ಬೆಂಗಳೂರು: ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ “ದೀಕ್ಷಾ ದಿನʼದ ಪ್ರಯುಕ್ತ ಒಕ್ಕಲಿಗ ಯುವ ಬ್ರಿಗೇಡ್ ಸೇವಾ ಸಂಸ್ಥೆಯಿಂದ ಇದೇ ಜು.28ರಂದು ಹಾಗೂ ಆಗಸ್ಟ್ 1, 3 ಮತ್ತು 5ರಂದು “ನಿರ್ಮಲ ಸಹಾಯ ಹಸ್ತ” ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.
ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದೀಕ್ಷಾ ದಿನದ ಪ್ರಯುಕ್ತ ಪ್ರತಿವರ್ಷದಂತೆ, ಈ ವರ್ಷವೂ ಕೂಡ, ಶಾಲೆಗಳಿಗೆ ಅಗತ್ಯ ಸೌಲಭಗಳನ್ನು ಒದಗಿಸುವ ಹಾಗೂ ಶಾಲೆಯ ದತ್ತು ಸ್ವೀಕಾರ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್ ಸಮಾಲೋಚನೆ
ಜು.28ರಂದು ಒಡೆಯರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 100 ವಿದ್ಯಾರ್ಥಿಗಳಿಗೆ ಊಟದ ಉಪಕರಣಗಳನ್ನು ವಿತರಿಸುವ ಕಾರ್ಯಕ್ರಮ. ಆ.1 ರಂದು ಚಪ್ಪರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ.
ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ
ಆ.3ರಂದು ಗಂಗನಕುಪ್ಪೆ ಕಿರಿಯ ಮಾಧ್ಯಮಿಕ ಶಾಲೆಗೆ ಕಂಪ್ಯೂಟರ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ಮತ್ತು ಆ.05 ರಂದು ಸರಗೂರು ಆದಿವಾಸಿಗಳ ಶಾಲೆಗೆ ಸ್ಕೂಲ್ ಬ್ಯಾಗ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.