Site icon Vistara News

Bengaluru News : ಹದಗೆಟ್ಟ ರಸ್ತೆಗಳ ರಿಪೇರಿಗೆ ಮುಂದಾದ ಬಿಬಿಎಂಪಿ; ಇನ್ನೊಂದು ತಿಂಗಳು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್‌!

Bengaluru News

ಬೆಂಗಳೂರು: ರಾಜಧಾನಿ ಬೆಂಗಳೂರಿನ (Bengaluru News ) ಹದಗೆಟ್ಟಿರುವ ರಸ್ತೆಗಳ ರಿಪೇರಿ ಕೆಲಸಕ್ಕೆ (Major roadworks in Bengaluru) ಬಿಬಿಎಂಪಿ ಕೈಹಾಕಿದೆ. ಹೀಗಾಗಿ ವಾಹನಗಳ ಸಂಚಾರದಲ್ಲಿ ಏರುಪೇರಾಗಲಿದೆ. ಬೆಂಗಳೂರಿನ ಅತಿ ಹೆಚ್ಚು ಜನದಟ್ಟಣೆ ಪ್ರದೇಶ ಅಂದರೆ ಅದು ಚಿಕ್ಕಪೇಟೆ ಹಾಗೂ ಕೆ.ಆರ್ ಮಾರುಕಟ್ಟೆ ಆಗಿದೆ. ಸದ್ಯ ಚಿಕ್ಕಪೇಟೆ, ಕೆ.ಆರ್.ಮಾರ್ಕೆಟ್ ಸುತ್ತ ಒಂದು ತಿಂಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ (Traffic Notice) ಉಂಟಾಗಲಿದೆ.

ಬಿಬಿಎಂಪಿಯು ರಸ್ತೆ ರಿಪೇರಿ ಹಾಗೂ ಹೊಸ ರಸ್ತೆ ನಿರ್ಮಾಣ ಕಾಮಾಗಾರಿಯನ್ನು ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸುಮಾರು 30 ದಿನ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಮನವಿ ಮಾಡಲಾಗಿದೆ. ನಗರದ ಸಂಚಾರ ಪಶ್ಚಿಮ ವಿಭಾಗದ ಹಲಸೂರು ಗೇಟ್, ಚಿಕ್ಕಪೇಟೆ ಹಾಗೂ ಸಿ.ಟಿ.ಮಾರ್ಕೆಟ್ ಸಂಚಾರ ಪೊಲೀಸ್‌ರು ಈ ಕುರಿತು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ವಾಹನಗಳ ಸಂಚಾರಕ್ಕೆ ರಸ್ತೆ ಮಾರ್ಗಗಳಲ್ಲಿ ಕೆಲವು ಮಾರ್ಪಾಡು ಮಾಡಿದ್ದಾರೆ.

ಇದನ್ನೂ ಓದಿ: UGCET 2024: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ರಿಸ್ಟಲ್‌ ಅನೌನ್ಸ್‌; ಆಪ್ಶನ್ ಎಂಟ್ರಿಗೆ ಇವತ್ತೆ ಲಾಸ್ಟ್

ಯಾವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ‌?

ಕಬ್ಬನ್ ಪೇಟೆ ಮುಖ್ಯ ರಸ್ತೆ, ಅವೆನ್ಯೂ ರಸ್ತೆಯಿಂದ ಸಿದ್ದಣ್ಣಗಲ್ಲಿ, ಬನ್ನಪ್ಪಪಾರ್ಕ್ ರಸ್ತೆ, ಅವೆನ್ಯೂ ರಸ್ತೆಯಿಂದ 15ನೇ ಕ್ರಾಸ್, ವಿಲ್ ರಸ್ತೆ, ಡಾ.ಟಿಸಿಎಂ ರಾಯನ್ ರಸ್ತೆ ಜಂಕ್ಷನ್‌ನಿಂದ ಅಕ್ಕಿಪೇಟೆ ಮುಖ್ಯರಸ್ತೆ, ಆರ್.ಟಿ.ಸ್ಪೀಟ್‌ನಲ್ಲಿ ಬಿವಿಕೆ ಐಯ್ಯಂಗಾರ್ ರಸ್ತೆಯಿಂದ ಅವನೂ ರಸ್ತೆ, ಆರ್.ಟಿ.ಸ್ಪೀಟ್‌ನಲ್ಲಿ ಬಿವಿಕೆ ಐಯ್ಯಂಗಾರ್ ರಸ್ತೆಯಿಂದ ಬಳೆಪೇಟೆ ಮುಖ್ಯರಸ್ತೆ, ಸಿಟಿ ಸ್ಪೀಟ್‌ನಲ್ಲಿ ದೇವರದಾ ಸಿಮಯ್ಯ ರಸ್ತೆಯಿಂದ ನಗರ್ತ ಪೇಟೆ ಮುಖ್ಯ ರಸ್ತೆವರೆಗೆ ಒಂದು ತಿಂಗಳವರೆಗೆ ತಾತ್ಕಾಲಿಕವಾಗಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಬ್ಬನ್ ಪೇಟೆ ಮುಖ್ಯ ರಸ್ತೆಯಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಬನ್ನಪ್ಪ ರಸ್ತೆ ಮತ್ತು ಕೆ.ಜಿ ರಸ್ತೆ ಬಳಸಬಹುದು. ಹಲಸೂರುಗೇಟ್ ಪೊಲೀಸ್ ಠಾಣೆ ಜಂಕ್ಷನ್‌ನಿಂದ ಅವೆನ್ಯೂ ರಸ್ತೆ ಕಡೆ ಸಂಚರಿಸುವ ವಾಹನಗಳು ಕೆ.ಜಿ. ರಸ್ತೆ ಮುಖಾಂತರ ಸಂಚರಿಸಿ ಅವೆನ್ಯೂ ರಸ್ತೆ ತಲುಪಬಹುದು.

ಬನ್ನಪ್ಪ ರಸ್ತೆ ಕಾಮಗಾರಿ ಹಿನ್ನೆಲೆ ಕಬ್ಬನ್‌ಪೇಟೆ ಮುಖ್ಯ ರಸ್ತೆ ಬಳಸಬಹುದು. ಸಿ.ಟಿ.ಮಾರ್ಕೆಟ್ ಸಂಚಾರ ಠಾಣೆ ವ್ಯಾಪ್ತಿ- ಆ.ಟಿ ಸ್ಪೀಟ್ ರಸ್ತೆಯಲ್ಲಿ ಕಾಮಗಾರಿ ವೇಳೆ ಬಿವಿಕೆ ಅಯ್ಯಂಗಾರ್ ರಸ್ತೆಯಿಂದ ಅವನ್ಯೂ ರಸ್ತೆಗೆ ಸಂಚರಿಸಬೇಕಾದ ವಾಹನಗಳು ಬಿವಿಕೆ ಅಯ್ಯಂಗಾರ್‌ ರಸ್ತೆಯಲ್ಲಿ ಮುಂದುವರೆದು ಮಾಮೂಲ್ ಪೇಟೆಗೆ (ಬೆಳ್ಳಿ ಬಸವಣ್ಣ ದೇವಸ್ಥಾನ ರಸ್ತೆ) ಎಡ ತಿರುವು ಪಡೆದು ಅವನ್ಯೂ ರಸ್ತೆಯನ್ನು ಸಂಪರ್ಕಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version