Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್‌ ಕಟ್‌ - Vistara News

ಬೆಂಗಳೂರು

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್‌ ಕಟ್‌

ಬೆಂಗಳೂರು ನಗರದ 66/11 ಕೆ.ವಿ ‘ಬಾಣಸವಾಡಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಆ.13ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

VISTARANEWS.COM


on

bengaluru power cut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ 66/11 ಕೆ.ವಿ ‘ಬಾಣಸವಾಡಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.13ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Palika Bazar: ಬೆಂಗಳೂರಿನಲ್ಲೂ ದೆಹಲಿಯಂತಹ ʼಪಾಲಿಕಾ ಬಜಾರ್ʼ; ಎಲ್ಲಿ ನಿರ್ಮಾಣ? ಯಾವಾಗ ಆರಂಭ?

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಹೊರಮಾವು ಪಿ & ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯು.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್,

ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯ ರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ, ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

DK Shivakumar: ಸಿಬಿಐ ಎಫ್ಐಆರ್‌ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಸಲು ಅವಕಾಶ ನೀಡಬೇಕು, ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಆದೇಶ ರದ್ದು‌ಮಾಡಬೇಕು ಎಂದು ಶಾಸಕ ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ‌ ವಾದ ಮಂಡಿಸಿದ್ದಾರೆ. ಇದಕ್ಕೆ ಡಿಕೆಶಿ ಪರ ವಕೀಲ ಕಪಿಲ್‌ ಸಿಬಲ್‌ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ದುರುದ್ದೇಶದಿಂದ ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ನೀಡಲಾಗಿದೆ. ಇದನ್ನು ಸ್ಥಳೀಯ ಪೊಲೀಸರು ಮತ್ತು ಲೋಕಾಯುಕ್ತರು ಏಕೆ ತನಿಖೆ ನಡೆಸಬಾರದು ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ (DK Shivakumar) ಸಿಬಿಐ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ನ್ಯಾ.ಕೆ ಸೋಮಶೇಖರ್‌ ಮತ್ತು ನ್ಯಾ. ಉಮೇಶ್‌ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿದೆ.

ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿ, ನಿರ್ದಿಷ್ಟ ಒಪ್ಪಿಗೆ ಮತ್ತು ಸಾಮಾನ್ಯ ಒಪ್ಪಿಗೆಯ ಬಗ್ಗೆ ಸಂವಿಧಾನದ 131ನೇ ವಿಧಿಗೆ ಸಂಬಂಧಿಸಿದ ಮಾಹಿತಿ ದಾಖಲೆ ಸಲ್ಲಿಸಲಾಗಿದೆ. ಡಿಕೆಶಿ ಎಫ್‌ಐಆರ್‌ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು ಎಂದು. ಈ ಪ್ರಕರಣಕ್ಕೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದಿಲ್ಲ. ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಈಗ ಸರ್ಕಾರ ಒಪ್ಪಿಗೆ ಹಿಂಪಡೆದಿದೆ. ಇನ್ನು ಎಫ್‌ಐಆರ್‌ ಏನಾಗಲಿದೆ ಎಂಬ ಪ್ರಶ್ನೆ ಹೈಕೋರ್ಟ್‌ ಮುಂದಿದೆ. ಅಗತ್ಯವಾದ ಎಲ್ಲರೂ ನ್ಯಾಯಾಲಯದ ಮುಂದೆ ಇದ್ದಾರೆ. ಇಲ್ಲಿ ಔಪಚಾರಿಕ ಪಕ್ಷಕಾರರು ಸಹ ಇಲ್ಲ. ಹೀಗಾಗಿ ಸಂವಿಧಾನದ 131ನೇ ವಿಧಿ ಅನ್ವಯಿಸಲ್ಲ ಎಂದು ತಿಳಿಸಿದರು.

ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ‌ ವಾದ ಮಂಡಿಸಿ, ಆರ್ಟಿಕಲ್ 131 ರಾಜ್ಯಕ್ಕೆ ಅನ್ವಯ ಆಗುತ್ತದೆ, ಒಬ್ಬ ವ್ಯಕ್ತಿಗೆ ಅಲ್ಲ. ಇಲ್ಲಿ ರಾಜ್ಯ ಸರ್ಕಾರ ಪ್ರಕರಣ ವಾಪಸ್‌ ಪಡೆದಿರುವುದು ಕಾನೂನು ಬಾಹಿರ. ಸರ್ಕಾರ ಇದನ್ನು ಲೋಕಾಯುಕ್ತಕ್ಕೆ ನೀಡಿದೆ. ಮತ್ತೊಂದೆಡೆ ಸಿಬಿಐ ಎಫ್ಐಆರ್ ಸಹ ಇನ್ನೂ ಹಾಗೇ ಇದೆ. ಒಮ್ಮೆ ಸಿಬಿಐ ಎಫ್ಐಆರ್ ರಿಜಿಸ್ಟರ್ ಮಾಡಿದರೆ ಕೇಂದ್ರ ಸರ್ಕಾರಕ್ಕೂ ವಾಪಸ್‌ ಪಡೆಯಲು‌ ಅಧಿಕಾರ ಇಲ್ಲ. ಕೇವಲ ನ್ಯಾಯಾಲಯಕ್ಕೆ ಮಾತ್ರ ಅಂತಹ ಅಧಿಕಾರ ಇರುತ್ತದೆ. ಒಮ್ಮೆ ಸಿಬಿಐ ತನಿಖೆ ಆರಂಭವಾದ ಮೇಲೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ. ಸಿಬಿಐ ಎಫ್ಐಆರ್‌ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿಯ ಕ್ರೈಂ‌ ತನಿಖೆಯ ವೇಳೆ ಸಿಬಿಐ ಸ್ವತಂತ್ರವಾಗಿರುತ್ತದೆ ಎಂದು ತಿಳಿಸಿದರು.

ಈ ವೇಳೆ ಲೋಕಾಯುಕ್ತರು ದಾಖಲಿಸುವ ಎಫ್‌ಐಆರ್‌ ಏನಾಗಲಿದೆ ಎಂದು ಯತ್ನಾಳ್ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿತು. ಇದಕ್ಕೆ ವಕೀಲ‌ ದಳವಾಯಿ ಉತ್ತರಿಸಿ, ಲೋಕಾಯುಕ್ತ ಎಫ್‌ಐಆರ್‌ ಸ್ವತಂತ್ರವಾಗಿ ನಿಲ್ಲುವುದಿಲ್ಲ. ಸರ್ಕಾರ ಸಿಬಿಐಗೆ ನೀಡಿದ ಅನುಮತಿಯನ್ನು ಅಕ್ರಮವಾಗಿ ಹಿಂಪಡೆದಿದೆ. ಇದರಿಂದ ಸಿಬಿಐ ಎಫ್‌ಐಆರ್‌ ರದ್ದು ಮಾಡಲಾಗಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಸಲು ಅವಕಾಶ ನೀಡಬೇಕು, ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಆದೇಶ ರದ್ದು‌ಮಾಡಬೇಕು ಎಂದು ಕೋರಿದರು.

ಡಿಕೆಶಿ ಪರ ಖ್ಯಾತ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿ, ನಾವು ರಾಜ್ಯ ಸರ್ಕಾರ ಕೇವಲ ಅನುಮತಿಗೆ ಮಾತ್ರ ಸೀಮಿತ. ನಮಗೂ ಎಫ್‌ಐಆರ್‌ ರದ್ದು ಕೋರಿದ್ದಕ್ಕೂ ಸಂಬಂಧವಿಲ್ಲ. ಇಲ್ಲಿ ವೈಯುಕ್ತಿಕ ಪ್ರಕರಣಕ್ಕೂ ರಾಜ್ಯ ಸರ್ಕಾರಕ್ಕೆ ಏನು ಸಂಬಂಧವಿಲ್ಲ. ಇಲ್ಲಿ ಸಿಬಿಐ ಹೇಗೆ ಅನುಮತಿ ಪಡೆದಿದೆ? ಅದನ್ನ ಎಲ್ಲಿಯೂ ಬಹಿರಂಗಪಡಿಸಿಲ್ಲ. ಇದನ್ನು ಕೋರ್ಟ್‌ಗೆ ತಿಳಿಸದೇ ವಂಚಿಸಲಾಗಿದೆ. ಈ ಹಿಂದೆ ಸಿಎಂ ಬಿ.ಎಸ್‌. ಯಡಿಯೂರಪ್ಪರ ಮೌಖಿಕ ಆದೇಶ ಆಧರಿಸಿ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಇಡಿ ದಾಖಲೆಗಳನ್ನು ಸ್ಥಳೀಯ ಪೊಲೀಸರಿಗೆ ಕಳುಹಿಸಬೇಕಿತ್ತು. ಆದರೆ ಅವರು ಸಿಬಿಐಗೆ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ | Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

ಆದಾಯ ತೆರಿಗೆ ಇಲಾಖೆಯ ಎಫ್‌ಐಆರ್‌ನ ಕೋರ್ಟ್ ರದ್ದು ಮಾಡಿದೆ. ಆದ್ದರಿಂದ ಇದು ಸಿಬಿಐಗೆ ಅನುಮತಿ ವಿಚಾರವೇ ಅಲ್ಲ. ಆದರೂ ಕಾನೂನಾತ್ಮಕ ವಿಚಾರವಾಗಿದೆ. ಇದನ್ನು ಸ್ಥಳೀಯ ಪೊಲೀಸರು ಮತ್ತು ಲೋಕಾಯುಕ್ತರು ಏಕೆ ತನಿಖೆ ನಡೆಸಬಾರದು? ಸಿಬಿಐ ಏಕೆ ತನಿಖೆ ನಡೆಸಬೇಕು? ಇದರಲ್ಲಿ ಸಂಪೂರ್ಣ ರಾಜಕೀಯ ದುರುದ್ದೇಶ ಅಡಗಿದೆ ಎಂದು ವಾದಿಸಿದರು. ವಾದಿ-ಪ್ರತಿವಾದ ಆಲಿಸಿದ ವಿಭಾಗೀಯ ಪೀಠ, ವಿಚಾರಣೆ ಮುಕ್ತಾಯ ಮಾಡಿತೀರ್ಪು ಕಾಯ್ದಿರಿಸಿದೆ.

Continue Reading

ಬೆಂಗಳೂರು

Road Accident : ಟಿಪ್ಪರ್ ಲಾರಿಗೆ ಸಿಲುಕಿ ಸವಾರ ದುರ್ಮರಣ; ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಂಭೀರ

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೊಬ್ಬ ಮೃತಪಟ್ಟರೆ, ಚಿಕ್ಕಬಳ್ಳಾಪುರದಲ್ಲಿ ಆಂಧ್ರಗೆ ಸೇರಿದ ಬಸ್‌ವೊಂದು ಪಲ್ಟಿ ಹೊಡೆದಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಟಿಪ್ಪರ್ ಲಾರಿಗೆ ಸಿಲುಕಿ ಬೈಕ್‌ ಸವಾರರೊಬ್ಬರು ದುರ್ಮರಣ (Road Accident) ಹೊಂದಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ಜಂಕ್ಷನ್ ಬಳಿ ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದೆ. ಕೂಡ್ಲು ನಿವಾಸಿ ವೇಣುಗೋಪಾಲ್ (53) ಮೃತ ದುರ್ದೈವಿ.

ಬೊಮ್ಮನಹಳ್ಳಿಯಿಂದ ಮಡಿವಾಳ ಕಡೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಲಾರಿಯ ಎಡಭಾಗದಲ್ಲಿ ಹೋಗುತ್ತಿದ್ದ ಬೈಕ್‌ಗೆ ಟಚ್ ಆಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ವೇಣುಗೋಪಾಲ್‌ ಕೆಳಗಡೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಲಾರಿ ಹರಿದಿದೆ. ಕೂಡಲೇ ಸಹಾಯ ಧಾವಿಸಿದ ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಮಾರ್ಗ ಮಧ್ಯೆ ವೇಣುಗೋಪಾಲ್ ಕೊನೆಯುಸಿರೆಳೆದಿದ್ದಾರೆ.

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಲಾರಿ ಚಾಲಕನನ್ನು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಆಂಧ್ರ ಬಸ್‌ ಪಲ್ಟಿ; ಪ್ರಯಾಣಿಕರು ಗಂಭೀರ

ಬೆಂಗಳೂರಿನಿಂದ ಪುಟ್ಟಪರ್ತಿ ಕಡೆಗೆ ಹೋಗುತ್ತಿದ್ದ ಆಂಧ್ರ ಬಸ್‌ವೊಂದು ಪಲ್ಟಿಯಾಗಿದೆ. ಆಂಧ್ರ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ಚೆಂಡೂರಿನ ಬಳಿ ಎಪಿಎಸ್ ಆರ್ ಸಿ ಬಸ್ ಪಲ್ಟಿಯಾಗಿದೆ. ಗಾಯಾಳುಗಳಿಗೆ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

ಮೈಸೂರಿನಲ್ಲಿ ರಸ್ತೆಗೆ ಅಡ್ಡ ಬಂದ ಮೊಸಳೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂಬದಕೊಲ್ಲಿ ಗ್ರಾಮದ ಬಳಿ ಮೊಸಳೆ ಪ್ರತ್ಯಕ್ಷಗೊಂಡಿದೆ. ಹುಲ್ಲಹಳ್ಳಿ ಮತ್ತು ಕಂಬದಕೊಲ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಮೊಸಳೆ ಅಡ್ಡ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿಕ್ಕೋಡಿಯಲ್ಲಿ ಮೊಸಳೆಯನ್ನು ಹಿಡಿದ ಗ್ರಾಮಸ್ಥರು

ಪ್ರವಾಹ ತಗ್ಗುತ್ತಿದ್ದಂತೆ ನದಿ ತೀರದ ಜನರಿಗೆ ಮೊಸಳೆ ಕಾಟ ಶುರುವಾಗಿದೆ. ಕೃಷ್ಣಾ ನದಿ ತೀರದಲ್ಲಿ ಗ್ರಾಮಸ್ಥರು ಮೊಸಳೆ ಸೆರೆ ಹಿಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದೆ. ನದಿ ತೀರದ ಜಮೀನಿನಲ್ಲಿದ್ದ 6 ಅಡಿ ಮೊಸಳೆ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

Techie Missing : ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌ ಆಗಿದ್ದಾರೆ. ನಾಪತ್ತೆಯಾಗಿರುವ ಪತಿಯನ್ನು ಹುಡುಕಿ ಕೊಡಿ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ. ಹೆಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂಗೆ ಹೋದವರು ಮರಳಿ ಬಂದಿಲ್ಲ ಎಂದು ಟೆಕ್ಕಿ ಪತ್ನಿ ಕಂಗಲಾಗಿದ್ದಾರೆ.

VISTARANEWS.COM


on

By

techie missing in Bengaluru
ನಾಪತ್ತೆಯಾಗಿರುವ ಟೆಕ್ಕಿ ವಿಪುಲ್‌
Koo

ಬೆಂಗಳೂರು: ಈ ಹಿಂದೆ ಕೂಡ ಟೆಕ್ಕಿಯೊಬ್ಬರು (Techie Missing) ನಿಗೂಢವಾಗಿ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಮತ್ತೊಬ್ಬ ಟೆಕ್ಕಿ ನಾಪತ್ತೆಯಾಗಿದ್ದಾರೆ. ಪತಿಯನ್ನು ಹುಡುಕಿ ಕೊಡಿ ಪ್ಲೀಸ್‌ ಅಂತ ಪತ್ನಿ ಬೇಡಿಕೊಳ್ಳುತ್ತಿದ್ದಾರೆ.

ವಿಪುಲ್ ಗುಪ್ತಾ ಎಂಬ ಟೆಕ್ಕಿ ಕಾಣೆಯಾದವರು. ಆತ ಹೊರಗೆ ಹೋಗಿದ್ದಕ್ಕೆ ಸುಳಿವು ಎಂಬಂತೆ ಒಂದು ಸಿಸಿಟಿವಿ ವಿಡಿಯೋ ಬಿಟ್ಟರೆ, ಎಲ್ಲಿ ಹೋದ ಎಂಬ ಮಾಹಿತಿ ಮಾತ್ರ ಕಿಂಚಿತ್ತು ಕುಟುಂಬಸ್ಥರಿಗಿಲ್ಲ. ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಶ್ರೀಪರ್ಣದತ್ತ ಗೋಗರೆಯುತ್ತಿದ್ದಾರೆ.

ಸೋಲೋ ರೈಡ್‌ಗೆ ಹೋಗುತ್ತಿದ್ದವನ ಸುಳಿವೇ ಇಲ್ಲ!

ಈ ಹಿಂದೆ ಅಮಿತಾಬ್ ಎಂಬ ಟೆಕ್ಕಿ ಕೂಡ ಇದೇ ರೀತಿ ನಿಗೂಢವಾಗಿ ನಾಪತ್ತೆಯಾಗಿದ್ದ . ಆದರೆ ಆತನ ಸುಳಿವು ಇಂದಿಗೂ ಸಿಕ್ಕಿಲ್ಲ. ಇನ್ನು ಕೊಡಿಗೇಹಳ್ಳಿಯ ಟಾಟಾ ನಗರ ನಿವಾಸಿಯಾಗಿರುವ ವಿಪುಲ್‌ಗೆ ಇಬ್ಬರು ಮಕ್ಕಳಿದ್ದಾರೆ. ಪತಿ -ಪತ್ನಿ ಇಬ್ಬರಿಗೂ ಪೋಷಕರಿಲ್ಲ. ಆದರೂ ದುಡಿದು ತಮ್ಮ ಸಂಸಾರ ಸಾಗಿಸುತ್ತಿದ್ದರು. ಶ್ರೀಮಂತಿಕೆ ಇಲ್ಲದಿದ್ದರೂ ಜೀವನಕ್ಕಾಗುವಷ್ಟು ಸಿರಿವಂತರೇ ಆಗಿದ್ದರು. ಅಂತಹ ಕುಟುಂಬದಲ್ಲಿ ಏಕಾಏಕಿ ಪತಿ ಕಾಣೆಯಾಗಿರುವುದು ಪತ್ನಿ ಶ್ರೀಪರ್ಣ ದತ್ತಾಳಿಗೆ ನಿಜಕ್ಕೂ ಆತಂಕ ಮೂಡಿಸಿದೆ.

ವಿಪುಲ್‌ ಕಾಣೆಯಾಗಿ ಹೆಚ್ವು ಕಮ್ಮಿ ಎಂಟು ದಿನಗಳಾಗಿದೆ. ಆಗಸ್ಟ್ 4ರಂದು ಮನೆ ಪಕ್ಕದಲ್ಲಿರುವ ಹೆಚ್ ಡಿ ಎಫ್ ಸಿ ಬ್ಯಾಂಕ್‌ನಲ್ಲಿ ಒಟ್ಟು 1,80,000 ರೂ. ಹಣ ಡ್ರಾ ಮಾಡಿದ್ದಾರೆ. ನಂತರ ನಿಂಜಾ ಬೈಕ್ ತೆಗೆದುಕೊಂಡು ಹೊರ ಹೋದವನ ಸುಳಿವೂ ಕೂಡ ಇರಲಿಲ್ಲ. ಎಲ್ಲಿಗಾದರೂ ಹೋಗುವಾಗ ಪತ್ನಿಗೆ ಹೇಳಿ ಹೋಗಿದ್ದರಂತೆ. ಆದರೆ ಈ ಬಾರಿ ಯಾರಿಗೂ ವಿಚಾರ ತಿಳಿಸದೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಬಾರದ ಹಿನ್ನೆಲೆ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಆತನ ಸ್ನೇಹಿತರಿಗೂ ಕರೆ ಮಾಡಿ ಕೇಳಿದಾಗ ಅವರ್ಯಾರಿಗೂ ವಿಪುಲ್ ಬಗ್ಗೆ ಮಾಹಿತಿಯೇ ಇರಲಿಲ್ಲ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಈ ಹಿಂದೆ ಸೋಲೋ ರೈಡ್ ಎಂದು ಪತ್ನಿಗೆ ಹೇಳಿ ತನ್ನ ನಿಂಜಾ ಬೈಕ್ ತೆಗೆದುಕೊಂಡು ಊರು ಸುತ್ತಲು ಹೋಗಿದ್ದರಂತೆ. ಆದರೂ ಪ್ರತಿ ದಿನ ಕಾಂಟಾಕ್ಟ್‌ನಲ್ಲಿರುತ್ತಿದ್ದರು. ಹೇಳಿದಂತೆ ಮೂರ್ನಾಲ್ಕು ದಿನಗಳಲ್ಲಿ ವಾಪಾಸ್ ಬರುತ್ತಿದ್ದರಂತೆ. ಆದರೆ ಈ ಬಾರಿ ಆತನ ಸುಳಿವೇ ಇರದ ಕಾರಣ ಎಲ್ಲಾ ಕಡೆ ಹುಡುಕಿ ಕೊನೆಗೆ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಎಲ್ಲೋ ಸೋಲೋ ರೈಡ್ ಹೋಗಿಬೇಕೆಂದು ಪೊಲೀಸರೂ ಕೂಡ ನಿರ್ಲಕ್ಷ್ಯ ಮಾಡಿದ್ದರಂತೆ. ನಂತರ ಒತ್ತಾಯ ಮಾಡಿದ ಬಳಿಕ ಎಫ್ ಐ ಆರ್ ಮಾಡಿದ್ದಾರೆಂದು ಶ್ರೀಪರ್ಣ ಆರೋಪಿಸಿದ್ದಾರೆ.

ಸದ್ಯ ವಿಪುಲ್‌ ಕಾಣೆಯಾಗಿ ಇಂದಿಗೆ ಎಂಟು ದಿನಗಳಾಗಿದೆ. ಪತಿಯ ಬಗ್ಗೆ ಸಣ್ಣ ಸುಳಿವೂ ಇರದ ಹಿನ್ನೆಲೆ ಪತ್ನಿ ಶ್ರೀಪರ್ಣ ನೊಂದಿದ್ದು ಕೊನೆಗೆ ಪೊಲೀಸರಿಗೆ ಪೋಸ್ಟ್ ಮಾಡಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Human-Elephant Conflict: ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

Human-Elephant Conflict: ರೈತರ ಬೆಳೆಗಳನ್ನು ಆನೆಗಳು ನಾಶ ಮಾಡುತ್ತಿವೆ, ಹೀಗಾಗಿ ನಾಡಿಗೆ ಬರುತ್ತಿರುವ ಆನೆಗಳನ್ನು ತಡೆಯುವ ಅಗತ್ಯವಿದೆ. ಈ ದಿಸೆಯಲ್ಲಿ ಉತ್ತಮವಾದ ಸಲಹೆಗಳು ಬರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Human-Elephant Conflict
Koo

ಬೆಂಗಳೂರು: ವಿಶ್ವ ಆನೆ ದಿನ (ಆ.12) ಹಿನ್ನೆಲೆಯಲ್ಲಿ ಆನೆಗಳ ರಕ್ಷಣೆ ಹಾಗೂ ಅವುಗಳ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಲು ನಗರದ ಹೊರವಲಯದ ಜಿಕೆವಿಕೆ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ (Human-Elephant Conflict) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ದೇಶದಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಮಾನವಸ್ನೇಹಿ ಗಜರಾಜನ ಸಂರಕ್ಷಣೆ ಹಾಗೂ ಅವುಗಳ ಆವಾಸಸ್ಥಾನಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧವಾಗಿದೆ. ಸಂಘರ್ಷ ಕಡಿಮೆ ಮಾಡಲು ಕ್ರಮಕೈಗೊಳ್ಳಲಾಗುವುದು. ರೈತರ ಬೆಳೆಗಳನ್ನು ಆನೆಗಳು ನಾಶ ಮಾಡುತ್ತಿವೆ, ಹೀಗಾಗಿ ನಾಡಿಗೆ ಬರುತ್ತಿರುವ ಆನೆಗಳನ್ನು ತಡೆಯುವ ಅಗತ್ಯವಿದೆ. ಈ ದಿಸೆಯಲ್ಲಿ ಉತ್ತಮವಾದ ಸಲಹೆಗಳು ಬರಲಿ ಎಂದು ಹೇಳಿದರು.

ತಜ್ಞರ ಸಲಹೆಗಳನ್ನು ಸರ್ಕಾರ ಪರಿಗಣಿಸಲಿದೆ: ಡಿಕೆಶಿ

ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಆನೆ ಮತ್ತು ಮನುಷ್ಯನ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಕಳೆದ ಒಂದು ವರ್ಷದಲ್ಲಿ 18 ಜನ ತೀರಿಕೊಂಡಿದ್ದಾರೆ. ಕನಕಪುರದ ನಮ್ಮ‌ ಮನೆ ಪಕ್ಕದಲ್ಲೇ ಸಾಲು ಸಾಲು ಆನೆಗಳು ತೆರಳುತ್ತವೆ. ಇದರಿಂದ ಆತಂಕ ಇದೆ. ಕಾಡಿನಲ್ಲಿ ನೀರು, ಮೇವಿನ ಕೊರತೆ ಇದೆ, ಹಾಗಾಗಿ ಆನೆಗಳು ನಾಡಿನತ್ತ ಮುಖ ಮಾಡುತ್ತಿವೆ. ಮಾನವ ಮತ್ತು ಆನೆ ಸಂಘರ್ಷವನ್ನು ಅಂತ್ಯಗೊಳಿಸಬೇಕಿದೆ. ಇಲ್ಲಿ ಭಾಗವಹಿಸಿರುವ ತಜ್ಞರು ನೀಡುವ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಮುಖ್ಯಮಂತ್ರಿಗಳಿಗೂ ಇದರ ಅರಿವಿದೆ ಎಂದರು.

ಆನೆ ದಾಳಿಯಿಂದ ತೊಂದರೆಗೆ ಒಳಗಾದವರು ಮನವಿ ಪತ್ರಗಳನ್ನ ಸಲ್ಲಿಸಿದ್ದಾರೆ. ಇದು ಕೇವಲ ಅರಣ್ಯ ಇಲಾಖೆಗೆ ಮಾತ್ರ ಸಂಬಂಧಿಸಿದಲ್ಲ, ಎಲ್ಲರೂ ಇದಕ್ಕೆ ಕೈಜೋಡಿಸಬೇಕು. ಈ ಮೂಲಕ ಮನಷ್ಯ ಮತ್ತು ಪ್ರಕೃತಿ ಸಂಬಂಧ ವೃದ್ಧಿಯಾಗಬೇಕು ಎಂದರು.

ಅರಣ್ಯವನ್ನು ರಕ್ಷಿಸುವಲ್ಲಿ ಆದಿವಾಸಿಗಳ ಕೊಡುಗೆ ಅಪಾರ: ಈಶ್ವರ ಖಂಡ್ರೆ

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಅರಣ್ಯವನ್ನು ರಕ್ಷಿಸುವಲ್ಲಿ ಆದಿವಾಸಿಗಳ ಕೊಡುಗೆ ಅಪಾರ. ಕಳ್ಳಬೇಟೆ ನಿಗ್ರಹಕ್ಕೆ ಕ್ರಮಗಳಿಂದಾಗಿ ವನ್ಯಮೃಗಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2023ರ ಆನೆ ಗಣತಿಯ ಪ್ರಕಾರ ರಾಜ್ಯದಲ್ಲಿ 6395 ಆನೆಗಳಿವೆ. ಗಜ ಸಂಖ್ಯೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. 563 ಹುಲಿ ಹೊಂದಿರುವ ಕರ್ನಾಟಕ ವ್ಯಾಘ್ರಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ ಎಂದರು.

ಅರಣ್ಯ ಪ್ರದೇಶ ಹೆಚ್ಚಳವಾದ ಹಿನ್ನೆಲೆಯಲ್ಲಿ ಆನೆಗಳು ನಾಡಿಗೆ ಬರುತ್ತಿದೆ. ಬೆಳೆ ಹಾನಿ, ಜೀವಹಾನಿ ಸಂಭವಿಸುತ್ತಿದೆ. ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 30 ಜನರು ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿದ್ದಾರೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 25 ಜನರು ಆನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ. ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮಾನವ-ಆನೆ ಸಂಘರ್ಷವೇ ದೊಡ್ಡ ಸವಾಲು. ಹೆಚ್ಚುತ್ತಿರುವ ಮಾನವ ಜನಸಂಖ್ಯೆ, ಕಾಡಿನಂಚಿನವರೆಗೆ ವಿಸ್ತರಿಸುತ್ತಿರುವ ಕೃಷಿ ಚಟುವಟಿಕೆಗಳು ಮತ್ತು ವಸತಿ ಬಡಾವಣೆ ನಿರ್ಮಾಣ ಮಾನವ-ಆನೆ ಸಂಘರ್ಷ ಹೆಚ್ಚಳಕ್ಕೆ ಕಾರಣವಾಗಿದೆ ಎಂದರು.

ನಮ್ಮ ಪೂರ್ವಿಕರು ಕಾಡಿನೊಂದಿಗೆ ಮತ್ತು ವನ್ಯಜೀವಿಗಳೊಂದಿಗೆ ಸಹಬಾಳ್ವೆ ಮಾಡುವುದನ್ನು ಕಲಿತಿದ್ದರು. ಇಂದಿಗೂ ಕಾಡಿನಲ್ಲೇ ವಾಸಿಸುವ ಆದಿವಾಸಿಗಳು, ವನ್ಯಜೀವಿ ದಾಳಿಯಿಂದ ಮೃತಪಡುವುದು ಅಪರೂಪದಲ್ಲೇ ಅಪರೂಪ. ಆದರೆ ನಗರ ವಾಸಿಗಳಾದ ನಾವು ಈಗ ಆಧುನಿಕ ಯುಗದಲ್ಲಿ ಆ ಸಹಬಾಳ್ವೆಯ ಸಂವೇದನೆ ಕಳೆದುಕೊಳ್ಳುತ್ತಿದ್ದೇವೆ. ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸುವುದು ನಮ್ಮ ಆದ್ಯತೆ ಎಂದರು.

ಜನರ ಮತ್ತು ವನ್ಯಜೀವಿಗಳ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಖಾತ್ರಿಪಡಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ. ತಂತ್ರಜ್ಞಾನದ ಅಳವಡಿಕೆ ಮತ್ತು ಸಮುದಾಯ-ಚಾಲಿತ ಉಪಕ್ರಮಗಳೊಂದಿಗೆ ಈ ಸವಾಲನ್ನು ಎದುರಿಸುವಲ್ಲಿ ಇಲಾಖೆ ಮುಂಚೂಣಿಯಲ್ಲಿದೆ. 2023-24 ಸಾಲಿನಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ 100 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿದ್ದರು. ಜಗತ್ತು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲು ಎದುರಿಸುತ್ತಿದೆ. ನಾವು ಹಸಿರು ಹೊದಿಕೆ ಹೆಚ್ಚಳ ಮಾಡುವ ಮೂಲಕ ಮಾತ್ರ ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಹೀಗಾಗಿ ನಮ್ಮ ಸರ್ಕಾರ 2023-24ರ ಸಾಲಿನಲ್ಲಿ 5 ಕೋಟಿ ಸಸಿ ನೆಟ್ಟು ಬೆಳೆಸುವ ಸಂಕಲ್ಪ ಮಾಡಿತು. ನಾವು 5 ಕೋಟಿ 48 ಲಕ್ಷ ಸಸಿ ನೆಟ್ಟು ಗುರಿ ಮೀರಿದ ಸಾಧನೆ ಮಾಡಿದ್ದೇವೆ. ಜೊತೆಗೆ ಈ ರೀತಿ ನೆಡಲಾದ ಸಸಿಗಳ ಪೈಕಿ ಎಷ್ಟು ಬದುಕುಳಿದಿದೆ ಎಂದು ತಿಳಿಯಲು ಜಿಯೋ ಟ್ಯಾಗ್ ಮಾಡಿಸಿ ಆಡಿಟ್ ಕೂಡ ಮಾಡುತ್ತಿದ್ದೇವೆ ಎಂದರು.

ಕರ್ನಾಟಕ ಸರ್ಕಾರ ಕಳೆದ ವರ್ಷ 3395.73 ಹೆಕ್ಟೇರ್ ಪ್ರದೇಶವನ್ನು ಅರಣ್ಯ ಎಂದು ಘೋಷಿಸಿದೆ. ಜೊತೆಗೆ 2500 ಎಕರೆಗೂ ಹೆಚ್ಚು ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಿದೆ. ಅರಣ್ಯ ಅಪರಾಧಗಳನ್ನು ತಡೆಯಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಲು ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆಯನ್ನು ತರಲು ನಾವು ಕಾರ್ಯೋನ್ಮುಖರಾಗಿದ್ದೇವೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಮುಂದಾಗಿದ್ದೇವೆ. ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ದೂರ ಸಂವೇದಿ ತಂತ್ರಜ್ಞಾನ ಉಪಗ್ರಹಗಳ ನೆರವಿನಿಂದ ಮಾಹಿತಿ ಲಭಿಸುತ್ತದೆ. ಇದೇ ತಂತ್ರಜ್ಞಾನವನ್ನು ಅರಣ್ಯ ಒತ್ತುವರಿ ತಡೆಗೂ ಅಳವಡಿಸಲು ಈಗ ನಾವು ಮುಂದಾಗಿದ್ದೇವೆ. ನೀಲಗಿರಿ ತಪ್ಪಲಿನಲ್ಲಿ ಸಂರಕ್ಷಿತ ಕಾನನದೊಳಗೆ ಆನೆಗಳ ಸುರಕ್ಷಿತ ಸಂಚಾರ ಉತ್ತೇಜಿಸಲು ನಾವು ಒಟ್ಟಾಗಿ ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿದ್ದೇವೆ. ಆ ಸಂಬಂಧ ಚಾರ್ಟರ್‌ಗೆ ಸಹಿ ಹಾಕಿದ್ದೇವೆ. ಬಂಡೀಪುರದಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಸಿದ್ಧಪಡಿಸಿದ “ಬಂಡೀಪುರ ಚಾರ್ಟರ್” ಒಡಂಬಡಿಕೆ ಈ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು.

ಮಾನವ-ಆನೆ ಸಂಘರ್ಷದಿಂದ ಮೃತಪಟ್ಟವರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ತಕ್ಷಣವೇ ಆರ್ಥಿಕ ಪರಿಹಾರ ಮತ್ತು ನೆರವು ನೀಡುತ್ತಿದ್ದೇವೆ. ಬೆಳೆ ಪರಿಹಾರವನ್ನು ತ್ವರಿತವಾಗಿ ವಿತರಿಸುತ್ತಿದ್ದೇವೆ. ಜೊತೆಗೆ ಕರ್ನಾಟಕ ಸರ್ಕಾರವು ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ರಕ್ಷಿಸಲು ಮತ್ತು ಜನರ ಜೀವ ಉಳಿಸಲು ಸೌರ ವಿದ್ಯುತ್ ಬೇಲಿ ಅಳವಡಿಸಿಕೊಳ್ಳಲು ಸಬ್ಸಿಡಿ ನೀಡುತ್ತಿದೆ. ಮಾನವ-ವನ್ಯಜೀವಿ ಸಂಘರ್ಷವನ್ನು ನಿಭಾಯಿಸಲು ನಾವು ಪ್ರತ್ಯೇಕ ಬಜೆಟ್ ಅನ್ನು ನಿಗದಿಪಡಿಸಿದ್ದೇವೆ. ರೈಲ್ವೆ ಬ್ಯಾರಿಕೇಡ್‌ಗಳು, ಸೌರ ತಂತಿ ಬೇಲಿ ಅಳವಡಿಕೆ, ಆನೆ-ನಿಗ್ರಹ ಕಂದಕಗಳ ನಿರ್ಮಾಣಕ್ಕಾಗಿ ವಾರ್ಷಿಕವಾಗಿ 150 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದೇವೆ. ಗುತ್ತಿಗೆ ನೌಕರರು ಸೇರಿದಂತೆ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ನಾವು “ಕಷ್ಟಕರ ಸನ್ನಿವೇಶದ ಕಾರ್ಯ ನಿರ್ವಹಣಾ ಭತ್ಯೆ” ಯನ್ನು ನೀಡುತ್ತಿದ್ದೇವೆ. ಆನೆಗಳ ಸಂಚಾರದ ಬಗ್ಗೆ ಮಾಹಿತಿ ತಿಳಿಯಲು ರೇಡಿಯೋ ಕಾಲರ್ ಅಳವಡಿಸುವ ಕಾರ್ಯವನ್ನೂ ರಾಜ್ಯ ಸರ್ಕಾರ ಮಾಡುತ್ತಿದೆ.

ಜಿಎಸ್ಎಂ ಆಧಾರಿತ ಕ್ಯಾಮೆರಾ ಟ್ರ್ಯಾಪ್‌ಗಳು ಮತ್ತು ಗರುಡ ಇ- ನಿಗಾ ವ್ಯವಸ್ಥೆಯನ್ನು ಬಳಸಲಾಗುತ್ತಿದೆ. ವನ್ಯಜೀವಿಗಳು ಮತ್ತು ಜನರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ನಾವು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದ್ದೇವೆ. ಮೇ 2023 ರಲ್ಲಿ ದಕ್ಷಿಣ ಭಾರತದಾದ್ಯಂತ ನಡೆಸಿದ ಸಂಯೋಜಿತ ಆನೆಗಳ ಜನಸಂಖ್ಯೆಯ ಅಂದಾಜು ವಿಜ್ಞಾನ ಆಧಾರಿತ ನಿರ್ವಹಣೆಗೆ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ. ಈ ರೂಢಿಗಳಿಂದ ಸಂಗ್ರಹಿಸಿದ ದತ್ತಾಂಶವು ಅಮೂಲ್ಯವಾಗಿದೆ ಎಂದರು.

ಇದನ್ನೂ ಓದಿ | Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

ಕಾರ್ಯಕ್ರಮದಲ್ಲಿ ಕೇರಳ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ , ತಮಿಳುನಾಡು ಅರಣ್ಯ ಸಚಿವ ಅರಣ್ಯ ಸಚಿವ ಎಂ.ಮತಿವೇಂಥನ್, ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು.


Continue Reading
Advertisement
DK Shivakumar
ಕರ್ನಾಟಕ3 mins ago

DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Varamahalakshmi Festival 2024
Latest12 mins ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

Meghana Gaonkar workout get slim
ಸ್ಯಾಂಡಲ್ ವುಡ್15 mins ago

Meghana Gaonkar:  ಸಣ್ಣಗಾದ ಮೇಘನಾ ಗಾಂವ್ಕರ್; ನಟಿಯ ವರ್ಕೌಟ್ ಫೋಟೊ ವೈರಲ್‌!

Road Accident
ಬೆಂಗಳೂರು25 mins ago

Road Accident : ಟಿಪ್ಪರ್ ಲಾರಿಗೆ ಸಿಲುಕಿ ಸವಾರ ದುರ್ಮರಣ; ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಂಭೀರ

Kolkata Doctor Murder Case
ದೇಶ37 mins ago

Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

Bangladesh Unrest
ವಿದೇಶ38 mins ago

Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

paris Olympics 2024
ಪ್ರಮುಖ ಸುದ್ದಿ43 mins ago

Paris Olympics 2024 : ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ಎಫ್ಐಎಚ್ ರ್ಯಾಂಕಿಂಗ್​ನಲ್ಲಿ 2 ಸ್ಥಾನ ಏರಿಕೆ

techie missing in Bengaluru
ಬೆಂಗಳೂರು1 hour ago

Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

Independence day 2024
ದೇಶ1 hour ago

Independence Day 2024: ಮನೆಮನೆಯಲ್ಲೂ ಉಲ್ಲಾಸ, ಉತ್ಸಾಹ ತುಂಬುವ ಸ್ವಾತಂತ್ರ್ಯೋತ್ಸವದ ಹಿನ್ನೋಟ

kolkata doctor murder case
ದೇಶ1 hour ago

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ; ಏಮ್ಸ್‌ ವೈದ್ಯರ ಪ್ರೊಟೆಸ್ಟ್‌-ಪ್ರಾಂಶುಪಾಲರು ರಿಸೈನ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌