Site icon Vistara News

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Bengaluru power cut July 20th power outage in many parts of Bengaluru

ಬೆಂಗಳೂರು: ನಗರದ ʼಸರ್ ಎಂ.ವಿ. 220/66/11 ಕೆ.ವಿ. ಜಿ.ಐ.ಎಸ್ ಇಡಿಸಿʼ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜು.20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಂ.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ಚರ್ಚ್‌ ಸ್ಟ್ರೀಟ್, ಕಸ್ತೂರ್ಬಾ ರಸ್ತೆ, ಸೇಂಟ್ ಮಾರ್ಕ್ಸ್‌ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ; ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜು.20 ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಟಿ.ಟಿ.ಕೆ. ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌, ಬೈರಸಂದ್ರ, ಗುಂಡಪ್ಪ ಲೇಔಟ್, ಓಂ ಶಕ್ತಿ ದೇವಸ್ಥಾನ, ಕಗ್ಗದಾಸಪುರ 1ನೇ ಅಡ್ಡ ರಸ್ತೆಯಿಂದ 19ನೇ ಅಡ್ಡರಸ್ತೆ, ಭುವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

66/11 ಕೆ.ವಿ. ಶೋಭಾ ಸಿಟಿ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ; ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆ.ವಿ. ಶೋಭಾ ಸಿಟಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜು.20ರಂದು ಶನಿವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಶೋಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟ್‌ರ್ಸ್, ಆರ್.ಕೆ. ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್‌, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬೋರ್ಡ್‌ ಮತ್ತು ಬೆಂಚ್ ರಾಯಲ್‌ವುಡ್, ರ‍್ಕಾವತಿ ಲೇಔಟ್, ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Exit mobile version