Bengaluru Power Cut: ಗಮನಿಸಿ... ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ - Vistara News

ಬೆಂಗಳೂರು

Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

Bengaluru Power Cut: ಬೆಂಗಳೂರು ನಗರದ ʼ220/66/11ಕೆವಿ ಎಸ್‌ಆರ್‌ಎಸ್ ಪೀಣ್ಯʼ ವಿದ್ಯುತ್‌ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಆ.18ರಂದು ಭಾನುವಾರ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Bengaluru Power Cut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ʼ220/66/11ಕೆವಿ ಎಸ್‌ಆರ್‌ಎಸ್ ಪೀಣ್ಯʼ ವಿದ್ಯುತ್‌ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.18 ರಂದು ಭಾನುವಾರ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಎಂಇಸಿ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ, ರಾಜೇಶ್ವರಿನಗರ, ಆಕಾಶ್ ಥೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್‌ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

Tungabhadra Dam: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ ನೀರು ಸ್ಟಾಪ್ ಆಗಿದೆ. 19ನೇ ಗೇಟ್‌ ಸುರಕ್ಷಿತವಾದ ಪರಿಣಾಮ, ಡ್ಯಾಂನಿಂದ ನೀರು ಹೊರಬಿಡಲಾಗಿದ್ದ ಎಲ್ಲ 33 ಗೇಟ್‌ಗಳನ್ನು ಮುಚ್ಚಿ ಆ ಮೂಲಕ ಪೋಲಾಗುತ್ತಿದ್ದ ನೀರನ್ನು ಟಿಬಿ ಡ್ಯಾಂ ಮಂಡಳಿ ತಡೆದಿದೆ.

VISTARANEWS.COM


on

tungabhadra dam gate
Koo

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋದ 19ನೇ ಗೇಟ್‌ನಿಂದ ಹೊರಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲು ತಜ್ಞರ ತಂಡ ಸಫಲವಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಗೆ ಯಶಸ್ಸು ದೊರೆತಿದ್ದು, ಪೋಲಾಗಲಿದ್ದ ನೀರನ್ನು ಉಳಿಸುವಲ್ಲಿ ತಜ್ಞ ಕನ್ನಯ್ಯ ನಾಯ್ಡು ತಂಡ ಸಫಲವಾಗಿದೆ.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ ನೀರು ಸ್ಟಾಪ್ ಆಗಿದೆ. 19ನೇ ಗೇಟ್‌ ಸುರಕ್ಷಿತವಾದ ಪರಿಣಾಮ, ಡ್ಯಾಂನಿಂದ ನೀರು ಹೊರಬಿಡಲಾಗಿದ್ದ ಎಲ್ಲ 33 ಗೇಟ್‌ಗಳನ್ನು ಮುಚ್ಚಿ ಆ ಮೂಲಕ ಪೋಲಾಗುತ್ತಿದ್ದ ನೀರನ್ನು ಟಿಬಿ ಡ್ಯಾಂ ಮಂಡಳಿ ತಡೆದಿದೆ.

ಚೈನ್ ಲಿಂಕ್ ಕಟ್ ಆಗಿ ಮುರಿದುಬಿದ್ದಿದ್ದ 19 ನಂಬರ್‌ ಕ್ರಸ್ಟ್ ಗೇಟ್ ಅನ್ನು ಕೂಡಿಸಲು ಮೂರು ದಿನಗಳಿಂದ ತಜ್ಞರ ತಂಡ ಪ್ರಯತ್ನಿಸುತ್ತಿತ್ತು. ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್ ಗೇಟ್‌ನ ಮೊದಲ ಎಲಿಮೆಂಟ್ ಕೂಡಿಸುವಲ್ಲಿ ಯಶಸ್ವಿಯಾಗಿತ್ತು. ಇಂದು ಬೆಳಗ್ಗಿನಿಂದ ಇನ್ನೆರಡು ಎಲಿಮೆಂಟ್‌ಗಳುನ್ನು ಕನ್ನಯ್ಯ ನಾಯ್ಡು ನೇತೃತ್ವದ ತಜ್ಞರ ತಂಡ ಕೂರಿಸಿದೆ.

ಹೀಗಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಟಿಬಿ ಬೋರ್ಡ್ ಯಶಸ್ವಿಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಮೂಡಿದೆ. ಸದ್ಯ ಜಲಾಶಯಕ್ಕೆ 41 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ 80 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿತ್ತು.

ಸದ್ಯ ಜಲಾಶಯದಲ್ಲಿ 70.759 ಟಿಎಂಸಿ ನೀರು ಸಂಗ್ರಹವಿದೆ. ಒಳಹರಿವು ಹೀಗೇ ಇದ್ದರೆ ವಾರದಲ್ಲಿ ಮತ್ತೆ ಜಲಾಶಯ ಭರ್ತಿಯಾಗಲಿದೆ. ಹೀಗಾಗಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಆಶಾಭಾವನೆ ಮೂಡಿದ್ದು, ಎರಡು ಬೆಳೆಗೆ ನೀರು ಸಿಗುವ ವಿಶ್ವಾಸವನ್ನು ಜಲಾನಯನ ಪ್ರದೇಶದ ಜನರು ಹೊಂದಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ತಜ್ಞ ಕನ್ಹಯ್ಯ ನಾಯ್ಡು, ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದರು. ʼಸಿಎ ಸಿದ್ದರಾಮಯ್ಯ ಬಂದಿದ್ದರು. ನನಗೆ ಕೈಮುಗಿದು ಒಂದೇ ಕೇಳಿಕೊಂಡರು. ನೀರು ಹೋದರೆ ಜನರಿಗೆ ಊಟ ಸಿಗಲ್ಲ. ಹೇಗಾದರೂ ಮಾಡಿ ನೀರು ಉಳಿಸಿ ಅಂತ ಕೇಳಿಕೊಂಡರು. ನಾನು ಅದಕ್ಕೇ ಬಂದಿದ್ದೇನೆ ಅಂತ ಹೇಳಿದೆʼ ಎಂದು ಹೇಳಿದ್ದರು.

“70 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೇಟ್ ಒಡೆದಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿದೆ. ಇದನ್ನು ಆಗಲೇ ತಯಾರು ಮಾಡಲಾಗ್ತಿದೆ. ನಾಳೆಯಿಂದ ಗೇಟ್ ಕೂಡಿಸೋ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಕನ್ನಯ್ಯ ನಾಯ್ಡು ಮತ್ತವರ ತಂಡದಿಂದ ಕಾರ್ಯ ನಡೆಯುತ್ತಿದೆ. ಬಹಳ ಅನುಭವಿ ಅವರು, ಅವರ ನೇತೃತ್ವದಲ್ಲಿ ನಾಳೆಯಿಂದ ತಾತ್ಕಾಲಿಕ ಗೇಟ್ ಕೂಡಿಸಲಾಗ್ತದೆ. ತಜ್ಞರ ಪ್ರಕಾರ 50 ವರ್ಷಕ್ಕೊಮ್ಮೆ ಗೇಟ್ ಬದಲಿಸಬೇಕು. ಇನ್ಮುಂದೆ ತಜ್ಞರು ಹೇಳಿದಂತೆ, ಜಲಾಶಯ ನಿರ್ವಹಣೆ ಮಾಡಲಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಅಣೆಕಟ್ಟಿಗೆ ಭೇಟಿ ನೀಡಿದ ಬಳಿಕ ಹೇಳಿದ್ದರು.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Continue Reading

ಕರ್ನಾಟಕ

Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಈ ಪಾದ ಪುಣ್ಯ ಪಾದ’ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್ ಕ್ಲಾಪ್

Kannada New Movie: ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ “ಈ ಪಾದ ಪುಣ್ಯಪಾದ” ಚಿತ್ರದ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು. ಸಿದ್ದು ಪೂರ್ಣಚಂದ್ರ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ಕವಿರತ್ನ ಡಾ. ವಿ ನಾಗೇಂದ್ರ ಪ್ರಸಾದ್ ಅವರು ಕ್ಲಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

VISTARANEWS.COM


on

Kannada New Movie
Koo

ಬೆಂಗಳೂರು: “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರ ನಿರ್ದೇಶಕ ಸಿದ್ದು ಪೂರ್ಣಚಂದ್ರ ಅವರ ಮತ್ತೊಂದು ಚಿತ್ರ “ಈ ಪಾದ ಪುಣ್ಯಪಾದ”. ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು. ಸಿನಿಮಾಗೆ (Kannada New Movie) ಕವಿರತ್ನ ಡಾ. ವಿ ನಾಗೇಂದ್ರ ಪ್ರಸಾದ್ ಅವರು ಕ್ಲಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದೇ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ರಾಮನಗರ, ಚನ್ನಪಟ್ಟಣ, ಮದ್ದೂರು ಮತ್ತು ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಿಸಲಾಗುತ್ತದೆ ಎಂದು ಸಿದ್ದು ಪೂರ್ಣಚಂದ್ರ ತಿಳಿಸಿದರು.

ಮುಖ್ಯ ಪಾತ್ರದಲ್ಲಿ ಆಟೋ ನಾಗರಾಜ್ ಅಭಿನಯಿಸುತ್ತಿದ್ದಾರೆ. ಉಳಿದಂತೆ “ಸಂಭವಾಮಿ ಯುಗೇ ಯುಗೇ” ಚಿತ್ರ ಖ್ಯಾತಿಯ ಜಯ್ ಶೆಟ್ಟಿ, ಬಲ ರಾಜ್ವಾಡಿ, ಚೈತ್ರ, ನಂದಿನಿ ರಾಜ್ ಜೀವನ್ ರಿಚಿ, ಪ್ರಮಿಳ ಸುಬ್ರಮಣ್ಯಂ, ಶಂಕರ್ ಭಟ್ ಹರೀಶ್ ಕುಂದೂರ್, ಯೋಗಿತ, ಬೇಬಿ ರಿಧಿ, ಯೋಗೇಶ್ ಇನ್ನೂ ಮುಂತಾದವರು ಅಭಿನಯಿಸುತ್ತಿದ್ದಾರೆ.

ಸಹ ನಿರ್ಮಾಪಕರಾಗಿ ಶ್ರೀಯುತ ಸನ್ನಿ, ಎ.ಕೆ ಪುಟ್ಟರಾಜು ಮತ್ತು ಪ್ರಮಿಳಾ ಸುಭ್ರಮಣ್ಯಂ ಅವರೂ ಕೂಡ ಸಹ ನಿರ್ಮಾಪಕರಾಗಿ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ರಾಜು ಹೆಮ್ಮಿಗೆಪುರ, ಸಂಕಲನ ದೀಪಕ್ ಸಿ.ಎಸ್., ಕಲೆ ಬಸವರಾಜ್ ಆಚಾರ್, ವಸ್ತ್ರ ವಿನ್ಯಾಸ ನಾಗರತ್ನ ಕೆ.ಎಚ್., ಸಂಗೀತ ಅನಂತ್ ಆರ್ಯನ್, ಮೇಕಪ್ ಸಿದ್ದು ರಾಯಚೂರ್, ಸ್ವರೂಪ್ ವಿ ಎಫ್ ಎಕ್ಸ್. ಕಲರಿಂಗ್ ನಿಖಿಲ್ ಕಾರ್ಯಪ್ಪ.

ಇದನ್ನೂ ಓದಿ: Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

ವಿಭಿನ್ನ ಕಥಾ ಹಂದರ ಹೊಂದಿದ ಈ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭೂತಿಯನ್ನು ಕಟ್ಟಿಕೊಡುತ್ತದೆ. ಇಲ್ಲಿ ಎಲ್ಲಾ ಪಾತ್ರಗಳ ಕಾಲುಗಳು ಕಥೆ ಹೇಳುತ್ತವೆ. ಅದರಲ್ಲಿ ಮುಖ್ಯವಾಗಿ ಆನೆಕಾಲು ರೋಗಿಯ ಜೀವನ ಶೈಲಿಯನ್ನು ಬೇರೆ ಬೇರೆ ಆಯಾಮಗಳಲ್ಲಿ ಚಿತ್ರಿಸಲಾಗುತ್ತದೆ. ಇದರ ಜತೆಗೆ ಮಕ್ಕಳ ಪಾದ, ವೃದ್ದರ ಪಾದ, ದಾಸರ ಪಾದ, ಸ್ವಾಮೀಜಿಗಳ ಪಾದದ ಕಥೆ ಹೇಳಲಾಗುತ್ತದೆ. ಎಲ್ಲೂ ನೋಡಿರದ, ಕೇಳಿರದ ಈ ಕಥೆಯನ್ನು ಅಚ್ಚುಕಟ್ಟಾಗಿ ತೆರೆಮೇಲೆ ತರಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿರುವೆ ಎಂದು ನಿರ್ದೇಶಕ ಸಿದ್ದು ಪೂರ್ಣಚಂದ್ರ ವಿವರಿಸಿದರು.

Continue Reading

ಪ್ರಮುಖ ಸುದ್ದಿ

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

VISTARANEWS.COM


on

cm siddaramaiah 1
Koo

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ (Pay Commission) ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು, ಸರ್ಕಾರಿ ನೌಕರರ (Govt Employees) ಹಿತಾಸಕ್ತಿಯನ್ನು ಕಾಯಲು ಸದಾ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Continue Reading

ಉದ್ಯೋಗ

BMRCL Recruitment 2024: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

BMRCL Recruitment 2024: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9.

VISTARANEWS.COM


on

BMRCL Recruitment 2024
Koo

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋ (Namma Metro)ದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ (Assistant Security Officer) ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (Bangalore Metro Rail Corporation Limited) ಅರ್ಜಿ ಆಹ್ವಾನಿಸಿದೆ (BMRCL Recruitment 2024). ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9 (Job Alert).

ಹುದ್ದೆಗಳ ವಿವರ ಮತ್ತು ಅರ್ಹತೆ

ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್ / ಸುಬೇದಾರ್ / ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್ / ಮಾಸ್ಟರ್ ವಾರಂಟ್ ಆಫೀಸರ್ / ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿ ಇದ್ದವರು, ಇನ್ಸ್‌ಪೆಕ್ಟರ್‌ / ಸಬ್ ಇನ್ಸ್‌ಪೆಕ್ಟರ್‌ / ಎಎಸ್ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಗರಿಷ್ಠ ವಯೋಮಿತಿ 62 ವರ್ಷ. ಗಮನಿಸಿ, ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ನಿರ್ವಹಿಸುವ ರೀತಿಯನ್ನು ನೋಡಿಕೊಂಡು ಗುತ್ತಿಗೆ ಮುಂದಿರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ದೈಹಿಕ ಪರೀಕ್ಷೆ, ಅರ್ಹತೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ 60 ವರ್ಷದೊಳಗಿನವರಿಗೆ 32,950 ರೂ. ಮತ್ತು 60 ವರ್ಷ ದಾಟಿದವರಿಗೆ 30,000 ರೂ. ಮಾಸಿಕ ವೇತನ ನೀಡಲಾಗುತ್ತದೆ.

BMRCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru – 560027.

ಗಮನಿಸಿ, ನಿಮ್ಮ ಅಪ್ಲಿಕೇಷನ್ ಸ್ಪೀಡ್‌ ಪೋಸ್ಟ್‌ / ಕೊರಿಯರ್‌ ಮೂಲಕ ಕಳುಹಿಸಬೇಕು. ಅರ್ಜಿ ಲಕೋಟೆಯ ಮೇಲ್ಭಾಗದಲ್ಲಿ “APPLICATION FOR THE POST OF ASSISTANT SECURITY OFFICER” ಎಂದು ನಮೂದಿಸುವುದನ್ನು ಮರೆಯಬೇಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: english.bmrc.co.inಗೆ ಭೇಟಿ ನೀಡಿ ಅಥವಾ ಇಮೇಲ್‌ ವಿಳಾಸ: helpdesk@bmrc.co.inಗೆ ಸಂಪರ್ಕಿಸಿ.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading
Advertisement
tungabhadra dam gate
ಪ್ರಮುಖ ಸುದ್ದಿ17 mins ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ27 mins ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Murder Case
Latest37 mins ago

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

cm siddaramaiah congress protest
ಪ್ರಮುಖ ಸುದ್ದಿ45 mins ago

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Mohammed Shami comeback
ಕ್ರಿಕೆಟ್49 mins ago

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಕಾಲಿವುಡ್55 mins ago

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Dengue Vaccine
ಆರೋಗ್ಯ59 mins ago

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಫ್ಯಾಷನ್1 hour ago

Nail Extension Beauty Trend: ಬ್ಯೂಟಿ ಲೋಕದಲ್ಲಿ ಟ್ರೆಂಡಿಯಾದ ನೇಲ್ ಎಕ್ಸ್‌ಟೆನ್ಷನ್ ಕಾನ್ಸೆಪ್ಟ್

governor Thawarchand gehlot and CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

Rakshit Shetty Copyright Infringement 20 lakhs for Delhi High Court orders deposit
ಸ್ಯಾಂಡಲ್ ವುಡ್1 hour ago

Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌