Site icon Vistara News

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

suspicious death Self Harming By Hight court lawyer

ಬೆಂಗಳೂರು: ಬೆಂಗಳೂರಲ್ಲಿ (Bengaluru News ) ಹೈಕೋರ್ಟ್‌ ವಕೀಲೆಯೊಬ್ಬರು (High court lawyer) ಅನುಮಾನಾಸ್ಪದ ರೀತಿಯಲ್ಲಿ (Suspicious Death) ಮೃತಪಟ್ಟಿದ್ದಾರೆ. ವಕೀಲೆಯ ಪತಿ ಕೆಎಎಸ್‌ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ (Self harming) ಪತ್ತೆಯಾಗಿದೆ. ಚೈತ್ರಾ ಮೃತ ದುರ್ದೈವಿ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಶಿವಕುಮಾರ್‌ ಮನೆಗೆ ವಾಪಸ್‌ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದಾರೆ. 11 ಗಂಟೆ ಸುಮಾರಿಗೆ ಚೈತ್ರಾಳ ತಮ್ಮ ಕರೆದಾಗ ಸ್ಪಂದಿಸಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೈಕೋರ್ಟ್‌ ವಕೀಲರಾಗಿರುವುದರಿಂದ ಯಾವುದಾದರೂ ಪ್ರಕರಣದಲ್ಲಿ ಯಾರಾದರೂ ಬೆದರಿಕೆ ಹಾಕಿದ್ದರಾ ಅಥವಾ ಕುಟುಂಬದಲ್ಲೇ ಏನಾದರೂ ಕಲಹ ಇತ್ತಾ ಎಂಬ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು,‌ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

ಚೈತ್ರಾ ಬರೆದ ಡೆತ್ ನೋಟ್ ಪತ್ತೆ

ಇನ್ನೂ ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿದೆ. ಆದರೆ ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಮೇಲ್ನೋಟಕ್ಕೆ ಹಿಂದೊಮ್ಮೆಯೂ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂಬ ಅನುಮಾನ ಮೂಡಿದೆ.

ಇನ್ನೂ ಡೆತ್‌ನೋಟ್‌ನಲ್ಲಿ ನನ್ನ ಪತಿ ತುಂಬಾ ಒಳ್ಳೆಯವರು, ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ, ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ.. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದಾರೆ. ಇನ್ನೂ ಯಾವ ವಿಚಾರಕ್ಕೆ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುದು ತಿಳಿದು ಬಂದಿಲ್ಲ.

ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಎಂಬುವವರು ಸೀರೆಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಮನೆಯಲ್ಲಿ ಡೆತ್ ನೋಟ್‌ವೊಂದು ಪತ್ತೆಯಾಗಿದೆ. ಅದರಲ್ಲಿ ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವುದು ಗೊತ್ತಾಗಿದೆ. ಆದರೆ ನೋಟ್‌ ಅನ್ನು ಅವರೆ ಬರೆದಿದ್ದ ಎಂಬುದರ ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ. ವರದಿ ಬಂದ ನಂತರ ಸಾವಿನ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version