Site icon Vistara News

Bengaluru Power Cut: ಜೂನ್‌ 26ರಂದು ಬೆಂಗಳೂರಿನ ಜೆ.ಸಿ.ನಗರ, ಮಾರಪ್ಪ ಗಾರ್ಡನ್ ಸೇರಿ ಹಲವೆಡೆ ವಿದ್ಯುತ್‌ ವ್ಯತ್ಯಯ

Bengaluru Power Cut

ಬೆಂಗಳೂರು: 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ 26ರಂದು ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಜಯಮಹಲ್ ಎಕ್ಸ್‌ಟೆನ್ಶನ್, ನಂದಿ ದುರ್ಗ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗಾರ್ಡನ್, ಚಿನಪ್ಪ ಗಾರ್ಡನ್, ಎನ್.ಡಿ.ರಸ್ತೆ, ಏರ್‌ಟೆಲ್ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಮಂಗಳವಾರವೂ ವಿವಿಧೆಡೆ ವಿದ್ಯುತ್‌ ಕಡಿತ

ಬೆಂಗಳೂರು: ಜೂ.25ರಂದು ವಿದ್ಯುತ್‌ ಕಡಿತದಿಂದಾಗಿ ಬೆಂಗಳೂರಿಗರು ಕತ್ತಲೆಯಲ್ಲಿ (Bengaluru Power Cut) ಇರಬೇಕಾಗುತ್ತದೆ. ಮಂಗಳವಾರ ಬೆಳಗ್ಗೆ 10:30ರಿಂದ ಮಧ್ಯಾಹ್ನ 3:30ರವರಗೆ ಎಚ್.ಬಿ.ಆರ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಬೆಸ್ಕಾಂ ಕೈಗೆತ್ತಿಕೊಂಡಿದೆ. ಹೀಗಾಗಿ ಬೆಂಗಳೂರಿನ ಅರ್ಧಪಾಲು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಹೀಗಿವೆ

ಎಚ್‌.ಬಿ.ಆರ್‌ನ 1, 2 ಮತ್ತು 3ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆಯಲ್ಲಿ ಕರೆಂಟ್‌ ಇರುವುದಿಲ್ಲ.

ಜತೆಗೆ ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್‌.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, 4 ಮತ್ತು 5ನೇ ಎಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್‌ನಲ್ಲೂ ವ್ಯತ್ಯಯವಾಗಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿಗೆ ಜೂನ್ 25ರಿಂದ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್‌, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್‌, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ,ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡಿನಲ್ಲಿ ಕರೆಂಟ್‌ ಇರುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version