Site icon Vistara News

Bengaluru News : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಮರ; ಆಸ್ಪತ್ರೆ ಪಾಲಾದ ಅಣ್ಣ-ತಂಗಿ

Several injured as tree falls on them in Bengaluru

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru News) ವಾರಕ್ಕೊಂದು ಮರ ಬೀಳುವ ಪ್ರಕರಣಗಳು ವರದಿ (Tree fall) ಆಗುತ್ತಲೇ ಇದೆ. ಸದ್ಯ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಸಮೀಪ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಬಿದ್ದಿದೆ. ಚಲಿಸುತ್ತಿದ್ದ ಕಾರುಗಳ ಮೇಲೆ ಮರ ಬಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ಕಾರುಗಳಿಗೆ ಹಾನಿಯಾಗಿದೆ.

ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ, ಅರಣ್ಯ ಸಿಬ್ಬಂದಿ ಮರ ತೆರವು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ನಕ್ಕುಲ್ ಹಾಗೂ ನತಾಶಾ ಎಂಬುವವರಿಗೆ ಗಾಯವಾಗಿದೆ. ಅಣ್ಣ ತಂಗಿ ಇಬ್ಬರು ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮರ ಬಿದ್ದಿದೆ. ಓರ್ವ ಗಾಯಾಳಿಗೆ ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಎದೆಯ ಮೂಳೆ ಮುರಿದಿರುವ ಸಾಧ್ಯತೆ ಇದೆ. ಮತ್ತೊಬ್ಬ ಗಾಯಾಳುವಿನ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಸಿಟಿ ರೌಂಡ್ಸ್‌

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version