Site icon Vistara News

Narendra Modi: ಮೋದಿ ಎಂದರೆ ಮೇಕರ್ ಆಫ್ ಡೆವಲಪ್ಡ್‌ ಇಂಡಿಯಾ: ಅನುರಾಗ್ ಠಾಕೂರ್

Union Minister Anurag Singh Thakur interaction program with software engineers

ಬೆಂಗಳೂರು: ಮೋದಿ (ಎಂಒಡಿಐ) ಮಾಸ್ಟರ್ ಆಫ್ ಡಿಜಿಟಲ್ ಇನ್‍ಫರ್ಮೇಶನ್ ಅಥವಾ ಮೇಕರ್ ಆಫ್ ಡೆವಲಪ್ಡ್‌ ಇಂಡಿಯಾ ‘ವಿಕಸಿತ ಭಾರತ’ ಎಂದು ಕರೆಯಬಹುದು ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ (Narendra Modi) ವಿಶ್ಲೇಷಿಸಿದ್ದಾರೆ.

ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಗುರುವಾರ ನಡೆದ ಸಾಫ್ಟ್‌ವೇರ್ ತಂತ್ರಜ್ಞರ ಜತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಟಿ ಕುರಿತು ಮಾತನಾಡುವಾಗ ಇನ್‍ಫ್ರಾ (ಮೂಲಸೌಕರ್ಯ) ಮತ್ತು ಟೆಕ್ನಾಲಜಿ (ತಂತ್ರಜ್ಞಾನ) ಕುರಿತು ಮಾತನಾಡಬೇಕಾಗುತ್ತದೆ. ಸಾರ್ವಜನಿಕ ಮೂಲಸೌಕರ್ಯ, ಸಾರ್ವಜನಿಕ ಡಿಜಿಟಲ್ ಮೂಲಸೌಕರ್ಯ ಅಭಿವೃದ್ಧಿಗೆ ಕಳೆದ ವರ್ಷ 10 ಲಕ್ಷ ಕೋಟಿ ವ್ಯಯಿಸಿದ್ದರೆ, ಈ ವರ್ಷ 11 ಲಕ್ಷ ಕೋಟಿಗೂ ಹೆಚ್ಚು ವೆಚ್ಚ ಮಾಡುತ್ತಿದ್ದೇವೆ ಎಂದು ತಿಳಿಸಿದರು.

10 ವರ್ಷಗಳ ಹಿಂದೆ ಭಾರತ ಮತ್ತು ಭಾರತೀಯರು ಕಾಂಗ್ರೆಸ್ಸಿನ ಮತ್ತು ಆ ಸರ್ಕಾರದ ಭಾಗೀದಾರ ಪಕ್ಷಗಳ ಭ್ರಷ್ಟಾಚಾರ ಹಗರಣಗಳಿಂದ ಮುಕ್ತಿ ಪಡೆಯುವುದು ಹೇಗೆ ಎಂದು ಚಿಂತಿಸುವ ಸ್ಥಿತಿ ಇತ್ತು. ಕಾಮನ್‍ವೆಲ್ತ್ ಗೇಮ್ಸ್ ಹಗರಣ, ಅಗಸ್ಟ ವೆಸ್ಟಂಡ್ ಹಗರಣ, ಕಲ್ಲಿದ್ದಲು ಹಗರಣ, ಅಂತರಿಕ್ಷ್ ದೇವಾಸ್ ಹಗರಣ ಮೊದಲಾದವುಗಳ ಬಗ್ಗೆ ಇಂದಿನ 18-22ರ ಹರೆಯದ ಯುವಜನರಿಗೆ ಅರಿವಿರಲಾರದು. 2009 ರಿಂದ 2014 ರ ನಡುವೆ ಒಂದಾದ ನಂತರ ಒಂದು ಹಗರಣಗಳು ನಡೆದವು. 2014ರಲ್ಲಿ ಅಭಿವೃದ್ಧಿ ಸ್ಥಗಿತವಾಗಿತ್ತು. ದೇಶದಲ್ಲಿ ಹಣದುಬ್ಬರ ಹೆಚ್ಚಾಗಿತ್ತು. ಅಸಮರ್ಪಕ ನೀತಿಯಿಂದ ದೇಶಕ್ಕೆ ಸಮಸ್ಯೆ ಉಂಟಾಗಿತ್ತು ಎಂದು ಆರೋಪಿಸಿದ ಅವರು, ಆಗ ಬಿಜೆಪಿ ಪರ್ಯಾಯವಾಗಿ ಆಡಳಿತಕ್ಕೆ ಬಂತು ಎಂದು ವಿವರಿಸಿದರು.

ಇದನ್ನೂ ಓದಿ: Karnataka Weather : ಕರಾವಳಿ ಸೇರಿದಂತೆ ಒಳನಾಡಿನಲ್ಲಿ ಬಿಸಿ ಗಾಳಿ ಎಚ್ಚರಿಕೆ

ಆಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಆಡಳಿತ ಆರಂಭವಾಯಿತು. ಸ್ವಚ್ಛ- ಪ್ರಾಮಾಣಿಕ ಆಡಳಿತವನ್ನು ನೀಡುವುದಾಗಿ ತಿಳಿಸಲಾಯಿತು. ಕಳೆದ 10 ವರ್ಷಗಳಲ್ಲಿ ಮೋದಿಯವರ ವಿರುದ್ಧ ಹಾಗೂ ಅವರ ಸರ್ಕಾರದ ಒಬ್ಬರೇ ಒಬ್ಬ ಸಚಿವರ ವಿರುದ್ಧ ಒಂದು ಪೈಸೆಯ ಭ್ರಷ್ಟಾಚಾರದ ಆರೋಪಗಳಿಲ್ಲ. ಐಟಿ ಎಂದರೆ ಕೇವಲ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಅಲ್ಲ, ಅದನ್ನು ಇಂಡಿಯ ಟುಮಾರೊ (ಭವಿಷ್ಯದ ಭಾರತ) ಎಂದೂ ಅರ್ಥೈಸಬಹುದು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ವಿಕಸಿತ ಭಾರತದ ಸಂಕಲ್ಪ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Ugadi 2024: ಯುಗಾದಿಗೆ ಏನ್‌ ವಿಶೇಷ? ಇಲ್ಲಿದೆ ನಿಮಗಾಗಿ ಸ್ಪೆಷಲ್‌ ಮೆನು!

ಈ ಸಂದರ್ಭದಲ್ಲಿ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರೀ, ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿರಣ್ ಕುಮಾರ್ ಅಣ್ಣಿಗೇರಿ, ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಜಯ್‍ಕುಮಾರ್ ಮತ್ತು ಪಕ್ಷದ ಮುಖಂಡರು ಭಾಗವಹಿಸಿದ್ದರು.

Exit mobile version