ಬೆಂಗಳೂರು: ಬೆಂಗಳೂರಿನ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಇದೇ ಜೂ. 29ರಂದು ಶನಿವಾರ ಸಂಜೆ 5.30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರಿಗೆ ಜೀವಮಾನ ಸಾಧನೆಯ ಅಭಿನಂದನಾ ಸಮಾರಂಭ ಹಾಗೂ ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.
ಇದನ್ನೂ ಓದಿ: Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್ ನಾಗಲ್
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ, ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಕರ್ನಾಟಕ ಕರ್ನಾಟಕ ಹೈಕೋರ್ಟ್ ನ್ಯಾ. ಟಿ. ಜಿ. ಶಿವಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ರಾಜಸ್ಥಾನ ಐಜಿಪಿ ರಾಘವೇಂದ್ರ ಸುಹಾಸ್, ಮೈಸೂರಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಜೀತ್ ವಿ.ಜೆ., ಡಾ.ಎನ್.ಎಸ್. ನಾಗೇಶ್ ಪಾಲ್ಗೊಳ್ಳುವರು. ವಿಶೇಷ ಅತಿಥಿಗಳಾಗಿ ಐಎಎಸ್ ಅಧಿಕಾರಿಗಳಾದ ಪ್ರದೀಪ್ ಪ್ರಭಾಕರ್, ಮಂಜುಶ್ರೀ ಎನ್. ಅವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ: Parliament Session 2024: ಜೂನ್ 24ರಿಂದ ಸಂಸತ್ ವಿಶೇಷ ಅಧಿವೇಶನ; ಸ್ಪೀಕರ್ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ನಾಗೇಂದ್ರ ಬಾಬು, ಶಶಾಂತ್ ಎನ್.ಎಂ., ಸುಮಾ ಎಚ್.ಕೆ., ನವ್ಯ ಕೆ., ಚಂದನ್ ಬಿ.ಎಸ್., ಡಾ. ವಿವೇಕ್, ಲೇಖನ್ ಎಂ., ರಕ್ಷಿತ್ ಕೆ. ಗೌಡ, ರಾಹುಲ್ ಗೌಡ ಅವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಮತ್ತು ಎನ್.ಆರ್.ಐ ಒಕ್ಕಲಿಗರ ಬ್ರಿಗೇಡ್‌ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ.