದೇಶದ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ಕಳಂಕರಹಿತ ರಾಜಕಾರಣ ಮಾಡಿದ ಏಕೈಕ ಶ್ರೇಷ್ಠ ವ್ಯಕ್ತಿ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಒಂದೇ ಪಕ್ಷದವರು 60 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಅವರು ಕಳಂಕ ಹೊತ್ತುಕೊಂಡರು. ಆದರೆ ಮೋದಿ ಅವರು ದೇಶದ ಅಭಿವೃದ್ಧಿ ಮಾಡಿ ಪ್ರಪಂಚದ ಅನೇಕ ದೇಶಗಳ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಅವರ ಜತೆ ಲೋಕಸಭಾ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ನನಗೆ ಲಭಿಸುತ್ತಿರುವುದು ಜೀವನದ ಸುವರ್ಣಾವಕಾಶ ಎನ್ನಲು ಕಾರಣ ಎಂದು ವಿವರಿಸಿದರು.

ಮೋದಿ ಅವರ ನೇತೃತ್ವದ ಕಾರ್ಯಕ್ರಮಗಳು, ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚನೆ ಮಾಡಲಿದ್ದೇವೆ. ಜೆಡಿಎಸ್ ಪಕ್ಷವು ಎನ್‍ಡಿಎ ತೆಕ್ಕೆಗೆ ಬಂದಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದನ್ನೂ ಓದಿ: Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ರುದ್ರಯ್ಯ, ಲಕ್ಷ್ಮೀನಾರಾಯಣ್, ರಾಜ್ಯ ವಕ್ತಾರರಾದ ಮೋಹನ್ ವಿಶ್ವ, ಸುರಭಿ ಹೋದಿಗೆರೆ, ವೆಂಕಟೇಶ್ ದೊಡ್ಡೇರಿ ಇದ್ದರು.

Exit mobile version