ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮೈಸೂರಿನಲ್ಲಿ ಆ.9ರಂದು ಶುಕ್ರವಾರ ನಡೆಯುವ ಬೃಹತ್ ಜನಾಂದೋಲನ ಸಮಾವೇಶಕ್ಕೆ ನಾವೂ ಸೇರಿದಂತೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರು ಹಾಗೂ ಪ್ರವರ್ಗ-1 ಮತ್ತು ಪ್ರವರ್ಗ-2 ಒಟ್ಟು 197 ಜಾತಿಗಳ ಪ್ರತಿನಿಧಿಗಳು ಸೇರಿದಂತೆ ಸಮುದಾಯಗಳ ಎಲ್ಲರೂ ಸ್ವ ಇಚ್ಛೆಯಿಂದ ಭಾಗವಹಿಸುತ್ತಿದ್ದು, ನಾವೂ ಸಹ ಬೆಂಬಲ ಸೂಚಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್ (Bengaluru News) ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಬೇಕು ಎಂಬ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಅವರು ದೂರಿದರು.
ಇದನ್ನೂ ಓದಿ: Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಆರ್‌ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರಿಗೆ ದೂರು ನೀಡಿಸಿ, ಪ್ರಾಸಿಕ್ಯೂಷನ್ ಗೆ ಮುಂದಾಗಿರುವುದು ಕಾನೂನು ಬಾಹಿರವಾಗಿದೆ ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಎರಡು ಅವಧಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯಿಲ್ಲದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಬಸವಣ್ಣನವರ ತತ್ವದಂತೆ ಸೇವೆ ಸಲ್ಲಿಸಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ರಾಜ್ಯಪಾಲರು ಏಕಪಕ್ಷೀಯವಾಗಿ ವರ್ತಿಸಬಾರದು ಎಂದು ಮನವಿ ಮಾಡಿದರು.
ಇದನ್ನೂ ಓದಿ: Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಸಂಘಟನಾ ಕಾರ್ಯದರ್ಶಿ ಎನ್.ಶಿವಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.