ಬೆಂಗಳೂರು: ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು (Bengaluru News) ನಡೆದಿದೆ. ಕೆಲ ಕಿಡಿಗೇಡಿಗಳು ನಾಯಿಗಳಿಗೆ ವಿಷ ಪ್ರಾಶನ (Poisoning of dogs) ಮಾಡಿ ಹತ್ಯೆ ಮಾಡಿದ್ದಾರೆ.
ಪರಪ್ಪನ ಅಗ್ರಹಾರದ ಬಳಿ ಇರುವ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್ ಸುತ್ತಮುತ್ತ 15ಕ್ಕೂ ಬೀದಿ ನಾಯಿಗಳಿದ್ದವು. ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್ ನಿವಾಸಿಗಳು ಬೀದಿ ನಾಯಿಗಳ ಸ್ಥಳಾಂತರಕ್ಕೆ ಬಿಬಿಎಂಪಿಗೆ ದೂರು ನೀಡಿದ್ದರು. ಆದರೆ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಲು ಆಗೋದಿಲ್ಲವೆಂದು ಅಧಿಕಾರಿಗಳು ಹೇಳಿದ್ದರು.
ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದಾಗ ಅಧಿಕಾರಿಗಳ ಜತೆಗೆ ನಿವಾಸಿಗಳು ಕಿರಿಕ್ ತೆಗೆದಿದ್ದರು. ಹೀಗಾಗಿ ಅಪಾರ್ಟ್‌ಮೆಂಟ್ ನಿವಾಸಿಗಳ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು. ಹೀಗೆ ಕಿರಿಕ್ ಆದ ಕೆಲ ದಿನದಲ್ಲೇ ಎರಡು ಬೀದಿ ನಾಯಿಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದವು.
ನಾಯಿಗಳಿಗೆ ಹಿಂಸೆ ಕೊಟ್ಟು ಸಾಯಿಸಲಾಗಿದೆ ಎಂದು ಮತ್ತೊಂದು ದೂರು ದಾಖಲಾಗಿದೆ. ನಾಯಿಗಳನ್ನು ಕೊಂದ ಆರೋಪದಡಿ ಹಾಗೂ ಅಧಿಕಾರಿಗಳ ಜತೆಗೆ ಗಲಾಟೆ ಮಾಡಿದ ಹಿನ್ನೆಲೆಯಲ್ಲಿ ಎರಡು ದೂರುಗಳು ದಾಖಲಾಗಿದೆ. ಇನ್ನೂ ನಾಯಿಗಳನ್ನು ಕೊಂದು ಅಪಾರ್ಟ್‌ಮೆಂಟ್ ನಿವಾಸಿಗಳು ಹೂತಿಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್ ನಿವಾಸಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ